ಕೊರೊನಾ ಸೋಂಕಿತ ಅಣ್ಣ ಮನೆಗೆ ಬಂದಿದಕ್ಕೆ ಕೊಚ್ಚಿ ಕೊಲೆ ಮಾಡಿದ ತಮ್ಮ

Monday, May 17th, 2021
kalasa

ಚಿಕ್ಕಮಗಳೂರು: ಆಸ್ಪತ್ರೆಯಿಂದ ಮನೆಗೆ ಬಂದಕೊರೊನಾ ಸೋಂಕಿತ ಅಣ್ಣನನ್ನು ತಮ್ಮನೇ ಕೊಚ್ಚಿ ಕೊಲೆಗೈದಿರುವ ಆಘಾತಕಾರಿ ಘಟನೆ ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 45 ವರ್ಷದ ಮಹಾವೀರ್ ಎಂದು ಗುರುತಿಸಲಾಗಿದೆ. ಅಣ್ಣ ತಮ್ಮಂದಿರ ಜಗಳ ನಡೆಯುವಾಗ ಮಹಾವೀರ್ ಅಮ್ಮ ಅಕ್ಕಪಕ್ಕದ ಮನೆಯವರನ್ನು ಕರೆದರೂ  ಸೋಂಕಿಗೆ ಹೆದರಿ ಜಗಳ ಬಿಡಿಸಲು ಯಾರೂ ಬರಲಿಲ್ಲ ಎನ್ನಲಾಗಿದೆ. ಮೂಡಿಗೆರೆ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಅಣ್ಣ ಮಹಾವೀರ  ಕೊರೊನಾ ದೃಢ ಪಟ್ಟು ದಾಖಲಾಗಿದ್ದ. ಆದರೆ ಮಹಾವೀರ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್‍ಗಳ ಜೊತೆ […]

ಮುಂದುವರೆದ ಧಾರಾಕಾರ ಮಳೆ..ಇಂದು ಕೂಡಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Friday, July 13th, 2018
chikk-magaluru

ಚಿಕ್ಕಮಗಳೂರು: ಜಿಲ್ಲಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಇಂದೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮೂರು ತಾಲೂಕು ಸೇರಿದಂತೆ ಹಲವೆಡೆ ಶಾಲಾ-ಕಾಲೇಜುಗಳಿಗೆ ಇಂದು ಕೂಡಾ ರಜೆ ಘೋಷಿಸಲಾಗಿದೆ. ಶೃಂಗೇರಿ, ಕೊಪ್ಪ, ಕಳಸ, ಕುದುರೆಮುಖ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ನಿವಾಸಿಗಳು ಆತಂಕದಲ್ಲಿ ಬದುಕುವಂತಾಗಿದೆ. ಜಿಲ್ಲೆಯ ಶೃಂಗೇರಿ, ಕೊಪ್ಪ ಹಾಗೂ ಮೂಡಿಗೆರೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀರಂಗಯ್ಯ […]

ಚಿಕ್ಕಮಗಳೂರಲ್ಲಿ ಭಾರಿ ಮಳೆ..ಭದ್ರಾ ನದಿ ಸುತುವೆ ಮುಳುಗಡೆಯ ಸಾಧ್ಯತೆ!

Saturday, July 7th, 2018
chikmagaluru

ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೊರನಾಡು ಸಮೀಪದ ಹೆಬ್ಬಾಳೆ ಸೇತುವೆಗೆ ಭದ್ರಾ ನದಿಯ ನೀರು ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಸುತುವೆ ಮುಳುಗಡೆಯ ಸಾಧ್ಯತೆ ಕಂಡುಬರುತ್ತಿದೆ. ಹೆಬ್ಬಾಳೆ ಸೇತುವೆ ಮುಳುಗಡೆಯಾದಲ್ಲಿ ಕಳಸ – ಹೊರನಾಡು ರಸ್ತೆ ಸಂಚಾರಕ್ಕೆ ಸಾಧ್ಯವಾಗದೆ ಸಂಪರ್ಕಕ್ಕೆ ತಡೆಯಾಗಲಿದೆ. ಶುಕ್ರವಾರ ರಾತ್ರಿಯಿಂದ ಕುದುರೆಮುಖ, ಕಳಸ, ಹೊರನಾಡು ಸುತ್ತಮುತ್ತ ನಿರಂತರ ಮಳೆಯ ಹಿನ್ನೆಲೆಯಲ್ಲಿ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ರಸ್ತೆ ಸಂಪರ್ಕ […]

ಜಿಲ್ಲೆಯಲ್ಲಿ ವರುಣನ ಆರ್ಭಟ…ಮುಳುಗಡೆ ಭೀತಿಯಲ್ಲಿ ಶೃಂಗೇರಿ ದೇಗುಲ!

Thursday, June 14th, 2018
shringeri-rain

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಶೃಂಗೇರಿ ದೇವಸ್ಥಾನದ ಮೆಟ್ಟಿಲುಗಳ ತನಕ ನೀರು ಬಂದಿದ್ದು ಮುಳುಗಡೆ ಭೀತಿಯಲ್ಲಿದೆ. ಇದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಇನ್ನು ಕಳಸ ಸಮೀಪದ ಹಳುವಳ್ಳಿ ಎಂಬಲ್ಲಿ ರಸ್ತೆಗೆ ನೀರು ನುಗ್ಗಿದ್ದು, ಕಳಸ- ಬಾಳೆಹೊನ್ನೂರು ಸಂಪರ್ಕ ಕಡಿತವಾಗಿದೆ. ನೆಲ್ಲಿಬೀಡು, ಕುದುರೆಮುಖದಲ್ಲಿ ಸೇತುವೆಯ ಮೇಲೆ ನೀರು ಹರಿದ ಪರಿಣಾಮ ಕಳಸ-ಕುದುರೆಮುಖ-ಮಂಗಳೂರು ರಸ್ತೆ ಸಂಪರ್ಕ ಕೂಡಾ ಕಡಿತಗೊಂಡಿದೆ. ಅಲ್ಲದೆ ಕಳಸ-ಹೊರನಾಡು,ಕಳಸ-ಕಳಕೋಡು ಸಂಪರ್ಕ ಕೂಡಾ ಕಡಿತಗೊಂಡಿದೆ. ಕುದುರೆಮುಖ ಅಯ್ಯಪ್ಪ […]

ವರದಕ್ಷಿಣೆ ಕಿರುಕುಳ, ಪತ್ನಿ ಕೊಲೆ… ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ!

Wednesday, December 20th, 2017
dowry-case

ಮಂಗಳೂರು: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, ಕೊಲೆ ಮಾಡಿದ ಆರೋಪದಲ್ಲಿ ಬಂಧನವಾಗಿದ್ದ ಕನ್ಯಾನ ಕಾಂಚಾರು ನಿವಾಸಿ ದೇವಿಪ್ರಸಾದ್ (43) ಎಂಬಾತನಿಗೆ ಮಂಗಳೂರು ಆರನೇ ಹೆಚ್ಚುವರಿ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ನಿವಾಸಿ ಸವಿತಾ ಎಂಬುವರನ್ನು ದೇವಿಪ್ರಸಾದ್ 2013ರಲ್ಲಿ ಮದುವೆಯಾಗಿದ್ದ. ಬಳಿಕ ವರದಕ್ಷಿಣೆಗಾಗಿ ವಿಪರೀತ ಪೀಡಿಸುತ್ತಿದ್ದ. ಅಲ್ಲದೆ, ಸವಿತಾಳ ಮೇಲೆ ಹಲ್ಲೆ ಮಾಡುತ್ತಿದ್ದ. 2014ರಲ್ಲಿ ದೇವಿಪ್ರಸಾದ್‌ ಪತ್ನಿಗೆ ನೇಣು ಹಾಕಿ ಕೊಲೆ […]