ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಎನ್ ಕೌಂಟರ್ : ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ ಪೊಲೀಸರು

Monday, February 17th, 2020
dehali

ಹೊಸದಿಲ್ಲಿ : ಇಂದು ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ದಿಲ್ಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದ್ದು, ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಹತ್ಯೆಯಾದವರು. ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದೆ. ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ವರದಿಯ ಪ್ರಕಾರ, ಪೊಲೀಸರು […]

ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಲು ತೆಲಂಗಾಣ ಸರ್ಕಾರ ನಿರ್ಧಾರ

Monday, February 17th, 2020
CAA

ನವದೆಹಲಿ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ತೆಲಂಗಾಣ ಸರ್ಕಾರವು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ನಿರ್ಧರಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸುವುದಾಗಿ ಸಿಎಂ ಚಂದ್ರಶೇಖರ್ ರಾವ್ ಕಳೆದ ತಿಂಗಳು ಹೇಳಿದ್ದರು. ಕೇರಳ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶವಾದ […]

ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ನೇತೃತ್ವದ ಸರಕಾರ ಅಸ್ವಾಭಾವಿಕ, ಅವಾಸ್ತವಿಕದ್ದು : ಜೆ.ಪಿ. ನಡ್ಡಾ

Monday, February 17th, 2020
JP-Nadda

ಮುಂಬಯಿ : ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ನೇತೃತ್ವದಲ್ಲಿನ ಸರಕಾರ ಅಸ್ವಾಭಾವಿಕ, ಅವಾಸ್ತವಿಕ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಮುಂಬಯಿನಲ್ಲಿ ಪಕ್ಷದ ಕಾರ್ಯರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಎನ್‌ಸಿಪಿ- ಶಿವಸೇನೆ ಮೈತ್ರಿ ಕೂಟ ರಾಜ್ಯದ ಅಭಿವೃದ್ಧಿಗೆ ತಡೆಯಾಗಿದೆ ಎಂದು ದೂರಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಪಕ್ಷಕ್ಕೆ ಉತ್ತಮ ಸ್ಥಾನಗಳು ಬಂದಿದ್ದರೂ ಕೆಲವರ ವೈಯಕ್ತಿಕ ಹಿತಾಸಕ್ತಿಗಳಿಂದಾಗಿ ಸರಕಾರ ರಚನೆ ಸಾಧ್ಯವಾಗಿರಲಿಲ್ಲ. ಮುಂಬರುವ ಚುನಾವಣೆಗಾಗಿ ಪಕ್ಷ ಸ್ವಯಂ ಶಕ್ತಿಯಿಂದ ಸ್ಪರ್ಧಿಸಲು ಈಗಿನಿಂದಲೇ ಸಿದ್ಧಗೊಳ್ಳಬೇಕು. ‘ಬಿಜೆಪಿ ವರ್ಸಸ್‌ ಎಲ್ಲರೂ’ ಎಂಬಂಥ ಸ್ಪರ್ಧೆಗೆ ಅಣಿಯಾಗಬೇಕು. […]

ಗೂಬೆ ಹಿಡಿದು ಟಿಕ್ ಟಾಕ್ ಮಾಡಿದ ಯುವತಿಗೆ 25 ಸಾವಿರ ರೂ. ದಂಡ

Saturday, February 15th, 2020
tik-tok

ಗಾಂಧಿನಗರ : ಗೂಬೆ ಹಿಡಿದು ಟಿಕ್ ಟಾಕ್ ಮಾಡಿದ ಯುವತಿಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಘಟನೆ ಗುಜರಾತಿನ ಸೂರತ್‌ನಲ್ಲಿ ನಡೆದಿದೆ. ಸೂರತ್ ನಿವಾಸಿ ಕೀರ್ತಿ ಪಟೇಲ್ ದಂಡ ಪಾವತಿಸಿದ ಯುವತಿ. ಕೀರ್ತಿ ಪಟೇಲ್ ಇತ್ತೀಚೆಗೆ ಗೂಬೆ ಹಿಡಿದು ವಿಡಿಯೋ ಮಾಡಿ ತನ್ನ ಟಿಕ್ ಟಾಕ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.ಕೀರ್ತಿ ಪಟೇಲ್, ತನ್ನ ವಿಡಿಯೋದಲ್ಲಿ ಗೂಬೆಗಳನ್ನು ಮನುಷ್ಯನಿಗೆ ಹೋಲಿಕೆ ಮಾಡಿದ್ದಳು. ರಾತ್ರಿ ವೇಳೆ ಮಾತ್ರ ಗೂಬೆಗಳಿಗೆ […]

ದಯವಿಟ್ಟು ನಿಮ್ಮ ಹಣ ತೆಗೆದುಕೊಂಡುಬಿಡಿ : ವಿಜಯ್ ಮಲ್ಯ

Saturday, February 15th, 2020
vijay

ಲಂಡನ್ : ವಿವಿಧ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ ಸಾಲದ ಬಾಕಿ ಉಳಿಸಿಕೊಂಡು ಬ್ರಿಟನ್ ದೇಶಕ್ಕೆ ಹೋಗಿ ನೆಲಸಿರುವ ವಿಜಯ್ ಮಲ್ಯ ಈಗ ಬ್ಯಾಂಕುಗಳಿಗೆ ಹಣ ವಾಪಸ್ ಕೊಡುವುದಾಗಿ ಮತ್ತೊಮ್ಮೆ ಹೇಳಿದ್ಧಾರೆ. ವಿಜಯ್ ಮಲ್ಯ ಈ ಹಿಂದೆಯೂ ತಾನು ಬ್ಯಾಂಕುಗಳ ಬಾಕಿ ಹಣ ಹಿಂದಿರುಗಿಸುತ್ತೇನೆ ಎಂದು ಕೆಲ ಬಾರಿ ಹೇಳಿದ್ದುಂಟು. ನಿನ್ನೆ ಅವರು ಬ್ರಿಟನ್ ಉಚ್ಚ ನ್ಯಾಯಾಲಯದ ಬಳಿ ಈ ವಿಚಾರವನ್ನು ಅರಿಕೆ ಮಾಡಿಕೊಂಡಿದ್ದಾರೆ. ಭಾರತಕ್ಕೆ ಹಸ್ತಾಂತರಿಸಬೇಡಿ ಎಂದು ಅವರು ಬ್ರಿಟಿಷ್ ಹೈಕರ್ಟ್ಗೆ ಮನವಿ ಮಾಡಿಕೊಂಡಿದ್ದರು. ಅವರ […]

ಪುಲ್ವಾಮ ಕರಾಳ ದಿನ : ಹುತಾತ್ಮ ಯೋಧರ ಸ್ಮರಣಾರ್ಥ ಸ್ಮಾರಕ ಸ್ತಂಭ ಗೌರವ ಸಮರ್ಪಣೆ

Friday, February 14th, 2020
pulwama

ಶ್ರೀನಗರ : ಪುಲ್ವಾಮದಲ್ಲಿ 2019 ಫೆ .14ರಂದು ನಡೆದಿದ್ದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಸ್ಮಾರಕ ಸ್ತಂಭ ಸಮರ್ಪಣೆ ಮೂಲಕ ಕೇಂದ್ರ ಮೀಸಲು ಪೊಲೀಸ್ ಪಡೆ ಗೌರವ ಸಲ್ಲಿಸಲಿದೆ. ಪುಲ್ವಾಮದ ಲೆಟ್ ಪೋರಾ ಎಂಬಲ್ಲಿರುವ ಸಿಆರ್ ಪಿ ಎಫ್ ತರಭೇತಿ ಕೇಂದ್ರದಲ್ಲಿ ಇಂದು ನಡೆಯುವ ಸಮಾರಂಭದಲ್ಲಿ ಸಿಆರ್ ಪಿ ಎಫ್ ವಿಶೇಷ ಮಹಾ ನಿರ್ದೇಶಕಜೂಲ್ಫಿಕರ್ ಹಸನ್, ಕಾಶ್ಮೀರ ವಲಯದ ಪೊಲೀಸ್ ಮಹಾ ನಿರ್ದೇಶಕ ರಾಜೇಶ್ ಕುಮಾರ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸ್ತಂಭದ ಮೇಲೆ […]

ಲಕ್ನೋ ನ್ಯಾಯಾಲಯದ ಆವರಣದಲ್ಲಿ ಸಜೀವ ಬಾಂಬ್​ ಸ್ಫೋಟ : ಹಲವರಿಗೆ ಗಾಯ

Thursday, February 13th, 2020
lacknow

ಉತ್ತರ ಪ್ರದೇಶ : ವಕೀಲರನ್ನು ಗುರಿಯಾಗಿಸಿಕೊಂಡು ಲಕ್ನೋ ನ್ಯಾಯಾಲಯದಲ್ಲಿ ಸಜೀವ ಬಾಂಬ್ ಸ್ಪೋಟಿಸಲಾಗಿದ್ದು, ಘಟನೆಯಲ್ಲಿ ಅನೇಕ ವಕೀಲರು ಗಾಯಗೊಂಡಿದ್ದಾರೆ. ಬಾಂಬ್ ಸ್ಪೋಟ ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗಾಯಗೊಂಡ ವಕೀಲರನ್ನು ತಕ್ಷಣಕ್ಕೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಸಿರ್ಗಂಜ್ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದರು. ಈ ವೇಳೆ ಮೂರು ಸಜೀವ ಬಾಂಬ್ ಪತ್ತೆಯಾಗಿದೆ. ಇಲ್ಲಿನ ಜಿಲ್ಲಾ ನ್ಯಾಯಾಲಯದ ವಕೀಲ ಸಂಜೀವ್ ಲೋದಿ ಅವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ […]

ಭೀಕರ ಅಪಘಾತ ಬಸ್ ಗೆ ಢಿಕ್ಕಿ ಹೊಡೆದ ಟ್ರಕ್ : 13 ಜನರು ಮೃತ್ಯು, 31 ಮಂದಿ ಗಂಭೀರ

Thursday, February 13th, 2020
uttara-pradesha

ಉತ್ತರಪ್ರದೇಶ : ಆಗ್ರಾ -ಲಕ್ನೋ ಹೆದ್ದಾರಿಯಲ್ಲಿ ಟ್ರಕ್ ಒಂದು ಬಸ್ ಗೆ ಢಿಕ್ಕಿ ಹೊಡೆದ ತೀವ್ರತೆಗೆ 13 ಜನರು ದಾರುಣವಾಗಿ ಸಾವನ್ನಪ್ಪಿ 31 ಜನರು ಗಂಭೀರ ಗಾಯಗೊಂಡ ಘಟನೆ ಫಿರೋಜಾಬಾದ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಗಾಯಗೊಂಡ ವ್ಯಕ್ತಿಗಳನ್ನು ಇತವಾಹಹ್ ನಲ್ಲಿರುವ ಸೈಫೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ರಾತ್ರಿ 10 ಗಂಟೆಯ ವೇಳೆ ಈ ಭೀಕರ ಅಪಘಾತ ಸಂಭವಿಸಿದ್ದು ಸಾವೀನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ, ದೆಹಲಿಯಿಂದ ಮೊತಿರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್ […]

ದ್ವೇಷ, ವಿಭಜಕ ರಾಜಕಾರಣ ಮಾಡುವವರಿಗೆ ದೆಹಲಿ ಫಲಿತಾಂಶ ತಕ್ಕ ಉತ್ತರ : ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

Tuesday, February 11th, 2020
mamatha

ಕೋಲ್ಕತಾ : ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದಾಖಲಿಸಿರುವ ಗೆಲುವು ಪ್ರಜಾಪ್ರಭುತ್ವದ ಗೆಲುವು, ದ್ವೇಷದ ಮತ್ತು ವಿಭಜಕ ರಾಜಕಾರಣ ಮೇಲೆ ನಂಬಿಕೆ ಇಟ್ಟಿರುವ ರಾಷ್ಟ್ರೀಯ ನಾಯಕರಿಗೆ ತಕ್ಕ ಉತ್ತರ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು ಆಮ್ ಆದ್ಮಿ ಪಕ್ಷ ಮೂರನೇ ಭಾರಿಗೆ ಭರ್ಜರಿ ಗೆಲುವು ದಾಖಲಿಸಿದೆ. ಅರವಿಂದ ಕೇಜ್ರಿವಾಲ್ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಟ್ವಿಟರ್ನಲ್ಲಿ ಪ್ರಶಂಶೆ ವ್ಯಕ್ತಪಡಿಸಿರುವ […]

ಶಬರಿಮಲೆ ಅಯ್ಯಪ್ಪಸ್ವಾಮಿ ದೇವರ ಆಭರಣಗಳ ಪಟ್ಟಿ ತಯಾರಿಸಲು ಆದೇಶ

Saturday, February 8th, 2020
ayyappa

ನವದೆಹಲಿ : ಕೇರಳದ ಪಂದಳಂ ರಾಜಮನೆತನದ ಆಂತರಿಕ ಕಲಹಗಳಿಂದಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇವರ ಆಭರಣಗಳ ಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಅಯ್ಯಪ್ಪಸ್ವಾಮಿಗೆ ಸೇರಿರುವ ಎಲ್ಲ ಆಭರಣಗಳ ಸಮಗ್ರ ಪಟ್ಟಿ ತಯಾರಿಸಲು ಆದೇಶಿಸಿದೆ. ಕೇರಳ ಹೈಕೋರ್ಟ್ನ ನಿವೃತ್ತ ಜಡ್ಜ್ ಸಿ.ಎನ್. ರಾಮಚಂದ್ರನ್ ನಾಯರ್ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದ್ದು, ನಾಲ್ಕು ವಾರದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಕೋರ್ಟ್ ಶುಕ್ರವಾರ ಆದೇಶಿಸಿದೆ. ದೇವರ ಆಭರಣಗಳ ಉಸ್ತುವಾರಿ ಮತ್ತು ದೇವಸ್ಥಾನ ಆಡಳಿತಕ್ಕಾಗಿ ಸಮಿತಿ ನೇಮಿಸುವಂತೆ ಕೋರಿ ಪಂದಳಂ ರಾಜಮನೆತನದ ಕೆಲವರು […]