ಬಿ. ಆರ್ ಅಂಬೇಡ್ಕರ್ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹ ಒಬ್ಬ ಅರೆಸ್ಟ್
Thursday, January 12th, 2017ಮಂಗಳೂರು: ಎರಡು ತಿಂಗಳ ಹಿಂದೆ ಡಾ. ಬಿ. ಆರ್ ಅಂಬೇಡ್ಕರ್ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಎಂಬಾತ ಬಂಧಿತ ಆರೋಪಿಯಗಿದ್ದು, ಈತ ಎರಡು ತಿಂಗಳ ಹಿಂದೆ ಅಂಬೇಡ್ಕರ್ ಕುರಿತು ಅವಹೇಳನಕಾರಿ ಬರಹವನ್ನು ಪೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ. ಈ ಸಂಬಂಧ ದಲಿತ ಮುಖಂಡ ರಮೇಶ್ ಕೋಟ್ಯಾನ್ ಎಂಬುವರು ದೀಪಕ್ ವಿರುದ್ಧ ದೂರು ದಾಖಲಿಸಿದ್ದರು. ಮಂಗಳೂರು ಪಾಂಡೇಶ್ವರ ಠಾಣೆಯ ಪೊಲೀಸರು ದೀಪಕ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.