ಜನಮನ್ನಣೆ ಪಡೆದ ಜನನಾಯಕ ವಸಂತ ಬಂಗೇರ

Friday, May 11th, 2018
vasanth-bangera

ಮಂಗಳೂರು: ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬೆಳ್ತಂಗಡಿಯ ವಸಂತ ಬಂಗೇರ ಇನ್ನು ಚುನಾವಣೆಯಲ್ಲಿ ಸ್ಪರ್ಧೆಮಾಡದಿರಲು ನಿರ್ಧರಿಸಿದ್ದರು. ಆದರೆ ಕಾರ್ಯಕರ್ತರ ಒತ್ತಡ ಮತ್ತು ಸ್ವತಃ ಮುಖ್ಯಮಂತ್ರಿಸಿದ್ದರಾಮಯ್ಯ ಅವರೇ ಸ್ಪರ್ಧಿಸುವಂತೆ ಒತ್ತಾಯಿಸಿದ ಮೇರೆಗೆ ನಿರ್ಧಾರ ಬದಲಾಯಿಸಿದ, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ವಸಂತ ಬಂಗೇರ ಮತ್ತೆ ನಾಮಪತ್ರ ಸಲ್ಲಿಸಿದ್ದಾರೆ. ರಾಜಕಾರಣದಲ್ಲಿ ಇಂಥ ವ್ಯಕ್ತಿಗಳೂ ಅಪರೂಪ, ಈ ರೀತಿ ವರ್ಚಸ್ಸು ಉಳಿಸಿಕೊಂಡವರೂವಿರಳ. ಅಧಿಕಾರವೋ ವೈಯಕ್ತಿಕ ಪ್ರತಿಷ್ಠೆಯೋ ಮತ್ಯಾವ ಕಾರಣಕ್ಕೋ ಪಕ್ಷಾಂತರ ಮಾಡುತ್ತಾರೆ.ಅಂಥವರ ರಾಜಕೀಯ ಭವಿಷ್ಯ ಆರಕ್ಕೆ ಏರಿದ್ದೂ ಇದೆ. ಮೂರಕ್ಕೆ […]

2 ವೋಟರ್ ಐಡಿ… ಕೇರಳ ಮೂಲದ ಯುವತಿ ವಿರುದ್ಧ ದೂರು..!

Friday, May 11th, 2018
voter-ID

ಮಂಗಳೂರು: ಒಂದೇ ವ್ಯಕ್ತಿಯ ಹೆಸರಲ್ಲಿ ಎರಡು ಮತದಾರರ ಗುರುತಿನ ಚೀಟಿಯ ಮೂಲಕ ಚುನಾವಣೆಯಲ್ಲಿ ಅಕ್ರಮ ಮತ ಚಲಾಯಿಸಲು ಯತ್ನಿಸಿರುವ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಬಲ್ಮಠ ನಿವಾಸಿ ಪ್ರವೀಣ್ ಶೇಟ್ ಎನ್ನುವವರು ದೂರು ನೀಡಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಮಾರಿ ದೀನಾ ಶಾಜಿ ಎಂಬುವರು ಎರಡು ಮತದಾರರ ಚೀಟಿ ಹೊಂದಿದ್ದಾರೆ. ಒಂದು ಚೀಟಿಯಲ್ಲಿ ಮಂಗಳೂರಿನ ಬಲ್ಮಠ ಎಂದು ವಿಳಾಸ ನಮೂದಿಸಿ ಕ್ಷೇತ್ರದ 153ನೇ ವಿಭಾಗದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿ ಇನ್ನೊಂದು […]

ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳಿಂದ ದಾಳಿ..!

Friday, May 11th, 2018
ramanath-rai

ಮಂಗಳೂರು: ಸಚಿವ ರಮಾನಾಥ ರೈ ಆಪ್ತನ ಮೇಲೆ ದುಷ್ಕರ್ಮಿಗಳು ರಾತ್ರಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಬಂಟ್ವಾಳ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಸಂಜೀವ ಪೂಜಾರಿ ಬಂಟ್ವಾಳ ತಾಲೂಕಿನ ಸಜೀಪ ಮೂಡದಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದ ವೇಳೆ ಮನೆ ಬಳಿ ಅಡ್ಡಗಟ್ಟಿದ್ದ ದುಷ್ಕರ್ಮಿಗಳು ‌ಕಾರಿಗೆ ಕಲ್ಲು ಹೊಡೆದು ಹಾನಿ‌ ಮಾಡಿದ್ದಾರೆ. ಇದರಿಂದ ಭಯಗೊಂಡು ಮನೆಗೆ ಹೋದ ಸಂಜೀವ ಪೂಜಾರಿ ಅವರನ್ನು ಹಿಂಬಾಲಿಸಿದ ಸುಮಾರು 20 ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿ ಹಲ್ಲೆ ನಡೆಸಿದೆ. ಘಟನೆಯಲ್ಲಿ ಸಂಜೀವ ಪೂಜಾರಿ ಅವರ […]

ರಾಮ ರಾಜ್ಯ ನಿರ್ಮಾಣಕ್ಕಾಗಿ ಬಿಜೆಪಿ ಗೆಲ್ಲಿಸಿ: ಯೋಗಿ ಆದಿತ್ಯನಾಥ್‌

Thursday, May 10th, 2018
yogi-adithyanath

ಸುಳ್ಯ: ಸುಳ್ಯ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಸಂಜೆ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಬೃಹತ್‌ ಚುನಾವಣಾ ಪ್ರಚಾರ ಸಭೆ ನಡೆಯಿತು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾತನಾಡಿ, ಕರ್ನಾಟಕದಲ್ಲಿ ಗೂಂಡಾಗಿರಿ, ಗೋಹತ್ಯೆ, ಅಸುರಕ್ಷತೆ, ಜೆಹಾದಿ ಕೃತ್ಯಗಳನ್ನು ಮಟ್ಟ ಹಾಕಿ ಆದರ್ಶದ ಆಳ್ವಿಕೆಯ ಪ್ರತೀಕವಾಗಿರುವ ರಾಮರಾಜ್ಯ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಿ ಎಂದು ಕರೆ ನೀಡಿದ ಅವರು, ಧರ್ಮ, ಜಾತಿ ವಿಘಟನೆಯ ಮೂಲಕ ಸಮಾಜವನ್ನು ಒಡೆಯುವ ಕಾಂಗ್ರೆಸ್‌ ಸರಕಾರವನ್ನು ಕಿತ್ತೂಗೆಯುವಂತೆ ಅವರು ಮನವಿ ಮಾಡಿದರು. ದ.ಕ. ಜಿಲ್ಲಾ […]

ವಂಚನೆಯಲ್ಲಿ ಮೋದಿ, ಯಡಿಯೂರಪ್ಪ ಸಮಾನರು: ಶಾಸಕಿ ಶಕುಂತಳಾ ಶೆಟ್ಟಿ

Thursday, May 10th, 2018
shakuntala-shetty

ಪುತ್ತೂರು: ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿ ಪ್ರಕಾರ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದಾಗಿ ಹೇಳಿದ ಕೇಂದ್ರ ಸರಕಾರ ಅನಂತರ ಪ್ರತ್ಯೇಕವಾದಿಗಳ ಜತೆ ಸೇರಿ ಸರಕಾರ ರಚಿಸಿದೆ. ಅದೇ ರೀತಿ ಯಡಿಯೂರಪ್ಪ ಅವರು ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ತಾವೇ ಸಿಕ್ಕಿ ಬೀಳಲಿಲ್ಲವೇ? ಎಂದು ಕಾಂಗ್ರೆಸ್‌ ಅಭ್ಯರ್ಥಿ ಶಕುಂತಳಾ ಟಿ. ಶೆಟ್ಟಿ ಪ್ರಶ್ನಿಸಿದ್ದಾರೆ. ಬುಧವಾರ ಚುನಾವಣಾ ಪ್ರಚಾರ ಕಾರ್ಯದ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ ಯಾವ […]

ದಕ್ಷಿಣ ಕನ್ನಡದ ನಕ್ಸಲ್ ಪೀಡಿತ ಮತಗಟ್ಟೆಗಳ ಮೇಲೆ ಹದ್ದಿನ ಕಣ್ಣು

Thursday, May 10th, 2018
ravikanth-gowda

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 12 ರಂದು ಮತದಾನ ಸುಸೂತ್ರವಾಗಿ ನಡೆಯಲು ಬೇಕಾದ ಅಗತ್ಯ ಭಧ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇ ಗೌಡ ತಿಳಿಸಿದ್ದಾರೆ . ಜಿಲ್ಲೆಯಲ್ಲಿ ಮತದಾರರು ನಿರ್ಭೀತಿಯಿಂದ ಮತ ಚಲಾವಣೆ ಮಾಡಿ ಎಂದು ಡಾ. ರವಿಕಾಂತೇ ಗೌಡ ಕರೆನೀಡಿದ್ದು, ಚುನಾವಣೆಗೆ ಇನ್ನು ಎರಡೇ ದಿನಗಳು ಬಾಕಿಯಿರುವ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆ ಜಿಲ್ಲೆಯ ಅತ್ಯಂತ ಸೂಕ್ಷ್ಮ ಮತಗಟ್ಟೆಗಳ ಮೇಲೆ ಕಣ್ಣಿರಿಸಿದ್ದು ಭದ್ರತೆಗೆ ಎಲ್ಲಾ ಕ್ರಮಗಳನ್ನು ಕೈ […]

8 ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಮೋನಪ್ಪ ಭಂಡಾರಿ

Thursday, May 10th, 2018
nalin-kumar

ಮಂಗಳೂರು: ದ.ಕ. ಜಿಲ್ಲೆಯ 8 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ದ.ಕ. ಜಿಲ್ಲಾ ಚುನಾವಣಾ ಉಸ್ತುವಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಹೇಳಿದರು. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೆ ಪಕ್ಷದ ಕಾರ್ಯಕರ್ತರು 2-3 ಸುತ್ತಿನ ಮನೆ ಮನೆ ಭೇಟಿ ನೀಡಿದ್ದಾರೆ. ಎಲ್ಲರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಇದನ್ನು ಕಂಡು ಜಿಲ್ಲಾ ಉಸ್ತುವಾರಿ ಸಚಿವರಿಗೆ ನಡುಕ ಶುರುವಾಗಿದೆ. ಹಾಗಾಗಿ ಅವರೀಗ ಹಿಂದುತ್ವದ ಪರ ಮಾತನಾಡುತ್ತಿದ್ದಾರೆ. ಜಿಲ್ಲೆಯ […]

ಚುನಾವಣೆ ಬಂದಾಗ ದಲಿತರ ಜಪ ಮಾಡುವ ಕಾಂಗ್ರೆಸ್ : ಎಸ್ ಸಿ. ಮೋರ್ಚಾ

Thursday, May 10th, 2018
election-bjp

ಮಂಗಳೂರು: ಚುನಾವಣೆ ಬಂದಾಗ ದಲಿತ ಮತಗಳ ಜಪ ಮಾಡುವ ಕಾಂಗ್ರೆಸಿಗರು ನಿರಂತರವಾಗಿ ನಮ್ಮನ್ನು ವಂಚಿಸಿರುವ ಕಾರಣ ಈ ಬಾರಿ ಚುನಾವಣೆಯಲ್ಲಿ ಎಲ್ಲ ದಲಿತ ಬಂಧುಗಳು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ಎಸ್‌ ಸಿ. ಮೋರ್ಚಾ ಹೇಳಿದ್ದಾರೆ. ದಲಿತ ಅಭಿವೃದ್ದಿಗೆ ನಾವು ಕೆಲಸ ಮಾಡಿದ್ದೇವೆ ಎಂದು ತೋರಿಸಿಕೊಳ್ಳುವ ಕಾಂಗ್ರೆಸ್ ಬಿ.ಎಸ್.ಯಡಿಯೂರಪ್ಪ ಸರಕಾರವಿದ್ದಾಗ ಶಿಲಾನ್ಯಾಸ ಮಾಡಿರುವ ಅಂಬೇಡ್ಕರ್ ಭವನ ಯೋಜನೆಯನ್ನು ನೆನೆಗುದಿಗೆ ಹಾಕಿದೆ. ಇದು ಖಂಡಿತವಾಗಿ ದಲಿತ ವಿರೋಧಿ ನೀತಿ.ಇಂತಹವರಿಗೆ ಮತ ಕೇಳುವ ಹಕ್ಕು ಎಲ್ಲಿದೆ ಎಂದು ಮೋರ್ಚಾದ ರಾಜ್ಯ […]

ದ.ಕ. ಜಿಲ್ಲೆಯಲ್ಲಿ 5,000ಕ್ಕೂ ಅಧಿಕ ಅಂಚೆ ಮತದಾನ: ಸಸಿಕಾಂತ್ ಸೆಂಥಿಲ್

Thursday, May 10th, 2018
election

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾದ ಮತಗಟ್ಟೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿ/ ಸಿಬ್ಬಂದಿಗೆ ಅಂಚೆ ಮತಪತ್ರಗಳನ್ನು ರವಾನಿಸಲಾಗಿದೆ. ಈಗಾಗಲೇ 5,000ಕ್ಕೂ ಅಧಿಕ ಮಂದಿ ಅಂಚೆ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಆಯುಕ್ತ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅವರು ಚುನಾವಣೆಗೆ ಸಂಬಂಧಿಸಿದ ಮಾಹಿತಿ ನೀಡಿದರು. 12,837 ಮತಗಟ್ಟೆ ಅಧಿಕಾರಿಗಳು, 1,295 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ, 43 ಮಂದಿ […]

ಬೋಳಾರ್ ನಲ್ಲಿ ಬಿಜೆಪಿ ಬೆಂಬಲಿಸುವಂತೆ ವೇದವ್ಯಾಸ್ ಕಾಮತ್ ಮನವಿ

Thursday, May 10th, 2018
vedvyas-kamath

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿರುವ ಡಿ.ವೇದವ್ಯಾಸ್ ಕಾಮತ್ ಅವರು ಬೋಳಾರ ವಾರ್ಡ್ ನಂ. 57 ರಲ್ಲಿ ಮನೆ ಮನೆಗೆ ಭೇಟಿ ನೀಡಿ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಹ ಸಂಚಾಲಕ್ ಶ್ರೀ ರವಿಶಂಕರ್ ಮಿಜಾರ್, ಪ್ರೇಮಾನಂದ ಶೆಟ್ಟಿ, ಶಿವ ಪ್ರಸಾದ್, ಗಿರಿ ಪ್ರಸಾದ್, ಸುಧೀಂದ್ರ, ವಸಂತ್ ಜೆ ಪೂಜಾರಿ, ಸಾತ್ವಿಕ್, ಅಜಿತ್, ಭಾಸ್ಕರ್ […]