ಅಪರಾಧಿ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾ : ಗಲ್ಲು ಶಿಕ್ಷೆ ಖಾಯಂ

Wednesday, January 29th, 2020
mukesh

ಹೊಸದಿಲ್ಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಮುಕೇಶ್ ಕುಮಾರ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಲಾಗಿದೆ. ನ್ಯಾ.ಆರ್ ಭಾನುಮತಿ ನೇತೃತ್ವದ ಮೂವರು ನ್ಯಾಯಾಧೀಶರನ್ನು ಒಳಗೊಂಡ ಪೀಠ, ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡಿದರೆಂದರೆ ಅವರು ಅರ್ಜಿಯ ಬಗ್ಗೆ ಕಡೆಗಣಿಸಲಾಗಿದೆ ಎಂದಲ್ಲ. ಆ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳಲ್ಲಿ ನೀಡಲಾಗಿರುವ ತೀರ್ಪಿನ ಪ್ರತಿಯನ್ನು ರಾಷ್ಟ್ರಪತಿಗಳ ಮುಂದಿಡಲಾಗಿತ್ತು ಎಂದಿದೆ. ಸರಿಯಾದ ಆಧಾರವಿಲ್ಲದ ಕಾರಣ ಅಪರಾಧಿ ಮುಕೇಶ್ […]

ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆ

Wednesday, January 29th, 2020
saina

ನವದೆಹಲಿ : ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪಿಗೆ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ, ನಾನು ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು. ನಾನು ದೇಶಕ್ಕಾಗಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದೇನೆ. ನಾನು ಕಠಿಣ ಪರಿಶ್ರಮ ಪಡುವ ವ್ಯಕ್ತಿಯಾಗಿದ್ದು, ಕಠಿಣ ಪರಿಶ್ರಮ ಪಡುವ ವ್ಯಕ್ತಿಗಳನ್ನು ನಾನು ಇಷ್ಟ ಪಡುತ್ತೇನೆ. ಪ್ರಧಾನಿ ನರೇಂದ್ರ […]

ಮುಖಾಮುಖಿ ಢಿಕ್ಕಿಯಾಗಿ ರಸ್ತೆ ಬದಿಯ ಬಾವಿಗೆ ಬಿದ್ದ ಸರಕಾರಿ ಬಸ್-ಅಟೋ : 20 ಜನರ ದುರ್ಮರಣ

Wednesday, January 29th, 2020
bus

ಮುಂಬೈ : ಸರಕಾರಿ ಬಸ್ ಮತ್ತು ಅಟೋಗಳು ಮುಖಾಮುಖಿ ಢಿಕ್ಕಿಯಾಗಿ ಎರಡೂ ವಾಹನಗಳು ರಸ್ತೆಬದಿಯ ಬಾವಿಗೆ ಬಿದ್ದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಮಂಗಳವಾರ ಸಂಜೆಯ ವೇಳೆಗೆ ನಡೆದ ಈ ಭೀಕರ ಅಪಘಾತದಲ್ಲಿ ಸುಮಾರು 20 ಜನರು ಮೃತಪಟ್ಟಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಮತ್ತು ಅಟೋ ನಡುವೆ ಮುಖಾಮುಖಿ ಡಿಕ್ಕಿ ನಡೆದಿದೆ. ನಂತರ ಬಸ್ ಮತ್ತು ಆಟೋ ಬಾವಿಯೊಳಗೆ ಬಿದ್ದಿದೆ. ಬಸ್ ಚಾಲಕನ ಅಜಾಗರೂಕತೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಸುಮಾರು 18 ಮಂದಿ […]

ಶಂಕಿತ ಕೊರೊನಾ ವೈರಸ್ ಸೋಂಕಿಗೆ ಥೈಲ್ಯಾಂಡ್​ ಮೂಲದ ಮಹಿಳೆ ಕೋಲ್ಕತ್ತಾದಲ್ಲಿ ಮೃತ್ಯು

Wednesday, January 29th, 2020
vairas

ಪಶ್ಚಿಮ ಬಂಗಾಳ : ಶಂಕಿತ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರು ಎನ್ನಲಾದ ವಿದೇಶಿ ಮಹಿಳೆಯೊಬ್ಬರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಕೊರೊನಾ ವೈರಸ್ ಹೋಲುವ ಲಕ್ಷಣಗಳಾದ ಹೊಟ್ಟೆ ನೋವು, ವಾಕರಿಕೆ ಹಾಗೂ ಜ್ವರದಿಂದ ಬಳಲುತ್ತಿದ್ದ ಥೈಲ್ಯಾಂಡ್ ಮೂಲದ 32 ವರ್ಷ ವಯಸ್ಸಿನ ಮಹಿಳೆಯೊಬ್ಬರು ಜನವರಿ 21ರಂದು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಇನ್ನು ಇವರ ಸಾವಿನ ಸಂಬಂಧ ಥಾಯ್ ಕಾನ್ಸುಲೇಟ್ ಜನರಲ್ಗೆ ಮಾಹಿತಿ ನೀಡಲಾಗಿದ್ದು, ಮೃತಳ ಎಲ್ಲಾ ರೀತಿಯ […]

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಯ ವಾರ್ಷಿಕೋತ್ಸವ

Tuesday, January 28th, 2020
mumbai

ಮುಂಬಯಿ : ಸಂಘದಲ್ಲಿ ಹಣ ಇದ್ದಲ್ಲಿ ಅಲ್ಲಿ ಶಕ್ತಿ ಪ್ರದರ್ಶನವಿರುವುದು ಸಾಮಾನ್ಯ. ದುಡ್ಡು ಇದ್ದಲ್ಲಿ ಅಲ್ಲಿ ಚುಣಾವಣೆಯೂ ನಡೆಯುತ್ತದೆ. ಆದರೆ ಬಗ್ವಾಡಿಯಲ್ಲಿ ಹಾಗಲ್ಲ. ದೇವರ ಅನುಗ್ರಹದಿಂದ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಯು ಶಕ್ತಿ ಶಾಲಿಯಾಗಿ ಬೆಳೆಯಲಿ ಎಂದು ಮೊಗವೀರ ಸಮುದಾಯದ ಖ್ಯಾತ ಉದ್ಯಮಿ ಹಾಗೂ ದಾನಿ ನಾಡೋಜ ಡಾ. ಜಿ. ಶಂಕರ್ ಅಭಿಪ್ರಾಯಪಟ್ಟರು. ಜ. 25 ರಂದು ಅಂದೇರಿ ಪಶ್ಚಿಮ ಎಂ. ವಿ. ಮಂಡಳಿಯ ಶ್ರೀಮತಿ ಶಾಲಿನಿ ಜಿ. ಶಂಕರ್ ಸಭಾಗೃಹದಲ್ಲಿ ಜರಗಿದ […]

ಭೂಗತ ಪಾತಕಿ ಛೋಟಾ ರಾಜನ್‌ ವಿರುದ್ಧ ನಾಲ್ಕು ಪ್ರಕರಣಗಳ ತನಿಖೆ

Thursday, January 23rd, 2020
khotaa

ನವದೆಹಲಿ : ಭೂಗತ ಪಾತಕಿ ಛೋಟಾ ರಾಜನ್‌ ಅವರ ಪಾತ್ರವಿದೆಯೆನ್ನಲಾದ, ನಾಲ್ಕು ಪ್ರಕರಣಗಳ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. 1997ರಲ್ಲಿ ಪತ್ರಕರ್ತ ಬಲ್ಜೀತ್‌ ಶೆರ್ಸಿಂಗ್‌ ಪರ್ಮಾರ್‌ ಕೊಲೆಯತ್ನವೂ ಇದರಲ್ಲಿದೆ. ಸದ್ಯ ಛೋಟಾ ರಾಜನ್‌ ಬಂಧನದಲ್ಲಿ ಇದ್ದಾನೆ. 2015ರಲ್ಲಿ ಆತ ನನ್ನು ಇಂಡೋನೇಷ್ಯಾದಲ್ಲಿ ಬಂಧಿಸಿ ಭಾರತಕ್ಕೆ ಗಡೀಪಾರು ಮಾಡಲಾಗಿತ್ತು.1995ರಲ್ಲಿ ಮುಂಬಯಿ ಉದ್ಯಮಿ ದೇವಾಂಗ್‌ ಬಿಪಿನ್‌ ಪಾರೀಖ್‌ರಿಂದ 20 ಲಕ್ಷ ರೂ., 1998 ರಲ್ಲಿ 25 ಲಕ್ಷ ರೂ.ವಸೂಲು ಮಾಡಿದ ಪ್ರಕರಣವನ್ನು ಕೈಗೆತ್ತಿಕೊಂಡಿದೆ.  

ಭಾರತ ಮತ್ತು ನೇಪಾಲ ನಡುವಿನ ಬಾಂಧವ್ಯ ಬಲಪಡಿಸಲು ನಿರ್ಧಾರ

Wednesday, January 22nd, 2020
bharata-nepala

ಕಠ್ಮಂಡು : ಭಾರತ ಮತ್ತು ನೇಪಾಲ ತಮ್ಮ ನಡುವಿನ ಬಾಂಧವ್ಯ ಮತ್ತಷ್ಟು ಬಲಪಡಿಸಲು ನಿರ್ಧರಿಸಿವೆ. 140 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಜೋಗ್ಬನಿ-ಬಿರಾಟ್‌ನಗರ ಏಕೀಕೃತ ಚೆಕ್‌ಪೋಸ್ಟ್‌ ಅನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಜಂಟಿಯಾಗಿ ವೀಡಿಯೋ ಕಾನ್ಫರೆನ್ಸಿಂಗ್‌ ಮೂಲಕ ಉದ್ಘಾಟಿಸಿದ್ದಾರೆ. ಕೇಂದ್ರ ಸರಕಾರದ ನೆರವಿನಿಂದ ಅದನ್ನು ನಿರ್ಮಿಸಲಾಗಿದೆ. ಅದು 260 ಎಕರೆ ಜಮೀನಿನಲ್ಲಿ ಹರಡಿ ಕೊಂಡಿದ್ದು, 500 ಟ್ರಕ್‌ಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. 2018ರಲ್ಲಿ ರಕ್ಸಾಲ್‌-ಬಿರ್ಗುಂಜ್‌ನಲ್ಲಿ ಮೊದಲ ಏಕೀಕೃತ […]

ಇಂದು ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ

Monday, January 20th, 2020
jp nadda

ನವದೆಹಲಿ : ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ. ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ ಅವರು ನಿರ್ಗಮನ ಅಧ್ಯಕ್ಷರಾಗಿರುವ ಅಮಿತ್ ಶಾ ಅವರಂತೆಯೇ ಸಂಘಟನಾ ಚತುರ ಎಂದೇ ಪಕ್ಷದೊಳಗೆ ಗುರುತಿಸಲ್ಪಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೇ ನಡ್ಡಾ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪರಮಾಪ್ತರಾಗಿದ್ದಾರೆ. ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಕಳೆದ ಲೋಕಸಭಾ ಚುನಾವಣೆಯ ಬಳಿಕ ಪ್ರಧಾನಿ […]

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವು; 30 ಮಂದಿ ಗಂಭೀರ

Monday, January 20th, 2020
jalli-kallu

ಚೆನ್ನೈ : ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಧುರೈನ ಅವನಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅದರಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಒಂದು ಹೋರಿಯೂ ಮೃತಪಟ್ಟಿದೆ ಎನ್ನಲಾಗಿದೆ. ಅವನಿಪುರಂನ ಸೈಂಟ್ ಅಂಥೋನಿ ಚರ್ಚ್ ಫೆಸ್ಟಿವಲ್ ಸಹಯೋಗದೊಂದಿಗೆ ಈ ಜಲ್ಲಿಕಟ್ಟು ಕ್ರೀಡೆ ಆಯೋಜಿಸಲಾಗಿತ್ತು. ಸಚಿವ ಜೆ. ಭಾಸ್ಕರನ್ ಮತ್ತು ಜಿಲ್ಲಾಧಿಕಾರಿ ಜಯಕಾಂತನ್ ಪಾಲ್ಗೊಂಡಿದ್ದರು. ಒಟ್ಟು 600ಕ್ಕೂ ಹೆಚ್ಚು ಹೋರಿಗಳು […]

ಉದ್ಧವ್​ ಠಾಕ್ರೆ ವಿವಾದಾತ್ಮಕ ಹೇಳಿಕೆ : ಭಾನುವಾರದಿಂದ ಶಿರಡಿ ಸಾಯಿಬಾಬಾ ಮಂದಿರ ಬಂದ್​

Saturday, January 18th, 2020
sai-baba

ಶಿರಡಿ : ಭಾನುವಾರದಿಂದ ಶಿರಡಿ ಸಾಯಿ ಬಾಬಾ ದೇವಾಸ್ಥಾನ ಬಂದ್ ಆಗಲಿದೆ ಎಂದು ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ತಿಳಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಾಯಿ ಬಾಬಾ ಜನ್ಮ ಸ್ಥಳದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಸಂಜೆ ಟ್ರಸ್ಟ್ನ ಸದಸ್ಯರು ಮತ್ತು ಗ್ರಾಮಸ್ಥರು ಸಭೆ ಸೇರಲಿದ್ದಾರೆ. ವಿವಾದಾತ್ಮಕ ಹೇಳಿಕೆ ವಿರುದ್ಧ ಭಾನುವಾರ (ಜನವರಿ 19)ದಿಂದ ದೇಗುಲವನ್ನು ಮುಚ್ಚಲು ನಿರ್ಧರಿಸಿದ್ದೇವೆ ಎಂದು ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್ನ ವಾಕ್ಚೌರೆ ತಿಳಿಸಿದ್ದಾರೆ. ಈ […]