ಗಣಪತಿ ಸಾವಿನ ಸಿಬಿಐ ವರದಿ : ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ

Friday, November 1st, 2019
Ganapati

ಮಡಿಕೇರಿ : ಡಿವೈಎಸ್‌ಪಿ ಮಾದಪಂಡ ಗಣಪತಿ ಆತ್ಮಹತೈ ಪ್ರಕರಣದ ಕುರಿತು ಸಿಬಿಐ ಸಲ್ಲಿಸಿರುವ ತನಿಖಾ ವರದಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಡಿಕೇರಿ ಜೆಎಂಎಫ್‌ಸಿ ನ್ಯಾಯಾಲಯ ವರ್ಗಾಯಿಸಿದೆ. ಈ ಪ್ರಕರಣದಲ್ಲಿ ಅಂದು ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ವಿರುದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸಿ.ಟಿ. ಕೋರ್ಟ್‌ನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿಯನ್ನು ವರ್ಗಾಯಿಸಲಾಗಿದೆ. ಮುಂದಿನ ವಿಚಾರಣೆಗಳು ಆ ಕೋರ್ಟ್‌ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಡಿವೈಎಸ್‌ಪಿ ಗಣಪತಿ ಆತ್ಮಹತೈ ಪ್ರಕರಣದ […]

ಭಾರಿ ಮಳೆ.. ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿತ!

Tuesday, August 14th, 2018
heavy-rain-chikmagaluru

ಚಿಕ್ಕಮಗಳೂರು: ತಾಲೂಕಿನ ಕೊಳಗಾಮೆ ಸಮೀಪ ಗುಡ್ಡ ಕುಸಿದಿದ್ದ ಕಾರಣ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ರಸ್ತೆಯಲ್ಲಿಯೇ ಕೆಲಕಾಲ ಕಾಯುವಂತಾಯಿತು. ಕೆ.ಜೆ.ಜಾರ್ಜ್ ಕಳೆದ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಗರಿಗೆಖಾನ್ ಎಸ್ಟೇಟ್ನಲ್ಲಿ ವಾಸ್ತವ್ಯವಾಗಿದ್ದರು. ಇಂದು ನಗರದಲ್ಲಿ ಆಯೋಜಿಸಲಾಗಿದ್ದ ಕೆಡಿಪಿ ಸಭೆಗೆ ಆಗಮಿಸುತ್ತಿದ್ದ ವೇಳೆ ಗುಡ್ಡ ಕುಸಿದಿದೆ. ಇದರಿಂದ ಸಚಿವರು ಅಲ್ಲೇ ಕೆಲಕಾಲ ಕಾಯುಂತಾಯಿತು. ನಂತರ ಸಚಿವರನ್ನು ಬೇರೆ ವಾಹನದಲ್ಲಿ ಕಚೇರಿಗೆ ಕಳುಹಿಸಲಾಯಿತು. ಇನ್ನು ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ತುಂಗಾ ನದಿ ಅಪಾಯದಮಟ್ಟ ಮೀರಿ […]

ಯಾವುದೇ ಸಚಿವರು ಹೊಸ ಕಾರು ಹಾಗೂ ಮನೆ ನವೀಕರಣ ಮಾಡಿಸಿಕೊಳ್ಳದಂತೆ ಸೂಚನೆ: ಹೆಚ್.ಡಿ.ಕುಮಾರಸ್ವಾಮಿ

Thursday, June 21st, 2018
h-d-kumarswamy

ಬೆಂಗಳೂರು: ಆರ್ಥಿಕ ಶಿಸ್ತಿಗೆ ಒತ್ತು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆಸಿದ್ದಾರೆ. ಯಾವುದೇ ಸಚಿವರು ಹೊಸ ಕಾರು ಹಾಗೂ ತಮ್ಮ ಮನೆಗಳ ನವೀಕರಣ ಮಾಡಿಸಿಕೊಳ್ಳದಂತೆ ಸೂಚಿಸಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಹಾಗೂ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಯ ಕಾರ್ಯದರ್ಶಿಗೆ ಮೌಖಿಕ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಸಚಿವರ ಸರ್ಕಾರಿ ನಿವಾಸಗಳ ನವೀಕರಣಕ್ಕೆ ಮತ್ತು ಹೊಸ ಕಾರುಗಳ ಖರೀದಿಗೆ ಪತ್ರ ಬಂದರೆ ಮಾನ್ಯ ಮಾಡದಂತೆ ಹೇಳಿದ್ದಾರೆ ಎನ್ನಲಾಗಿದೆ. […]

ಸಮ್ಮಿಶ್ರ ಸರಕಾರದ ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ

Wednesday, June 6th, 2018
revanna

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ನೂತನವಾಗಿ ಸೇರ್ಪಡೆಗೊಂಡಿರುವ ಸಚಿವರುಗಳು ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯ್ ವಾಲಾ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ನಿಂದ 15 ಮತ್ತು ಜೆಡಿಎಸ್ ನಿಂದ 10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲು ಎಚ್.ಡಿ. ರೇವಣ್ಣ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅವರನ್ನು ರಾಜ್ಯಪಾಲರು ಹೂಗುಚ್ಚ ನೀಡಿ ಅಭಿನಂದಿಸಿದರು. ಬಳಿಕ ಆರ್.ವಿ.ದೇಶಪಾಂಡೆ ,ಬಂಡೆಪ್ಪ ಕಾಶೆಂಪುರ್‌ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಲು ವೇದಿಕೆಗೆ […]

ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ… ಕಲಾಪಕ್ಕೆ ಇಬ್ಬರು ಶಾಸಕರು ಗೈರು..!

Saturday, May 19th, 2018
yedeyurappa

ಬೆಂಗಳೂರು: ಬಿಜೆಪಿ ಸರ್ಕಾರ ಬಹುಮತವನ್ನು ಸದನದಲ್ಲಿ ಇಂದು ಸಂಜೆ 4ಗಂಟೆಗೆ ಸಾಬೀತುಪಡಿಸಿಲು ಸುಪ್ರೀಂ ಕೋರ್ಟ್‌ ಆದೇಶಿಸಿದ್ದು, ಇಂದು ರಾಜಕೀಯ ಬೆಳವಣಿಗಳು ತೀವ್ರಗೊಂಡಿವೆ. ಮೂರು ಪಕ್ಷಗಳು ಮ್ಯಾಜಿಕ್‌ ನಂಬರ್‌‌ ಗೇಮ್‌ಗಾಗಿ ತಮ್ಮ ರಾಜಕೀಯ ಪಟ್ಟುಗಳನ್ನು ಪ್ರಯೋಗಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರಾದ ಆನಂದ್‌ ಸಿಂಗ್‌, ಪ್ರತಾಪ್‌‌ ಗೌಡ ಪಾಟೀಲ್‌ ಸದನಕ್ಕೆ ಗೈರಾಗಿದ್ದಾರೆ. 10.14 : ಒಮ್ಮೆಗೆ 10 ಶಾಸಕರಂತೆ ಪ್ರಮಾಣವಚನ ಸ್ವೀಕಾರ ಮುಂದುವರಿಕೆ 11.13: ಮೊದಲ ಹಂತದಲ್ಲಿ 10 ಮಂದಿ ಶಾಸಕರಿಂದ ಪ್ರಮಾಣವಚನ ಸ್ವೀಕಾರ 11.12 : ಸದನದಲ್ಲಿ ಶಾಸಕರಿಂದ ಪ್ರಮಾಣವಚನ […]

ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು

Monday, February 5th, 2018
ramalinga-reddy

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮೊದಲು ಅಪರಾಧ ಪ್ರಕರಣಗಳ ಸಭೆ ಮಾಡಲಿ ಆನಂತರ ಕರ್ನಾಟಕದ ವಿರುದ್ಧ ಮಾತನಾಡಲಿ ಎಂದು ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಪರಾಧಗಳ ರಾಜ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರು 13 ವರ್ಷ ಗುಜರಾತ್‍ನಲ್ಲಿ ಮುಖ್ಯಮಂತ್ರಿಯಾಗಿದ್ದರು. ಗೋಧ್ರಾ ದುರಂತದಲ್ಲಿ ಕರಸೇವಕರು ಸುಟ್ಟು ಕರಕಲಾದರು. ಆಗ ಮೋದಿ ಅವರಿಗೆ ಜವಾಬ್ದಾರಿ ಇರಲಿಲ್ಲವೇ ಎಂದು ಪ್ರಶ್ನಿಸಿದರು. ಗುಜರಾತ್‍ನಲ್ಲಿ […]

1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ: ಸಿಎಂ ಘೋಷಣೆ

Wednesday, January 3rd, 2018
siddaramaih

ಬೆಂಗಳೂರು: ಜ್ಞಾನ ಮತ್ತು ಪ್ರತಿಭೆ ಯಾರ ಸ್ವತ್ತು ಅಲ್ಲ. ಅದು ಹುಟ್ಟಿನಿಂದಲೇ ಬರಬೇಕು. ನೀವು ಭವಿಷ್ಯದ ಪ್ರಜೆಗಳಾಗಬೇಕು ಎನ್ನುವುದು ‌ನನ್ನಾಸೆ. ನೀವೆಲ್ಲರೂ ಈ ಲ್ಯಾಪ್ ಟಾಪ್ ಸೌಲಭ್ಯವನ್ನು ಸದಪಯೋಗ ಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಉಚಿತ ಲ್ಯಾಪ್ ಟಾಪ್ ವಿತರಣಾ ಸಮಾರಂಭದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 2016-17ನೇ ಸಾಲಿನ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಎಂ‌ ಸಿದ್ದರಾಮಯ್ಯ […]

ಜನಾರ್ದನ ಪೂಜಾರಿ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು

Monday, September 19th, 2016
dinesh-gundurao

ಉಡುಪಿ: ‘ಕರ್ನಾಟಕ ಸರ್ಕಾರದ ವಿರುದ್ಧ ಪದೇ ಪದೇ ಅನಾವಶ್ಯಕ ಟೀಕೆ ಮಾಡುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಭಾನುವಾರ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ‘ಸರ್ಕಾರದ ವಿರುದ್ಧ ಅವರು ಅನಾವಶ್ಯಕವಾಗಿ ಪದೇ ಪದೇ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ, ಅವರ ಟೀಕೆಗಳಿಗೆ ಆಧಾರವಿಲ್ಲ. ಅದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ತಿಳಿಸಿದರು. ‘ಹಿರಿಯ ನಾಯಕರ ಹೇಳಿಕೆ ಸರ್ಕಾರ ಹಾಗೂ […]

ಕುರ್ನಾಡು-ಚೇಳೂರಿನಲ್ಲಿ ಜಿಲ್ಲಾ ಕಾರಾಗೃಹ ನಿರ್ಮಾಣ ಯೋಜನೆ: ಕೆ.ಜೆ. ಜಾರ್ಜ್

Thursday, July 24th, 2014
KJ-George

ಮಂಗಳೂರು : ಮಂಗಳೂರಿನಲ್ಲಿ ಗರಿಷ್ಠ ಭದ್ರತೆ ಇರುವ ಕಾರಾಗೃಹ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅದಕ್ಕಾಗಿ ಬಂಟ್ವಾಳ ತಾಲೂಕಿನ ಕುರ್ನಾಡು ಮತ್ತು ಚೇಳೂರು ಗ್ರಾಮಗಳ ವ್ಯಾಪ್ತಿಯಲ್ಲಿ 100 ಎಕರೆ ಜಮೀನು ಗುರುತಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರವರ ನಗರ ಹೊರ ವಲಯದಲ್ಲಿ ಕಾರಾಗೃಹ ನಿರ್ಮಾಣದ ಯೋಜನೆ ಸರಕಾರದ ಮುಂದೆ ಇದೆಯೇ ಎಂಬ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, 63 ಎಕರೆ 89 ಸೆಂಟ್ಸ್ ಜಮೀನು ಇಲಾಖೆಯ ವಶದಲ್ಲಿದೆ. […]

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಕೆ.ಜೆ.ಜಾರ್ಜ್

Sunday, June 23rd, 2013
Home Minister KJ George

ಉಡುಪಿ:  ಮಣಿಪಾಲದಲ್ಲಿ ಜೂನ್ 20 ರಂದು ನಡೆದ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವ ಕೆ.ಜೆ.ಜಾರ್ಜ್  ಮಣಿಪಾಲ ಆಸ್ಪತ್ರೆಗೆ ಇಂದು ಬೆಳಿಗ್ಗೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾಗಿರುವ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದು, ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದರು. ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ. ಎಂಟು […]