ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 19,710ಕ್ಕೆ ಏರಿಕೆ, ನಗರದಲ್ಲಿಯೇ 994 ಮಂದಿಗೆ ಸೋಂಕು

Friday, July 3rd, 2020
corona-virus

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕರೊನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ 24ಗಂಟೆಯಲ್ಲಿ 1694 ಹೊಸ ಸೋಂಕಿತರು ಪತ್ತೆಯಾಗಿದ್ದು, ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನ 994 ಮಂದಿಯಲ್ಲಿ ಕೊವಿಡ್-19 ದೃಢಪಡುವ ಮೂಲಕ ರಾಜಧಾನಿ ಕರೊನಾ ಹಾಟ್ಸ್ಪಾಟ್ ಆಗಿದೆ. ಕಳೆದ 24ಗಂಟೆಯಲ್ಲಿ ಕರೊನಾ ಸೋಂಕಿನಿಂದ 21 ಮಂದಿ ಸಾವನ್ನಪ್ಪಿದ್ದು, 471 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕರೊನಾ ಸೋಂಕಿತರ ಸಂಖ್ಯೆ 19,710ಕ್ಕೆ ಏರಿದ್ದು, ಡಿಸ್ಚಾರ್ಜ್ ಆದವರು ಒಟ್ಟು 8805 ಜನರು. ಮೃತಪಟ್ಟವರು 293 ಜನರು […]

ಇಂದಿನಿಂದ ಹುಬ್ಬಳ್ಳಿಯಿಂದ ಬೆಂಗಳೂರು, ಹೊಸದಿಲ್ಲಿಗೆ ವಿಮಾನಯಾನ ಆರಂಭ

Monday, May 25th, 2020
Hubballi Airport

ಹುಬ್ಬಳ್ಳಿ : ಕೊರೋನಾ ಸೋಂಕು ಪ್ರಸರಣ ತಡೆಗೆ ದೇಶದಲ್ಲಿ ಲಾಕ್‌ಡೌನ್‌ ಜಾರಿಯಾದ ಮಾರ್ಚ್‌ 25 ರಿಂದ ದೇಶೀಯ ಮತ್ತು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸ್ಥಗಿತಗೊಂಡಿತ್ತು. ಹಂತ ಹಂತವಾಗಿ ಲಾಕ್‌ ಡೌನ್‌ ನಿರ್ಭಂದ ಸಡಿಲಿಸುತ್ತಿರುವ ಕೇಂದ್ರ ಸರಕಾರ ಮೇ.25 ಸೋಮವಾರದಿಂದ ದೇಶದಲ್ಲಿ ಆಂತರಿಕ ವಿಮಾನಯಾನ ಆರಂಭಿಸಲು ಅನುಮತಿ ನೀಡಿದೆ. ಹೀಗಾಗಿ ಸ್ಟಾರ್‌ ಏರಲೈನ್ಸ್‌ ವಿಮಾನಯಾನ ಸಂಸ್ಥೆಯು ಮೇ.25 ಸೋಮವಾರದಿಂದ ಹುಬ್ಬಳ್ಳಿಯಿಂದ ಹೊಸದಿಲ್ಲಿ (ಹಿಂಡಾನ್)‌ ಹಾಗೂ ಬೆಂಗಳೂರಿಗೆ ವಿಮಾನಯಾನ ಆರಂಭಿಸಲಾಗುತ್ತಿದೆ ಎಂದು ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ ಠಾಕ್ರೆ […]

ಬೆಂಗಳೂರು : ಜನವರಿ 31ರಂದು ಬಿ.ಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಾಧ್ಯತೆ

Tuesday, January 28th, 2020
BSY

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಯದ್ದೇ ತಲೆನೋವಾಗಿದೆ. ವಿವಿಧ ಕಾರಣಗಳಿಂದ ವಿಳಂಬವಾಗುತ್ತಲೇ ಇರುವ ಸಂಪುಟ ವಿಸ್ತರಣೆಯ ದಿನವನ್ನು ಯಡಿಯೂರಪ್ಪ ಜ. 29ಕ್ಕೆ ಫಿಕ್ಸ್ ಮಾಡಿದ್ದರು. ಈಗ ಅದು ಜ. 31ಕ್ಕೆ ಹೋಗಿದೆ. ಶುಕ್ರವಾರ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ. ಆದರೆ, ಹೈಕಮಾಂಡ್ ಒಪ್ಪಿಗೆ ಮೇಲೆ ಎಲ್ಲವೂ ನಿಂತಿದೆ. ಸಂಪುಟ ವಿಸ್ತರಣೆಗೆ ಸಂಭಾವ್ಯ ಸಚಿವರ ಪಟ್ಟಿಯನ್ನು ಯಡಿಯೂರಪ್ಪ ಈಗಾಗಲೇ ಬಿ.ಎಲ್. ಸಂತೋಷ್ ಮೂಲಕ ಹೈಕಮಾಂಡ್ಗೆ ತಲುಪಿಸಿದ್ಧಾರೆ. ಈ ಪಟ್ಟಿಗೆ ಹೈಕಮಾಂಡ್ ಕೂಡ ಒಪ್ಪಿತ್ತೆಂಬ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ವ್ಯಕ್ತಿ ಆದಿತ್ಯರಾವ್ ಬೆಂಗಳೂರು ಪೊಲೀಸರಿಗೆ ಶರಣು

Wednesday, January 22nd, 2020
Accused-Adithya-Rao

ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಡುಪಿ ಮೂಲದ ಆದಿತ್ಯರಾವ್ ಎಂಬಾತ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಬೆಂಗಳೂರಿನ ನೃಪತುಂಗ ರಸ್ತೆ ಬಳಿ ಇರುವ ಡಿಜಿಐಜಿಪಿ ಕಚೇರಿಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಹುಸಿ‌ ಬಾಂಬ್ ಕರೆಯಿಂದ ಆದಿತ್ಯರಾವ್ ಅರೆಸ್ಟ್ ಆಗಿದ್ದ. ಇಂದು ಡಿಜಿ ಕಚೇರಿಗೆ ಬಂದು ಶರಣಾದ ಹಿನ್ನೆಲೆ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸ್ರು ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮುಂದುವರೆಸಲಿದ್ದಾರೆ. ಎರಡು […]

ಮುಂದಿನ ಮೂರು ದಿನಗಳ ಕಾಲ ಬೆಂಗಳೂರಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Wednesday, October 9th, 2019
rain

ಬೆಂಗಳೂರು : ಮುಂದಿನ ಮೂರು ದಿನಗಳ ಕಾಲ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಸಂಜೆ ವೇಳೆ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದೊಂದು ವಾರದಿಂದ ಆಗಾಗ ಪ್ರತ್ಯಕ್ಷನಾಗಿ ಆರ್ಭಟಿಸುವ ಮಳೆರಾಯ ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ವರ್ಷಧಾರೆ ಸುರಿಸಲಿದ್ದಾನೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಅಕ್ಟೋಬರ್ 12ರವರೆಗೂ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ನಗರದಲ್ಲಿ ಮಂಗಳವಾರವೂ ಮಳೆಯ ಆರ್ಭಟ ಮುಂದುವರೆದ […]

ಬೆಂಗಳೂರು-ಮೈಸೂರು ಮಧ್ಯೆ 2 ಹೊಸ ರೈಲಿಗೆ ಗ್ರೀನ್ ಸಿಗ್ನಲ್

Thursday, August 29th, 2019
bengaluru-mysuru

ಮೈಸೂರು : ರೈಲ್ವೆ ಇಲಾಖೆ ಬೆಂಗಳೂರು – ಮೈಸೂರು ನಡುವೆ ಬೆಳಗ್ಗೆ, ಮಧ್ಯಾಹ್ನ ಸಂಚರಿಸುತ್ತಿದ್ದ ಪುಷ್ಪುಲ್ ರೈಲನ್ನು ರದ್ದುಗೊಳಿಸಿ ಮೆಮು ರೈಲನ್ನು ಆರಂಭಿಸಿದೆ. ಇದರಿಂದ ಪ್ರಯಾಣಿಕರಲ್ಲಿ ಸಂತಸ ವ್ಯಕ್ತವಾಗಿದೆ. ಈ ಹಿಂದೆ ಇದ್ದ ಪುಷ್ಪುಲ್ ರೈಲುಗಳಲ್ಲಿ ಇದ್ದ 16 ಬೋಗಿಗಳಲ್ಲಿ 1700ರಷ್ಟು ಪ್ರಯಾಣಿಕರು ಸಂಚರಿಸಬಹುದಾಗಿತ್ತು. ಅಲ್ಲದೇ ಈ ರೈಲಿನಲ್ಲಿ ಬೆಂಗಳೂರು ಸಮೀಪಿಸಿದಂತೆ ಮಂಡ್ಯ, ರಾಮನಗರ, ಚನ್ನಪಟ್ಟಣ ರೈಲ್ವೆ ನಿಲ್ದಾಣಗಳಲ್ಲಿ ರೈಲು ಹತ್ತಲೂ ಸಾಧ್ಯವಾಗುತ್ತಿರಲಿಲ್ಲ. ಅಷ್ಟು ಜನಸಂದಣಿಯಿಂದ ರೈಲು ತುಂಬಿರುತ್ತಿತ್ತು. ಆದರೆ ಮೆಮು ರೈಲಿನಲ್ಲಿ ವಿಶೇಷ ವಿನ್ಯಾಸದ ಬೋಗಿಗಳಿಂದಾಗಿ […]

ಬೆಂಗಳೂರು-ಮಂಗಳೂರು ರೈಲು ಮಾರ್ಗದ ಕಾಮಗಾರಿ ಪುನರಾರಂಭ

Tuesday, August 20th, 2019
Railu-haligalu

ಸುಬ್ರಹ್ಮಣ್ಯ : ಬೆಂಗಳೂರು-ಮಂಗಳೂರು ರೈಲು ಮಾರ್ಗದ ಎಡಕುಮೇರಿ ಬಳಿ ಪ್ರಾಕೃತಿಕ ವಿಕೋಪ ಸಂಭವಿಸಿ ಹಳಿಗಳಿಗೆ ಹಾನಿಯುಂಟಾಗಿದ್ದು, ಅದರ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ. 20 ಕ್ರೇನ್‌ ಮತ್ತು 500ಕ್ಕೂ ಅಧಿಕ ರೈಲ್ವೇ ಹಾಗೂ ಖಾಸಗಿ ಕಾರ್ಮಿಕರನ್ನು ಬಳಸಿಕೊಂಡು ದುರಸ್ತಿ ನಡೆಸಲಾಗುತ್ತಿದೆ. ಕಾಮಗಾರಿ ಪೂರ್ಣಗೊಂಡು ರೈಲು ಯಾನ ಈ ಮಾರ್ಗದಲ್ಲಿ ಸಂಚರಿಸಲು ಇನ್ನು ಹತ್ತು ದಿನಗಳು ಹಿಡಿಯಬಹುದು ಎಂದು ರೈಲ್ವೇ ಮೂಲಗಳು ತಿಳಿಸಿವೆ.  

ನನ್ನನ್ನು ನೋಡಿದರೆ ಅಸಮಾಧಾನ ಇರುವ ಹಾಗೇ ಕಾಣುತ್ತಿದೆಯಾ: ಸಿಎಂ ಕುಮಾರಸ್ವಾಮಿ

Friday, December 28th, 2018
kumarswamy

ಬೆಂಗಳೂರು: ನಿಗಮ ಮಂಡಳಿ ವಿಚಾರದಲ್ಲಿ ಅಸಮಾಧಾನ ಇಲ್ಲ, ನನ್ನನ್ನು ನೋಡಿದರೆ ಅಸಮಾಧಾನ ಇರುವ ಹಾಗೇ ಕಾಣುತ್ತಿದೆಯಾ ಎಂದು ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ನಾಯಕರು ನೀಡಿರುವ ಪಟ್ಟಿ ರಾಜ್ಯಪಾಲರಿಗೆ ಕಳಿಸಿದ್ದೇನೆ. ಖಾತೆ ಹಂಚಿಕೆಯಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೆಲವರು ಚರ್ಚೆ ಮಾಡುತ್ತಾರೆ. ಅದು ವಯಕ್ತಿಕ. ಅದಕ್ಕೆ ನಾನು ಜವಾಬ್ದಾರಿ ತೆಗೆದುಕೊಳ್ಳುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದರು. ಇನ್ನು […]

ರಾಜ್ಯದಲ್ಲಿ 156 ತಾಲೂಕುಗಳಲ್ಲಿ ಬರಗಾಲ ಎದುರಾಗಿರುವ ಹಿನ್ನೆಲೆ: ಮೋದಿ ಭೇಟಿಯಾಗಲಿರುವ ಸಿಎಂ

Thursday, December 27th, 2018
narendra-modi

ಬೆಂಗಳೂರು: ರಾಜ್ಯದಲ್ಲಿ 156 ತಾಲೂಕುಗಳಲ್ಲಿ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ಗೃಹಕಚೇರಿಯಲ್ಲಿ ಭೇಟಿಯಾಗಲು ಸಮಯ ನಿಗದಿಯಾಗಿದೆ. ರಾಜ್ಯದ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಇಡೀ ರಾಜ್ಯ ಬರಗಾಲಕ್ಕೆ ಒಳಗಾಗಿದ್ದು, ಈ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಪ್ರಧಾನಿಯೊಂದಿಗೆ ಸಿಎಂ ಕುಮಾರಸ್ವಾಮಿ ಅವರು ಚರ್ಚೆ ನಡೆಸಲಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಹಲವು ತಾಲೂಕುಗಳು ನಿರಂತರ ಬರಗಾಲದಿಂದ ತತ್ತರಿಸಿದೆ. ಹೀಗಾಗಿ […]

ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ಪಿ.ಆರ್. ರಮೇಶ್ ನೇಮಕ

Wednesday, December 26th, 2018
siddaramaih

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಅವರು ನೇಮಕಗೊಂಡಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ರಮೇಶ್ ಅವರಿಗೆ ನೇಮಕ ಪತ್ರ ನೀಡಿದರು. 2017 ರ ಮೇ ತಿಂಗಳಲ್ಲಿ ಸಾಮಾಜಿಕ ಸೇವೆಯ ಅಡಿ ವಿಧಾನ ಪರಿಷತ್ಗೆ ನಾಮ ನಿರ್ದೇಶನಗೊಂಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿರುವ ಅವರು, ಈ ಹಿಂದೆ ಬೆಂಗಳೂರು ಮೇಯರ್ ಆಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ ಪಕ್ಷದ ಪ್ರಮುಖ ಹುದ್ದೆ ಇವರಿಗೆ ಒಲಿದು ಬಂದಿದೆ.