ಭಾರತ ಮತ್ತು ನೇಪಾಲ ನಡುವಿನ ಬಾಂಧವ್ಯ ಬಲಪಡಿಸಲು ನಿರ್ಧಾರ

Wednesday, January 22nd, 2020
bharata-nepala

ಕಠ್ಮಂಡು : ಭಾರತ ಮತ್ತು ನೇಪಾಲ ತಮ್ಮ ನಡುವಿನ ಬಾಂಧವ್ಯ ಮತ್ತಷ್ಟು ಬಲಪಡಿಸಲು ನಿರ್ಧರಿಸಿವೆ. 140 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಜೋಗ್ಬನಿ-ಬಿರಾಟ್‌ನಗರ ಏಕೀಕೃತ ಚೆಕ್‌ಪೋಸ್ಟ್‌ ಅನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಜಂಟಿಯಾಗಿ ವೀಡಿಯೋ ಕಾನ್ಫರೆನ್ಸಿಂಗ್‌ ಮೂಲಕ ಉದ್ಘಾಟಿಸಿದ್ದಾರೆ. ಕೇಂದ್ರ ಸರಕಾರದ ನೆರವಿನಿಂದ ಅದನ್ನು ನಿರ್ಮಿಸಲಾಗಿದೆ. ಅದು 260 ಎಕರೆ ಜಮೀನಿನಲ್ಲಿ ಹರಡಿ ಕೊಂಡಿದ್ದು, 500 ಟ್ರಕ್‌ಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. 2018ರಲ್ಲಿ ರಕ್ಸಾಲ್‌-ಬಿರ್ಗುಂಜ್‌ನಲ್ಲಿ ಮೊದಲ ಏಕೀಕೃತ […]

ಇಂದು ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ

Monday, January 20th, 2020
jp nadda

ನವದೆಹಲಿ : ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ. ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ ಅವರು ನಿರ್ಗಮನ ಅಧ್ಯಕ್ಷರಾಗಿರುವ ಅಮಿತ್ ಶಾ ಅವರಂತೆಯೇ ಸಂಘಟನಾ ಚತುರ ಎಂದೇ ಪಕ್ಷದೊಳಗೆ ಗುರುತಿಸಲ್ಪಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೇ ನಡ್ಡಾ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪರಮಾಪ್ತರಾಗಿದ್ದಾರೆ. ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಕಳೆದ ಲೋಕಸಭಾ ಚುನಾವಣೆಯ ಬಳಿಕ ಪ್ರಧಾನಿ […]

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವು; 30 ಮಂದಿ ಗಂಭೀರ

Monday, January 20th, 2020
jalli-kallu

ಚೆನ್ನೈ : ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಧುರೈನ ಅವನಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅದರಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಒಂದು ಹೋರಿಯೂ ಮೃತಪಟ್ಟಿದೆ ಎನ್ನಲಾಗಿದೆ. ಅವನಿಪುರಂನ ಸೈಂಟ್ ಅಂಥೋನಿ ಚರ್ಚ್ ಫೆಸ್ಟಿವಲ್ ಸಹಯೋಗದೊಂದಿಗೆ ಈ ಜಲ್ಲಿಕಟ್ಟು ಕ್ರೀಡೆ ಆಯೋಜಿಸಲಾಗಿತ್ತು. ಸಚಿವ ಜೆ. ಭಾಸ್ಕರನ್ ಮತ್ತು ಜಿಲ್ಲಾಧಿಕಾರಿ ಜಯಕಾಂತನ್ ಪಾಲ್ಗೊಂಡಿದ್ದರು. ಒಟ್ಟು 600ಕ್ಕೂ ಹೆಚ್ಚು ಹೋರಿಗಳು […]

ಉದ್ಧವ್​ ಠಾಕ್ರೆ ವಿವಾದಾತ್ಮಕ ಹೇಳಿಕೆ : ಭಾನುವಾರದಿಂದ ಶಿರಡಿ ಸಾಯಿಬಾಬಾ ಮಂದಿರ ಬಂದ್​

Saturday, January 18th, 2020
sai-baba

ಶಿರಡಿ : ಭಾನುವಾರದಿಂದ ಶಿರಡಿ ಸಾಯಿ ಬಾಬಾ ದೇವಾಸ್ಥಾನ ಬಂದ್ ಆಗಲಿದೆ ಎಂದು ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ತಿಳಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಾಯಿ ಬಾಬಾ ಜನ್ಮ ಸ್ಥಳದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಸಂಜೆ ಟ್ರಸ್ಟ್ನ ಸದಸ್ಯರು ಮತ್ತು ಗ್ರಾಮಸ್ಥರು ಸಭೆ ಸೇರಲಿದ್ದಾರೆ. ವಿವಾದಾತ್ಮಕ ಹೇಳಿಕೆ ವಿರುದ್ಧ ಭಾನುವಾರ (ಜನವರಿ 19)ದಿಂದ ದೇಗುಲವನ್ನು ಮುಚ್ಚಲು ನಿರ್ಧರಿಸಿದ್ದೇವೆ ಎಂದು ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್ನ ವಾಕ್ಚೌರೆ ತಿಳಿಸಿದ್ದಾರೆ. ಈ […]

ಇಬ್ಬರು ಉಗ್ರರ ಜೊತೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಡಿಎಸ್ಪಿ ದೇವಿಂದರ್ ಸಿಂಗ್

Friday, January 17th, 2020
devindar

ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಉಗ್ರರ ಜೊತೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಡೆಪ್ಯುಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ದೇವಿಂದರ್ ಸಿಂಗ್ ರಾಷ್ಟ್ರೀಯ ತನಿಖಾ ತಂಡ ಅಧಿಕಾರಿಗಳ ವಿಚಾರಣೆ ವೇಳೆ ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾನೆ. ಕಣಿವೆ ರಾಜ್ಯದಲ್ಲಿ ಶಾಂತಿ ಕದಡಲು ನಿಂತಿರುವ ಉಗ್ರರಿಗೆ ನೆರವು ನೀಡುವ ಪೊಲೀಸರಿಗೆ ಲಕ್ಷ ಲಕ್ಷ ರೂಪಾಯಿ ಹಣ ನೀಡಲಾಗುತ್ತದೆ ಎಂದು ವಿಚಾರಣೆ ವೇಳೆ ಡಿಎಸ್ಪಿ ದೇವಿಂದರ್ ಸಿಂಗ್ ಬಾಯಿ ಬಿಟ್ಟಿದ್ದಾನೆ. ಅಲ್ಲದೆ, ಇಬ್ಬರು ಉಗ್ರರರನ್ನು […]

ಮೊದಲನೇ ವಿವಾಹ ವಾರ್ಷಿಕೋತ್ಸವದಂದೇ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

Friday, January 17th, 2020
chandighad

ಚಂಡೀಗಢ್ : ಮೊದಲನೇ ವಿವಾಹ ವಾರ್ಷಿಕೋತ್ಸವದಂದೇ ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಹರಿಯಾಣದ ರಾಜೀವ್ ಕಾಲೋನಿಯಲ್ಲಿ ನಡೆದಿದೆ. 21 ವರ್ಷದ ಫೈಝಾನ್ ತನ್ನ ಪತ್ನಿ ಶಾಬ್-ಇ-ನೂರ್ ನನ್ನು ಕೊಲೆ ಮಾಡಿ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬುಧವಾರ ಫೈಝಾನ್ ಹಾಗೂ ಶಾಬ್‍ನ ಮೊದಲನೇ ವಿವಾಹ ವಾರ್ಷಿಕೋತ್ಸವವಿತ್ತು. ಈ ನಡುವೆ ಇಬ್ಬರ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತೆರಳಿ ಫೈಝಾನ್ ತನ್ನ ಪತ್ನಿಯನ್ನು ಮೊಬೈಲ್ ಚಾಜಿಂಗ್ ವೈರ್ ಯಿಂದ ಕತ್ತು […]

ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣ : ರಾಷ್ಪ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ಅಪರಾಧಿ ಮುಕೇಶ್

Friday, January 17th, 2020
mukesh

ನವದೆಹಲಿ : 2012ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು, ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿರುವುದಾಗಿ ವರದಿ ತಿಳಿಸಿದೆ. ಮರಣದಂಡನೆ ಶಿಕ್ಷೆಯಿಂದ ವಿನಾಯ್ತಿ ನೀಡುವಂತೆ ಕೋರಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದಿಲ್ಲಿ ಸರ್ಕಾರ ಜನವರಿ 16ರಂದು ಮಧ್ಯಾಹ್ನ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದು, ನಿನ್ನೆ ಸಂಜೆಯೇ ರಾಷ್ಟ್ರಪತಿಯವರಿಗೆ ರವಾನಿಸಲಾಗಿದೆ ಎಂದು ವರದಿ ವಿವರಿಸಿದೆ. ಮಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ […]

ಇಸ್ರೋದ ನೂತನ ಸ್ವದೇಶಿ ನಿರ್ಮಿತ ಉಪಗ್ರಹ ಜಿಸ್ಯಾಟ್ -30 ಯಶಸ್ವಿ ಉಡಾವಣೆ

Friday, January 17th, 2020
ISRO

ನವದೆಹಲಿ : ಭಾರತದ ಹೆಮ್ಮೆಯ ಸಂಸ್ಥೆ ಇಸ್ರೋದ ನೂತನ ಸ್ವದೇಶಿ ನಿರ್ಮಿತ ಉಪಗ್ರಹ ಜಿಸ್ಯಾಟ್ -30ಯನ್ನು ಫ್ರೆಂಚ್ ಗಯಾನದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಫ್ರೆಂಚ್ ಗಯಾನದ ಕರೌ ಉಡಾವಣಾ ನೆಲೆಯಿಂದ ‘ಎರಿಯಾನ್-5 ವಿಎ-251’ ರಾಕೆಟ್ ಮೂಲಕ ಶುಕ್ರವಾರ ಮುಂಜಾನೆ ಉಡಾವಣೆ ಮಾಡಲಾಗಿದೆ. ದೂರದರ್ಶನ ಪ್ರಸಾರ, ಟಿಲಿಕಮ್ಯುನಿಕೇಶನ್ಸ್, ಡಿಟಿಎಚ್ ಮತ್ತು ಇತರ ಪ್ರಸಾರ ಕ್ಷೇತ್ರಗಳ ಗುಣಮಟ್ಟ ಹೆಚ್ಚಿಸಲು ಈ ಉಪಗ್ರಹ ನೆರವಾಗಲಿದೆ. ಶುಕ್ರವಾರ ನಸುಕಿನ 2.35ರ ಸಮಯದಲ್ಲಿ ಯಶಸ್ವಿ ಉಡಾವಣೆ ಮಾಡಲಾಗಿದ್ದು, ಇಸ್ರೋದ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ. ಏರಿಯಾನ್ ಸ್ಪೇಸ್ […]

ಸರ್ಕಾರ ಸಂತ್ರಸ್ತರ ಕುಟುಂಬಕ್ಕಲ್ಲ, ಅಪರಾಧಿಗಳಿಗೆ ಸಹಾಯ ಮಾಡುತ್ತಿದೆ : ನಿರ್ಭಯಾ ತಾಯಿಯಿಂದ ಗಂಭೀರ ಆರೋಪ

Friday, January 17th, 2020
nirbhaya-taayi

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಮತ್ತೆ ವಿಳಂಬವಾಗುತ್ತಿರುವ ಬಗ್ಗೆ ಸಂತ್ರಸ್ತೆಯ ತಾಯಿ ಆಶಾ ದೇವಿ ಕಣ್ಣೀರಿಟ್ಟಿದ್ದಾರೆ. ಸರ್ಕಾರ ಸಂತ್ರಸ್ತ ಕುಟುಂಬಕ್ಕಲ್ಲ, ಆರೋಪಿಗಳಿಗೆ ಸಹಾಯ ಮಾಡುತ್ತಿದೆ ಎನ್ನುವ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಜನವರಿ 22ರಂದು ತಿಹಾರ್ ಜೈಲಿನಲ್ಲಿ ನಾಲ್ವರು ದೋಷಿಗಳನ್ನು ನೇಣಿಗೆ ಹಾಕಬೇಕಿತ್ತು. ಆದರೆ, ಅಪರಾಧಿಗಳ ಕ್ಷಮಾದಾನ ಅರ್ಜಿ ಇತ್ಯರ್ಥವಾಗಿಲ್ಲದ ಕಾರಣ ಗಲ್ಲುಶಿಕ್ಷೆ ಮುಂದೂಡಬೇಕು ಹಾಗೂ ಮತ್ತೊಂದು ಡೆತ್ ವಾರೆಂಟ್ ನೀಡಬೇಕೆಂದು ಹೈಕೋರ್ಟ್ಗೆ ತಿಹಾರ್ ಜೈಲಿನ ಅಧಿಕಾರಿಗಳು […]

ಟೀಂ ಇಂಡಿಯಾ ಹಿರಿಯ ಅಭಿಮಾನಿ ಚಾರುಲತಾ ಪಟೇಲ್ ವಿಧಿವಶ

Thursday, January 16th, 2020
charulatha

ನವದೆಹಲಿ : 2019ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದಿದ್ದ ಪುರುಷರ ಕ್ರಿಕೆಟ್ ವಿಶ್ವಕಪ್ ವೇಳೆ ಸಾಕಷ್ಟು ಸುದ್ದಿ ಮಾಡಿದ್ದ ಟೀಂ ಇಂಡಿಯಾ ಹಿರಿಯ ಅಭಿಮಾನಿ ಚಾರುಲತಾ ಪಟೇಲ್ ವಿಧಿವಶರಾಗಿದ್ದಾರೆ. 87 ವರ್ಷದ ಚಾರುಲತಾ ಪಟೇಲ್ ಅವರು ವಿಶ್ವಕಪ್ ಪಂದ್ಯದ ವೇಳೆ ಭಾರಿ ಜನಪ್ರೀಯತೆ ಪಡೆದಿದ್ದ ಸೂಪರ್ ಫ್ಯಾನ್ ಅಜ್ಜಿ ಜನವರಿ 13ರಂದು ಮೃತರಾಗಿದ್ದಾರೆ. ಈ ಬಗ್ಗೆ ಬಿಸಿಸಿಐ ತನ್ನ ಟ್ವಿಟ್ಟರ್ ನಲ್ಲಿ ಪ್ರಕಟಿಸಿದೆ. ವಿಶ್ವಕಪ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ ಅಜ್ಜಿ […]