17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು

Monday, April 8th, 2024
Brijesh Padmaprasad

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಏ.8ರ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ಸತೀಶ್ ಬೂಡುಮಕ್ಕಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಅದರೊಂದಿಗೆ ಅಂತಿಮವಾಗಿ 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಅಭ್ಯರ್ಥಿಗಳ ವಿವರ ಇಂತಿದೆ. ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ […]

ವರ್ಕಾಡಿಯಲ್ಲಿ ‘ಕಾವೀದ ಪುಣ್ಯೋತ್ಸವ’ ತುಳು ಭಕ್ತಿ ಗೀತೆ ಬಿಡುಗಡೆ

Friday, April 5th, 2024
kavida-punyotsava

ಮಂಜೇಶ್ವರ : ವರ್ಕಾಡಿ ಶ್ರೀ ಕಾವೀ ಸುಬ್ರಹ್ಮಣ್ಯ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಶಿವಪ್ರಸಾದ್ ತೌಡುಗೋಳಿ ಸಾಹಿತ್ಯ ಬರೆದು ನಿರ್ಮಾಣ ಮಾಡಿದ ‘ಕಾವೀದ ಪುಣ್ಯೋತ್ಸವ’ ತುಳು ಭಕ್ತಿ ಗೀತೆ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 3 ರ ಬುಧವಾರ ನಡೆಯಿತು. ಯತಿ ದ್ವಯರಾದ ಪರಮಪೂಜ್ಯ ಶ್ರೀ ಶ್ರೀ ತೀರ್ಥ ಶ್ರೀಪಾದರು ಶ್ರೀ ಚಿತ್ರಾಪುರ ಮಠ, ಪರಮಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಕೊಂಡೆಯೂರು ಇವರ ದಿವ್ಯಹಸ್ತದಿಂದ ‘ಕಾವೀದ ಪುಣ್ಯೋತ್ಸವ’ ತುಳು ಭಕ್ತಿ ಗೀತೆ ಬಿಡುಗಡೆ ನಡೆಯಿತು. […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Thursday, April 4th, 2024
Brijesh-Chowta

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ ಸಮೀಪದ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ […]

ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Wednesday, April 3rd, 2024
R-Padmaraj

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ಏಪ್ರಿಲ್ 3 ರಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ […]

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ನೇಮಕ

Tuesday, April 2nd, 2024
Kishan-Hegde

ಉಡುಪಿ : ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇಮಕ ಮಾಡಿದ್ದಾರೆ. ಏಪ್ರಿಲ್ 01 ರಂದು ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕಾತಿ ಮಾಡಲಾಗಿದ್ದು, ಇತ್ತೀಚೆಗಷ್ಟೇ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಅವರನ್ನು ನೇಮಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು, ಪಕ್ಷದಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದಲ್ಲಿ ಚುನಾವಣಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Tuesday, April 2nd, 2024
election-staff

ಮಂಗಳೂರು : ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

ಎ. 25-26 ರಂದು ಬೊರಿವಲಿ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Monday, April 1st, 2024
Mundapeshwara

ಮುಂಬಯಿ : ತುಳು ಕನ್ನಡಿಗರು ಸಮಾಜ ಸೇವೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಬಯಿ ಮಹಾನಗರ ಹಾಗೂ ಉಪನಗರದಲ್ಲಿ ಮಾಡಿದ ಸಾಧನೆ ಅಪಾರ. ಅದೇ ರೀತಿ ಧಾರ್ಮಿಕ ಕ್ಷೇತ್ರದಲ್ಲಿಯೂ ಈ ಮಾಯಾನಗರಿಯಲ್ಲಿ ನಮ್ಮವರ ಕೊಡುಗೆ ತುಂಬಾ ಇದೆ.ಸುಮಾರು ಒಂದೂವರೆ ಶತಮಾನದ ಹಿಂದೆ ಕರ್ನಾಟಕ ಕರಾವಳಿಯಿಂದ ಉದ್ಯೋಗವನ್ನರಸಿ ಮುಂಬಯಿಗಾಗಮಿಸಿದ ನಮ್ಮ ಹಿರಿಯರು ಈ ನಗರದ ಉದ್ದಗಲಕ್ಕೂ ಚದುರಿಹೋಗಿದ್ದರು. ಎಲ್ಲರೂ ತುಳನಾಡಿನಿಂದಲೇ ಬಂದವರಾಗಿದ್ದರೂ ಕೂಡ ಪರಸ್ಪರ ಸಂಪರ್ಕವಿಲ್ಲದೇ ಇದ್ದ ಕಾರಣದಿಂದಾಗಿ ಯಾವುದೇ ಸಂದರ್ಭಗಳಲ್ಲಿಯೂ ಎಲ್ಲರೂ ಒಂದೆಡೆಯಲ್ಲಿ ಸೇರುತ್ತಿರಲಿಲ್ಲಾ. ಹೀಗಿರುವಾಗ ಈ ರೀತಿ […]

ಕಾಂಗ್ರೇಸ್ ಮುಖಂಡನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Sunday, March 31st, 2024
padmanabha-samanth

ಬಂಟ್ವಾಳ : ಕಾಂಗ್ರೇಸ್ ಮುಖಂಡನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಂಚನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ ಹಿಂದೆ ವಂಚನೆ ಆರೋಪ ಕೇಳಿ ಬಂದಿದೆ. ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ […]

ಆಹಾರದಲ್ಲಿ ವಿಷಹಾಕಿದ ದುಷ್ಕರ್ಮಿಗಳು, 10ಕ್ಕಿಂತ ಅಧಿಕ ನಾಯಿಗಳ ಸಾವು

Sunday, March 31st, 2024
Mundaje

ಬೆಳ್ತಂಗಡಿ : ದುಷ್ಕರ್ಮಿಗಳು ಆಹಾರದಲ್ಲಿ ವಿಷಹಾಕಿದ ಪರಿಣಾಮ ಸಾಕುನಾಯಿಗಳು ಸೇರಿದಂತೆ 10ಕ್ಕಿಂತ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಅವುಗಳನ್ನು ತಿಂದಿರುವ ನಾಯಿಗಳು ಅಲ್ಲಲ್ಲಿ ಸತ್ತು ಬಿದ್ದಿವೆ ಎಂದು ತಿಳಿದುಬಂದಿದೆ. ಈಸ್ಟರ್ ಹಬ್ಬದಿಂದ ವಾಪಸ್ಸು ಬರುತ್ತಿದ್ದ ಜನರು ಇದನ್ನು ಗಮನಿಸಿ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ […]

ಮಂಗಳಾದೇವಿ ವಾರ್ಷಿಕ ಜಾತ್ರ ಮಹೋತ್ಸವ : ಮಕ್ಕಿಮನೆ ಕಲಾವೃಂದದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ

Saturday, March 30th, 2024
Makkimane

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ವಾರ್ಷಿಕ ಜಾತ್ರ ಮಹೋತ್ಸವವು ಆರಂಭವಾಗಿದ್ದು ಗುರುವಾರ ಮಲ್ಲಿಕಾ ಕಲಾವೃಂದ ಕದ್ರಿ ಮಂಗಳೂರು ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು, ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಸುಧಾಕರ ರಾವ್ ಪೇಜಾವರ, ಎಂ. ರವೀಂದ್ರ ಶೇಟ್, ರತ್ನಾಕರ ಜೈನ್ , ಮಾಧವ ಎಂ.ಎಸ್, ವಿನಯನಾಂದ , ಎಂ. ಶರತ್ ಶೇಟ್, ಎಂ. ದೀಪ್ತಿ ಶೇಟ್, ಕು. […]