ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟನೆ

Wednesday, March 13th, 2024
Udupi-CM

ಉಡುಪಿ : ದೇಶದ ಸಂವಿಧಾನವನ್ನು ಬದಲಿಸುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ಇದು ಬಿಜೆಪಿಯ ಹಿಡನ್ ಅಜೆಂಡಾ ಆಗಿದ್ದು, ದೇಶದ ಜನ ಇದನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬುಧವಾರ ಮಹಾತ್ಮ ಗಾಂಧಿ ಮೈದಾನದಲ್ಲಿ ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಸಂವಿಧಾನವನ್ನು ಬದಲಿಸುವುದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ್ […]

ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಮೋದಿಯಿಂದ ನಕಲು

Wednesday, March 13th, 2024
Harish-Kumar

ಸುರತ್ಕಲ್: “ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ಮೋದಿ ನಕಲು ಮಾಡಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿಯಾಗುವುದಿಲ್ಲ, ಹಾಗೇನಾದರೂ ಆಗುವುದಿದ್ದರೆ ಅದು ಮೋದಿ ಗ್ಯಾರಂಟಿಯಿಂದ ಮಾತ್ರ” ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಪುಲ್ವಾಮ ಘಟನೆ ನಡೆದು 5 ವರ್ಷ ಕಳೆಯಿತು. ಅಲ್ಲಿನ ಸತ್ಯ ಘಟನೆ ಏನೆನ್ನುವುದನ್ನು ಅಲ್ಲಿನ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರು ಹೇಳಿದ್ದಾರೆ. ಆದರೆ ಯಾರನ್ನೂ ಈ ಕುರಿತು ಬಂಧಿಸಲಾಗಿಲ್ಲ, ತನಿಖೆ ಕೂಡ ನಡೆದಿಲ್ಲ. ಮೋದಿಯವರು ತನಿಖೆಯನ್ನು ನಡೆಯದಂತೆ […]

55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ

Thursday, February 22nd, 2024
Ragi-mix

ಬೆಂಗಳೂರು : 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ […]

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

Saturday, January 6th, 2024
swamiji

ಬೆಂಗಳೂರು : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು. ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು […]

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Thursday, September 28th, 2023
Ranna-Sugar

ಬೆಂಗಳೂರು : ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅವರು ಇಂದು ಮುಧೋಳ ತಾಲ್ಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023- 24 ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು. ಕಬ್ಬು ಅರೆಯುವ ಕಾರ್ಯ ಪ್ರಾರಂಭ ವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು. ಜವಳಿ, […]

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Tuesday, September 26th, 2023
ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಮೈಸೂರು : ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಸಮಾನತೆ, ಜಾತಿ ತಾರತಮ್ಯ ಇರುವ ಸಮಾಜದಲ್ಲಿ ಅಶಕ್ತರಿಗೂ ನ್ಯಾಯ ಸಿಗುವಂತಾಗಬೇಕು. ಕೇವಲ ಬಲಾಡ್ಯರಿಗೆ ಮಾತ್ರ ನ್ಯಾಯ ಸಿಗುವಂತಾದರೆ ಇಷ್ಟೆಲ್ಲಾ ತರಬೇತಿ ಪಡೆದು ಪ್ರಯೋಜನ […]

ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ರಚಿತ “ನಗ್ನ ಸತ್ಯ ಹಾಗೂ ಲ್ಯಾಂಡ್, ಜಸ್ಟ್ ಅಂಡ್ ಆಡಿಯೋ ಟೇಪ್ ” ಪುಸ್ತಕಗಳ ಲೋಕಾರ್ಪಣೆ

Saturday, October 2nd, 2021
Ramakrishna Upadya

ಬೆಂಗಳೂರು : ರಾಜ್ಯ ಹಾಗೂ ದೇಶದ ಆಡಳಿತದಲ್ಲಿ ಭ್ರಷ್ಟತೆ ಮತ್ತು ಚುನಾವಣೆಗಳಲ್ಲಿನ ಜಾತಿ ಹಾಗೂ ಹಣಬಲ ಹಾಸುಹೊಕ್ಕಾಗಿವೆ. ಈ ಪರಿಸ್ಥಿತಿ ಎದುರಾಗಲು ನಾವೇ ಕಾರಣಕರ್ತರು. ಈ ವ್ಯವಸ್ಥೆಯ ಬದಲಾಯಿಸಲು ಸಮಾಜಕ್ಕೆ ಈ ವ್ಯವಸ್ಥೆಯನ್ನು ಎದುರಿಸುವ ಶಕ್ತಿ ಬರಬೇಕಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಸ್ಕೌಟ್ಸ್‌ ಹಾಗೂ ಗೈಡ್ಸ್‌ ಸಭಾಂಗಣದಲ್ಲಿ ಹಿರಿಯ ಪತ್ರಕರ್ತರಾದ ರಾಮಕೃಷ್ಣ ಉಪಾಧ್ಯರಿಂದ ರಚಿತವಾಗಿ ಅನು ಪ್ರಕಾಶ ಹೊರತಂದಿರುವ “ನಗ್ನ ಸತ್ಯ ಹಾಗೂ Land, Lust & Audiotapes“ ಪುಸ್ತಕಗಳ ಲೋಕಾರ್ಪಣೆ ಮಾಡಿ […]

ಪ್ರವಾಹದ ಸಂದರ್ಭದಲ್ಲಿ ಮುಖ್ಯಮಂತ್ರಿಯನ್ನು ಹೆದರಿಸಿ ರಾಜೀನಾಮೆ ಕೊಡಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ

Tuesday, July 27th, 2021
siddaramaiah

ಬೆಳಗಾವಿ : ರಾಜ್ಯದಲ್ಲಿ ಪ್ರವಾಹ ಸಂದರ್ಭದಲ್ಲೇ  ‘ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಸೋಮವಾರ ರಾತ್ರಿ ಪ್ರವಾಸಿಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ಹೇಳಿದ್ದಾರೆ. ‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ಇಲ್ಲ. ಇದು ಕರ್ನಾಟಕದ ದುರ್ದೈವವೆ ಸರಿ ಎಂದರು. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. […]

ಕಾಂಗ್ರೆಸ್ ನಲ್ಲಿ ಸಿಎಂ ಆಗಲು ಮೂವರು ಸ್ಪರ್ಧಿಗಳಿದ್ದಾರೆ : ಸಚಿವ ಬಿ.ಸಿ ಪಾಟೀಲ್

Saturday, June 26th, 2021
bc Pateel

ಉಡುಪಿ: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಗಾದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಇದ್ದಾರೆ ಎಂದು ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ಸಿನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಮಾತ್ರ ಸಿಎಂ ಸ್ಪರ್ಧಿಗಳಲ್ಲ. ಜಿ. ಪರಮೇಶ್ವರ್ ಕೂಡ ಸಿಎಂ ಕ್ಯಾಂಡಿಡೇಟ್. ದಲಿತ ಸಿಎಂ ಆಗಬೇಕು ಎಂದು ಪರಮೇಶ್ವರ್ ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದಾರೆ ಎಲ್ಲರೂ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ತಪ್ಪಲ್ಲ, ಕೂಸು […]

ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಹ ವೈರಲ್

Friday, June 25th, 2021
siddaramaiah

ಗದಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳು ಕಾರ ಹುಣ್ಣಿಮೆಗೆ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ಅಭಿಮಾನ ತೋರಿಸಿದ್ದಾರೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದೆ. ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಕ್ಯಾಂಪೇನ್ ಮಾಡಿ ಗಮನ ಸೆಳೆದಿದ್ದಾರೆ. ಗ್ರಾಮದಲ್ಲಿ […]