ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು : ನಾಳೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಸೇರ್ಪಡೆ

Wednesday, March 11th, 2020
jyothiradhithya

ಬೆಂಗಳೂರು : ಕಾಂಗ್ರೆಸ್ ತೊರೆದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಪ್ತ ಜ್ಯೋತಿರಾದಿತ್ಯ ಸಿಂಧಿಯಾ ಸದ್ಯದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ನಾಳೆ ಅಂದರೆ ಗುರುವಾರ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲೇ ಸಿಂಧಿಯಾ ಕಮಲದ ಕೈ ಹಿಡಿಯಲಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಮಂಗಳವಾರ ಬೆಳಗ್ಗೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ […]

ಪಶ್ಚಿಮ ಬಂಗಾಳದ ಬಿಜೆಪಿ ಸಂಸದರ ಜತೆ ಮುಖಾಮುಖಿ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧಾರ

Tuesday, March 10th, 2020
modi

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಬಿಜೆಪಿ ಸಂಸದರ ಜತೆ ಮುಖಾಮುಖಿ ಚರ್ಚೆ ನಡೆಸಿ ರಾಜ್ಯದ ರಾಜಕೀಯ ಚಿತ್ರಣದ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಮುಂದಿನ ವರ್ಷದ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜ್ಯದಲ್ಲಿ ಈಗಿನಿಂದಲೇ ಸಿದ್ದತೆ ಆರಂಭಿಸುವುದು ಮೋದಿ ಅವರ ಉದ್ದೇಶ. ಅದಕ್ಕಾಗಿ ಸಂಸತ್‌ನ ಬಜೆಟ್‌ ಅಧಿವೇಶನದ ಸಂದರ್ಭದಲ್ಲಿಯೇ ರಾಜ್ಯದಿಂದ ಆಯ್ಕೆಯಾಗಿರುವ ಪಕ್ಷದ ಸಂಸದರ ಜತೆ ಚರ್ಚೆ ನಡೆಸಲು ಪ್ರಧಾನಿ ನಿರ್ಧರಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಆಡಳಿತ […]

ಕಾಂಗ್ರೆಸ್​ಗೆ ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

Tuesday, March 10th, 2020
jyothiradhithya

ನವದೆಹಲಿ : ಕಳೆದೆರಡು ದಿನಗಳಿಂದ ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಗೆ ತಲೆನೋವಾಗಿದ್ದು, ಕಮಲ್ನಾಥ್ ನೇತೃತ್ವದ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳುವ ಸಾಧ್ಯತೆಯಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿದ್ದ ಮತ್ತೊಬ್ಬ ನಾಯಕ ಕಾಂಗ್ರೆಸ್ ತೊರೆದಿದ್ದಾರೆ. ಜತೆಗೆ ಬಿಜೆಪಿಯನ್ನು ಇಂದು ಸಂಜೆಯೇ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಮಿತ್ ಶಾ […]

ಮಧ್ಯಪ್ರದೇಶ ಸರ್ಕಾರ ಉರುಳಿಸಲು ಬಿಜೆಪಿಗೆ ಆಸಕ್ತಿಯಿಲ್ಲ : ಬಿಜೆಪಿ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್

Tuesday, March 10th, 2020
shivaraj-singh-chawhan

ಭೋಪಾಲ್ : ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜ್ಯದ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಸಿನ ಆಂತರಿಕ ವಿಚಾರ, ಈ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಸಕ್ತಿ ಹೊಂದಿಲ್ಲ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ಜಗಳದಿಂದಾಗಿ ಸರ್ಕಾರ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ ಎಂದು ಅವರು ತಿಳಿಸಿದರು. ಮಧ್ಯಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಹಠಾತ್‌ ಬೆಳವಣಿಗೆಯಲ್ಲಿ […]

ಕೊರೋನಾ ವೈರಸ್​ ಭೀತಿ : ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸ ರದ್ದು

Monday, March 9th, 2020
PM

ನವದೆಹಲಿ : ವಿಶ್ವದೆಲ್ಲೆಡೆ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ. ಎಲ್ಲವೂ ಅಂದುಕೊಂಡತೆ ನಡೆದಿದ್ದರರೆ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾಜೊತೆಗೆ ದ್ವಿಪಕ್ಷೀಯ ಮಾತುಕತೆಗಾಗಿ ಇಂದು ಬಾಂಗ್ಲಾದೇಶಕ್ಕೆ ತೆರಳಬೇಕಿತ್ತು. ಅಲ್ಲದೆ, ವಿವಿಧ 7 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮಾರಣಾಂತಿಕ ಕೊರೋನಾ ವೈರಸ್ ಭೀತಿ ಎಲ್ಲೆಡೆ ವ್ಯಾಪಿಸಿರುವ ಕಾರಣ ಮೋದಿ ಅವರ ಆರೋಗ್ಯದ ಹಿತದೃಷ್ಟಿಯಿಂದ ಬಾಂಗ್ಲಾ ಪ್ರವಾಸವನ್ನು ರದ್ದು ಮಾಡಲಾಗಿದೆ […]

ಇಟಲಿಯಿಂದ ಆಗಮಿಸಿದ್ದ ಕೇರಳದ 3 ವರ್ಷದ ಮಗುವಿಗೆ ಕೊರೊನಾ ಸೋಂಕು

Monday, March 9th, 2020
coronavirus

ಕೊಚ್ಚಿನ್ : ರವಿವಾರವಷ್ಟೇ ಕೇರಳದಲ್ಲಿ ಐವರಿಗೆ ತಗುಲಿದ್ದ ಕೊರೊನಾ ಸೋಂಕು ಇಂದು ಮತ್ತೊಂದು ಮಗುವಿಗೆ ತಾಗಿದೆ. ಇಟಲಿಗೆ ಹೋಗಿ ಬಂದಿದ್ದ ಕೇರಳದ ಮೂರು ವರ್ಷದ ಮಗುವಿಗೆ ಸೋಂಕು ಇರುವುದು ದೃಢಪಟ್ಟಿದೆ. ಸೋಮವಾರ ಈ ಹೊಸ ದೃಢಪಡುವ ಮೂಲಕ ಭಾರತದಲ್ಲಿ ಈ ಮಾರಣಾಂತಿಕ ಸೋಂಕಿತರ ಪ್ರಕರಣ 40ಕ್ಕೇರಿದೆ.ಶನಿವಾರ ತನ್ನ ಕುಟುಂಬಿಕರ ಜೊತೆಗೆ ಇಟಲಿಯಿಂದ ಕೊಚ್ಚಿನ್ ವಿಮಾನ ನಿಲ್ದಾಣಕ್ಕೆ ಈ ಮಗು ಮರಳಿತ್ತು. ಸದ್ಯ ಮಗುವನ್ನು ಐಸಲೋಶನ್ ವಾರ್ಡ್ ನಲ್ಲಿ ಇಡಲಾಗಿದೆ. ಮಗುವಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದಂತೆ ಅವರ ಕುಟುಂಬಿಕರನ್ನೂ […]

ಕೊರೊನಾ ವೈರಸ್ : ಸೌದಿ ಅರೇಬಿಯಾದಿಂದ ಆಗಮಿಸಿದ್ದ ವ್ಯಕ್ತಿ ಸಾವು

Monday, March 9th, 2020
coronavirus

ಕೋಲ್ಕತ್ತಾ : ಸೌದಿ ಅರೇಬಿಯಾದಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಜ್ವರದಿಂದ ಸಾವನ್ನಪ್ಪಿದ್ದು, ಕೊರೊನಾ ವೈರಸ್ ಗೆ ಭಾರತದ ಮೊದಲ ಬಲಿಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 33 ವರ್ಷದ ವ್ಯಕ್ತಿಯೋರ್ವ ಶನಿವಾರ ಕೋಲ್ಕತ್ತಾಗೆ ಬಂದಿಳಿದಿದ್ದ. ಆಗಲೇ ಈತ ಕಫ, ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಭಾನುವಾರ ಬೆಳಿಗ್ಗೆ ಈತ ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ನಾಲ್ಕು ಗಂಟೆಗೆ ಮೃತಪಟ್ಟಿದ್ದಾನೆ. ಈ ಬಗ್ಗೆ ಮಾತನಾಡಿದ ಅಲ್ಲಿನ ವೈದ್ಯಾಧಿಕಾರಿ, ನಾನವು ಆತನ ರಕ್ತದ ಮಾದರಿಯನ್ನು ಟೆಸ್ಟ್ ಗೆ ಕಳುಹಿಸಿದ್ದೇವೆ. ಈ ಸಾವಿನ ನಂತರ […]

ಕುಲಾಲ ಸಂಘ ಮೀರಾರೋಡ್-ವಿರಾರ್ ಸಮಿತಿಯ ಹಳದಿ ಕುಂಕುಮ

Monday, March 9th, 2020
mumbay

ಮುಂಬಯಿ : ಪುರುಷರು ವಿವಿಧ ರೀತಿಯಲ್ಲಿ ಮಹಿಳೆಯರಿಗೆ ಸಹಕರಿಸುತ್ತಿದ್ದರೂ, ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸುವ ಶಕ್ತಿ, ತಾಳ್ಮೆ ಮಹಿಳೆಯರಿಗಿದೆ. ಹಳದಿ ಕುಂಕುಮ ಕಾರ್ಯಕ್ರಮದ ಮೂಲಕ ಕುಲಾಲ ಸಮುದಾಯದ ಮಹಿಳೆಯರು ಹೆಚ್ಚಿಗೆ ಸಂಘಟಿತರಾಗುವಂತಾಗಿದೆ ಇದು ನಿರಂತರವಾಗಿ ಮುಂದುವರಿಯುತ್ತಿರಲಿ ಎಂದು ಕುಲಾಲ ಸಂಘ ಮುಂಬಯಿಯ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಸುಚಿತಾ ಬಂಜನ್ ನುಡಿದರು. ಮಾ. 1 ರಂದು ನಾಲಾಸೋಪಾರ (ಪ.) ಗ್ಯಾಲ್ಯಾಕ್ಷಿ ಹೊಟೇಲು ಸಭಾಗೃಹದಲ್ಲಿ ಜರಗಿದ ಕುಲಾಲ ಸಂಘ ಮೀರಾರೋಡ್-ವಿರಾರ್ ಸಮಿತಿಯ ಹಳದಿ ಕುಂಕುಮದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ಕರ್ನಾಟಕ ಆಶ್ರಯದಲ್ಲಿ ದುಬೈಯಲ್ಲಿ ರಕ್ತದಾನ ಶಿಬಿರ

Saturday, March 7th, 2020
dubay

ದುಬೈ : ನ್ಯೂ ಮಾರ್ಕ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ಮಂಗಳೂರು ಮತ್ತು ಕೊಂಕಣ್ಸ್ ಬೆಲ್ಸ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 06.03.2020 ನೇ ಶುಕ್ರವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈಯ ಲತೀಫಾ ಬ್ಲಡ್ ಡೊನೇಷನ್ ಸೆಂಟರ್ ನಲ್ಲಿ ಯಶಸ್ವಿಯಾಗಿ ನಡೆಯಿತು. ರಕ್ತ ದಾನ ಶಿಬಿರದಲ್ಲಿ ಒಟ್ಟು 70 ಮಂದಿ ಭಾಗವಹಿಸಿ ಹೆಸರು ನೋಂದಾಯಿಸಿದ್ದರು. ಕಾರಣಾಂತರಗಳಿಂದ 50 ಮಂದಿಗೆ ಮಾತ್ರ ರಕ್ತದಾನ ಮಾಡಲು ಸಾಧ್ಯವಾಯಿತು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ದುಬೈಯ ಲತೀಫಾ […]

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ನಿವಾಸದ ಮೇಲೆ ಇಡಿ ದಾಳಿ

Saturday, March 7th, 2020
ran-kapoor

ಮುಂಬೈ : ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ಹಾಗೂ ಮಾಜಿ ಸಿಇಒ ರಾಣಾ ಕಪೂರ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ. ನಷ್ಟದಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಷನ್(ಡಿಎಚ್ಎಫ್ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಇಡಿ ತಿಳಿಸಿದೆ. ಅಕ್ರಮ ಹಣ ವಹಿವಾಟು ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಕಪೂರ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ರಾಣಾ […]