ಮನೆಯಲ್ಲಿಯೇ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವ ಕೋವಿಸೆಲ್ಫ್ ಕಿಟ್

Thursday, May 20th, 2021
coviself-kit

ನವದೆಹಲಿ : ಪುಣೆ ಮೂಲದ ಮೈಲಾಬ್ ಡಿಸ್ಕವರಿ ಸೊಲ್ಯೂಷನ್ಸ್ ಲಿಮಿಟೆಡ್ ಕೋವಿಡ್-19 ಪರೀಕ್ಷೆಯನ್ನು ಮನೆಯಲ್ಲಿಯೇ ನಡೆಸುವ ಕ್ಷಿಪ್ರ ಆಂಟಿಜೆನ್ ಪರೀಕ್ಷೆ (ಆರ್‌ಎಟಿ)  ಮಾಡುವ  ಕಿಟ್‌ ತಯಾರಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಈ ಕಿಟ್ ಗೆ ಅನುಮೋದನೆ ನೀಡಿದೆ. ಕೋವಿಸೆಲ್ಫ್ ಟಿಎಂ (ಪ್ಯಾಥೊಕ್ಯಾಚ್) ಕೋವಿಡ್-19 ಒಟಿಸಿ ಆಂಟಿಜೆನ್ ಎಲ್ಎಫ್ ಸಾಧನ ಎಂದೂ ಕರೆಯಲ್ಪಡುವ ಸ್ವಯಂ-ಪರೀಕ್ಷೆಯ ಕೋವಿಸೆಲ್ಫ್ ಕಿಟ್ ಇದಾಗಿದೆ. ಆರ್‌ಎಟಿಗಳನ್ನು ಹೇಗೆ ಮತ್ತು ಯಾರು ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿದ ಐಸಿಎಂಆರ್, ರೋಗಲಕ್ಷಣಗಳುಳ್ಳ ವ್ಯಕ್ತಿಗಳಲ್ಲಿ ಮತ್ತು ಪ್ರಯೋಗಾಲಯ-ದೃಢಪಡಿಸಿದ […]

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ ಸಂಪರ್ಕ ರಸ್ತೆ, ಮನೆಗಳು ಕುಸಿತ, ಹಲವೆಡೆ ಜಲಾವೃತ

Sunday, September 20th, 2020
neerumarga

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ ಸುರಿದ ಮಳೆಯಿಂದಾಗಿ  ನಗರ ಹೊರವಲಯದ ನೀರುಮಾರ್ಗ ಮತ್ತು ಬಜ್ಪೆ ಸಮೀಪದ ಆದ್ಯಪಾಡಿ ಎಂಬಲ್ಲಿ ಭೂ ಕುಸಿದ ಪರಿಣಾಮ ಸಂಪರ್ಕ ರಸ್ತೆ ಕಡಿದು ಹೋಗಿದೆ.‌ ಮುನ್ನೆಚ್ಚರಿಕೆಯ ಕ್ರಮವಾಗಿ ಈ ಭಾಗದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ . ಅದಲ್ಲದೆ ಸರಿಪಳ್ಳ ಎಂಬಲ್ಲಿ ಮನೆ ಯೊಂದು ಕುಸಿದ ಪರಿಣಾಮ ಇಬ್ಬರಿಗೆ‌ ಗಾಯವಾಗಿದ್ದು, ಅವರನ್ನು‌ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಜಪ್ಪಿನಮೊಗರು, ಕುದ್ರೋಳಿ ಮತ್ತಿತರ ಕಡೆ ನೀರು ನಿಲುಗಡೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ನಗರದ ಫಳ್ನೀರ್ ರಸ್ತೆಯ […]

ಲಾಕ್ಡೌನ್ ನಿಂದ ಮನೆಯಲ್ಲೇ ಇರುತಿದ್ದ ಗಂಡನನ್ನುಕಲ್ಲುಎತ್ತಿ ಹಾಕಿ ಸಾಯಿಸಿದ ಹೆಂಡತಿ ಮತ್ತು ಗೆಳೆಯರು

Saturday, July 18th, 2020
amrutahalli

ಬೆಂಗಳೂರು : ಲಾಕ್ಡೌನ್ ನಿಂದ ಮನೆಯಲ್ಲೇ ಹೆಂಡತಿ ಜೊತೆ ಇರುತಿದ್ದ ಗಂಡನನ್ನುಇಬ್ಬರು ಚೂರಿಯಿಂದ ತಿವಿದು ಕಲ್ಲುಎತ್ತಿ ಹಾಕಿ ಸಾಯಿಸಿದ ಘಟನೆ  ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಸ್ನೇಹಿತನ ಜೊತೆ ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ, ಪ್ರಿಯಕರ ಅಭಿಲಾಷ್ ಮತ್ತು ಸ್ನೇಹಿತ ರಫೀಕ್ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಮನೆಯಲ್ಲಿ ಪ್ರತ್ಯೇಕ ಕೊಠಡಿಯೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ ಹೋಂ ಐಸೊಲೇಶನ್‌ಗೆ ಅವಕಾಶ

Friday, July 17th, 2020
Kota Srinivas

ಮಂಗಳೂರು: ಕೋವಿಡ್ 19 ಸೋಂಕಿತರಿಗೆ ದ.ಕ. ಜಿಲ್ಲೆಯ 7 ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ ಹಾಗೂ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲೂ ಆಯುಷ್ಮಾನ್‌ ಯೋಜನೆಯಡಿ ಉಚಿತ ಚಿಕಿತ್ಸೆ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಪಾಸಿಟಿವ್‌ ಹೊಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದೇ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ಸೂಚನೆ ನೀಡಲಾಗಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಇತರರಿಗೆ ತೊಂದರೆಯಾಗದಂತೆ ಇರಬೇಕಾಗಿದ್ದು, ಮನೆಯಲ್ಲಿ ಪ್ರತ್ಯೇಕ ಕೊಠಡಿ, ಅದರೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ […]

ಮನೆಯ ಋಣಾತ್ಮಕ ದೋಷಗಳನ್ನು ಸರಿಪಡಿಸಲು ಹೀಗೆ ಮಾಡಿ

Saturday, May 9th, 2020
Mane

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಮನೆಯಲ್ಲಿ ಅಶಾಂತಿಯ ವಾತಾವರಣ, ಆಕಸ್ಮಿಕ ಅವಘಡಗಳು ಅಥವಾ ಅನಾರೋಗ್ಯದ ಸ್ಥಿತಿಗಳು ಕಂಡು ಬರುತ್ತಿದ್ದರೆ ಇದು ಮಾಂತ್ರಿಕ ದೋಷ ಸಮಸ್ಯೆಯಿಂದ ಆಗಬಹುದಾದ ಸಾಧ್ಯತೆ ಇರುತ್ತದೆ. ನಿಮ್ಮ ಕೆಲಸದಲ್ಲಿ ಗೆಲುವು ಮರೀಚಿಕೆ ಆಗಬಹುದು, ಆರ್ಥಿಕ ಸ್ಥಿತಿ, ಮಾನಸಿಕ ಸ್ಥಿತಿ ಹದಗೆಡಬಹುದು, ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯಗಳು, ಪದೇಪದೇ ಆರೋಗ್ಯ ಕೈಕೊಡುತ್ತಿರುಬಹುದು ಇಂತಹ ಸಂದರ್ಭಗಳಿಂದ ನಿಮಗೆ ದುಃಖದ ವಾತಾವರಣ ಮಡುಗಟ್ಟುತ್ತದೆ. ಕೆಲವು ಸಂದರ್ಭಗಳಲ್ಲಿ ಅಮಾವಾಸ್ಯೆ ಹುಣ್ಣಿಮೆ ಇಂತಹ ದಿನಗಳಲ್ಲಿ ಈ ಮೇಲ್ಕಂಡ […]

ಮನೆ ಮೇಲೆ ಬಿದ್ದ ಕಾರು… ಮನೆ, ಕಾರು ಜಖಂ!

Saturday, July 21st, 2018
car-fell-down

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರೊಂದು ರಸ್ತೆಯ ಕೆಲಭಾಗದಲ್ಲಿದ್ದ ಮನೆ ಮೇಲೆ ಬಿದ್ದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದ ಹಳುವಳ್ಳಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿ ಪ್ರವಾಸಿಗರಿದ್ದು ಮಾರುತಿ ಕಾರು ಸಂಪೂರ್ಣ ಜಖಂ ಆಗಿದೆ. ಕಾರು ಹೊರನಾಡು ದೇವಸ್ಥಾನದಿಂದ ಬರುವ ವೇಳೆಯಲ್ಲಿ ಈ ಅವಘಡ ಜರುಗಿದೆ. ಕಾರಿನಲ್ಲಿದ್ದ ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಾಳಾಗಿದ್ದು, ಗಾಯಾಳುಗಳಿಗೆ ಕಳಸ ಸರ್ಕಾರಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸ್ಥಳೀಯರ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದ್ದು, ಕಳಸ ಪೋಲಿಸರು ಸ್ಥಳಕ್ಕೆ ಆಗಮಿಸಿ […]