ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಿ : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Tuesday, July 13th, 2021
Sudhakar

ಚಿಕ್ಕಬಳ್ಳಾಪುರ :  ಭಾರತೀಯ ಜನತಾ ಪಕ್ಷ ಇಡೀ ಜಗತ್ತಿನಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷ. ಆದರೆ ಹಳೆ ಮೈಸೂರು ಭಾಗದಲ್ಲಿ ಇನ್ನೂ ಹೆಚ್ಚು ಸಂಘಟನೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರಗಳಿದ್ದು, ಒಂದು ಸ್ಥಾನ ಲಭ್ಯವಿದೆ. ಪಕ್ಕದ ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ಒಬ್ಬರೂ ಶಾಸಕರಿಲ್ಲ. […]

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಆರು ತಿಂಗಳ ನಂತರ : ಕೆ.ಎಸ್ ಈಶ್ವರಪ್ಪ

Saturday, June 19th, 2021
ks-Eswarappa

ದಾವಣಗೆರೆ : ಕರೊನಾ ಅಲೆ ಸಂಪೂರ್ಣವಾಗಿ ಮುಗಿದಿಲ್ಲ. ಡಿಸೆಂಬರ್‌ವರೆಗೆ ಯಾವುದೇ ಚುನಾವಣೆ ನಡೆಯಲ್ಲ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯನ್ನೂ ಮಾಡಲ್ಲ. ಚುನಾವಣೆ ಬೇಡ ಎಂದು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು. ಕರೊನಾ ಉಲ್ಬಣಿಸದಿದ್ದಲ್ಲಿ ರಾಜ್ಯದಲ್ಲಿ ಇಷ್ಟೊತ್ತಿಗೆ ತಾಪಂ ಮತ್ತು ಜಿಪಂ ಚುನಾವಣೆ ರಂಗೇರುತ್ತಿತ್ತು. 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದಂತೆ ಇನ್ನೂ 6 ತಿಂಗಳ ಕಾಲ ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆಯಲ್ಲ ಎಂದು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ ಎಂದರು. ಸದ್ಯ ಲಾಕ್ಡೌನ್ […]

ಪಕ್ಷ ಹಾಗೂ ಸರ್ಕಾರದ ವರ್ಚಸ್ಸು ವೃದ್ಧಿಸಲು ವಿಶೇಷ ಕಾರ್ಯಕ್ರಮ: ಆರ್ ಅಶೋಕ

Friday, June 4th, 2021
R Ashoka

ಬೆಂಗಳೂರು  : ಮುಂಬರುವ ಚುನಾವಣೆಗಳಲ್ಲಿ ಪಕ್ಷ ಹೇಗೆಲ್ಲಾ ಸಿದ್ಧಗೊಳ್ಳಬೇಕು ಮತ್ತು ಅದಕ್ಕಾಗಿ ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು. ಜೊತೆಗೆ ಶಾಸಕರನ್ನ ಒಟ್ಟಿಗೆ ತೆಗೆದುಕೊಂಡು ಹೋಗುವ ತುರ್ತು ಅಗತ್ಯವು ಪಕ್ಷದ ಮುಂದಿದ್ದು ಆ ನಿಟ್ಟಿನಲ್ಲಿ ಚರ್ಚೆ ಕೈಗೊಳ್ಳಲಾಯಿತು ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. “ಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,”ನಮ್ಮ ಮುಂದೆ ಸಿಂಧಗಿಯ ಉಪ ಚುನಾವಣೆ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಇದ್ದು, ಆ ನಿಟ್ಟಿನಲ್ಲಿ ಪಕ್ಷವನ್ನ ಬಲ ಪಡಿಸುವ ಹಾಗೂ ಸಂಘಟಿಸುವ ಕುರಿತಂತೆ ಚರ್ಚೆ […]

75 ವರ್ಷಗಳ ಹಿಂದೆ ನಿರ್ಮಾಣ ಗೊಂಡ ರಸ್ತೆಗೆ ರೂ 30ಲಕ್ಷ ವೆಚ್ಚದ ಕಾಂಕ್ರಿಟೀಕರಣ

Tuesday, May 25th, 2021
Rayi Road

ಬಂಟ್ವಾಳ: ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 75 ವರ್ಷಗಳ ಹಿಂದೆ ನಿರ್ಮಾಣ ಗೊಂಡ ರಾಯಿ-ಕೈತ್ರೋಡಿ ಗ್ರಾಮೀಣ ರಸ್ತೆಗೆ ರೂ 30ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣ ಕಾಮಗಾರಿ ಸೋಮವಾರ ಆರಂಭಗೊಂಡಿದೆ. ಈ ಹಿಂದೆ ಸ್ಥಳೀಯ ನಿವಾಸಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ಕೆ.ಸಂತೋಷ್ ಕುಮಾರ್ ಭಂಡಾರಿ ಸಹಿತ ಮಾಜಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು ಇವರ ಪ್ರತ್ಯೇಕ ಅನುದಾನದಲ್ಲಿ ಮೂರು ಬಾರಿ ಡಾಂಬರೀಕರಣ ಮತ್ತು ತೇಪೆ ಡಾಂಬರೀಕರಣ ಕಾಮಗಾರಿ ನಡೆದಿದೆ. ಉಳಿದಂತೆ […]

ಹಾಸನ ಜಿಲ್ಲೆಯನ್ನು ನಂ.1 ಮಾಡಿದವರಿಗೆ ಅವಾರ್ಡ್‌ : ಸಚಿವ ಹೆಚ್.ಡಿ.ರೇವಣ್ಣ

Thursday, June 14th, 2018
h-d-revanna

ಹಾಸನ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು. ಜಿಲ್ಲೆಯೂ ಎಲ್ಲಾ ಕ್ಷೇತ್ರದಲ್ಲಿಯೂ ನಂ.1 ಮಾಡಬೇಕು. ಉತ್ತಮ ಕಾರ್ಯ ಮಾಡುವ ಪಿಡಿಓ ಮತ್ತು ಕಾರ್ಯದರ್ಶಿಗಳಿಗೆ ಅವಾರ್ಡ್ ನೀಡುವುದಾಗಿ ಸಚಿವರು ಘೋಷಿದರು. 25 ರಿಂದ 50 ಸಾವಿರ ರೂ. ವರೆಗೂ ಬಹುಮಾನದೊಂದಿಗೆ ಪ್ರಮಾಣಪತ್ರ ನೀಡುವುದಾಗಿ ತಿಳಿಸಿದರು. 600ಕ್ಕೂ ಹೆಚ್ಚು ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರಿಂದ ಹೇಮಾವತಿ ಸಂಭಾಗಣ ತುಂಬಿ ತುಳುಕುತ್ತಿತ್ತು. ಸಂಭಾಗಣದಲ್ಲಿ ಕೂರಲು ಸ್ಥಳವಿಲ್ಲದೇ ಹೊರಾಂಗಣದಲ್ಲಿ, ಮೀಟಿಂಗ್ […]

ಜಿಲ್ಲಾ ಪಂಚಾಯಿತಿಯ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಹಜರತ್‌ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ

Saturday, November 11th, 2017
tipu jayanti

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಹಜರತ್‌ ಟಿಪ್ಪು ಸುಲ್ತಾನ್ ಜಯಂತಿ ಉದ್ಘಾಟಿಸಿ ಬಿ.ರಮಾನಾಥ ರೈ ಅವರು ಮಾತನಾಡಿದರು. ‘ಟಿಪ್ಪು ತನ್ನ 15ನೇ ವಯಸ್ಸಿನಿಂದಲೇ ಬ್ರಿಟಿಷರ ವಿರುದ್ಧ ನಾಲ್ಕು ಬಾರಿ ಯುದ್ಧ ಮಾಡಿದ. ದೇಶದಿಂದ ಬ್ರಿಟಿಷರನ್ನು ಹೊರಹಾಕಲು ನಿರಂತರವಾಗಿ ಪ್ರಯ ತ್ನಿಸಿದ. ಆಗಿನ ಇತಿಹಾಸಕಾರರು ಯಾವ ಲೋಪವೂ ಇಲ್ಲದೇ ಇದನ್ನು ದಾಖಲು ಮಾಡಿದ್ದರು. ಆದರೆ, ಈಗ ಕೆಲವರು ತಮ್ಮ ಮೂಗಿನ ನೇರಕ್ಕೆ […]

ಮಾರ್ಚ್14ರಿಂದ 19ರವರೆಗೆ ನಗರದಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ

Monday, March 7th, 2011
Kusta

ಮಂಗಳೂರು : ಮಾರ್ಚ್ 14ರಿಂದ 19ರವರೆಗೆ ಕುಷ್ಠರೋಗ ನಿರ್ಮೂಲನಾ ಆಂದೋಲನಾ ಕಾರ್ಯಕ್ರಮವನ್ನು ಮಂಗಳೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ  ಇತ್ತೀಚೆಗೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ‘ಕುಷ್ಠರೋಗ ನಿರ್ಮೂಲನ ಮಂಗಳೂರು ನಗರ’ದಲ್ಲಿ ಸಭೆಯಲ್ಲಿ ಹೊಸ ಎಂ ಬಿ ಕುಷ್ಠರೋಗ ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ಚರ್ಚೆ ನಡೆಸಲಾಯಿತು. 2010-11ನೇ ಸಾಲಿನಲ್ಲಿ ಮಂಗಳೂರು ನಗರದಲ್ಲಿ ಹೊಸದಾಗಿ  ಒಟ್ಟು 17 ಪ್ರಕರಣಗಳನ್ನು ಪತ್ತೆ ಹಚ್ಚಿ ಎಂ ಡಿ ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಷ್ಠರೋಗ ನಿವಾರಣಾಧಿಕಾರಿ ಡಾ ಟಿ. ಎನ್. […]