ಶುದ್ಧ ಕುಡಿಯುವ ನೀರು ಸಹಿತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿದ್ದು ಆಡಳಿತ ಸಂಸ್ಥೆಗಳ ಜವಾಬ್ದಾರಿ :ಕೃಷ್ಣ ಜೆ. ಪಾಲೇಮಾರ್

Friday, January 6th, 2017
palemar

ಮಂಗಳೂರು: ಮಹಾನಗರ ಪಾಲಿಕೆಯ 27 ವಾರ್ಡ್‌‌ಗಳಲ್ಲಿ ಕೈಗೊಂಡ ಕುಡಿಯುವ ನೀರಿನ ವೈಜ್ಞಾನಿಕ ತಪಾಸಣೆ ಸಂದರ್ಭ ಕೋಲಿಫಾರಂ ಮತ್ತು ಫೀಕಲ್ ಕೋಲಿಫಾರಂ ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದ್ದು, ನೀರು ಸಂಪೂರ್ಣ ಮಲೀನಗೊಂಡಿದೆ. ಇದಕ್ಕೆ ಕಾರಣರಾದವರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಒತ್ತಾಯಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರು ಸಹಿತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿದ್ದು ಆಡಳಿತ ಸಂಸ್ಥೆಗಳ ಜವಾಬ್ದಾರಿ. ಆದರೆ […]

ಬಂದರು ಹಾಗೂ ಒಳನಾಡು ಜಲಸಾರಿಗೆ,ಮೀನುಗಾರಿಕೆ ಇಲಾಖೆಗೆ ರೂ.325.15 ಲಕ್ಷ ಹೆಚ್ಚುವರಿ ಅನುದಾನ

Wednesday, March 30th, 2011
ಶ್ರೀ ಕೃಷ್ಣ ಜೆ.ಪಾಲೇಮಾರ್

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ ಹಾಗೂ ತಾಲ್ಲೂಕಿನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರದ 2010-11 ನೇ ಸಾಲಿನಲ್ಲಿ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಗೆ 8 ಕಾಮಗಾರಿಗಳ ಅನುಷ್ಠಾನಕ್ಕಾಗಿ ರೂ.123.45 ಲಕ್ಷ ಹಾಗೂ ಮೀನುಗಾರಿಕಾ ಇಲಾಖೆಗೆ 14 ಕಾಮಗಾರಿಗಳಿಗೆ ರೂ.201.70ಲಕ್ಷ,ಹೆಚ್ಚುವರಿ ಅನುದಾನ ಒದಗಿಸಿದೆಯೆಂದು ರಾಜ್ಯದ ಜೀವಿಶಾಸ್ತ್ರ,ಪರಿಸರ,ಬಂದರು,ವಿಜ್ಞಾನ ಮತ್ತು ತಂತ್ರಜ್ಞಾನ, ಮೀನುಗಾರಿಕೆ ಹಾಗೂ ಜಲಸಾರಿಗೆ  ಸಚಿವರಾದ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣ ಜೆ.ಪಾಲೇಮಾರ್  ತಿಳಿಸಿರುತ್ತಾರೆ. ಮಂಗಳೂರು ತಣ್ಣೀರುಬಾವಿ ಬೆಂಗ್ರೆ […]

ಮನುಕುಲವೇ ಕೊಂಡಾಡಬೇಕಾದ ದಾಸ ಸಂತರು ಕನಕದಾಸರು : ಪಾಲೇಮಾರ್

Wednesday, November 24th, 2010
ಕನಕದಾಸ ಜಯಂತಿ

ಮಂಗಳೂರು: ಜಿಲ್ಲಾಡಳಿತ ದ.ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ ಕರಾವಳಿ ಕುರುಬರ ಸಂಘ, ಮಂಗಳೂರು ಇದರ ಆಶ್ರಯದಲ್ಲಿ ಇಂದು ಬೆಳಿಗ್ಗೆ ದಾಸವರೇಣ್ಯ, ದಾರ್ಶನಿಕ ಕವಿ, ಸಂತ ಶ್ರೇಷ್ಠ ಕನಕದಾಸ ಜಯಂತಿಯು ಪುರಭವನದಲ್ಲಿ ನಡೆಯಿತು. ಕನಕದಾಸರ ಭಾವಚಿತ್ರ ಮೆರವಣಿಗೆಯನ್ನು ಶ್ರೀಮತಿ ರಜನಿ ದುಗ್ಗಣ್ಣ, ಮಂಗಳೂರು ಮಹಾನಗರ ಪಾಲಿಕೆ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ  ಮೆರವಣಿಗೆಯು ಶರವು ಮಹಾಗಣಪತಿ ದೇವಸ್ಥಾನದಿಂದ ಹೊರಟು, ಗಣಪತಿ ಹೈಸ್ಕೂಲ್ ಮಾರ್ಗವಾಗಿ, ಪುರಭವನಕ್ಕೆ ತಲುಪಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಶ್ರೀ ಕೃಷ್ಣ ಜೆ. ಪಾಲೇಮಾರ್, ದ,ಕ […]

ನೆಹರೂ ಮೈದಾನಿನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ 44 ಮಂದಿ ಸಾಧಕರಿಗೆ ಪ್ರಶಸ್ತಿ ವಿತರಣೆ

Monday, November 1st, 2010
ನೆಹರೂ ಮೈದಾನಿನಲ್ಲಿ ರಾಜ್ಯೋತ್ಸವ

ಮಂಗಳೂರು : ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನಿನಲ್ಲಿ ನಡೆಯುವ ರಾಜ್ಯೋತ್ಸವದ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೇಮಾರ್ ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ಜ್ಯೋತಿ ವೃತ್ತದಲ್ಲಿ ಭವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಅಕರ್ಷಕ ವೇಷಭೂಷಣಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಧ್ವಜಾರೋಹಣದ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಇಂದು  ಕನ್ನಡ ಭಾಷೆ ಹಾಗೂ ಅಭಿವೃದ್ಧಿ ಮತ್ತು ಕನ್ನಡಿಗರ ಸಾಧನೆಯ ಬಗ್ಗೆ ಸಿಂಹಾವಲೋಕನ […]