ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ : ಡಾ. ಪುರುಷೋತ್ತಮ ಬಿಳಿಮಲೆ

Monday, February 26th, 2024
ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ : ಡಾ. ಪುರುಷೋತ್ತಮ ಬಿಳಿಮಲೆ

ಮಂಗಳೂರು : ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗಳಿಗಿಂತ ಶ್ರೀಮಂತರಾಗಬೇಕಿತ್ತು. ಈ ಕಹಿಸತ್ಯವನ್ನು ಜಗತ್ತಿಗೆ ತಿಳಿಸುವುದಕ್ಕಾಗಿಯಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯವಾಗಬೇಕು ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕರಾದ ಡಾ. ಪುರುಷೋತ್ತಮ ಬಿಳಿಮಲೆಯವರು ಅಭಿಪ್ರಾಯಪಟ್ಟಿದ್ದಾರೆ. ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ […]

ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆ.ರಾಜು ಮೊಗವೀರ ನೇಮಕ

Monday, February 26th, 2024
ಮಂಗಳೂರು ವಿಶ್ವವಿದ್ಯಾಲಯದ ನೂತನ  ಕುಲಸಚಿವರಾಗಿ ಕೆ.ರಾಜು ಮೊಗವೀರ ನೇಮಕ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆ.ಎ.ಎಸ್(ಆಯ್ಕೆ ಶ್ರೇಣಿ)ಅಧಿಕಾರಿ ಕೆ.ರಾಜು ಮೊಗವೀರ ಅವರು ನೇಮಕಗೊಂಡಿದ್ದು, ಸೋಮವಾರ ಅಧಿಕಾರ ಸ್ಬೀಕರಿಸಿದರು. ಈ ಸಂದರ್ಭ ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್, ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ ಅವರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪಂಚಾಯತಿಯಲ್ಲಿ ಉಪಕಾರ್ಯದರ್ಶಿಯಾಗಿ‌ ಕಾರ್ಯನಿರ್ವಹಿಸುತ್ತಿದ್ದ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ)ರಾಗಿ ನೇಮಕಗೊಳಿಸಲಾಗಿದೆ. ರಾಜು ಮೋಗವೀರ ಅವರು ಕೆಲವು ವರ್ಷದ‌ ಹಿಂದೆ ಮಂಗಳೂರು ವಿವಿಯ ಕುಲಸಚಿವರಾಗಿ ಕಾರ್ಯನಿರ್ವಹಿಸಿ ಬಳಿಕ ಬೇರೆ ಇಲಾಖೆಗೆ ವರ್ಗಾವಣೆಗೊಂಡಿದ್ದರು.

ಪುತ್ತೂರು ಮೂಲದ ಪಿಎಚ್ ಡಿ ವಿದ್ಯಾರ್ಥಿನಿ ಡ್ರಗ್ಸ್ ಜಾಲದಲ್ಲಿ ಸಿಲುಕಿ ನಾಪತ್ತೆ

Saturday, February 24th, 2024
chaitra-hebbar

ಮಂಗಳೂರು: ಪಿಎಚ್ ಡಿ ವಿದ್ಯಾರ್ಥಿನಿಯೋರ್ವಳು ಡ್ರಗ್ಸ್ ಜಾಲದಲ್ಲಿ ಸಿಲುಕಿ ನಾಪತ್ತೆಯಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪುತ್ತೂರಿನ ಪುರುಷರ ಕಟ್ಟೆಯ ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಆಕೆಯ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಚೈತ್ರಾ ಹೆಬ್ಬಾರ್(27) ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪುತ್ತೂರು ಮೂಲದ ಮುಸ್ಲಿಂ ಯುವಕ ಶಾರೂಕ್ ಶೇಕ್ ಎಂಬಾತನ ಜೊತೆಗೆ ತೆರಳಿರುವ ಅನುಮಾನ ದಟ್ಟವಾಗಿದೆ. ವಿದ್ಯಾರ್ಥಿನಿಯ ತಂದೆ ಸಾವನ್ನಪ್ಪಿದ್ದು, ಮಂಗಳೂರಿನ ಕದ್ರಿಯಲ್ಲಿರುವ […]

ಯುವ ಮಹಿಳಾ ನ್ಯಾಯವಾದಿ ಶ್ರೀಮತಿ ಗೀತಾ ಡಿ. ನ್ಯಾಯಾಧೀಶರಾಗಿ ಆಯ್ಕೆ

Saturday, February 24th, 2024
ಯುವ ಮಹಿಳಾ ನ್ಯಾಯವಾದಿ ಶ್ರೀಮತಿ ಗೀತಾ ಡಿ. ನ್ಯಾಯಾಧೀಶರಾಗಿ ಆಯ್ಕೆ

ಮಂಗಳೂರು : ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಶ್ರೀಮತಿ ಗೀತಾ ಡಿ. ರವರು 2023 ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ. ಸದ್ರಿಯವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.02.2024 ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತೆ ಶ್ರೀಮತಿ ಗೀತಾ ಡಿ. ಯವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಸದ್ರಿಯವರು ತಮ್ಮ ಪದವಿ […]

ಜೈನಧರ್ಮವನ್ನು ಉಳಿಸುವುದಕ್ಕಿಂತ ಪಾಲಿಸುವ ಪ್ರಯತ್ನ ಮಾಡಬೇಕು : ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ

Saturday, February 24th, 2024
venuru

ವೇಣೂರು: ಜೈನಧರ್ಮವನ್ನು ಉಳಿಸುವುದಕ್ಕಿಂತ ಅದರ ತತ್ವ –ಸಿದ್ಧಾಂತಗಳನ್ನು ನಿತ್ಯವೂ ಮನ,ವಚನ ಮತ್ತು ಕಾಯದಿಂದ ತ್ರಿಕರಣಪೂರ್ವಕವಾಗಿ ಪಾಲಿಸುವ ಪ್ರಯತ್ನ ಮಾಡಬೇಕು ಎಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶನಿವಾರ ವೇಣೂರಿನಲ್ಲಿ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಅಯೋಜಿಸಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ತೀರ್ಥಂಕರರು ಜೈನಧರ್ಮ ಪ್ರಚಾರಕರಲ್ಲ, ಧರ್ಮ ಪ್ರಭಾವಕರು ಎಂದು ಅವರು ಸ್ಪಷ್ಟಪಡಿಸಿದರು. ಅಂತರಂಗದಲ್ಲಿಯೂ, ಬಹಿರಂಗದಲ್ಲಿಯೂ ಅಹಿಂಸಾಧರ್ಮದ ಪಾಲನೆ ಮಾಡಬೆಕು. ಮಹಾವೀರ ತೀರ್ಥಂಕರರು ಉಪದೇಶ ಮಾಡಿದ ಸರ್ವೋದಯ ತೀರ್ಥವನ್ನು ಯಾರು ನಿತ್ಯವೂ ಪಾಲನೆ […]

ದುಬೈನಲ್ಲಿ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು

Friday, February 23rd, 2024
ದುಬೈನಲ್ಲಿ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು

ಮಂಗಳೂರು : ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಉಳ್ಳಾಲ ಮೂಲದ ಯುವತಿ ಸಾವನ್ನಪ್ಪಿದ್ದಾರೆ. ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ವಿಧಿವಶರಾದ ದುರ್ದೈವಿ. ಇವರು ಮಂಗಳೂರು ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷೆ ಬಿಜೆಪಿ ಮುಖಂಡೆ ರಾಜೀವಿ ಹಾಗೂ ವಿಠಲ ಕುಲಾಲ್ ದಂಪತಿಯ ಏಕೈಕ ಪುತ್ರಿ. ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬಳಿಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು. ಬಳಿಕ […]

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: MDMA ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

Friday, February 23rd, 2024
Mohammad-Rizwan

ಮಂಗಳೂರು : ಮಂಗಳೂರು ತಾಲೂಕು ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿರುತ್ತಾರೆ. ಆರೋಪಿತನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು. ಆರೋಪಿತನಿಂದ 75 ಸಾವಿರ ರೂ ಮೌಲ್ಯದ […]

ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಚಾಲನೆ

Friday, February 23rd, 2024
Venooru-Bahubali

ವೇಣೂರು : ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ 12 ವರ್ಷದ ಬಳಿಕ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಗುರುವಾರ ಅಧಿಕೃತವಾಗಿ ಆರಂಭ ಗೊಂಡಿದೆ. 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಭಕ್ತರು ಅಭಿಷೇಕ ಮಾಡುತ್ತಿದ್ದಾರೆ. ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ಮುಂದುವರಿಯಲಿದ್ದು ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ. ರಾಜ್ಯದಲ್ಲಿರುವ ಪ್ರಮುಖ ನಾಲ್ಕು ಬಾಹುಬಲಿ ಮೂರ್ತಿಗಳ ಪೈಕಿ ಮೂರು ಮೂರ್ತಿಗಳು ದಕ ಜಿಲ್ಲೆಯಲ್ಲಿದ್ದರೆ, ಅತಿ ಎತ್ತರದ ಮೂರ್ತಿ ಶ್ರವಣಬೆಳಗೊಳದಲ್ಲಿದೆ. ಕಾರ್ಕಳದಲ್ಲಿ […]

ಮಹಿಳೆಯೊಬ್ಬರ ಹೆರಿಗೆಗೆ 5,34,791ರೂ ವಸೂಲಿ, ಆಸ್ಪತ್ರೆಗೆ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

Friday, February 23rd, 2024
court-order

ಮಂಗಳೂರು : ಮಹಿಳೆಯೊಬ್ಬರ ಹೆರಿಗೆಗೆ ನರ್ಸಿಂಗ್ ಹೋಮ್ ನಿಗದಿತ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿ ರುವ ಆರೋಪ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆಸ್ಪತ್ರೆ ಆಡಳಿತ ಮಂಡಳಿಗೆ 5 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿರುವ ಘಟನೆ ವರದಿಯಾಗಿದೆ. ಗರ್ಭಿಣಿಯೊಬ್ಬರು ಹೆರಿಗೆಗಾಗಿ 2019ರ ಮೇ 29ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿವಸ ಅವಳಿ ಮಕ್ಕಳಿಗೆ ಸಹಜ ಹೆರಿಗೆಯಲ್ಲಿ ಜನ್ಮ ನೀಡಿದ್ದರು. ಅವಳಿ ಮಕ್ಕಳ ತೂಕ ಕಡಿಮೆಯಾಗಿರುವುದರಿಂದ ಎನ್‌ಐಸಿಯುಗೆ ದಾಖಲಿಸುವಂತೆ ಹೆರಿಗೆ ವೈದ್ಯರಾದ ನಳಿನಿ ಪೈ […]

55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ

Thursday, February 22nd, 2024
Ragi-mix

ಬೆಂಗಳೂರು : 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ […]