ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಬಂಧನ ಅವಧಿ ಮುಂದುವರಿಕೆ

Friday, February 7th, 2020
omar

ಶ್ರೀನಗರ : ಕಳೆದ ಆರು ತಿಂಗಳಿಂದ ಗೃಹ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರ ಬಂಧನ ಅವಧಿಯನ್ನು ಮುಂದುವರಿಸಲಾಗಿದೆ. ಉಭಯರ ಬಂಧನದ ಅವಧಿ ಮುಗಿಯಲು ಕೆಲವೇ ಗಂಟೆಗಳಿರುವಾಗ ಸಾರ್ವಜನಿಕ ಸುರಕ್ಷತಾ ಕಾಯ್ದೆ ಹೇರಿ ಅವರ ಬಂಧನ ಅವಧಿ ವಿಸ್ತರಿಸಲಾಗಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಸಂದರ್ಭದಲ್ಲಿ ಭದ್ರತೆಯ ದೃಷ್ಟಿಯಿಂದ ಇವರಿಬ್ಬರನ್ನೂ ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಗುರುವಾರ ರಾತ್ರಿ ಒಮರ್ ಮನೆಗೆ ಮೆಜುಸ್ಟ್ರೇಟ್ ಒಬ್ಬರು ಪೊಲೀಸ್ ಅಧಿಕಾರಿಗಳೊಂದಿಗೆ […]

ಮುಂದಿನ ಬಾರಿಗೆ ಜನರು ಅಧಿಕಾರ ನೀಡಿದರೆ ದೆಹಲಿ ವಾಯು ಮಾಲಿನ್ಯ ನಿಯಂತ್ರಿಸುತ್ತೇವೆ : ಮುಖ್ಯಮಂತ್ರಿ ಕೇಜ್ರಿವಾಲ್​

Thursday, February 6th, 2020
aravind

ನವದೆಹಲಿ : ಮೊದಲ ಅವಧಿಯ ಆಡಳಿತದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ರಕ್ಷಣೆಗೆ ಆದ್ಯತೆ ನೀಡಿದ ನಮ್ಮ ಸರ್ಕಾರ ಮುಂದಿನ ಅವಧಿಯಲ್ಲಿ ಅಧಿಕಾರಕ್ಕೆ ಬಂದರೆ ಸ್ವಚ್ಛತೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನಮ್ಮ ಪಕ್ಷ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಚಾರ ಮಾಡುತ್ತಿದ್ದರೆ. ಬಿಜೆಪಿ ನಿಂದನೆ ಹಾಗೂ ಹಿಂಸಾಚಾರದ ವಿಚಾರದ ಮೂಲಕ ಮತ ಯಾಚಿಸುತ್ತಿದೆ ಎಂದು ಅವರು ಅಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗೆ ಅಭಿವೃದ್ಧಿ ಬೇಕಿಲ್ಲ. ಅವರಿಗೆ ಹಿಂದು ಹಾಗೂ ಮುಸ್ಲಿಮರ ಬಗ್ಗೆ […]

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ : ರಜನಿಕಾಂತ್

Wednesday, February 5th, 2020
rajanikanth

ಚೆನ್ನೈ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಈ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಯಾವುದೇ ಪ್ರಜೆಗೂ ತೊಂದರೆ ಇಲ್ಲ. ಒಂದು ವೇಳೆ ಇದರಿಂದ ಮುಸ್ಲಿಮರಿಗೆ ತೊಂದರೆ ಆದರೆ ಇದರ ಬಗ್ಗೆ ಧ್ವನಿ ಎತ್ತುವ ಮೊದಲ ವ್ಯಕ್ತಿ ನಾನೇ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ನಡೆಯಲಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರ ಮಾತನಾಡಿರುವ […]

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಟ್ರಸ್ಟ್​ ರಚನೆ : ಪ್ರಧಾನಮಂತ್ರಿ ನರೇಂದ್ರ ಮೋದಿ

Wednesday, February 5th, 2020
modi

ನವದೆಹಲಿ : ಅಯೋಧ್ಯೆಯ ವಿವಾದಿತ ಜಾಗವನ್ನು ರಾಮ್ಲಲ್ಲಾಗೆ ನೀಡಿ ಕಳೆದ ವರ್ಷ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ಮೂಲಕ ಶತಮಾನಗಳ ಹಿಂದಿನ ಬಾಬ್ರಿ ಮಸೀದಿ- ರಾಮಜನ್ಮಭೂಮಿ ವಿವಾದಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಟ್ರಸ್ಟ್ ರಚಿಸುವುದಾಗಿ ಸಂಸತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ಈ ಬಗ್ಗೆ ಸಂಸತ್ ಅಧಿವೇಶನದಲ್ಲಿ ಘೋಷಣೆ ಮಾಡಿರುವ ಪ್ರಧಾನಿ ಮೋದಿ, ‘ ಅಯೋಧ್ಯೆ ಟ್ರಸ್ಟ್ ರಚಿಸುವ ಬಗ್ಗೆ ಇಂದು ಬೆಳಗ್ಗೆ ನಡೆದ ಸಂಪುಟ ಸಭೆಯಲ್ಲಿ ನಾವೆಲ್ಲರೂ […]

ಭಾರತ್ ಬ್ಯಾಂಕ್ – ಜಯಂತ್ ಎನ್ ಪೂಜಾರಿ ಸೇವಾ ನಿವೃತ್ತಿ

Tuesday, February 4th, 2020
bharat-bank

ಮುಂಬಯಿ : ಕಳೆದ 33ವರ್ಷಗಳಿಂದ ಭಾರತ್ ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದು ಇದೀಗ ಬ್ಯಾಂಕ್ ನ ಬಾಂಡುಪು ವಿಲೇಜ್ ಶಾಖೆಯಲ್ಲಿ ಹಿರಿಯ ಪ್ರಭಂದಕರಾಗಿ ಸೇವೆ ಸಲ್ಲಿಸುತ್ತಿದ್ದ ಸೆವಾನಿವೃತ್ತರಾಗಿದ್ದು ಜ. 31ರಂದು ಇವರನ್ನು ಗೌರವಿಸಿ ವಿದಾಯವನ್ನು ನೀಡುವ ಕಾರ್ಯಕ್ರಮವು ಬ್ಯಾಂಕಿನ ಗೋರೆಗಾಂವ್ ಕೇಂದ್ರ ಕಚೇರಿಯಲ್ಲಿ ಜರಗಿತು. ಈ ಸಮಾರಂಭದಲ್ಲಿ ಭಾರತ್ ಬ್ಯಾಂಕ್ ನ ಆಡಳಿತ ನಿರ್ದೇಶಕ ಸಿ. ಆರ್. ಮೂಲ್ಕಿ, ಮುಖ್ಯ ಮಹಾ ಪ್ರಭಂದಕ ವಿದ್ಯಾನಂದ ಎಸ್ ಕರ್ಕೇರ, ಇತರ ಉನ್ನತಾಧಿಕಾರಿಗಳಾದ ದಿನೇಶ್ ಬಿ. ಸಾಲ್ಯಾನ್, ನಿತ್ಯಾನಂದ ಎಸ್. […]

ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಶೀಘ್ರವೇ ಗಲ್ಲಿಗೇರಿಸಬೇಕು : ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

Tuesday, February 4th, 2020
venkayya-naidu

ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣ ಅಪರಾಧಿಗಳನ್ನು ಶೀಘ್ರವಾಗಿ ಮರಣದಂಡನೆಗೆ ಗುರಿಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಶಾಸಕ ಸಂಜಯ್ ಸಿಂಗ್ ನೀಡಿರುವ ಹೇಳಿಕೆಗೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಧ್ವನಿಗೂಡಿಸಿದ್ದಾರೆ. ನಾಲ್ವರನ್ನು ಶೀಘ್ರವೇ ಗಲ್ಲಿಗೇರಿಸಲು ಜವಾಬ್ದಾರಿ ಹೊಂದಿರುವ ಎಲ್ಲ ಸಂಸ್ಥೆಗಳು ತಮ್ಮ ಕರ್ತವ್ಯವನ್ನು ಅಂತಿಮಗೊಳಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಅಪರಾಧಿಗಳನ್ನು ಕ್ಷಮಿಸಲು ಸಾಧ್ಯವಿಲ್ಲ. ರಾಷ್ಟ್ರದ ಜನರು ಕೂಡ ಇದನ್ನು ಒಪ್ಪುವುದಿಲ್ಲ. ಅಪರಾಧಿಗಳಿಗೆ ಎಲ್ಲ ರೀತಿಯ ಕಾನೂನು ನೆರವು […]

ಕೇಂದ್ರದ ಬಜೆಟ್​ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ.; ಮಕ್ಕಳ ಕಲ್ಯಾಣಕ್ಕೂ ಹೆಚ್ಚಿನ ಆದ್ಯತೆ : ನಿರ್ಮಲಾ ಸೀತಾರಾಮನ್

Saturday, February 1st, 2020
nirmala-sitaraman

ನವದೆಹಲಿ : ಬಜೆಟ್ ಮಂಡನೆಯ ಆರಂಭದಲ್ಲೇ ಯುವಜನರ ಉದ್ಯೋಗ, ಮಹಿಳೆಯರ ಸಬಲೀಕರಣ, ಮಕ್ಕಳ ಕಲ್ಯಾಣಕ್ಕೆ ಆದ್ಯತೆ ನೀಡಿರುವುದಾಗಿ ಘೋಷಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಕಲ್ಯಾಣಕ್ಕಾಗಿ 28,600 ಕೋಟಿ ರೂ. ಮೀಸಲಿಟ್ಟಿದ್ದಾರೆ. ಈ ಬಾರಿಯ ಕೇಂದ್ರದ ಬಜೆಟ್ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ. ಮೀಸಲಿಡಲಾಗಿದೆ. ಗರ್ಭಿಣಿಯರ ಸಾವನ್ನು ತಡೆಗಟ್ಟಲು ಹೆಚ್ಚಿನ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಹೊಸ ಟಾಸ್ಕ್ಫೋರ್ಸ್ ರಚಿಸಲಾಗುವುದು. ಅಂಗನವಾಡಿಗಳ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಲಾಗುವುದು ಎಂದು ಬಜೆಟ್ನಲ್ಲಿ ವಿತ್ತ ಸಚಿವೆ […]

ನಿರ್ಭಯಾ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕಾರ

Saturday, February 1st, 2020
vinay-sharma

ನವದೆಹಲಿ : ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಬೆಳಿಗ್ಗೆ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರು. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಶನಿವಾರ ಮುಂಜಾನೆ ಗಲ್ಲು ಶಿಕ್ಷೆ ನೀಡುವ ಬಗ್ಗೆ ಡೆತ್ ವಾರಂಟ್ ಹೊರಡಿಸಲಾಗಿತ್ತು. ಆದರೆ ಪಾಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಸಂಜೆ ತಡೆಯಾಜ್ಷೆ ನೀಡಿತ್ತು. 2012ರ ಡಿಸೆಂಬರ್ 16ರಂದು ದೆಹಲಿಯ ವೈದ್ಯಕೀಯ […]

ಅಂಗಡಿ ಬಾಗಿಲನ್ನು ಮುಚ್ಚಿಸಲು ಯತ್ನಿಸಿದ ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಖಾರದಹುಡಿ ಎರಚಿದ ಮಹಿಳೆ

Thursday, January 30th, 2020
yavatnal

ಮುಂಬೈ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನಾಕಾರರು ಅಂಗಡಿಯೊಂದರ ಬಾಗಿಲನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದಾಗ ಮಾಲಕಿ ಖಾರದ ಪುಡಿಯನ್ನು ಎರಚಿದ ಘಟನೆ ಯವತ್ಮಾಲ್ ಎಂಬಲ್ಲಿ ನಡೆದಿದೆ. ಸಿಎಎ, ಎನ್ ಸಿಆರ್, ಎನ್ ಆರ್ ಪಿ ವಿರೋಧಿಸಿ ವಿವಿಧ ಸಂಘಟನೆಗಳು ಮುಂಬೈನಲ್ಲಿ ಬಂದ್ ಗೆ ಕರೆ ನೀಡಿದ್ದವು. ಈ ವೇಳೆ ರಸ್ತೆಗಿಳಿದಿದ್ದ ಪ್ರತಿಭಟನಾಕಾರರು ಅಂಗಡಿಯೊಂದರ ಬಾಗಿಲನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದ್ದಾರೆ. ಈ ವೇಳೆ ಅಂಗಡಿ ಮಾಲಕಿ ಮತ್ತು ಪ್ರತಿಭಟನಾಕಾರರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಆದರೂ […]

ಹೊಸ ವಾದದೊಂದಿಗೆ ಸುಪ್ರೀಂ ಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿರುವ ನಿರ್ಭಯಾ ಅಪರಾಧಿ ಅಕ್ಷಯ್ ಸಿಂಗ್

Thursday, January 30th, 2020
akshay-singh

ನವದೆಹಲಿ : ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಅಕ್ಷಯ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಮತ್ತೋರ್ವ ಅಪರಾಧಿ ವಿನಯ್ ಶರ್ಮಾ ಮತ್ತೆ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಬುಧವಾರವಷ್ಟೇ ಅರ್ಜಿ ಸಲ್ಲಿಸಿದ್ದಾನೆ. ಮತ್ತೋರ್ವ ಅಪರಾಧಿ ಮುಖೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಜಸ್ಟಿಸ್ ಎನ್ ವಿ ರಮಣ ನೇತೃತ್ವದ ಪಂಚ ಸದಸ್ಯರ ಪೀಠದ ಮುಂದೆ ಇಂದು […]