ದೆಹಲಿ ಹಿಂಸಾಚಾರ : ಮೋರಿಯಲ್ಲಿ ಗುಪ್ತಚರ ಇಲಾಖೆ ಅಧಿಕಾರಿಯ ಶವ ಪತ್ತೆ

Wednesday, February 26th, 2020
Ankith-Sharma

ನವದೆಹಲಿ : ಪೌರತ್ವದ ಕಿಚ್ಚು ರಾಷ್ಟ್ರ ರಾಜಧಾನಿಯಲ್ಲಿ ಹೊತ್ತು ಉರಿಯುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆಗಾಗಿ ಸಿಎಂ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಈ ನಡುವೆ ಗುಪ್ತಚರ ಇಲಾಖೆ ಅಧಿಕಾರಿಯೊಬ್ಬರ ಶವವೊಂದು ದೆಹಲಿಯ ಮೋರಿಯಲ್ಲಿ ಪತ್ತೆಯಾಗಿದೆ. ಅಂಕಿತ್ ಶರ್ಮಾ ಸಾವನ್ನಪ್ಪಿದ ಅಧಿಕಾರಿಯಾಗಿದ್ದಾರೆ. ಉತ್ತರ ದೆಹಲಿಯ ಚಾಂದಭಾಗ್ನಲ್ಲಿ ಬೆಳಗ್ಗೆ ಇವರ ಶವ ಪತ್ತೆಯಾಗಿದೆ. ಮಂಗಳವಾರ ಅಂಕಿತ್ ಶರ್ಮಾ ಮನೆಗೆ ಹಿಂದಿರುಗುವಾಗ ಅವರ ಮೇಲೆ ಗುಂಪು ದಾಳಿ ನಡೆಸಿದೆ. ಈ ವೇಳೆ ಹಲ್ಲೆ ನಡೆಸಿ ಅವರನ್ನು ಹತ್ಯೆಗಯ್ಯಲಾಗಿದೆ. ಬಳಿಕ ದೇಹವನ್ನು ಮೋರಿಗೆ ಎಸೆಯಲಾಗಿದೆ […]

ನದಿಗೆ ಉರುಳಿ ಬಿದ್ದ ಬಸ್-ಮದುವೆಗೆ ಹೊರಟ 25 ಮಂದಿ ಮೃತ್ಯು

Wednesday, February 26th, 2020
rajasthan

ಕೋಟಾ : ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ನದಿಗೆ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಾಯಗೊಂಡಿರುವ ಘಟನೆ ಬುಧವಾರ ರಾಜಸ್ಥಾನದ ಬುಂದಿ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿ ಸಮೀಪ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಟಾ ಪ್ರದೇಶದಿಂದ ಬುಧವಾರ ಬೆಳಗ್ಗೆ ಸ್ವಾಮಿ ಮಾಧುಪುರ್ ನಲ್ಲಿ ನಡೆಯಲಿರುವ ಮದುವೆ ಸಮಾರಂಭಕ್ಕೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿರುವ ಘಟನೆ ಪಾಪ್ಡಿ ಗ್ರಾಮದ ಸಮೀಪ ನಡೆದಿದೆ […]

ಸರ್ಕಾರಿ ಶಾಲೆಯ ಶಿಕ್ಷಕ ಕ್ಲಾಸ್​ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Wednesday, February 26th, 2020
lal-bhagh

ಉತ್ತರಪ್ರದೇಶ : ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿಕ್ಷಕನೊಬ್ಬ ಶಾಲೆಯ ಕ್ಲಾಸ್ ರೂಮಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಲಾಲ್ಬಾಗ್ನಲ್ಲಿ ನಡೆದಿದೆ. ರವೀಂದ್ರ ಕುಮಾರ್ ಶುಕ್ಲಾ(49) ಹೆಸರಿನ ಶಿಕ್ಷಕ ಕೆಲವು ವರ್ಷಗಳಿಂದ ಲಾಲ್ಬಾಗ್ನ ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳವಾರದಂದು ಸರಿಯಾದ ಸಮಯಕ್ಕೆ ಶಾಲೆಗೆ ಬಂದಿದ್ದ ಅವರು ಪ್ರತಿದಿನದಂತೆ ತರಗತಿಗಳನ್ನು ನಡೆಸಿ, ಕೊನೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದಾರೆ. ವಿದ್ಯಾರ್ಥಿಗಳೆಲ್ಲ ಮನೆಗೆ ತೆರಳಿದ ನಂತರ ತರಗತಿಗಳ ಬಾಗಿಲನ್ನು ಹಾಕಿ ಬಂದಿದ್ದಾರೆ. ಆದರೆ ಮತ್ತೆ ತರಗತಿಯೊಳಗೆ […]

ದೆಹಲಿ ಹಿಂಸಾಚಾರ : ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿವಾಸದ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

Wednesday, February 26th, 2020
dehli

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು ಗಲಭೆ ಹತ್ತಿಕ್ಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದೆಹಲಿಯ ಜಾಫ್ರಾಬಾದ್‌, ಸೀಲಂಪುರ್ ಪ್ರದೇಶಗಳಲ್ಲಿ ನಡೆದ ಹಿಂಸಾಚಾರದಲ್ಲಿ 20 ಜನರು ಪ್ರಾಣ ಕಳೆದುಕೊಂಡಿದ್ದು 160 ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದೆಹಲಿಯ ಹಿಂಸಾಚಾರವನ್ನು ಹತ್ತಿಕ್ಕುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಹಾಗೂ ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರುವಲ್ಲಿ ದೆಹಲಿ ಸಿಎಂ ವಿಫಲರಾಗಿದ್ದಾರೆ ಎಂದು ಆರೋಪಿಸಿ […]

ದೆಹಲಿ ಹಿಂಸಾಚಾರದಲ್ಲಿ 76 ಮಂದಿಗೆ ಗಾಯ, ಸೆಕ್ಷನ್ 144 ಜಾರಿ

Tuesday, February 25th, 2020
dehali-himsachara

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರ ನಡುವೆ ನಡೆದ ಹಿಂಸಾಚಾರದಲ್ಲಿ 76 ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ದಿಲ್ಲಿಯ ಅತೀ ಸೂಕ್ಷ್ಮ ಪ್ರದೇಶಗಳಾದ ಜಾಫ್ರಾಬಾದ್, ಮೌಜ್ ಪುರ್, ಬಾಬರ್ ಪುರ್, ಗೋಕುಲ್ ಪುರಿ, ಜೋಹ್ರಿ ಎನ್ ಕ್ಷೇವ್ ಮ್ತು ಶಿವ ವಿಹಾರ್ ಪ್ರದೇಶಗಳಲ್ಲಿ ಭಾರೀ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ ಎಂದು ವರದಿ ವಿವರಿಸಿದೆ. ಅಮೆರಿಕ […]

ತಾಜ್ ಮಹಲ್​ಗೆ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಕುಟುಂಬ

Tuesday, February 25th, 2020
tahj-mahal

ಆಗ್ರಾ : ವಿಶ್ವದ ಅತ್ಯಂತ ಅಚ್ಚರಿಯ ಕಟ್ಟಡಳಗಳಲ್ಲೊಂದೆನಿಸಿದ ತಾಜ್ ಮಹಲ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತವರ ಕುಟುಂಬ ನಿನ್ನೆ ಭೇಟಿ ಕೊಟ್ಟಿತ್ತು. ತಾಜ್ ಮಹಲ್ನ ಭವ್ಯತೆ ಹಾಗೂ ಅದರ ಹಿಂದಿನ ಪ್ರೇಮಕಥೆಗೆ ಟ್ರಂಪ್ ಬೆಕ್ಕಸ ಬೆರಗಾದರು. ಟ್ರಂಪ್ಗೆ ಮಾರ್ಗದರ್ಶಕರಾಗಿ ಹೋಗಿದ್ದ ನಿತಿನ್ ಕುಮಾರ್ ಅವರು ಆ ಘಟನೆಯನ್ನು ಸ್ಮರಿಸಿಕೊಂಡಿದ್ದಾರೆ. “ತಾಜ್ ಮಹಲ್ನ ಇತಿಹಾಸವನ್ನು ತಿಳಿಸಿದೆ. ತಾಜ್ ಮಹಲ್ ಕಟ್ಟಿದ್ದರ ಹಿಂದಿನ ಕಥೆಯನ್ನೂ ಹೇಳಿದೆ. ಮೊಘಲ್ ದೊರೆ ಶಹಜಾನ್ ಮತ್ತು ಅವರ ಹೆಂಡತಿ ಮುಮ್ತಾಜ್ ಅವರ ಕಥೆ […]

ಮಹಾತ್ಮ ಗಾಂಧೀಜಿಯವರ ಸಬರಮತಿ ಆಶ್ರಮದಲ್ಲಿ ಚರಕ ಸುತ್ತಿ ಸಂಭ್ರಮಿಸಿದ ಡೊನಾಲ್ಡ್ ಟ್ರಂಪ್

Monday, February 24th, 2020
charaka

ಅಹಮದಾಬಾದ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪತ್ನಿ ಮೆಲಾನಿಯಾ ಮಹಾತ್ಮ ಗಾಂಧೀಜಿಯವರ ಸಬರಮತಿ ಆಶ್ರಮದಲ್ಲಿ ಚರಕವನ್ನು ಸುತ್ತಿ ಸಂಭ್ರಮಿಸಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಹೊರಟ ಟ್ರಂಪ್ ದಂಪತಿಯನ್ನು ಜನ ರಸ್ತೆಯಲ್ಲಿ ನಿಂತು ಸ್ವಾಗತಿಸಿದರು. 22 ಕಿ.ಮೀ ರೋಡ್ ಶೋ ಮುಗಿಸಿದ ಬಳಿಕ ಟ್ರಂಪ್ ಅವರಿದ್ದ ಕಾರು ಮಧ್ಯಾಹ್ನ 12.20ಕ್ಕೆ ಸಬರಮತಿ ಆಶ್ರಮಕ್ಕೆ ತಲುಪಿತು. ಟ್ರಂಪ್ ಕಾರು ಆಗಮಿಸುವ ಮೊದಲೇ ಪ್ರಧಾನಿ ಮೋದಿ ಸಬರಮತಿ ಆಶ್ರಮ ತಲುಪಿದ್ದರು. ಟ್ರಂಪ್ ದಂಪತಿ […]

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮನ : ಸ್ವಾಗತ ಕೋರಿದ ಪ್ರಧಾನಿ ನರೇಂದ್ರ ಮೋದಿ

Monday, February 24th, 2020
donald

ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಳಗ್ಗೆ 11.35ಕ್ಕೆ ಭಾರತಕ್ಕೆ ಆಗಮಿಸಿದರು. ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ಭವ್ಯ ಸ್ವಾಗತ ಕೋರಿದರು. ತಮ್ಮ ಕುಟುಂಬ ಸಮೇತ ಭಾರತಕ್ಕೆ ಆಗಮಿಸಿರುವ ಅವರ ಎರಡು ದಿನ ಇಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಈ ವೇಳೆ ಭಾರತ ಹಾಗೂ ಅಮೆರಿಕ ನಡುವೆ ಪ್ರಮುಖ ವ್ಯಾಪಾರ ಒಪ್ಪಂದ ನಡೆಯುವ ಸಾಧ್ಯತೆ ಇದೆ. ಗುಜರಾತ್ನ ಅಹ್ಮದಾಬಾದ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸಿದರು. […]

ಅನಂತ್ ನಾಗ್ ಜಿಲ್ಲೆಯ ಸಂಗಂ ಟೌನ್ ಬಳಿ ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನಾಪಡೆಗಳು

Saturday, February 22nd, 2020
sena-padegalu

ಜಮ್ಮು-ಕಾಶ್ಮೀರ : ಇಂದು ಮುಂಜಾನೆ ಅನಂತ್ ನಾಗ್ ಜಿಲ್ಲೆಯ ಸಂಗಂ ಟೌನ್ ಬಳಿಯಿರುವ ಗುಂಡ್ ಬಾಬಾ ಖಲೀಲ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಸೇನಾಪಡೆಗಳು ಹತ್ಯೆಗೈದಿವೆ. ಪೊಲೀಸರು, ಸಿಆರ್ ಪಿಎಫ್ ಪಡೆಗಳು ಹಾಗೂ ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರನೆಯಲ್ಲಿ ಲಷ್ಕರ್ ಏ ತೈಬಾ ಜೊತೆ ನಂಟು ಹೊಂದಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಮಾತ್ರವಲ್ಲದೆ ಸ್ಥಳದಲ್ಲಿದ್ದ ಏಕೆ-47, ಒಂದು ಪಿಸ್ತೂಲ್ , ಮದ್ದುಗುಂಡುಗಳು ಸೇರಿದಂತೆ ಹಲವು ಮ್ಯಾಗಜೀನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕಾಶ್ಮೀರ ವಲಯ ಪೊಲೀಸರು […]

ಉತ್ತರ ಪ್ರದೇಶದ ಸೋನ್​ಭದ್ರ ಜಿಲ್ಲೆಯಲ್ಲಿ 3,000 ಟನ್ ಚಿನ್ನದ ನಿಕ್ಷೇಪ ಪತ್ತೆ

Saturday, February 22nd, 2020
chinna

ಲಕ್ನೋ : ಉತ್ತರ ಪ್ರದೇಶದ ಸೋನ್ಭದ್ರ ಜಿಲ್ಲೆಯಲ್ಲಿ ಇತ್ತೀಚೆಗೆ 3,000 ಟನ್ ಚಿನ್ನದ ನಿಕ್ಷೇಪ ಪತ್ತೆಯಾಗಿತ್ತು. ಆ ಚಿನ್ನದ ನಿಕ್ಷೇಪವನ್ನು ಹರಾಜು ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ತಜ್ಞರ ಪ್ರಕಾರ, ಈ ಚಿನ್ನದ ಗಣಿಯ ಮೊತ್ತ ಭಾರತದ ಈಗಿನ ಚಿನ್ನದ ನಿಕ್ಷೇಪಗಳ ಮೌಲ್ಯಕ್ಕಿಂತ 5 ಪಟ್ಟು ಹೆಚ್ಚು. ಉತ್ತರ ಪ್ರದೇಶದ ಸೋನ್ ಪಹಾಡಿ ಮತ್ತು ಹಾರ್ಡಿ ಗ್ರಾಮ ಪ್ರದೇಶದಲ್ಲಿ ಸುಮಾರು 3,000 ಟನ್ ಚಿನ್ನದ ನಿಕ್ಷೇಪವಿದೆ ಎಂದು ಭಾರತೀಯ ಭೂ ಸರ್ವೇಕ್ಷಣೆ ಇಲಾಖೆ ಮತ್ತು ಉತ್ತರ ಪ್ರದೇಶ […]