ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಿಎಂ ಮನವಿ

Tuesday, September 7th, 2021
Bommai Delhi

ನವದೆಹಲಿ :  ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಲಬುರ್ಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ- ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಪ್ರಕರಣ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾರ್ಜ್ ಫೆರ್ನಾಂಡಿಸರ ಹೆಸರಿಡುವಂತೆ ಸರ್ವ ಪ್ರಯತ್ನ : ತೋನ್ಸೆ ಜಯಕೃಷ್ಣ ಎ ಶೆಟ್ಟಿ

Tuesday, September 7th, 2021
Jayasree Krishna

ಮುಂಬೈ: ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಸರಕಾರಿ ಸಂಸ್ಥೆ ಜಯ ಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ವಿಶೇಷ ಸಭೆ ಆಗಸ್ಟ್ 3ರಂದು ಕುರ್ಲಾ ಪೂರ್ವದ ಬಂಟರ ಸಂಘದ ಬಂಟರ ಭವನದಲ್ಲಿ ಜರುಗಿತು . ಈ ಸಭೆಯಲ್ಲಿ ಸಮಿತಿಯ ಮಹಾಪೋಷಕರೂ , ರಾಷ್ಟ್ರೀಯ ಜನನಾಯಕರೂ ಆದ ದಿವಂಗತ ಜಾರ್ಜ್ ಫೆರ್ನಾಂಡಿಸರ ಬಗ್ಗೆ ಅವರ ಅಭಿಮಾನಿಗಳ ಅನಿಸಿಕೆಗಳನ್ನು ಶ್ರೀಮತಿ ಸುರೇಖಾ ಎಚ್ ದೇವಾಡಿಗರರು ಸಂಕಲಿಸಿದ ಪುಸ್ತಕವೊಂದನ್ನು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರೂ ಹಾಗೂ ಪ್ರಸ್ತುತ […]

ಆನಂದ ಪೂಜಾರಿ ಹಳೆಯಂಗಡಿ ನಿಧನ

Friday, August 27th, 2021
Ananda Poojary

ಮುಂಬಯಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಹಳೆಯಂಗಡಿ ಸಾಯಿಕೃಪಾ ನಿವಾಸಿ, ಕೊಡುಗೈದಾನಿ, ಸಾಮಾಜಿಕ ಚಿಂತಕ ಆನಂದ ಪೂಜಾರಿ (85.) ಇಂದು ಸಂಜೆ ಹಳೆಯಂಗಡಿ ಅಲ್ಲಿನ ನಿವಾಸದಲ್ಲಿ ನಿಧನರಾದರು. ಮುಂಬಯಿ ಅಲ್ಲಿನ ಹೆಸರಾಂತ ಸಾಯಿಕೇರ್ ಸಂಸ್ಥೆಯ ಆಡಳಿತ ನಿರ್ದೇಶಕ, ಮದರ್ ಇಂಡಿಯಾ ನೈಟ್ ಹೈಸ್ಕೂಲ್ ಫೋರ್ಟ್ (ಮುಂಬಯಿ) ಇದರ ಅಧ್ಯಕ್ಷ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟç ಸಲಹಾ ಸಮಿತಿ ಸದಸ್ಯ ಸುರೇಂದ್ರ ಎ.ಪೂಜಾರಿ ಸೇರಿದಂತೆ ಮೃತರು ಏಳು ಗಂಡು, ಒಂದು ಹೆಣ್ಣು ಹಾಗೂ ಅಪಾರ ಬಂಧು […]

ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳ ಭೇಟಿ : ಅಂತರರಾಜ್ಯ ಜಲ ವಿವಾದ ಹಾಗೂ ಕೃಷಿ ಅಭಿವೃದ್ಧಿ ಕುರಿತು ಚರ್ಚೆ

Thursday, August 26th, 2021
Bommai-Delhi

ನವದೆಹಲಿ : ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿ,ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಕೇಂದ್ರ ಸಚಿವರೊಂದಿಗೆ ತಮ್ಮ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಕೃಷಿ ಸಚಿವರೊಂದಿಗೆ ಕರ್ನಾಟಕದಲ್ಲಿ ಕೃಷಿ ಪದ್ಧತಿ ಮತ್ತು ಕೃಷಿ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು. ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಖರೀದಿಗೆ ಕೇಂದ್ರದ ಅನುಮತಿ ದೊರೆತಿದ್ದು […]

ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಇಬ್ಬರು ಸಂಸದರು ಹೇಳಿದ್ದೇನು ಗೊತ್ತಾ ?

Tuesday, August 24th, 2021
narendra Khalsa Singh

ಹೊಸದಿಲ್ಲಿ: ಅಫ್ಘಾನಿಸ್ತಾನದಲ್ಲಿ ಸುಮಾರು 150 ಭಾರತೀಯರು ಅಪಹರಣಕ್ಕೊಳಗಾಗಿ ಬಿಡುಗಡೆಯಾದ ಭಯಾನಕ ಘಟನೆಯ ಬಳಿಕ 168 ಮಂದಿ ಪ್ರಯಾಣಿಕರನ್ನು ಹೊತ್ತ ವಾಯುಪಡೆ ವಿಮಾನ ಭಾರತಕ್ಕೆ ತಲುಪಿದೆ. ಇದರಲ್ಲಿ 107 ಮಂದಿ ಭಾರತೀಯ ಪ್ರಜೆಗಳಿದ್ದರೆ, ಇನ್ನು ಇಬ್ಬರು ಅಫ್ಘನ್ ಸೆನೆಟರ್‌ಗಳು ಹಾಗೂ 24 ಸಿಖ್ಖರು ಸೇರಿದ್ದಾರೆ. ಅಫ್ಘಾನಿಸ್ತಾನದ ಸನ್ನಿವೇಶದ ಕುರಿತು ಸಿಖ್ ಸಂಸದ ನರೇಂದರ್ ಸಿಂಗ್ ಖಾಲ್ಸಾ ಮಾತನಾಡುತ್ತಾ ‘ನನಗೆ ತೀವ್ರ ಅಳು ಬರುತ್ತಿದೆ. ಕಳೆದ 20 ವರ್ಷಗಳಲ್ಲಿ ಕಟ್ಟಿದ ಪ್ರತಿಯೊಂದೂ ಈಗ ನಾಶವಾಗಿದೆ. ಅಲ್ಲಿ ಈಗ ಶೂನ್ಯವಷ್ಟೇ ಇದೆ’ […]

ತಾಲಿಬಾನಿಗಳ ಕೈಗೆ ಆಫ್ಘನ್​ ಅಧಿಕಾರ, ಉಗ್ರರ ಹೊಸ ಸರ್ಕಾರಕ್ಕೆ ಸಿದ್ಧತೆ

Sunday, August 22nd, 2021
Afgahni

ಕಾಬೂಲ್ : ಅಫ್ಘಾನ್ ನಾಗರಿಕರನ್ನು ಲೂಟಿ ಮಾಡಿ ಅವರನ್ನು ವಿರೋಧಿಸಿದವರನ್ನು ಕೊಂದು ಈಗ ಅಫ್ಘಾನ್ ಸಂಪತ್ತನ್ನು ವಶ ಪಡಿಸಿಕೊಂಡಿರುವ ಉಗ್ರರಿಗೆ ಮತ್ತಷ್ಟು ಬಲ ಬಂದಿದೆ. ತಮ್ಮ ನಿಲುವನ್ನು ವಿಶ್ವಕ್ಕೆ ತೋರಿಸಲು ತಮ್ಮವರದ್ದೇ ಸರಕಾರ ಮಾಡಲು ಸಿದ್ಧತೆ ಮಾಡಿದ್ದಾರೆ.  ಕಳೆದ 20 ವರ್ಷಗಳಿಂದ ಅಧಿಕಾರದ ದಾಹದಲ್ಲಿ ಹಪಹಪಿಸುತ್ತಿದ್ದ ತಾಲಿಬಾನಿಗಳು ಕೊನೆಗೂ ಆಫ್ಘನ್ನಲ್ಲಿ ತಮ್ಮ ಅಧಿಕಾರದ ಚುಕ್ಕಾಣಿ ಯನ್ನು ಹಿಡಿದಿದ್ದಾರೆ. ಅಲ್ಲದೆ, ತಾಲಿಬಾನಿ ನಾಯಕರು ಶೀಘ್ರದಲ್ಲೇ ಹೊಸ ಸರ್ಕಾರವನ್ನೂ ಘೋಷಿಸುವ ಸಿದ್ಧತೆ ನಡೆಸುತ್ತಿದ್ದಾರೆ. ಈ ನಡುವೆ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು […]

ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿಯಿರುವ ವಿವಿಧ ವೃಂದದ ಹುದ್ದೆಗಳಿಗೆ ಆಯ್ಕೆ ಪಟ್ಟಿ ಪ್ರಕಟ

Saturday, August 7th, 2021
Karnataka Bhavan

ಬೆಂಗಳೂರು : ನವದೆಹಲಿಯ ಕರ್ನಾಟಕ ಭವನದಲ್ಲಿ ದಿನಾಂಕ:20-02-2021ರ ಅಧಿಸೂಚನೆಯಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿ ಇರುವ ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳನ್ನು (ಉಳಿಕೆ ವೃಂದದ 25 ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದದ 7 ಹುದ್ದೆ ಒಟ್ಟು 32 ಹುದ್ದೆಗಳು) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗಾಗಿ ಹಾಗೂ ಪ್ರಾವೀಣ್ಯತೆ ಪರೀಕ್ಷೆಗಳಿಗಾಗಿ (ಅನ್ವಯಿಸುವ ಹುದ್ದೆಗಳಿಗೆ ಮಾತ್ರ) 1:5 ಅನುಪಾತದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು www.karnatakabhavan.karnataka.gov.in ರಲ್ಲಿ ದಿನಾಂಕ: 14-07-2021 […]

ಕುಸ್ತಿ ಫೈನಲ್‌ನಲ್ಲಿ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾಗೆ ಬೆಳ್ಳಿ ಪದಕ

Thursday, August 5th, 2021
Ravi Kumar

ಟೋಕಿಯೊ:  ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಕುಸ್ತಿ ಫೈನಲ್‌ನಲ್ಲಿ ಭಾರತದ ಯುವ ಕುಸ್ತಿಪಟು ರವಿಕುಮಾರ್ ದಹಿಯಾ ಅವರು ಎರಡು ಬಾರಿಯ ವಿಶ್ವ ಚಾಂಪಿಯನ್ ರಶ್ಯದ ಝಾವೂರ್ ಉಗೆವ್ ವಿರುದ್ಧ 4-7 ಅಂತರದಿಂದ ಸೋತಿದ್ದಾರೆ. ಈ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ. ರವಿ ಕುಮಾರ್ ಒಲಿಂಪಿಕ್ಸ್ ನಲ್ಲಿ ಕುಸ್ತಿ […]

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Saturday, July 31st, 2021
Bommai-meets-Health-minister

ನವದೆಹಲಿ  : ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. […]

ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ, ಕೇಂದ್ರ ಸಚಿವರ ಭೇಟಿ

Friday, July 30th, 2021
Bommai Sha

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ […]