ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಪಿಜಿಯಲ್ಲಿ ಆತ್ಮಹತ್ಯೆ..!

Monday, October 1st, 2018
student

ಮಂಗಳೂರು: ಮಂಗಳೂರಿನ ವಳಚ್ಚಿಲ್ನಲ್ಲಿರುವ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಳೆದ ರಾತ್ರಿ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಕೋರಮಂಗಲದ ನಿವಾಸಿ ಶರತ್ ಬಾಬು (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶರತ್ ಬಾಬು ಮೂರನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.