ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ ಡೊನಾಲ್ಡ್​ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್

Thursday, February 20th, 2020
melaniya-tramp

ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಮೆಲಾನಿಯಾ ಟ್ರಂಪ್ ಫೆ.24-25ರಂದು ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ಸಮಯದಲ್ಲಿ ಮೆಲಾನಿಯಾ ಟ್ರಂಪ್ ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರಂಭಿಸಿರುವ ಹ್ಯಾಪಿನೆಸ್ ಕ್ಲಾಸ್ನಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಫೆ.24ರಂದು ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ಭಾರತಕ್ಕೆ ಬಂದಿಳಿಯಲಿದ್ದಾರೆ. ಅಂದು ಅಹಮದಾಬಾದ್ನ ಮೊಟೆರಾದಲ್ಲಿರುವ ನೂತನ ಕ್ರಿಕೆಟ್ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು ಅಲ್ಲಿಂದ ಆಗ್ರಾಕ್ಕೆ ತೆರಳಲಿದ್ದಾರೆ. ಆಗ್ರಾದಿಂದ ದೆಹಲಿಗೆ ಬರುವ ಟ್ರಂಪ್ ದಂಪತಿ ರಾಷ್ಟ್ರಪತಿ ಭವನದ […]

ಮಹದಾಯಿ ನದಿ ನೀರು ಹಂಚಿಕೆ ವಿವಾದ : ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್​ ಅವಕಾಶ

Thursday, February 20th, 2020
SC

ನವದೆಹಲಿ : ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಗೋವಾ, ಮಹಾರಾಷ್ಟ್ರ , ಕರ್ನಾಟಕ ಮೂರು ರಾಜ್ಯಗಳಿಗೂ ಸಮರ್ಥ ದಾಖಲೆ ಸಲ್ಲಿಸಲು ಸೂಚಿಸಲಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಜನರ ಹೋರಾಟಕ್ಕೆ ಕೊನೆಗೂ ಮನ್ನಣೆ ಸಿಕ್ಕಿದಂತಾಗಿದೆ. ಕಳೆದ ವರ್ಷವೇ ಮಹದಾಯಿ ನ್ಯಾಯಾಧೀಕರಣ ತೀರ್ಪು ನೀಡಿದ್ದರೂ ಈ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರಲಿಲ್ಲ. ಇದರಿಂದಾಗಿ ಕರ್ನಾಟಕ ಪಾಲಿನ ನೀರಿನ ಬಳಕೆಯಲ್ಲಿ ತೊಡಗುಂಟಾಗಿತ್ತು ವರ್ಷವೇ […]

ಜೈಲಲ್ಲಿ ನಿರ್ಭಯಾ ಹಂತಕನ ಹೈಡ್ರಾಮ : ಗೋಡೆಗೆ ತಲೆ ಚಚ್ಚಿಕೊಂಡ ಅಪರಾಧಿ ವಿನಯ್ ಶರ್ಮಾ

Thursday, February 20th, 2020
vinay-sharma

ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಅಪರಾಧಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಹೈ ಡ್ರಾಮಾ ನಡೆಸಿದ್ದು, ಗೋಡೆಗೆ ತಲೆ ಚಚ್ಚಿಕೊಳ್ಳುವ ಮೂಲಕ ನಾಟಕವಾಡಿದ್ದಾನೆ. ಈ ಕುರಿತು ಜೈಲಿನ ಮೂಲಗಳು ಮಾಹಿತಿ ನೀಡಿದ್ದು, ಫೆಬ್ರವರಿ 16ರಂದು ಈ ಘಟನೆ ನಡೆದಿದೆ. ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ. ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದೆ. ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ನಿರ್ಭಯಾ ಅತ್ಯಾಚಾರಿಗಳ ಪೈಕಿ ಒಬ್ಬನಾಗಿರುವ ವಿನಯ್ […]

ಬಸ್-ಟ್ರಕ್ ನಡುವೆ ಭೀಕರ ಅಪಘಾತ : 19 ಮಂದಿ ದುರ್ಮರಣ

Thursday, February 20th, 2020
bus-lorry-collision

ಚೆನ್ನೈ : ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 19 ಮಂದಿ ಮೃತಪಟ್ಟಿರುವ ದಾರುಣ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಅವಿನಾಶಿಯಲ್ಲಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರಿನ ಹೆದ್ದಾರಿಯಲ್ಲಿ ಇಂದು ಮುಂಜಾನೆ 4.30ಕ್ಕೆ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 23 ಮಂದಿ ಗಾಯಗೊಂಡಿದ್ದು, ಅವರನ್ನು ಬೇರೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳ ರಾಜ್ಯಕ್ಕೆ ಸೇರಿದ ಸರ್ಕಾರಿ ವೋಲ್ವೋ ಬಸ್ ಕರ್ನಾಟಕದ ಬೆಂಗಳೂರಿನಿಂದ ತಿರುವನಂತಪುರಕ್ಕೆ ಹೋಗುತ್ತಿತ್ತು. ಕೊಯಮತ್ತೂರು-ಸೇಲಂ ಹೆದ್ದಾರಿಯಲ್ಲಿ ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರಕ್ […]

ಕಮಲ್​ ಹಾಸನ್​ ಅಭಿನಯದ ‘ಇಂಡಿಯನ್​ 2’ ಸಿನಿಮಾದ ಸೆಟ್​ನಲ್ಲಿ ಅವಘಡ : ಮೂವರ ಸಾವು

Thursday, February 20th, 2020
kamal-hasan

ಚೆನ್ನೈ : ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಸಿನಿಮಾದ ಸೆಟ್ನಲ್ಲಿ ಸಂಭವಿಸಿದ ಅವಘಡದಿಂದ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಚೆನ್ನೈನಲ್ಲಿ ‘ಇಂಡಿಯನ್ 2’ ಸೆಟ್ ನಿರ್ಮಾಣ ಮಾಡಲಾಗುತ್ತಿತ್ತು. ಸೆಟ್ ನಿರ್ಮಾಣಕ್ಕೆ ಬಳಕೆಯಾಗುತ್ತಿದ್ದ ಕ್ರೇನ್ ಕುಸಿದಿದೆ. ಕ್ರೇನ್ ಅಡಿಯಲ್ಲಿ ಸಿಕ್ಕ ಸಹಾಯಕ ನಿರ್ದೇಶಕ ಕೃಷ್ಣ, ಸಹಾಯಕ ಕಲಾ ನಿರ್ದೇಶಕ ಚಂದ್ರನ್ ಹಾಗೂ ನಿರ್ಮಾಣ ಸಹಾಯಕ ಮಧು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಮಲ್ ಹಾಸನ್, ಟ್ವಿಟ್ಟರ್ನಲ್ಲಿ ಈ ಬಗ್ಗೆ ಸಂತಾಪ […]

ಗೋವಾ ಇತಿಹಾಸ ಪಠ್ಯಪುಸ್ತಕದ ವಿವಾದ : ಬಗೆಹರಿಯದಿದ್ದರೆ ಪ್ರತಿಭಟನೆ

Thursday, February 20th, 2020
Goa

ಪಣಜಿ : ಇಂದು ಒಂದೆಡೆ ಹಿಂದವೀ ಸ್ವರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸುತ್ತಿರುವಾಗಲೇ ಗೋವಾ ರಾಜ್ಯದ ಉಚ್ಚ ಮಾಧ್ಯಮಿಕ ಪಠ್ಯಪುಸ್ತಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಛತ್ರಪತಿ ಸಂಭಾಜಿ ಮಹಾರಾಜರ ಅವಮಾನವನ್ನು ಮಾಡುವ ಲೇಖನ ಇರುವುದು ಬಹಿರಂಗವಾಗಿದೆ, ಇದು ಅತ್ಯಂತ ಖೇದಕರವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಇದನ್ನು ತೀವ್ರ ಶಬ್ಧಗಳಲ್ಲಿ ಖಂಡಿಸುತ್ತದೆ. ನಮ್ಮ ರಾಜರ ಬಗೆಗಿನ ಈ ರೀತಿಯ ಸುಳ್ಳು ಇತಿಹಾಸವನ್ನು ಯಾವುದೇ ಹಿಂದೂ ಸಹಿಸುವುದಿಲ್ಲ. ಈ ಇತಿಹಾಸದ ಪುಸ್ತಕವನ್ನು ಸರಕಾರ ಕೂಡಲೇ ಹಿಂಪಡೆಯಬೇಕು […]

ತಪಸ್ ಪಾಲ್ ಸಾವಿಗೆ ಕೇಂದ್ರ ಸರ್ಕಾರದ ಪ್ರತೀಕಾರದ ರಾಜಕೀಯ ನೀತಿಯೇ ಕಾರಣ : ಸಿಎಂ ಮಮತಾ ಬ್ಯಾನರ್ಜಿ

Wednesday, February 19th, 2020
mamatha-banarji

ಕೋಲ್ಕತಾ : ಮಾಜಿ ತೃಣಮೂಲ ಕಾಂಗ್ರೆಸ್ ಸಂಸದ ತಪಸ್ ಪಾಲ್ ಸಾವಿಗೆ ಕೇಂದ್ರ ಸರ್ಕಾರವೇ ಕಾರಣ, ಕೇಂದ್ರ ಸರ್ಕಾರ ಪ್ರತೀಕಾರದ ರಾಜಕಾರಣ ನಡೆಸುತ್ತಿದ್ದು ಇವರ ಒತ್ತಡದಿಂದಾಗಿ ತಪಸ್ ಸೇರಿದಂತೆ ತೃಣಮೂಲ ಕಾಂಗ್ರೆಸ್ ಪಕ್ಷದ ಮೂರು ಜನ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಾ ಪ್ರಹಾರ ನಡೆಸಿದ್ದಾರೆ. ಮಾಜಿ ಸಂಸದ ತಪಸ್ ಪಾಲ್ ಸಾವಿಗೆ ಸಂತಾಪ ಸೂಚಿಸಿ ಮಾತನಾಡಿರುವ ತಪಸ್ ಪಾಲ್, “ಬಿಜೆಪಿ ಮತ್ತು ಸಿಬಿಐ ಪಶ್ಚಿಮ ಬಂಗಾಳದ ವಿರುದ್ಧ ಪ್ರತೀಕಾರವೆಂಬ ಕೊಳಕು ಆಟವಾಡುತ್ತಿದೆ. […]

ಜಮ್ಮು -ಕಾಶ್ಮೀರದ ತ್ರಾಲ್​ನಲ್ಲಿ ಮೂವರು ಉಗ್ರರ ಹತ್ಯೆ

Wednesday, February 19th, 2020
bhadrata-pade

  ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಬುಧವಾರ ನಸುಕಿನಲ್ಲಿ ತ್ರಾಲ್ ನಲ್ಲಿ ನಡೆದ ಎನ್ಕೌಂಟರ್ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಹತರಾದ ಉಗ್ರರು ಅನ್ಸಾರ್ ಘಜ್ವಾ ಉಲ್ ಹಿಂದ್ ಸಂಘಟನೆಗೆ ಸೇರಿದವರಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದರು. ಹತರನ್ನು ಜಂಗೀರ್ ರಫೀಕ್ ವಾನಿ, ರಾಜಾ ಉಮರ್ ಮಕ್ಬೂಲ್ ಭಟ್, ಉಜೈರ್ ಆಮಿನ್ ಭಟ್ ಎಂದು ಗುರುತಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.  

ಎನ್‌ಪಿಆರ್‌ಗೆ ಮಹಾರಾಷ್ಟ್ರದಲ್ಲಿ ಅವಕಾಶ : ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ

Wednesday, February 19th, 2020
maharashtra

ಮುಂಬೈ : ಎಲ್ಗಾರ್‌ ಪರಿಷತ್‌ ತನಿಖೆಯನ್ನು ಎನ್‌ಐಎಗೆ ವರ್ಗಾಯಿರಿಸುವುದಕ್ಕೆ ಕಾಂಗ್ರೆಸ್‌, ಎನ್‌ಸಿಪಿ ಆಕ್ಷೇಪ ಮಾಡಿರುವಂತೆಯೇ, ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಯಾರೂ ಭಯಪಡಬೇಕಾಗಿಲ್ಲ ಎಂದಿದ್ದಾರೆ. ಇದರ ಜತೆಗೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್‌ಪಿಆರ್‌) ಅರ್ಜಿ ಯಲ್ಲಿರುವ ಅಂಶಗಳನ್ನು ತಾವೇ ಖುದ್ದು ಪರಿಶೀಲಿಸುವುದಾಗಿ ಹೇಳಿಕೊಂಡಿದ್ದಾರೆ. ಸಿಂಧೂದುರ್ಗದಲ್ಲಿ ಮಾತನಾಡಿದ ಅವರು, ಸಿಎಎ, ಎನ್‌ಆರ್‌ಸಿ ಎರಡು ಪ್ರತ್ಯೇಕ ವಿಚಾರಗಳು. ಎನ್‌ಪಿಆರ್‌ ಮೂರನೇ ವಿಚಾರ. ಎನ್‌ಪಿಆರ್‌ ಜಾರಿಗೆ ಮಹಾರಾಷ್ಟ್ರ ಅವಕಾಶ ಮಾಡಿಕೊಡಲಿದೆ ಎಂದಿದ್ದಾರೆ. ಆದರೆ ಎನ್‌ಆರ್‌ಸಿಗೆ ಅವಕಾಶವಿಲ್ಲ. […]

ಏಶ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌ನ ಗ್ರಿಕೊ-ರೋಮನ್‌ ವಿಭಾಗದಲ್ಲಿ ಸುನಿಲ್‌ ಕುಮಾರ್‌ ಗೆ ಚಿನ್ನ

Wednesday, February 19th, 2020
sunil-kumar

ನವದೆಹಲಿ : ಭಾರತದ ಸುನಿಲ್‌ ಕುಮಾರ್‌ ಅವರು ಏಶ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌ನ ಗ್ರಿಕೊ-ರೋಮನ್‌ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ. ಇದು ಕಳೆದ 27 ವರ್ಷಗಳಲ್ಲಿ ಭಾರತಕ್ಕೆ ಲಭಿಸಿದ ಮೊದಲ ಚಿನ್ನವಾಗಿದೆ. 87 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದ ಸುನಿಲ್‌ ಅವರು ಕಿರ್ಗಿಸ್ಥಾನದ ಅಜತ್‌ ಸಲಿದಿನೋವ್‌ ಅವರನ್ನು 5-0 ಅಂತರದಿಂದ ಸುಲಭವಾಗಿ ಮಣಿಸಿ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾದರು. ಸತತ ಎರಡನೇ ಬಾರಿ ಫೈನಲಿಗೇರಿದ ಸಾಧನೆ ಮಾಡಿದ್ದ ಸುನಿಲ್‌ ಈ ಬಾರಿ ಚಿನ್ನಕ್ಕೆ ಮುತ್ತಿಟ್ಟರು. 2019ರಲ್ಲಿ ನಡೆದ ಕೂಟದಲ್ಲಿ ಫೈನಲಿಗೇರಿದ್ದ ಅವರು ಅಂತಿಮ […]