ಕೊರೊನಾ ವೈರಸ್‍ಗೆ ಪತಂಜಲಿ ಮದ್ದು : ಬಾಬಾ ರಾಮ್‍ದೇವ್ ಹೇಳಿಕೆ

Thursday, March 19th, 2020
baba-ramdev

ನವದೆಹಲಿ : ವಿಶ್ವಾದ್ಯಂತ ತನ್ನ ಕರಿನೆರಳು ಬೀರಿ ರಣಕೇಕೆ ಹಾಕುತ್ತಿರುವ ಕಿಲ್ಲರ್ ಕೊರೊನಾ ವೈರಸ್‍ಗೆ 8 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿಯಾಗಿದ್ದಾರೆ. ಆದರೆ ಕೊರೊನಾ ನಿವಾರಿಸಲು ಪತಂಜಲಿ ಸಂಸ್ಥೆಯ ಬಳಿ ಔಷಧಿ ಇದೆ ಎಂದು ಮಾತನಾಡಿ ಖ್ಯಾತ ಯೋಗ ಗುರು ಬಾಬಾ ರಾಮ್‍ದೇವ್ ವೈದ್ಯರ ಸಿಟ್ಟಿಗೆ ಕಾರಣವಾಗಿದ್ದಾರೆ. ಕಳೆದ ಹಲವು ತಿಂಗಳಿಂದ ಜಗತ್ತಿನ ಸುಮಾರು 173ಕ್ಕೂ ಅಧಿಕ ರಾಷ್ಟ್ರಗಳು, ಪ್ರಾಂತ್ಯಕ್ಕೆ ಕೊರೊನಾ ತಲೆನೋವಾಗಿದೆ. ಕೊರೊನಾ ವೈರಸ್ ರೋಗಕ್ಕೆ ಔಷಧಿ ಕಂಡುಹಿಡಿಯಲು ವಿಶ್ವಾದ್ಯಂತ ವಿಜ್ಞಾನಿಗಳು ಹರಸಾಹಸ ಪಡುತ್ತಿದ್ದು, ಸೂಕ್ತ […]

ಕೋವಿಡ್-19 ವೈರಸ್ ಕಳವಳ : ಇಂದು ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ

Thursday, March 19th, 2020
modi

ನವದೆಹಲಿ : ಕೋವಿಡ್-19 ಭಾರತದಲ್ಲಿ ತನ್ನ ಕಬಂಧಬಾಹುವನ್ನು ಚಾಚುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದ್ದು ದೇಶದ ಜನರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಬುಧವಾರ ತಜ್ಞರು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಸೋಂಕು ತಡೆಗಟ್ಟುವ ಮಾರ್ಗೋಪಾಯಗಳು, ಹಾಗೂ ಜನರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕಾ ಕ್ರಮಗಳ […]

ಚೆನ್ನೈನಲ್ಲಿ ಕೊರೊನಾ ಭೀತಿ ನಡುವೆಯೂ ಸಿಎಎ, ಎನ್​ಆರ್​ಸಿ ವಿರುದ್ಧ ಪ್ರತಿಭಟನೆ

Wednesday, March 18th, 2020
chennai

ಚೆನ್ನೈ : ಕೊರೊನಾ ಭೀತಿಗೆ ಈಡಿ ಜಗತ್ತೆ ಬೆಚ್ಚಿಬಿದ್ದಿದೆ. ಹೀಗಾಗಿ ಒಂದು ಜಾಗದಲ್ಲಿ ನೂರಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿನ ಚೆನ್ನೈನಲ್ಲಿ ಸಾವಿರಾರು ಜನರು ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಮದ್ರಾಸ್ ಹೈಕೋರ್ಟ್ ಬಳಿ ತಮಿಳುನಾಡು ಥೌಹೀದ್ ಜಮಾತ್ ಸದಸ್ಯರು ಸೇರಿದಂತೆ ಅನೇಕ ಜನರು ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರುದ್ಧ ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆಯ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ […]

ಪರಿಷತ್ತು ಮಾತೃ ಸಂಸ್ಥೆಯಾಗಿ ಬೆಳೆಯಲು ಕಲಾವಿದರು ಪ್ರೋತ್ಸಾಹಿಸಬೇಕು : ಡಾ. ಸುರೇಂದ್ರಕುಮಾರ್ ಹೆಗ್ಡೆ

Wednesday, March 18th, 2020
mathru-samste

ಮುಂಬಯಿ : ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದು ಹತ್ತು ಮಕ್ಕಳ ತಾಯಿಯಂತೆ. ತಾಯಿಗೆ ಹತ್ತು ಮಕ್ಕಳಿರುವಾಗ ಆಕೆಯ ಜವಾಬ್ಧಾರಿಯನ್ನು ಒಬ್ಬ ಇನ್ನೊಬ್ಬನಿಗೆ ಮೇಲೆ ಹಾಕುವಂತೆ. ಅಂದರೆ ಅವನಿದ್ದಾನಲ್ಲ ನಾನ್ಯಾಕೆ ನೋಡಬೇಕು ಎಂಬಂತೆ. ಜಾತೀಯ ಹಾಗೂ ಬಾಷೀಯ ಸಂಘಟನೆಗಳಿಗೆ, ಅದು ನಮ್ಮ ಜಾತೀಯ ಯಾ ನಮ್ಮ ಬಾಷೆಯ ಸಂಸ್ಥೆ ಎಂಬಂತೆ ಸಹಕರಿಸುತ್ತಿದ್ದಾರೆ. ಆದರೆ ಇಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳಿದ್ದು ಸಹಕಾರ ನೀಡುವ ಬಗ್ಗೆ ಕಳವಳ ಮೂಡುವುದು ಸಹಜ. ಆದುದರಿಂದ ಪರಿಷತ್ತು ಮಾತೃ ಸಂಸ್ಥೆಯಾಗಿ ಬೆಳೆಯಬೇಕಾದರೆ ಇತರ ಗಣ್ಯರೊಂದಿಗೆ […]

ಯೆಸ್​ ಬ್ಯಾಂಕ್ ಇಂದಿನಿಂದ ಕಾರ್ಯಾರಂಭ

Wednesday, March 18th, 2020
yes-bank

ನವದೆಹಲಿ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಯೆಸ್ ಬ್ಯಾಂಕ್ ಇಂದಿನಿಂದ ಕಾರ್ಯಾರಂಭ ಮಾಡಲಿದೆ. ಬ್ಯಾಂಕ್ ಎಲ್ಲ ಶಾಖೆಗಳು ಮತ್ತು ಎಟಿಎಂಗಳು ತೆರೆಯಲಿವೆ. ಬ್ಯಾಂಕ್ ಮೇಲೆ ಆರ್ಬಿಐ ಹೇರಿದ್ದ ನಿರ್ಬಂಧವನ್ನು ಹಿಂಪಡೆಯಲಿದೆ. ಬ್ಯಾಂಕಿನ ಎಲ್ಲ ಸೇವೆಗಳು ಇಂದು ಸಂಜೆ 6ರಿಂದ ಆರಂಭವಾಗಲಿವೆ. ಮಾರ್ಚ್ 19ರಿಂದ ನಮ್ಮ 1,132 ಶಾಖೆಗಳಲ್ಲಿ ಯಾವುದೇ ಶಾಖೆಗೆ ಭೇಟಿ ನೀಡಿ, ಸೇವೆ ಪಡೆಯಿರಿ. ನಮ್ಮ ಎಲ್ಲ ಡಿಜಿಟಲ್ ಸೇವೆಗಳು ಹಾಗೂ ಪ್ಲಾಟ್ಫಾರ್ಮ್ಗಳೂ ಸೇವೆಗೆ ತೆರೆದುಕೊಳ್ಳಲಿವೆ ಎಂದು ಯೆಸ್ ಬ್ಯಾಂಕ್ ಸಿಇಒ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. […]

ಬೋಂಬೆ ಬಂಟ್ಸ್ ಅಸೋಸಿಯೇಷನ್ ಮಹಿಳಾ ವಿಭಾಗದ ಆಶ್ರಯದಲ್ಲಿ ನಾರಿ ಉತ್ಸವ

Wednesday, March 18th, 2020
bomboy

ಮುಂಬಯಿ : ಗಂಡಸರು ಜೀವನಪೂರ್ತಿ ಮನೆ ಕುಟುಂಬವನ್ನು ನೋಡುವುದರೊಂದಿಗೆ ಉದ್ಯೋಗ ವ್ಯವಹಾರವನ್ನು ನಿರ್ವಹಿಸುತ್ತಾನೆ ಆತನ ಯಶಸ್ವಿಯಾಗಿದೆ ಮಹಿಳೆಯು ಸದಾ ಸಹ ಭಾಗಿಯಾಗುತ್ತಾರೆ ಪ್ರತಿ ಪುರುಷನ ಯಶಸ್ವಿ ಹಿಂದೆ ಮಹಿಳೆ ವಿವಿಧ ರೂಪದಲ್ಲಿ ಬೆಂಬಲವಾಗಿ ಇರುವುದರಿಂದ ಸಂಸಾರ ಒಳ್ಳೆಯ ರೀತಿಯಲ್ಲಿ ನಡೆಯಲು ಸಾಧ್ಯವಾಗುತ್ತಿದೆ ಈ ಬಾರಿಯ ಜವಾಬ್ದಾರಿಯನ್ನು ವಹಿಸಿರುವ ಮಹಿಳಾ ವಿಭಾಗದ ಲತಾ ಜಿ ಶೆಟ್ಟಿ ತಂಡ ಸಮುದಾಯದ ಎಲ್ಲಾ ಮಹಿಳೆಯರನ್ನು ಒಗ್ಗೂಡಿಸಿ ನಾರಿ ಉತ್ಸವವನ್ನು ನಡೆಸಿದೆ ಇದು ಮಹಿಳೆಯರ ಒಗ್ಗಟ್ಟಿಗೆ ಸಾಕ್ಷಿಯಾಗಿದೆ ಎಂದು ಬೋಂಬೆ ಬಂಟ್ಸ್ ಅಸೋಸಿಯೇಷನ್ […]

ಕೊರೊನಾ ವೈರಸ್ ಭೀತಿಯ ನಡುವೆಯೂ ಮುಂದುವರಿದ ಶಹೀನ್ ಭಾಗ್ ಸಿಎಎ ವಿರೋಧಿ ಪ್ರತಿಭಟನೆ

Saturday, March 14th, 2020
shahi-bhagh

ಹೊಸದಿಲ್ಲಿ : ದೇಶದಲ್ಲಿ ಕೊರೊನಾ ವೈರಸ್ ತೀವ್ರವಾಗಿ ಕಾಡುತ್ತಿದ್ದು, ಜನಜೀವನ ಬಹುತೇಕ ಸಂಕಷ್ಟಕ್ಕೆ ಒಳಗಾಗಿದೆ. ಕೇರಳ, ಕೇರಳ, ದಿಲ್ಲಿ ಸೇರಿದಂತೆ ಬಹುತೇಕ ರಾಜ್ಯಗಳು ಲಾಕ್ ಡೌನ್ ಪರಿಸ್ಥಿತಿಗೆ ತಲುಪಿದೆ. ಇಷ್ಟೆಲ್ಲದರ ನಡುವೆಯೂ ಶಹೀನ್ ಭಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಕಳೆದ ಮೂರು ತಿಂಗಳಿಂದ ಶಹೀನ್ ಭಾಗ್ ನಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಯುತ್ತಿದೆ. ಕೊರೊನಾ ವೈರಸ್ ಭೀತಿಯ ನಡುವೆಯೂ ಇದು ಮುಂದುವರಿದಿದೆ. ದಿಲ್ಲಿಯಲ್ಲಿ ಮಾರ್ಚ್ 31ರವರೆಗೆ ಬಂದ್ ಮಾಡಲು ರಾಜ್ಯ ಸರಕಾರ ಆದೇಶಿಸಿದೆ. 200 […]

ಬಿಜೆಪಿಗೆ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಭೋಪಾಲ್ ನಲ್ಲಿ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ

Saturday, March 14th, 2020
BJP

ಭೋಪಾಲ್: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಈಗಾಗಲೇ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ ನಡೆಸಿ ತಮ್ಮ ತಾಕತ್ತು ಪ್ರದರ್ಶಿಸಿದ್ದಾರೆ. ಆದರೆ ಸಿಂಧಿಯಾ ಬಿಜೆಪಿ ಮಡಲಿಲ್ಲಿರುವುದನ್ನು ಸಹಿಸದ ಕಾಂಗ್ರೆಸ್, ಮೇಲ್ನೋಟಕ್ಕೆ ಅವರ ವಿರುದ್ಧ ಪಿತೂರಿ ನಡೆಸುತ್ತಿರುವಂತೆ ತೋರುತ್ತಿದೆ. ಸಿಂಧಿಯಾ ಬಿಜೆಒಪಿ ಸೇರಿದ ಮರುದಿನವೇ ಅವರ ವಿರುದ್ಧದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿದ್ದು ಇದಕ್ಕೆ ಸಾಕ್ಷಿ. ಇಷ್ಟೇ ಅಲ್ಲ ಸಿಂಧಿಯಾ ರೋಡ್ ಶೋ ವೇಳೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ […]

ಕೊರೊನಾ ಭೀತಿ ಹಿನ್ನೆಲೆ : ದೆಹಲಿಯಲ್ಲಿ ಎಲ್ಲ ಐಪಿಎಲ್ ಪಂದ್ಯ ರದ್ದು

Friday, March 13th, 2020
IPL

ನವದೆಹಲಿ : ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಎಲ್ಲ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ. ಕ್ರಿಕೆಟ್ ವೀಕ್ಷಿಸಲು ಸಾವಿರಾರು ಮಂದಿ ಕ್ರೀಡಾಂಗಣಕ್ಕೆ ಬರುತ್ತಾರೆ. ಯಾರು ಬರುತ್ತಾರೆ? ಅವರು ಎಲ್ಲಿಂದ ಬರುತ್ತಿದ್ದಾರೆ ಎನ್ನುವುದು ತಿಳಿಯುವುದು ಅಸಾಧ್ಯ. ಒಬ್ಬ ವ್ಯಕ್ತಿ ಬಂದರೂ ಹಲವು ಮಂದಿಗೆ ಕೊರೊನಾ ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಐಪಿಎಲ್ ಸೇರಿದಂತೆ ಎಲ್ಲ ಕ್ರೀಡಾ ಕಾರ್ಯಕ್ರಮವನ್ನು […]

ಮಧ್ಯಪ್ರದೇಶದ 22 ಕಾಂಗ್ರೆಸ್‌ ಶಾಸಕರಿಗೆ ಸ್ಪೀಕರ್‌ ನೋಟಿಸ್‌ ಜಾರಿ

Friday, March 13th, 2020
Congress

ಭೋಪಾಲ್ ‌: ಮಧ್ಯಪ್ರದೇಶ ವಿಧಾನ ಸಭೆಯ ಸದಸ್ಯತ್ವ ತೊರೆದಿರುವ ಕಾಂಗ್ರೆಸ್‌ನ 22 ಶಾಸಕರಿಗೆ ವಿಧಾನಸಭಾ ಸ್ಪೀಕರ್‌ ಎನ್‌.ಪಿ. ಪ್ರಜಾಪತಿ ನೋಟಿಸ್‌ ಜಾರಿಗೊಳಿಸಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಎ.ಪಿ. ಸಿಂಗ್‌ ಈ ವಿಷಯ ತಿಳಿಸಿದ್ದಾರೆ. ‘ಶುಕ್ರವಾರ ಸ್ಪೀಕರ್‌ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ವಿಚಾರಣೆಯಲ್ಲಿ, ತಮ್ಮ ರಾಜೀನಾಮೆ ನಿರ್ಧಾರ ಸ್ವಯಂಪ್ರೇರಿತವೋ ಅಥವಾ ಒತ್ತಡದಿಂದ ಕೈಗೊಂಡ ನಿರ್ಧಾರವೋ ಎಂಬುದರ ಬಗ್ಗೆ ಸ್ಪಷ್ಟವಾಗಿ ವಿವರಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ’ ಎಂದು ಅವರು ಹೇಳಿದ್ದಾರೆ. ವಿಶ್ವಾಸಮತಕ್ಕೆ ಮನವಿ: 22 ಶಾಸಕರ ರಾಜೀನಾಮೆ ಯಿಂದ […]