ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಾರುಕಟ್ಟೆಯಲ್ಲಿ ಹೂ, ತರಕಾರಿಗಳಿಗೆ ಬೆಲೆ ಏರಿಕೆ

Friday, August 23rd, 2019
flower

ಮಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾರುಕಟ್ಟೆಯಲ್ಲಿ ಹೂ, ಹಣ್ಣು-ತರಕಾರಿ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದ್ದು, ಬೆಲೆ ಏರಿಕೆ ನಡುವೆಯೂ ಖರೀದಿ ಭರಾಟೆ ಜೋರಾಗಿತ್ತು. ಹಬ್ಬದ ತಯಾರಿ ಬಿರುಸಾಗಿದ್ದು, ಹೂ, ಹಣ್ಣು ವ್ಯಾಪಾರಸ್ಥರು ಬಿಡುವಿಲ್ಲದ ವ್ಯಾಪಾರದಲ್ಲಿ ತೊಡಗಿದ್ದಾರೆ. ಹಾಸನ, ತುಮಕೂರು, ಹಾವೇರಿ, ಬೆಂಗಳೂರು ಸೇರಿದಂತೆ ಹಲವೆಡೆಯಿಂದ 150ಕ್ಕೂ ಅಧಿಕ ಹೂವಿನ ವ್ಯಾಪಾರಿಗಳು ಆಗಮಿಸಿದ್ದಾರೆ. ಮಾರುಕಟ್ಟೆಯಲ್ಲಿ ಸೇವಂತಿಗೆ, ಜೀನಿಯಾ, ಕಾಕಡ, ಗುಲಾಬಿ, ಮಲ್ಲಿಗೆಗೆ ಬೇಡಿಕೆ ಹೆಚ್ಚಾಗಿದ್ದು, ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ.    

ರೈಲು ಡಿಕ್ಕಿ ಹೊಡೆದು ಆಟೋ ಚಾಲಕ ಸಾವು

Friday, August 23rd, 2019
Naveen

ಮೂಲ್ಕಿ : ರೈಲ್ವೆ ಹಳಿ ದಾಟುತ್ತಿದ್ದ ಸಂದರ್ಭ ರೈಲು ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನೋರ್ವ ಮೃತ ಪಟ್ಟ ಘಟನೆ ಇಂದು ಬೆಳಗ್ಗೆ 6 ಗಂಟೆಗೆ ನಡೆದಿದೆ. ಮೃತರನ್ನು ಹಳೆಯಂಗಡಿಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ನವೀನ್ ಕರ್ಕಡ ಎಂದು ಗುರುತಿಸಲಾಗಿದೆ. ಹಳೆಯಂಗಡಿ ಸಮೀಪದ ಕೊಪ್ಪಳ ರೈಲ್ವೆ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದ್ದು, ಇವರು ಹಳಿ ದಾಟುತ್ತಿದ್ದ ಸಂದರ್ಭ ಮುಂಬೈಯಿಂದ ಮಂಗಳೂರಿಗೆ ಬರುತ್ತಿದ್ದ ಮತ್ಸ್ಯಗಂಧಾ ಎಕ್ಸ್ ಪ್ರೆಸ್ ರೈಲು ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮುಲ್ಕಿ […]

ಕುಲಶೇಖರ, ರೈಲಿನ ಹಳಿಗೆ ಮಣ್ಣು ಕುಸಿತ; ಸಂಚಾರ ಸ್ಥಗಿತ

Friday, August 23rd, 2019
Kulshekar

ಮಂಗಳೂರು : ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಧರೆ ಕುಸಿತ ಪ್ರಕರಣಗಳು ಮುಂದುವರಿದಿದ್ದು, ಇದೀಗ ಕುಲಶೇಖರ ಬಳಿಯೂ ಹಳಿಗೆ ಮಣ್ಣು ಕುಸಿದ ಬಿದ್ದ ಪರಿಣಾಮ ಈ ಮಾರ್ಗವಾಗಿ ಶುಕ್ರವಾರ ಈ ಮಾರ್ಗವಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದಲ್ಲಿ ಕಳೆದೆರಡು ವರ್ಷದಿಂದ ನಡೆಯುತ್ತಿರುವ ಕುಲಶೇಖರ-ಪಡೀಲ್ ರೈಲ್ವೆ ಸುರಂಗ ಮಾರ್ಗದ ಸನಿಹ ಈ ಘಟನೆ ನಡೆದಿದ್ದು ಈ ಹಿನ್ನಲೆಯಲ್ಲಿ ಈ ಮಾರ್ಗವಾಗಿ ಸಂಚರಿಸುವ ರೈಲುಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಹಳಿಯಲ್ಲಿದ್ದ ಮಣ್ಣು ತೆರವುಗೊಳಿಸುವ ಕಾರ್ಯವನ್ನು ರೈಲ್ವೆ […]

ಆ. 27ರಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಅಭಿವಂದನಾ ಕಾರ್ಯಕ್ರಮ

Friday, August 23rd, 2019
MNR abhivandane

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ವತಿಯಿಂದ ಇತ್ತೀಚೆಗೆ ಇಸ್ರೇಲ್ ಗೆ ಅಧ್ಯಯನ ಪ್ರವಾಸ ಕೈಗೊಂಡ ಕೃಷಿ ಮತ್ತು ಪತ್ತಿನ ಸಹಕಾರಿ ಸಂಘಗಳ ಪದಾಧಿಕಾರಿಗಳೊಂದಿಗೆ ಆ. 27ರಂದು ಸಂವಾದ ಕಾರ್ಯಕ್ರಮ ಮತ್ತು ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಅಭಿವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕೃಷಿ ಮತ್ತು ಪತ್ತಿನ ಸಹಕಾರಿ ಸಂಘಗಳ ಪದಾಧಿಕಾರಿಗಳ ವಿದೇಶ ಅಧ್ಯಯನ ಪ್ರವಾಸ ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಹಕಾರಿ ರಂಗದ […]

ಕಾಪು ಅಭಿವೃದ್ಧಿಗೆ ಮುಖ್ಯಮಂತ್ರಿ ಭೇಟಿ ಮಾಡಿದ ಕಾಪು ಶಾಸಕ ಲಾಲಾಜಿ

Friday, August 23rd, 2019
lalji

ಕಾಪು: ಕಾಪು ಪುರಸಭೆ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿವಿಧ ಬೇಡಿಕೆಗಳ ಬಗ್ಗೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪರವರ ಗೃಹ ಕಚೇರಿಯಲ್ಲಿ ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿದರು. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಪು ತಾಲ್ಲೂಕು ಪಂಚಾಯಿತಿಯ ಎಲ್ಲಾ 32 ಇಲಾಖೆಗಳ ವರ್ಗಾವಣೆ ಬಗ್ಗೆ ಹಾಗೂ ಕಾಪುಗೆ ನೂತನ ಮಿನಿ ವಿಧಾನಸೌಧ ಹಾಗೂ ಪ್ರವಾಸಿ ಮಂದಿರ ನಿರ್ಮಾಣ, ಕಾಪು ಪ್ರಾಥಮಿಕ ಅರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಬೇಕು. ಹೆಜಮಾಡಿ ಬಂದರುಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ […]

ಕಾಸರಗೋಡು : ಕಾರು – ಲಾರಿ ನಡುವೆ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಗಂಭೀರ

Friday, August 23rd, 2019
Kasaragodu

ಕಾಸರಗೋಡು : ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಉಲ್ಲಾಲದ ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಆ. 22 ರ ರಾತ್ರಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳಾದ ಕುಂಬಳೆ ಆರಿಕ್ಕಾಡಿಯ ಮುಹಮ್ಮದ್ ಆಫ್ರಾತ್ (20) , ಬಂಬ್ರಾಣದ ಜಾಫರ್ (21) , ಸುಳ್ಯದ ಅನಾಸ್ (20) ಮತ್ತು ಕಾಜೂರಿನ ಮುಹಮ್ಮದ್ ಅನಾಸ್ (20) ರನ್ನು ಮಂಗಳೂರುನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದ್ಯೋಡು ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಉಳ್ಳಾಲಕ್ಕೆ […]

ಕಾರು ಅಪಘಾತ, ಅಪಾಯದಿಂದ ಪಾರಾದ ಶಾಸಕ ರಾಮದಾಸ್

Friday, August 23rd, 2019
Ramdas

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಹೊರಳಿ ಚರಂಡಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಶಾಸಕ ರಾಮದಾಸ್ ಪಾರಾದ ಘಟನೆ ಸುಳ್ಯದಲ್ಲಿ ನಡೆದಿದೆ. ಘಟನೆಯಿಂದ ಶಾಸಕ ರಾಮದಾಸ್ ಹಾಗೂ ಅವರ ಚಾಲಕ ಅವರಿಗೆ ಗಾಯಗಳಾಗಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯನಿಮಿತ್ತ ಶಾಸಕ ರಾಮದಾಸ್ ಅವರು ಮೈಸೂರಿನಿಂದ ಮಂಗಳೂರಿಗೆ ಬರುತ್ತಿದ್ದಾಗ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ನಿಯಂತ್ರಣ ತಪ್ಪಿ ಜಾಲ್ಸೂರು ಬಳಿಯ ಚರಂಡಿ‌ಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಗೆ ಚಾಲಕನ ನಿದ್ರೆ ಮಂಪರಿನಲ್ಲಿದ್ದದ್ದೇ […]

ಕರಾವಳಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

Friday, August 23rd, 2019
Udupi

ಮಂಗಳೂರು : ಕರಾವಳಿಯ ಎಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆ ಮಾಡಿದೆ. ಇಂದು ಕೃಷ್ಣ ಜನ್ಮಾಷ್ಟಮಿ. ನಾಡಿನಾದ್ಯಂತ ಕೃಷ್ಣ ಭಕ್ತರು ಸಂಭ್ರಮದಲ್ಲಿದ್ದಾರೆ. ಎಲ್ಲೆಡೆ ಮಾಧವ, ಮುಕುಂದ, ಮುರಳಿಲೋಲ, ಗೋವರ್ಧನ, ಗಿರಿಧರ ಎಂಬಿತ್ಯಾದಿ ಹೆಸರುಗಳಿಂದ ಕರೆಸಿಕೊಳ್ಳುವ ಶ್ರೀ ಕೃಷ್ಣನ ನಾಮ ಜಪ ನಡೆಯುತ್ತಿದೆ. ಕಡೆಗೋಲು ಕೃಷ್ಣನ ನಾಡು ಉಡುಪಿಯಲ್ಲಿ ಭಗವಾನ್ ಕೃಷ್ಣನ ಆರಾಧನೆ ಆರಂಭವಾಗಿದೆ. ಕೃಷ್ಣನ ನಾಡು ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೋರಾಗಿದೆ. ಮುಂಜಾನೆಯಿಂದಲೇ ಕೃಷ್ಣಮಠಕ್ಕೆ ಭಕ್ತರು ಭೇಟಿಕೊಟ್ಟು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ ಮಾಡುತ್ತಿದ್ದಾರೆ. ಕೃಷ್ಣಮಠವನ್ನು […]

ಕಿನ್ನಿಗೋಳಿ : ಬಸ್- ಕಾರು ಡಿಕ್ಕಿ, ನಾಲ್ವರಿಗೆ ಗಾಯ

Friday, August 23rd, 2019
Bus---car-dikki

ಕಿನ್ನಿಗೋಳಿ : ಮೂಲ್ಕಿ – ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಎಸ್ ಕೋಡಿ ಕೆರೆಯ ಬಳಿ ಖಾಸಗಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೂಡಬಿದ್ರೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಕಾರು ಮತ್ತು ಮುಲ್ಕಿಯಿಂದ ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ಬಸ್ ನಡುವೆ ಅಪಘಾತ ನಡೆದಿದೆ. ಗಾಯಾಳುಗಳನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.    

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ; ಮುಂಜಾಗ್ರತೆ ವಹಿಸುವಂತೆ ಎಚ್ಚರಿಕೆ

Thursday, August 22nd, 2019
bhari-male

ಮಂಗಳೂರು : ಕರ್ನಾಟಕದ ಕರಾವಳಿಗರಿಗೆ ಮತ್ತೆ ಮಳೆ ಕಂಟಕವಾಗುತ್ತಾ ಎನ್ನುವ ಅನುಮಾನ ಕಾಡತೊಡಗಿದೆ. ಈಗಾಗಲೇ ಪ್ರವಾಹ, ಭೂಕುಸಿತದಿಂದ ಕರ್ನಾಟಕದ ಕರಾವಳಿ ಭಾಗದ ಜನ ಕಂಗೆಟ್ಟಿದ್ದು, ಇದೀಗ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜು.24ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಮತ್ತೆ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯಲ್ಲಿ ಕನಿಷ್ಠ 204.5 ಮಿ.ಮೀ. ಮಳೆ ಬೀಳುವ ಸಾಧ್ಯತೆ ಇದೆ ಎಂದು […]