ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

Tuesday, April 23rd, 2024
BJP-memorandum

ಮಂಗಳೂರು : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ, ಈಗಾಗಲೇ ಕೈಗೆತ್ತಿಕೊಂಡಿರುವ […]

ಬಸವರಾಜ ಬೊಮ್ಮಾಯಿ ನೂರು ದಿನಗಳ ಆಡಳಿತಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

Thursday, November 11th, 2021
Basavaraja Bommai 100 days

ಬೆಂಗಳೂರು  : ರಾಜ್ಯದಲ್ಲಿ ಕಳೆದ ನೂರು ದಿನಗಳಲ್ಲಿ ಕೈಗೊಂಡಿರುವ ಹಲವು ಸುಧಾರಣಾ ಕ್ರಮಗಳು ಹಾಗೂ ನೂತನ ಯೋಜನೆಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತೃಪ್ತಿ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನವ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ಕರ್ನಾಟಕ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಭೇಟಿಯ ಸಂದರ್ಭದಲ್ಲಿ ಕಳೆದ ನೂರು ದಿನಗಳಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಬಗ್ಗೆ ಹಾಗೂ ನೂತನ […]

ಜನರ ಹಿತದೃಷ್ಟಿಯಿಂದ ಮಾಡಿದ ಸಾರ್ವಜನಿಕ ಆಸ್ತಿಯನ್ನು ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾರಾಟಕ್ಕಿಟ್ಟಿದೆ : ಖರ್ಗೆ

Saturday, September 11th, 2021
Karghe

ಮಂಗಳೂರು : ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರು 3.5 ಲಕ್ಷ ಕೋಟಿ ರೂ.ಗಳಿಗೆ ಅನೇಕ ಪಿಎಸ್‌ಯುಗಳನ್ನು ಮಾರಾಟ ಮಾಡಿದ್ದಾರೆ. ಬಿಜೆಪಿಯೊಂದಿಗೆ ನಿಕಟ ಸಂಪಂಧ ಹೊಂದಿರುವ ಕೆಲವು ಆಯ್ದ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ಸಾರ್ವಜನಿಕ ಆಸ್ತಿಯನ್ನು ಇಂದು ಮಾರಾಟ ಪ್ರಕ್ರಿಯೆ ನಡೆಯುತ್ತಿದೆ. ಇತ್ತೀಚೆಗೆ ನಾಲ್ಕು ವಿಮಾ ಕಂಪನಿಗಳನ್ನು ಹೂಡಿಕೆ ಹಿಂದೆಗೆದುಕೊಳ್ಳುವಿಕೆ ಯೋಜನೆಯಡಿ ತರುವ ತಿದ್ದುಪಡಿ ಮಸೂದಿಗೆ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗಿದೆ. ಈ ವಿಮಾ ಕಂಪೆನಿಗಳಲ್ಲಿ 1 ಲಕ್ಷ ಖಾಯಂ ಉದ್ಯೋಗಿಗಳು ಹಾಗೂ 12 ಲಕ್ಷ ಪಿಗ್ಮಿ […]

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿರೀಕ್ಷೆಗೂ ಮೀರಿದ ಹಣ ಸಂಗ್ರಹ

Tuesday, June 1st, 2021
ramamadhir

ಉಡುಪಿ: ಕಳೆದ ವರ್ಷ ಆ.5ರಂದು ಪ್ರಧಾನಿ ಮೋದಿಯವರು ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದ ನಂತರ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ನಿಧಿ ಸಮರ್ಪಣಾ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮಾ.31ರ ವರೆಗಿನ ಲೆಕ್ಕಾಚಾರದ ಪ್ರಕಾರ ಮಂದಿರಕ್ಕೆ 3,200 ಕೋಟಿ ರೂ.ಸಮರ್ಪಣೆಯಾಗಿದೆ. ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ 2 ಸಾವಿರ ಕೋಟಿ ರೂ.ವೆಚ್ಚ ಅಂದಾಜು ಮಾಡಲಾಗಿದೆ. ಉಳಿದ ಧನದ ಸದುಪಯೋಗ ಕುರಿತು ಆರ್ಥಿಕ ತಜ್ಞರ ಸಮಿತಿಯ ಸಲಹೆಯನ್ನೂ ಪಡೆಯಲಾಗಿದೆ. ಈ ಬಗ್ಗೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ಮುಂದಿನ […]

ಮೋದಿ ಸಾಯಬೇಕು ಎಂದಿದ್ದ ವ್ಯಕ್ತಿಯ ಪತ್ನಿಯನ್ನು ಪದಮುಕ್ತಗೊಳಿಸಿದ ಬ್ಯಾರಿ ಸಾಹಿತ್ಯ ಅಕಾಡೆಮೆ

Wednesday, April 28th, 2021
Modi

ಮಂಗಳೂರು: ಪ್ರಧಾನಿ ಮೋದಿಯವರ ಬಗ್ಗೆ ವ್ಯಕ್ತಿಯೊಬ್ಬರು ಫೇಸ್ ಬುಕ್ ನಲ್ಲಿ ನರಕಯಾತನೆ ಅನುಭವಿಸಿ ಸಾಯುವಂತಾಗಲು ಎಲ್ಲರು ಪ್ರಾರ್ಥಿಸಬೇಕು ಎಂದು ಅವಹೇಳಕಾರಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಆತನ ಪತ್ನಿಯನ್ನು ಸದಸ್ಯೆ ಸ್ಥಾನದಿಂದ ಪದಮುಕ್ತಗೊಳಿಸಿದ ಘಟನೆ  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಲ್ಲಿ ನಡೆದಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪತ್ರ ಮುಖೇನ ನಫೀಸಾ ಮಿಸ್ರಿಯಾ ಅವರಿಗೆ ಅಕಾಡೆಮಿ ಸದಸ್ಯತ್ವದಿಂದ ಪದಮುಕ್ತಗೊಳಿಸಿರುವ ಬಗ್ಗೆ ಆದೇಶ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್ಬುಕ್ ಪೇಜ್ನಲ್ಲಿ ಕಾಂಗ್ರೆಸ್ ಮುಖಂಡರು ಎನ್ನಲಾದ ಲುಕ್ಮಾನ್ ಅಡ್ಯಾರ್ ಅವಹೇಳನಕಾರಿ ಪೋಸ್ಟ್ […]

ಕೊರೋನಾ ಭೀತಿ : ಹೋಳಿ ಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧಾರ; ಪ್ರಧಾನಿ ಮೋದಿ

Wednesday, March 4th, 2020
modi

ನವದೆಹಲಿ : ಪ್ರಪಂಚವನ್ನು ಬೆಚ್ಚಿ ಬೀಳಿಸಿರುವ ಮಾರಕ ಸೋಂಕು ಕೊರೋನಾ ಸೋಂಕು ಎಲ್ಲರನ್ನು ಭಯಭೀತರನ್ನಾಗಿ ಮಾಡಿದೆ. ದೇಶದಲ್ಲಿಯೂ ದಿನೇ ದಿನೇ ಈ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಮೂಡಿಸಿದೆ. ಈಗಾಗಲೇ 6 ಜನರು ಈ ಸೋಂಕಿಗೆ ಬಲಿಯಾಗಿದ್ದು, ಜೈಪುರ ಪ್ರವಾಸಕ್ಕೆ ಒಂದ 15 ಜನರಲ್ಲಿ ಕೂಡ ಈ ಸೋಂಕು ದೃಢಪಟ್ಟಿದೆ. ಈ ಭಯ ಈಗ ಪ್ರಧಾನಿ ಮೋದಿಯನ್ನು ಆವರಿಸಿದ್ದು, ಈ ಹಿನ್ನೆಲೆ ಹೋಳಿ ಸಂಭ್ರಮದಲ್ಲಿ ಭಾಗಿಯಾಗದಿರಲು ಅವರು ನಿರ್ಧಾರಿಸಿದ್ದಾರೆ. ಹೋಳಿ ಹಬ್ಬದ ಸಂಭ್ರದಲ್ಲಿ ಭಾಗಿಯಾಗಲು ಈ ಹಿಂದೆ ಪ್ರಧಾನಿ […]

ನೆರೆ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ : ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಯಡಿಯೂರಪ್ಪ

Tuesday, January 7th, 2020
modi

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಎರಡನೇ ಕಂತಿನಲ್ಲಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಸಿಎಂ ಬಿಎಸ್.ಯಡಿಯೂರಪ್ಪ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ಧಾರೆ. “ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ಹೋದ ಕೂಡಲೇ 1869 ಕೋಟಿ ನೆರೆ ಪರಿಹಾರ ಬಿಡುಗಡೆ ಮಾಡಿದ್ಧಾರೆ. ಈ ಮೊದಲು 1200 ಕೋಟಿ ಹಣ ಬಿಡುಗಡೆ ಮಾಡಿದ್ದರು. ಇವಾಗ 1869 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಹಾರ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ. ಅದಕ್ಕಾಗಿ ಪ್ರಧಾನಿಯವರಿಗೆ ನಾನು […]

ವಿಜ್ಞಾನ ಮತ್ತು ತಂತ್ರಜ್ಞಾನ ಭಾರತ ದೇಶದ ಶಕ್ತಿ : ಪ್ರಧಾನಿ ಮೋದಿ

Friday, January 3rd, 2020
modi

ಬೆಂಗಳೂರು : ಭಾರತದ ಅಭಿವೃದ್ಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ನೇರವಾಗಿ ಅವಲಂಬಿಸಿದೆ. ಸ್ವಚ್ಛ ಭಾರತದಿಂದ ಆಯುಷ್ಮಾನ್ ಭಾರತದವರೆಗೂ ವಿಜ್ಞಾನದ ಪಾತ್ರ ಬಹುಮುಖ್ಯವಾದದ್ದು. ಇದೇ ಕಾರಣಕ್ಕೆ ದೇಶದ ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ತಂತ್ರಜ್ಞಾನ ಸುಲಭ ಹಾಗೂ ಅಗ್ಗವಾಗಿ ದೊರಕುವಂತೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಜನರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದರು. ಹೊಸ ವರ್ಷದಲ್ಲಿ ನನ್ನ ಮೊದಲ ಕಾರ್ಯಕ್ರಮ […]

ಜೊತೆಯಾಗಿ ಕೆಲಸ ಮಾಡುವ ಪ್ರಧಾನಿ ಮೋದಿ ಪ್ರಸ್ತಾಪವನ್ನು ತಿರಸ್ಕರಿಸಿದ ಶರದ್ ಪವಾರ್

Tuesday, December 3rd, 2019
Modi

ಮುಂಬೈ : ಭಾರತದ ಪ್ರಧಾನಿ ಮೋದಿ ಅವರು ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಬಯಸಿದ್ದರು. ಆದರೆ ನಾನು ಅವರ ಪ್ರಸ್ತಾಪವನ್ನು ತಿರಸ್ಕಾರ ಮಾಡಿದೆ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಸ್ಥಳೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ, ಮೋದಿ ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಬಯಸಿದ್ದರು. ಆದರೆ ನಮ್ಮ ವೈಯಕ್ತಿಕ ಜೀವನದಲ್ಲಿ ನಮ್ಮಿಂಬ್ಬರ ಸಂಬಂಧ ಚೆನ್ನಾಗಿದೆ. ಅದು ಹಾಗೆಯೇ ಇರುತ್ತದೆ. ಆದರೆ ನಾವು ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ ಎಂದು ಪವಾರ್ […]

ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನಾಚರಣೆ : ಪ್ರಧಾನಿ ಮೋದಿಯವರಿಂದ ಮಹತ್ವದ ಘೋಷಣೆಗಳ ನಿರೀಕ್ಷೆ

Wednesday, October 2nd, 2019
gandhi-150

ನವದೆಹಲಿ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆಯ ಐತಿಹಾಸಿಕ ಸಂಭ್ರಮದಲ್ಲಿ ಭಾರತ ಹಲವಾರು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಮಹತ್ವದ ಘೋಷಣೆಗಳನ್ನು ಮಾಡುವ ನಿರೀಕ್ಷೆ ಇದೆ. ಇಂದು ಸಾಯಂಕಾಲ ಪ್ರಧಾನಿ ಮೋದಿ ಅವರು ಗುಜರಾತ್ ನಲ್ಲಿರುವ ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಸಾಬರ್ ಮತಿ ನದಿ ದಂಡೆಯಲ್ಲಿ ಸುಮಾರು 20,000 ಗ್ರಾಮ ಮುಖಂಡರ ಸನ್ಮುಖದಲ್ಲಿ ಮೋದಿ ಅವರು ಭಾರತ ಬಹಿರ್ದೆಶೆ ಮುಕ್ತ […]