8 ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಮೋನಪ್ಪ ಭಂಡಾರಿ

Thursday, May 10th, 2018
nalin-kumar

ಮಂಗಳೂರು: ದ.ಕ. ಜಿಲ್ಲೆಯ 8 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ದ.ಕ. ಜಿಲ್ಲಾ ಚುನಾವಣಾ ಉಸ್ತುವಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಹೇಳಿದರು. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೆ ಪಕ್ಷದ ಕಾರ್ಯಕರ್ತರು 2-3 ಸುತ್ತಿನ ಮನೆ ಮನೆ ಭೇಟಿ ನೀಡಿದ್ದಾರೆ. ಎಲ್ಲರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಇದನ್ನು ಕಂಡು ಜಿಲ್ಲಾ ಉಸ್ತುವಾರಿ ಸಚಿವರಿಗೆ ನಡುಕ ಶುರುವಾಗಿದೆ. ಹಾಗಾಗಿ ಅವರೀಗ ಹಿಂದುತ್ವದ ಪರ ಮಾತನಾಡುತ್ತಿದ್ದಾರೆ. ಜಿಲ್ಲೆಯ […]

ಮಂಗಳೂರಿನಲ್ಲಿ ಮೇ 5ರಂದು ಮೋದಿ ಪ್ರಚಾರ

Wednesday, May 2nd, 2018
mangaluru

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇ 5 ರಂದು ಸಂಜೆ 5.30ಕ್ಕೆ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು. ಆರಂಭದಲ್ಲಿ ಮೇ 8 ರಂದು ನರೇಂದ್ರ ಮೋದಿ ಮಂಗಳೂರಿಗೆ ಬರುವ ಬಗ್ಗೆ ಮಾಹಿತಿ ಇತ್ತು. […]

ಹಿಂದೂ ವಿಚಾರ ಧಾರೆ, ಸಂಘಟನೆ ಶಕ್ತಿ ಮೇಲೆ ಈ ಬಾರಿ ಗೆಲುವು: ನಳಿನ್

Thursday, April 19th, 2018
nalin-kumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈ ನಡುವೆ ಬಿಜೆಪಿ ತಮ್ಮ ಜಿಲ್ಲಾ ಚುನಾವಣಾ ಕಚೇರಿಯನ್ನು ಮಂಗಳೂರಿನಲ್ಲಿ ಆರಂಭಿಸಿದೆ. ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ಮಂಗಳೂರಿನಲ್ಲಿ ಇಂದು ನಡೆಯಿತು. ಬಿಜೆಪಿಯ ಹಿರಿಯ ಮುಖಂಡ , ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಚುನಾವಣಾ ಕಾರ್ಯಲಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ […]

ಬಿಜಪಿಯಿಂದ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ನವಶಕ್ತಿ ಸಮಾವೇಶ

Saturday, April 14th, 2018
Monappa Bhandary

ಮಂಗಳೂರು :  ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯ ಪ್ರಕಾರ ಚುನಾವಣಾ ಪೂರ್ವದಲ್ಲಿ ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಘಟನೆ ನಡೆದಿದೆ. ಪ್ರತಿ ಬೂತ್‌ಗಳಲ್ಲಿ ಕನಿಷ್ಠ 12 ಕಾರ್ಯಕರ್ತರನ್ನು ಗುರುತಿಸಲಾಗಿದೆ ಎಂದು ಬಿಜಪಿಯ ಜಿಲ್ಲಾ ಚುನಾವಣಾ ವಕ್ತಾರ ಮೋನಪ್ಪ ಭಂಡಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ನವಶಕ್ತಿ ಸಮಾವೇಶ ನಡೆಯಲಿದೆ. ಮಹಿಳಾ ವಿಭಾಗದ 83 ಶಕ್ತಿ ಕೇಂದ್ರಗಳ ಮೂಲಕ ಆರಂಭಗೊಂಡ ಒಂದು ಹಂತದ ಪ್ರಚಾರ ಕಾರ್ಯ ನಾಳೆಗೆ ಕೊನೆಗೊಳ್ಳಲಿದೆ .ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಒಂದರಂತೆ […]

ಎಡಿಬಿ:ಲೋಕಾಯುಕ್ತ ತನಿಖೆಗೆ ಆಗ್ರಹ

Friday, January 12th, 2018
mangaluru

ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಡಿಬಿ ಮೊದಲ ಹಂತದ ಯೋಜನೆಯಲ್ಲಿ ಕುಡ್ಸೆಂಪ್ ಕೈಗೊಂಡ ಒಳಚರಂಡಿ, ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿ ಕಳಪೆಯಾಗಿದ್ದು, ಬಹುತೇಕ ಕಡೆ ಉಪಯೋಗವಿಲ್ಲದಾಗಿದೆ. ಕಾಮಗಾರಿ ಪೂರ್ಣಗೊಳ್ಳದೆ ಹಸ್ತಾಂತರ ನಡೆಸುವ ಮೂಲಕ ವ್ಯಾಪಕ ಭ್ರಷ್ಟಾಚಾರ ಎಸಗಲಾಗಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಒತ್ತಾಯಿಸಿದ್ದಾರೆ. ಸುರತ್ಕಲ್ ಮದ್ಯ ಮಾಧವ ನಗರದ ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕ, ಪಡೀಲ್ ಮತ್ತು ಬಜಾಲ್‌ ರೇಚಕ ಸ್ಥಾವರಗಳಿಗೆ ಭೇಟಿ ನೀಡಿ […]

ಪರೇಶ್‌ ಮೇಸ್ತಾ ಹತ್ಯೆ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಇಂದ ಪ್ರತಿಭಟನೆ

Wednesday, December 20th, 2017
paresh-mestha

ಮಂಗಳೂರು: ಪರೇಶ್ ಮೇಸ್ತಾ ಕೊಲೆ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಐಸಿಸ್ ಉಗ್ರರಿಗಿಂತಲೂ ಭೀಭತ್ಯ ಕೃತ್ಯ ನಡೆದಿರುವುದರಿಂದ ಜಿಹಾದಿಗಳು ಹೊನ್ನಾವರದಲ್ಲಿಯೂ ನೆಲೆಯೂರಿರುವ ಬಗ್ಗೆ ಶಂಕೆಯಿದೆ. ಪ್ರಕರಣದ ಬಗ್ಗೆ ಕೂಲಂಕುಶ ತನಿಖೆಯಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ರಾಜ್ಯದಲ್ಲಿ ಈಗಾಗಲೇ 20ಕ್ಕೂ ಅಧಿಕ ಹಿಂದೂ ಯುವಕರ ಹತ್ಯೆಯಾಗಿದೆ. ಎಲ್ಲಾ ಕೊಲೆಯಲ್ಲೂ ಪಿಎಫ್ಐ ಕಾರ್ಯಕರ್ತರ ಕೈವಾಡವಿದೆ ಎಂಬ ಆರೋಪವಿದೆ. ಇಷ್ಟಾದರೂ ಆರೋಪಿಗಳನ್ನು ಬಂಧಿಸಿ […]

ಮ.ನ.ಪಾ ಮೇಯರ್ ಆಯ್ಕೆಗೆ ದ.ಕ. ಜಿಲ್ಲಾ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Tuesday, September 24th, 2013
BJP

ಮಂಗಳೂರು : ದ.ಕ. ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಶೀಘ್ರವಾಗಿ ನೆರವೇರಬೇಕೆಂದು ಆಗ್ರಹಿಸಿ  ಸೋಮವಾರ ಮ.ನ.ಪಾ ಮುಂಭಾಗ ಪ್ರತಿಭಟನೆ ನಡೆಸಿದರು. ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಅವರು, ಪ್ರತಿಭಟನೆಯನ್ನು ಉದ್ದೇಶಿಸಿ ಮೇಯರ್ ನೇಮಕ ಮಾಡದೆ ಕಾಂಗ್ರೆಸ್ ಸಂವಿಧಾನವನ್ನು ಉಲ್ಲಂಘನೆ ಮಾಡಿದೆ. ಸಂವಿಧಾನದ ಪ್ರಕಾರ ಮತದಾನವಾದ ಆರು ತಿಂಗಳೊಳಗೆ ಮೇಯರ್ ನೇಮಕಗೊಳ್ಳಬೇಕು. ಆದರೆ ಮ.ನ.ಪಾ ದಲ್ಲಿ ಪುರುಷ ಪ್ರಾಧಾನ್ಯತೆ ಹೊಂದಿರುವುದರಿಂದ ಇಲ್ಲಿ ತನಕ ಮೇಯರ್ ನೇಮಕವಾಗಿಲ್ಲ ಎಂದರು. ಮ.ನ.ಪಾ ಯಲ್ಲಿ ಆಡಳಿತ […]

ಕರಾವಳಿಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಯಾರು ಹೊಣೆ

Monday, March 25th, 2013
Monappa Palemar

ಮಂಗಳೂರು : ಈ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಉಸ್ತುವಾರಿಯನ್ನು ಎಂಎಲ್ ಸಿ ಮೋನಪ್ಪ ಭಂಡಾರಿ ಅವರಿಗೆ ನೀಡಿರುವುದು ಹಲವರಲ್ಲಿ ಅಸಮಾಧಾನ ಉಂಟು ಮಾಡಿತ್ತು ಎನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಅವರು ಕಲ್ಲಡ್ಕ ಭಟ್ಟರ ನಿಷ್ಠಾವಂತ ಎಂಬ ಒಂದೇ ಮಾನದಂಡದಲ್ಲಿ ಅವರಿಗೆ ಎಂಎಲ್ ಸಿ ಸ್ಥಾನ ನೀಡಲಾಗಿತ್ತು. ಅವರಲ್ಲಿ ಯಾವುದೇ ವಿಶೇಷ ಶಕ್ತಿ-ಸಾಮರ್ಥ್ಯ ಇಲ್ಲ ಎಂಬುದು ಈ ಚುನಾವಣಾ ಫಲಿತಾಂಶವೇ ಸಾರಿ ಹೇಳಿದೆ. ಅದರಲ್ಲೂ ಕಳೆದ ಬಾರಿ ಶಾಸಕ ಕೃಷ್ಣ ಜೆ.ಪಾಲೆಮಾರ್ ನೇತೃತ್ವದಲ್ಲಿ ಚುನಾವಣೆ ನಡೆದಿತ್ತು ಮತ್ತು […]

ಬಂಟ್ವಾಳ : ಭಾರತೀಯ ಜನತಾಪಾರ್ಟಿಯ ಚುನಾವಣಾ ಪ್ರಚಾರ ಅಭಿಯಾನದ ಉದ್ಘಾಟನೆ

Friday, March 1st, 2013
Bantval Bjp Polls

ಬಂಟ್ವಾಳ : ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಸಭಾಂಗಣದಲ್ಲಿ ಗುರುವಾರ ಸಂಜೆ ಭಾರತೀಯ ಜನತಾಪಾರ್ಟಿಯ ಚುನಾವಣಾ ಪ್ರಚಾರದ ಅಭಿಯಾನವನ್ನು ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು ಕಳೆದ ೫ ವರ್ಷಗಳಲ್ಲಿ ಬಿಜೆಪಿ ಈ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡಿದೆ ಅದರಲ್ಲೂ ಮುಖ್ಯವಾಗಿ  ಈ ಅವಧಿಯಲ್ಲಿ ಅಭಿವೃದ್ಧಿಯಲ್ಲಿ ಬಂಟ್ವಾಳ ಪುರಸಭೆಯ ಪರಿಸರದ  ಚಿತ್ರಣವೇ ಬದಲಾಗಿದೆ ಎಂದು ಅವರು ಹೇಳಿದರು. ಬಂಟ್ವಾಳ ಪುರಸಭೆಯ 23 […]

ವಿಜಯಕುಮಾರ್ ಶೆಟ್ಟಿ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ : ಭಂಡಾರಿ

Tuesday, October 30th, 2012
Monappa Bhandary

ಮಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿಯವರ ಇತ್ತೀಚಿನ ಹೇಳಿಕೆಗೆ ಉತ್ತರವಾಗಿ ನಗರದ ಬಿ.ಜೆ.ಪಿ. ಕಚೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಬಿ.ಜೆ.ಪಿ. ಜಿಲ್ಲಾ ವಕ್ತಾರ ಹಾಗೂ ವಿದಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಅವರು, ವಿಜಯಕುಮಾರ್ ಶೆಟ್ಟಿ ಪಕ್ಷದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು ಮೂಲೆಗುಂಪಾಗಿದ್ದಾರೆ. ಹಾಗಾಗಿ ಅವರಿಗೆ ಕಳೆದ ಚುನಾವಣೆಯಲ್ಲಿ ಟಿಕೆಟ್ ಸಿಕ್ಕಿರಲಿಲ್ಲ ಆದರೆ ಮುಂದಿನ ಚುನಾವಣೆಯಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ಮಾಜಿ ಶಾಸಕ […]