ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ : ನೂತನ ಕಚೇರಿ ಉದ್ಘಾಟನೆ

Tuesday, June 25th, 2019
Guruvayana ketre

ಬೆಳ್ತಂಗಡಿ  : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯೊಂದಿಗೆ 1982 ರಲ್ಲಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಆರಂಭಗೊಂಡ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಇಂದು ರಾಜ್ಯದೆಲ್ಲೆಡೆ ವಿಸ್ತರಿಸಿದೆ. ಜನಪರ ಚಳವಳಿಯಾಗಿ ಪ್ರತಿ ಮನೆಗೂ ಯೋಜನೆ ತಲುಪಿದೆ. ಜನರಎಲ್ಲಾ ಬೇಡಿಕೆಗಳನ್ನು ಪೂರೈಸಿ ಜೀವನ ಮಟ್ಟ ಸುಧಾರಣೆಯೊಂದಿಗೆ ಸ್ವಾವಲಂಬಿಜೀವನಕ್ಕೆಕಾಯಕಲ್ಪ ನೀಡಿದೆಎಂದುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್ ಹೇಳಿದರು. ಅವರು ಮಂಗಳವಾರ ಗುರುವಾಯನಕೆರೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಚೇರಿಯನ್ನು ಉದ್ಘಾಟಿಸಿ […]

ನರೇಂದ್ರ ಮೋದಿ ಅ. 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Tuesday, October 24th, 2017
PM modi

ಮಂಗಳೂರು: ಅ. 29ರಂದು ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅನಂತರ ಉಜಿರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅ.29ರಂದು ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಹೆಲಿಕಾಪ್ಟರ್‌ ಮೂಲಕವೇ ಉಜಿರೆಗೆ 11.40ಕ್ಕೆ ತಲುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.50ಕ್ಕೆ ನಿರ್ಗಮಿಸಿ ಹೆಲಿಕಾಪ್ಟರ್‌ ಮೂಲಕ ಮಂಗಳೂರು […]

ಧರ್ಮಸ್ಥಳ: ಕಾನೂರಾಯಣ ಚಿತ್ರಕ್ಕೆ ಚಾಲನೆ, ಗ್ರಾಮಾಭಿವೃದ್ಧಿ ಯೋಜನೆಗೆ ಒತ್ತು

Saturday, October 21st, 2017
Kanurayana

ಮಂಗಳೂರು: ‘ಕಾನೂರಾಯಣ’ ಚಿತ್ರಕ್ಕೆ ಹೇಮಾವತಿ ಹೆಗ್ಗಡೆ ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರೇ ಸೇರಿಕೊಂಡು ನಿರ್ಮಾಣ ಮಾಡುತ್ತಿರುವ ಚಿತ್ರ ಕಾನೂರಾಯಣ. ಧರ್ಮಸ್ಥಳದಲ್ಲಿ  ನಡೆದ ಸಭಾ ಕಾರ್ಯಕ್ರಮವನ್ನು ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರಿತು ಈ ಸಿನಿಮಾ ನಿರ್ಮಾಣವಾಗಲಿದ್ದು ಗ್ರಾಮಾಭಿವೃದ್ಧಿ ಮೂಲಕ ಬದುಕು ಕಟ್ಟಿಕೊಂಡವರು ಈ ಸಿನಿಮಾ ಮಾಡುತ್ತಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸದಸ್ಯರು ತಲಾ 20 ರೂ. ಗಳನ್ನು ಈ ಸಿನಿಮಾಕ್ಕಾಗಿ ನೀಡಿದ್ದು ಬಹು ನಿರ್ಮಾಪಕರ ಸಿನಿಮಾ ಇದಾಗಲಿದೆ. 4 ಕೋಟಿ […]