ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

Tuesday, April 23rd, 2024
BJP-memorandum

ಮಂಗಳೂರು : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ, ಈಗಾಗಲೇ ಕೈಗೆತ್ತಿಕೊಂಡಿರುವ […]

ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯ ಮಾತು

Tuesday, March 12th, 2024
Nalin-Kateel

ಮಂಗಳೂರು : ದಕ್ಷಿಣಕನ್ನಡ ಲೋಕಸಭಾ ಚುನಾವಣಾ ಅಭ್ಯರ್ಥಿ ಆಯ್ಕೆಯಲ್ಲಿ ಬದಲಾವಣೆಯ ಮಾತು ಕೇಳಿ ಬಂದಿದೆ. ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಸತತ ಮೂರು ಬಾರಿ ಸ್ಪರ್ಧಿಸಿರುವುದರಿಂದ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿಯ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಇಆ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಬೇಕು ಎನ್ನುವುದು ನಮ್ಮ ಪಾರ್ಟಿಯ ವಿಶೇಷತೆ. ಪಾರ್ಟಿಯ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಇದನ್ನು ನಾನು […]

ದ.ಕ. ಮತ್ತು ಉಡುಪಿ ಜಿಲ್ಲೆ ವಿಧಾನ ಪರಿಷತ್‌ನ ಚುನಾವಣೆ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಜುನಾಥ ಭಂಡಾರಿಗೆ ಜಯ

Tuesday, December 14th, 2021
Manjunatha Bhandary SrinivasaPoojary

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇಬ್ಬರೂ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯ ಗಳಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ ಸಚಿವರಾಗಿರುವ ಕೋಟ ಶ್ರೀನಿವಾಸ 3,672 ಮತಗಳನ್ನು ಗಳಿಸಿ ಮತ್ತೊಮ್ಮೆ ರಾಜ್ಯ ಶಾಸಕಾಂಗದ ‘ಮೇಲ್ಮನೆ’ ಪ್ರವೇಶಿಸಿದ್ದಾರೆ. ಮಂಜುನಾಥ ಭಂಡಾರಿ 2,079 ಮತಗಳನ್ನು ಗಳಿಸಿ ಮೊದಲ ಬಾರಿ […]

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತದಾನ

Thursday, April 18th, 2019
Nalin Kumar

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ  ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಬೆಳಗ್ಗೆ 11ರ ವೇಳೆಗೆ 32.5 % ಮತದಾನವಾಗಿದೆ . ಉರ್ವ ಲೇಡಿಹಿಲ್ ಸಮೀಪದ  ಸಂತ ಅಲೋಶಿಯಸ್ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ. ಮತದಾರರು ಮತಗಟ್ಟೆಯಲ್ಲಿ ಬೆಳಿಗ್ಗೆಯೇ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದು, ಚುರುಕಿನಿಂದ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ […]

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ನಟಿ ತಾರಾ ಮತಯಾಚನೆ

Thursday, April 4th, 2019
Tara

ಮಂಗಳೂರು : ದ.ಕ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ನಟಿ ತಾರಾ ಮತಯಾಚನೆ ಮಾಡಿದರು ನಗರದ ಕೇಂದ್ರ ಮಾರುಕಟ್ಟೆ ಸುತ್ತಮುತ್ತ ಮತಯಾಚನೆ ಮಾಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ಪ್ರತಿ ಕ್ಷೇತ್ರದಲ್ಲೂ ಬಿಜೆಪಿಯಿಂದ ಅವರೇ ನಿಂತಿದ್ದಾರೆ ಎನ್ನುವ ನಂಬಿಕೆ ನಮ್ಮದು. ಕಾಂಗ್ರೆಸ್ ಪಕ್ಷ ಇಷ್ಟು ವರ್ಷ ಕಳೆದರೂ ಇಂದಿರಾ ಗಾಂಧಿ ಹೆಸರಿನಲ್ಲಿ ಮತ ಯಾಚಿಸುತ್ತದೆ. ಹೀಗಿರುವಾಗ ನಮ್ಮ ನಾಯಕ, ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ನಾವ್ಯಾಕೆ ಮತ ಯಾಚನೆ ಮಾಡಬಾರದು ? ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿಯ […]

ದಕ್ಷಿಣ ಕನ್ನಡ ಲೋಕಸಭೆಗೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು ?

Saturday, March 2nd, 2019
Satyajith

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಸಮಾಧಾನ ಗೊಂಡ ಇನ್ನೊಂದು ಬಣ ಆರ್ ಎಸ್ ಎಸ್ ನ ಕಟ್ಟಾಳು ಸತ್ಯಜಿತ್ ಸುರತ್ಕಲ್ ಅವರನ್ನು ಈ ಬಾರಿಯ ಲೋಕ ಸಭಾ ಅಭ್ಯಥಿಯನ್ನಾಗಿಸಲು ಸತ ಪ್ರಯತ್ನ ಮಾಡುತ್ತಿದೆ ಅದಕ್ಕಾಗಿ ಅಲ್ಲಲ್ಲಿ ಸತ್ಯಜಿತ್ ಸುರತ್ಕಲ್ ಅವರ ಫ್ಲೆಕ್ಸ್ ಹಾಕಿದ್ದಾರೆ. ಅಭಿಮಾನಿಗಳು ಜಿಲ್ಲೆಯಾದ್ಯಂತ ಹಾಕಿದ ಫ್ಲೆಕ್ಸ್ ಗಳು ಬಿಜೆಪಿ ಮುಂಖಡರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಸತ್ಯಜಿತ್ ಅಭಿಮಾನಿಗಳ ಹೆಸರಿನಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸತ್ಯಜಿತ್‌ ನಮ್ಮ ಆಯ್ಕೆ ಎಂಬ […]

ಮಂಗಳೂರಿನ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Saturday, April 21st, 2018
bjp candidates

ಮಂಗಳೂರು:  ಮಂಗಳೂರಿನ ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳನ್ನು ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದ್ದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ.ವೇದವ್ಯಾಸ್ ಕಾಮತ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಂಗಳೂರು ಉತ್ತರ ಬಿಜೆಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ, ದಂತವೈದ್ಯ ಡಾ. ವೈ ಭರತ್ ಶೆಟ್ಟಿಯವರಿಗೆ ಟಿಕೆಟ್ ಲಭಿಸಿದೆ. ಮಂಗಳೂರು ಕ್ಷೇತ್ರದಿಂದ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಪು […]

ಮೀಂಜ ಪಂ. ಸದಸ್ಯೆ ಯಶೋಧ ಆಳ್ವ ನಿಧನ

Thursday, September 1st, 2016
Yashodha-alwa

ಮಂಜೇಶ್ವರ: ಮೀಂಜ ಗ್ರಾಮ ಪಂಚಾಯತ್‌ನ ಸದಸ್ಯೆ, ಹೊಸಂಗಡಿ ಬಳಿಯ ಕೊಡ್ಡ್ಡೆ ಮಜಿಬೈಲು ನಿವಾಸಿ ಚಂದ್ರಹಾಸ ಆಳ್ವರ ಪತ್ನಿ ಯಶೋಧ ಆಳ್ವ(57) ಮಂಗಳವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಕೆಲವು ತಿಂಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು. ಮೃತರು ಪತಿ, ಇಬ್ಬರು ಪುತ್ರಿಯರು,ಪುತ್ರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಕಳೆದ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಮೀಂಜ ಗ್ರಾಮ ಪಂಚಾಯತ್‌ನ 11ನೇ ವಾರ್ಡ್ ಮಜಿಬೈಲ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ವಲಯದಲ್ಲಿ ಸಕ್ರಿಯರಾಗಿದ್ದ […]

ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ

Thursday, May 19th, 2016
ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ

ಮಂಜೇಶ್ವರ : ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕುತೂಹಲಕಾರಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಪ್ರತಿಸ್ಪರ್ಧಿ ಯುಡಿಎಫ್ ಅಭ್ಯರ್ಥಿ ಪಿ.ಬಿ ಅಬ್ದುಲ್ ರಸಾಕ್ ಎದುರು ಕೇವಲ 89 ಅಂತರದ ಸೋಲನುಭವಿಸಲು ಕಾರಣಗಳ ಲೆಕ್ಕಾಚಾರ ನಡೆಯುತ್ತಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದವರು ಬಿಜೆಪಿ ಮತ ವಿಭಜನೆಗೆ ಕಾರಣವೆಂದು ಪ್ರಾಥಮಿಕ ವರದಿಗಳು ತಿಳಿಸುತ್ತವೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ರವರ ಹೆಸರಿನೊಡನೆ ಹೆಚ್ಚು ತಾಳೆಯಾಗುವ ಪೆರ್ಲ ಪ್ರದೇಶದ ಕೆ.ಸುಂದರ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ467 ಮತಗಳನನು […]

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

Thursday, March 27th, 2014
Shoba Karandlaje

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಡಾ. ಮುದ್ದು ಮೋಹನ್‌ ಅವರಿಗೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಬಿಜೆಪಿಯ ಕಾರ್ಕಳ ಶಾಸಕರಾದ ಸುನಿಲ್‌ ಕುಮಾರ್‌,ಚಿಕ್ಕಮಗಳೂರು ಶಾಸಕ ಸಿಟಿ ರವಿ , ತರಿಕೆರೆಯ ಮಾಜಿ ಶಾಸಕ ಸುರೇಶ್‌ , ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಉಪಸ್ಥಿತರಿದ್ದರು.