‌ ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ – 9 ವಿದ್ಯಾರ್ಥಿಗಳ ಬಂಧನ

Friday, January 22nd, 2021
srinivas Students

ಮಂಗಳೂರು : ವಳಚ್ಚಿಲ್‌ ಶ್ರೀನಿವಾಸ್ ಕಾಲೇಜಿನ ಕಿರಿಯ ವಿದ್ಯಾರ್ಥಿಯೋರ್ವನಿಗೆ ರ‍್ಯಾಗಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ 9 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಶ್ರೀನಿವಾಸ್ ಕಾಲೇಜಿನ ಮೊದಲ ವರ್ಷದ ಬಿ- ಫಾರ್ಮಾ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ರ‍್ಯಾಗಿಂಗ್ ಗೆ ಒಳಗಾಗಿದ್ದು, ಅದೇ ಕಾಲೇಜಿನ ದ್ವಿತೀಯ ಹಾಗೂ ತೃತೀಯ ವರ್ಷದ ಬಿ ಫಾರ್ಮಾ ವಿದ್ಯಾರ್ಥಿಗಳು ರ‍್ಯಾಗಿಂಗ್ ನಡೆಸಿದ್ದಾರೆ. ಆರೋಪಿಗಳೆಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದಾರೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತೃತೀಯ ಬಿ […]

ಆಟೊ ರಿಕ್ಷಾ ಡಿಕ್ಕಿ : ಚಾಲಕ ಸಾವು, ಮೂವರಿಗೆ ಗಂಭೀರ ಗಾಯ

Wednesday, October 7th, 2020
AutoRikshaw

ಮಂಗಳೂರು  : ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ. ರಿಕ್ಷಾ ಚಾಲಕ ವಳಚ್ಚಿಲ್ ಪದವು ನಿವಾಸಿ ಸಲೀಂ ಮೃತಪಟ್ಟವರು. ಘಟನೆಯಲ್ಲಿ ಶಿಹಾಬ್ ಮತ್ತು ನಿಝಾಮುದ್ದೀನ್ ಎಂಬವರು ಗಾಯಗೊಂಡಿದ್ದಾರೆ. ಈ ಪೈಕಿ ಶಿಹಾಬ್‌ಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮಲ್ಪೆಯಿಂದ ಆಟೊ ರಿಕ್ಷಾದಲ್ಲಿ ಮೀನು ಹೇರಿಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಿಕರ್ನಕಟ್ಟೆ ತಲುಪಿದಾಗ ಆಟೊ ರಿಕ್ಷಾ ಚಾಲಕನ […]

ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಪಿಜಿಯಲ್ಲಿ ಆತ್ಮಹತ್ಯೆ..!

Monday, October 1st, 2018
student

ಮಂಗಳೂರು: ಮಂಗಳೂರಿನ ವಳಚ್ಚಿಲ್ನಲ್ಲಿರುವ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಳೆದ ರಾತ್ರಿ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಕೋರಮಂಗಲದ ನಿವಾಸಿ ಶರತ್ ಬಾಬು (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶರತ್ ಬಾಬು ಮೂರನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೆ ಆರಂಭ

Wednesday, January 13th, 2016
Kanipura Jatre

ಕುಂಬಳೆ: ಕುಂಬಳೆ ಸೀಮೆಯ ಪ್ರಸಿದ್ಧ ನಾಲ್ಕು ಕ್ಷೇತ್ರಗಳಲ್ಲಿ ಒಂದಾದ ಅತ್ಯಂತ ಕಾರಣಿಕ ಮಹತ್ವ ಪಡೆದಿರುವ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜ.14ರಿಂದ 18ರ ವರೆಗೆ ಐದು ದಿನಗಳ ಪರ್ಯಂತ ಶ್ರದ್ಧಾಭಕ್ತಿಯಿಂದ ಜರಗಲಿದೆ. ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳು ಕಾರ್ಯಕ್ರಮಗಳ ನೇತೃತ್ವ ವಹಿಸಲಿದ್ದಾರೆ. ಕಣಿಪುರ ದೇವಾಲಯದ ಜಾತ್ರಾ ಮಹೋತ್ಸವದ ಪ್ರಯುಕ್ತ ಕುಂಬಳೆ ಪೇಟೆ ಹಾಗೂ ಆಸುಪಾಸಿನ ಪ್ರದೇಶಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿದೆ. ಎಲ್ಲಡೆ ಕೇಸರಿ ಬಂಟಿಂಗ್ಸ್ , ಓಂಕಾರ ಧ್ವಜಗಳು, ಫ್ಲೆಕ್ಸ್ ಬೊರ್ಡ್ […]