ವಿಪಕ್ಷಗಳ ಗದ್ದಲದ ನಡುವೆಯೇ ಮತಾಂತರ ತಡೆ ವಿಧೇಯಕ ಅಂಗೀಕಾರ

Thursday, December 23rd, 2021
Conversion-bill

ಬೆಳಗಾವಿ : ಎರಡು ದಿನಗಳ ವಾದ-ವಿವಾದಗಳ ಬಳಿಕ ಇಂದು ಸುದೀರ್ಘವಾಗಿ ನಡೆದ ಚರ್ಚೆಯಲ್ಲಿ  ಮತಾಂತರ ತಡೆ ವಿಧೇಯಕ ಅಂಗೀಕಾರ ಆಗಿದೆ. 2016ರಲ್ಲಿ ಕಾನೂನು ಆಯೋಗ ಸಿದ್ಧಪಡಿಸಿದ್ದ ಮತಾಂತರ ನಿಷೇಧ ವಿಧೇಯಕದ ಕರಡು ಪ್ರತಿಗೆ ಅಂದಿನ ಕಾನೂನು ಸಚಿವ ಟಿ.ಬಿ. ಜಯಚಂದ್ರ ಒಪ್ಪಿಗೆ ನೀಡಿದ್ದನ್ನು ಬಿಜೆಪಿ ಪ್ರದರ್ಶಿಸಿತು. ಅಷ್ಟೇ ಅಲ್ಲ, ಆ ಪ್ರತಿಗೆ ಅಂದಿನ ಸಿಎಂ ಸಿದ್ದರಾಮಯ್ಯ ಕರಡು ಪ್ರತಿ ಒಪ್ಪಿ ಕ್ಯಾಬಿನೆಟ್ಗೆ ಕಡತ ಮಂಡಿಸುವಂತೆ ಸಹಿ ಮಾಡಿದ್ದರ ಬಗ್ಗೆ ಸಚಿವ ಮಾಧುಸ್ವಾಮಿ ಹೇಳುತ್ತಿದ್ದಂತೆ, ಇದಕ್ಕೆ ಉತ್ತರಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಕಕ್ಕಾಬಿಕ್ಕಿಯಾದ […]

ಚಿಲುಮೆ ಮಠದ ಪೀಠಾಧಿಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ : ಸಾವಿನ ಬಗ್ಗೆ ಅನುವಾನ

Tuesday, December 21st, 2021
chilume Sree

ರಾಮನಗರ : ಚಿಲುಮೆ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದರ ಬಗ್ಗೆ ಅವರ ಭಕ್ತರ ವಲಯದಲ್ಲಿ ಅನುಮಾನ ವ್ಯಕ್ತವಾಗಿದೆ. ಆತ್ಮಹತ್ಯೆ ಮಾಡಿಕೊಂಡ 58 ವರ್ಷದ ಬಸವಲಿಂಗ ಸ್ವಾಮಿಗಳು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ ಚಿಲುಮೆ ಮಠದ ಗೋಡೆಗೆ ಅಳವಡಿಸಿದ್ದ ಕಬ್ಬಿಣದ ಗ್ರಿಲ್ ಗೆ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಎಂಬುವರು ಮಠದಲ್ಲಿ ಇದ್ದ ದನ ಕರುಗಳನ್ನ ಕಟ್ಟಿ ಹಾಕಲು ಬಂದಿದ್ದರು. ಈ ವೇಳೆ ಸ್ವಾಮಿಜಿ ಯವರನ್ನು ಕರೆದಾಗ ಬರದೇ ಇದ್ದಾಗ, […]

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಗೆದ್ದವರ ವಿವರ ಇಲ್ಲಿದೆ

Tuesday, December 14th, 2021
MLC-election

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ನಡೆದ ಚುನಾವಣೆಯ ಫಲಿತಾಂಶ  ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲ್ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. 2023ರ ಕರ್ನಾಟಕ ವಿಧಾನಸಭಾ  ಹಿನ್ನೆಲೆಯಲ್ಲಿ ಈ ಚುನಾವಣೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್  ಎರಡಕ್ಕೂ ಚುನಾವಣೆಗಳು ಮಹತ್ವದ್ದಾಗಿವೆ. ಫಲಿತಾಂಶ ಪ್ರಕಟವಾದ ಬಳಿಕ ವಿಧಾನಪರಿಷತ್ ರಚನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಮೇಲ್ಮನೆಯಲ್ಲಿ 32 ಸ್ಥಾನಗಳನ್ನು ಹೊಂದಿರುವ ಬಿಜೆಪಿ, 12 ಸದಸ್ಯರನ್ನು ಹೊಂದಿರುವ ಜೆಡಿಎಸ್ […]

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

Tuesday, December 7th, 2021
cm Bommai

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ಗದಗ ಜಿಲ್ಲೆಯಲ್ಲಿ ಭಾಜಪದ ವತಿಯಿಂದ ಆಯೋಜಿಸಿದ್ದ ಚುನಾವಣಾ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. 7 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿ ಕೆಲವೇ ದಿನಗಳ ನಂತರ ಅದನ್ನು 4 ಕೆಜಿಗೆ ಇಳಿಸಿದರು. 5 ವರ್ಷದ ಅವಧಿಯಲ್ಲಿ 3 ವರ್ಷ 4ಕೆಜಿ ಅಕ್ಕಿ ಮಾತ್ರ ನೀಡಿದ್ದಾರೆ. ಚುನಾವಣೆಗೆ ಒಂದು ವರ್ಷವಿದ್ದಾಗ ಪುನ: 7 ಕೆಜಿಗೆ ಏರಿಸಿದರು. ಕಾಂಗ್ರೆಸ್ ಸರ್ಕಾರ […]

ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ವರದಿ: ನಾಳೆ ತಜ್ಞರೊಂದಿಗೆ ಸಭೆ; ಹೊಸ ಮಾರ್ಗಸೂಚಿ ಜಾರಿಗೆ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, December 2nd, 2021
omicron

ನವದೆಹಲಿ :  ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಾಳೆ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಪರಿಣತರೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ರಾಜ್ಯದಿಂದ ಎನ್ ಸಿ ಬಿ ಎಸ್ ಗೆ ಕಳುಹಿಸಿದ್ದ ಮಾದರಿಯಲ್ಲಿ ಕೇಂದ್ರ ಸರ್ಕಾರವು ಇಂದು ಎರಡು ಒಮಿಕ್ರಾನ್ ಪ್ರಕರಣಗಳನ್ನು ದೃಢ ಪಡಿಸಿದೆ. ಆದರೆ ವಿವರವಾದ ಪರೀಕ್ಷಾ ವರದಿ ಬಂದಿಲ್ಲ. […]

ಕೋವಿಡ್ : ಎಲ್ಲ ಪ್ರಯಾಣಿಕರ ತಪಾಸಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Wednesday, December 1st, 2021
Basavaraja Bommai

ಹುಬ್ಬಳ್ಳಿ : ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ  ಅಂತರರಾಷ್ಟ್ರೀಯ ಪ್ರಯಾಣಿಕರ  ತಪಾಸಣೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತಮಾಡುತ್ತಿದ್ದರು.  ಸುಮಾರು 2500 ಅಂತರರಾಷ್ಟ್ರೀಯ ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುತ್ತಾರೆ. ಕೆಲವರು ಮಂಗಳೂರು ವಿಮಾನ ನಿಲ್ದಾಣಕ್ಕೂ ಬರುತ್ತಾರೆ. ಕಳೆದ ಬಾರಿಯ ಅನುಭವದ ಮೇರೆಗೆ ಈಗಿನಿಂದಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು. ಕೋವಿಡ್ : ಅನಗತ್ಯ ಆತಂಕ ಬೇಡ  ಜನರು ಕೋವಿಡ್ ಹೊಸ ತಳಿಯ […]

ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ ಬಸವರಾಜ ಬೊಮ್ಮಾಯಿ

Friday, November 26th, 2021
Constitution Day

ದಾವಣಗೆರೆ : ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, […]

ಬೆಳೆ ಹಾನಿಗೆ ಶೀಘ್ರವಾಗಿ ಪರಿಹಾರ ವಿತರಣೆ: ಹಾಸನದಲ್ಲಿ ಕಂದಾಯ‌ ಸಚಿವ ಆರ್ ಅಶೋಕ್

Wednesday, November 24th, 2021
R Ashok

ಹಾಸನ : ಹಾಸನ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್ ಕೃಷಿ ಹಾಗೂ  ತೋಟಗಾರಿಕೆ ಬೆಳೆ ಕೂಡ ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸಂತೆಮರೂರು ಮತ್ತು ರಾಮನಾಥಪುರ ಹೋಬಳಿಯಲ್ಲಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಕಂದಾಯ ಸಚಿವರು ಮಳೆಯಿಂದ ಹಾನಿಗೊಳಗಾದ ರಾಗಿ ಸೇರಿದಂತೆ ದ್ವಿದಳಧಾನ್ಯ ಬೆಳೆದ ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಈಗಾಗಲೇ ಐದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಕಂದಾಯ […]

ಪೇಜಾವರ ಶ್ರೀಗಳ ವಿವಾದದ ಬಳಿಕ, ಅಭಿಮಾನಿಗಳಿಗೆ ಪತ್ರ ಬರೆದ ಹಂಸಲೇಖ

Wednesday, November 24th, 2021
Hamsalekha

ಬೆಂಗಳೂರು: ಪೇಜಾವರ ಶ್ರೀಗಳ ಕುರಿತು ನೀಡಿದ್ದ ಹೇಳಿಕೆ ಭಾರಿ ವಿವಾದಕ್ಕೆ ತಿರುಗಿದ ಬೆನ್ನಲ್ಲೇ  ವಿಚಾರಣೆಗೆ ಹಾಜರಾಗುವಂತೆ ಸಂಗೀತ ನಿರ್ದೇಶಕ ಹಂಸಲೇಖಾ ಅವರಿಗೆ ಪೊಲೀಸರು  ನೋಟೀಸ್ ನೀಡಿದ್ದರು. ಆದರೆ ಅನಾರೋಗ್ಯ ಹಿನ್ನೆಲೆಯಲ್ಲಿ ಹಂಸಲೇಖಾ ವಿಚಾರಣೆಗೆ ಹಾಜರಾಗಿರಲಿಲ್ಲ. ಇದರ ಬೆನ್ನಲ್ಲೇ ಅಭಿಮಾನಿಗಳಿಗೆ ಪತ್ರ ಬರೆದಿರುವ ಹಂಸಲೇಖಾ, ಕನ್ನಡಿಗರ ಪ್ರೀತಿಗೆ ಧನ್ಯವಾದ ತಿಳಿಸಿದ್ದಾರೆ. ನಾನು ಆರೋಗ್ಯದಿಂದ ಇದ್ದೇನೆ. ನಾನು ಅನಾರೋಗ್ಯಕ್ಕೀಡಾಗಿದ್ದೇನೆ ಎಂದು ಹಲವು ಕರೆಗಳು ಬರುತ್ತಿವೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತು, ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು…. […]

ಸರ್ಕಾರಿ ಅಧಿಕಾರಿಗಳ ಮನೆಗೆ ಎಸಿಬಿ ಅಧಿಕಾರಿಗಳ ದಾಳಿ, ಬಾತ್‌ ರೂಮ್ ಪೈಪಿನಲ್ಲೂ ಹಣ

Wednesday, November 24th, 2021
Jewarshi

ಬೆಂಗಳೂರು : ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಒಟ್ಟು 68 ಸ್ಥಳಗಳಲ್ಲಿ 503 ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಸರ್ಕಾರಿ ನೌಕರರು ಹೊಂದಿರುವ ಆಸ್ತಿಗಳ ಮೌಲ್ಯ, ಅವರು ಹೊಂದಿರುವ ಚಿನ್ನಾಭರಣಗಳು, ಇತರೆ, ಬ್ಯಾಂಕ್ ಠೇವಣಿಗಳ ಕುರಿತ ವಿವರಗಳು ಇಲ್ಲಿದೆ. 1) ಎಂ. ಆರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು, 1 ದ್ವಿಚಕ್ರ ವಾಹನ, 1 […]