ವಿಶ್ವಕಪ್‌ ಹಾಕಿ ಪಂದ್ಯಾವಳಿ-2023 : ಒಡಿಶಾ ಆತಿಥ್ಯ

Thursday, November 28th, 2019
Hockey

ಭುವನೇಶ್ವರ : ಪ್ರತಿಷ್ಠಿತ ವಿಶ್ವಕಪ್‌ ಹಾಕಿ ಪಂದ್ಯಾವಳಿಯ ಆತಿಥ್ಯ ಸತತ 2ನೇ ಸಲ ಭಾರತದ ಪಾಲಾಗಿದೆ. 2023ರ ಪುರುಷರ ವಿಭಾಗದ ವಿಶ್ವಕಪ್‌ ಪಂದ್ಯಗಳು ಒಡಿಶಾದ ಭುವನೇಶ್ವರ ಮತ್ತು ರೂರ್ಕೆಲಾದಲ್ಲಿ ನಡೆಯಲಿವೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಬುಧವಾರ ಘೋಷಿಸಿದರು. ಈ ಪಂದ್ಯಾವಳಿ 2023ರ ಜ. 13ರಿಂದ 29ರ ತನಕ ನಡೆಯಲಿದೆ. “ನಾವು 2018ರ ವಿಶ್ವಕಪ್‌ ಹಾಕಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದೆವು. ಈಗ 2023ರಲ್ಲಿ ಮತ್ತೆ ಈ ಪ್ರತಿಷ್ಠಿತ ಕೂಟದ ಆತಿಥ್ಯ ಭಾರತದ್ದಾಗಿದೆ. ಈ ಸ್ಪರ್ಧೆಗಳು ಭುವನೇಶ್ವರ […]

ಹಣವನ್ನು ಬಿಟ್ಟು ಈರುಳ್ಳಿಯನ್ನೇ ಕದ್ದೊಯ್ದ ಕಳ್ಳರು

Thursday, November 28th, 2019
Erulli

ಕೊಲ್ಕತ್ತಾ : ಈರುಳ್ಳಿ ಬೆಲೆ ಶತಕ ದಾಟಿದ್ದು ದೇಶಾದ್ಯಂತ ಗ್ರಾಹಕರು ಕಣ್ಣೀರುಡುತ್ತಿದ್ದಾರೆ. ಪಶ್ಚಿಮ ಬಂಗಾಳದ ಮಿಡ್ನಾಪೂರ್ ಜಿಲ್ಲೆಯಲ್ಲಿ ಕಳ್ಳರು ಹಣವನ್ನು ಬಿಟ್ಟು ಈರುಳ್ಳಿಯನ್ನೇ ಕದ್ದೊಯ್ದ ಸ್ವಾರಸ್ಯಕರ ಘಟನೆ ನಡೆದಿದೆ. ಹೌದು. ಪಶ್ಚಿಮ ಬಂಗಾಳದಲ್ಲಿ ಒಂದು ಕಿಲೋ ಈರುಳ್ಳಿ ದರ 100 ರೂ. ಗಡಿ ದಾಟಿದ್ದು ರೈತರ ಮೊಗದಲ್ಲಿ ಮಂದಹಾಸವಿದ್ದರೇ ಗ್ರಾಹಕರ ಮೊಗದಲ್ಲಿ ಕಣ್ಣಿರನ್ನು ತರಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ನಗದಿಗಿಂತ ಈರುಳ್ಳಿಯೇ ಹೆಚ್ಚು ಬೆಲೆಬಾಳುತ್ತದೆಯೆಂದರಿತು ತರಕಾರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ್ದಾರೆ. ಅಕ್ಷಯ್ ಎಂಬ ವ್ಯಾಪರಿಯೊಬ್ಬ ಈರುಳ್ಳಿ […]

ಲವ್ ಬ್ರೇಕಪ್ : ಪ್ರತೀಕಾರ ತೀರಿಸಲು ಉಗ್ರ ಸಂಘಟನೆ ಸೇರಿದ ಯುವಕ

Wednesday, November 27th, 2019
Love-Breckup

ನವದೆಹಲಿ : ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದು, ಅದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿ ನಮ್ಮ ಸಂಬಂಧವನ್ನು ಬಲವಂತವಾಗಿ ಮುರಿದು ಬೀಳುವಂತೆ ಮಾಡಿದ್ದು, ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಉಗ್ರಗಾಮಿ ಸಂಘಟನೆ ಸೇರಿಕೊಂಡಿದ್ದೇನೆ. ಇದು ಸೋಮವಾರ ಅಸ್ಸಾಂನ ಗೋಲಾಪುರಲ್ಲಿ ಸಿಕ್ಕಿಬಿದ್ದಿರುವ ಮೂವರು ಶಂಕಿತ ಉಗ್ರರ ಪೈಕಿ ಒಬ್ಬಾತ ಪೊಲೀಸರಿಗೆ ತನಿಖೆ ವೇಳೆ ತಿಳಿಸಿರುವುದಾಗಿ ವರದಿಯಾಗಿದೆ. ಐಸಿಸ್ ನಿಂದ ಪ್ರೇರಿತಗೊಂಡ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂಬ ಮಾಹಿತಿ ಪಡೆದಿದ್ದ ಅಸ್ಸಾಂ ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಗ್ರೆನೇಡ್ ಸಹಿತ ಮೂವರು ಶಂಕಿತ […]

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ

Tuesday, November 26th, 2019
Devendra-Fadnavis

ಮುಂಬೈ:  ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ದೇವೇಂದ್ರ ಫಡ್ನವಿಸ್ ಬಹುಮತ ಇಲ್ಲದ ಕಾರಣ ತಮ್ಮ ಸ್ಥಾನಕ್ಕೆ ಎರಡನೇ ಬಾರಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಡಿಸಿಎಂ ಅಜಿತ್ ಪವಾರ್ ರಾಜೀನಾಮೆ ಬೆನ್ನಲ್ಲೇ ನ.26 ರಂದು ಮಧ್ಯಾಹ್ನ 3:30 ಕ್ಕೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದರು. ಎನ್ ಸಿಪಿಯ ಅಜಿತ್ ಪವಾರ್ ಅವರ ಬಣದ ಶಾಸಕರ ಬೆಂಬಲ ಹೊಂದಿರುವುದಾಗಿ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟು ಶನಿವಾರದಂದು ಧಿಡೀರ್ ಬೆಳವಣಿಗೆಯಲ್ಲಿ ದೇವೇಂದ್ರ ಫಡ್ನವೀಸ್ ಹಾಗೂ […]

ಆಂಧ್ರಪ್ರದೇಶ ಮೂಲದ ಏಳು ಮಂದಿ ಭಾರತೀಯರನ್ನು ಬಂಧಿಸಿದ ಕುವೈತ್‌ ಪೊಲೀಸರು

Tuesday, November 26th, 2019
kuwait-police

ಕುವೈತ್‌:  ಆಂಧ್ರಪ್ರದೇಶ ಮೂಲದ ಏಳು ಮಂದಿ ಭಾರತೀಯರನ್ನು ಭಾರತೀಯ ರಾಯಭಾರ ಕಚೇರಿಯ ದಾಖಲೆಗಳನ್ನು ಮತ್ತು ಪ್ರಮಾಣ ಪತ್ರಗಳನ್ನು ನಕಲು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕುವೈತ್‌ನಲ್ಲಿ  ಬಂಧಿಸಲಾಗಿದೆ. ದಾಖಲೆಗಳನ್ನು ನಕಲು ಮಾಡುವ ಜಾಲದ ಬಗ್ಗೆ ಸುಳಿವು ಸಿಕ್ಕಿದ ಹಿನ್ನೆಲೆಯಲ್ಲಿ ಪೊಲೀಸರೇ ವ್ಯವಹಾರ ಕುದುರಿಸುವವರಂತೆ ನಟಿಸಿ ಅವರ ಸೇವೆಯನ್ನು ಬಳಸಿಕೊಳ್ಳುವಂತೆ ನಂಬಿಸಿ ಅವರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಾಟ್ಸ್‌ಆ್ಯಪ್‌ ಮೂಲಕವೇ ಈ ತಂಡ ಡೀಲ್‌ ಕುದುರಿಸುತ್ತಿತ್ತು. ಡ್ರೈವಿಂಗ್‌ ಲೈಸನ್ಸ್‌ ಅನ್ನು ನಕಲು ಮಾಡಿಕೊಡುವುದರಲ್ಲಿ ಈ ತಂಡ ಸಿದ್ಧಹಸ್ತವಾಗಿದೆ ಎಂದು ತನಿಖೆಯಿಂದ ತಿಳಿದು […]

ಶಿವಸೇನಾ ಜತೆ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಶರದ್ ಪವಾರ್

Monday, November 18th, 2019
Sharad

ನವದೆಹಲಿ : ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಎನ್ ಸಿಪಿ ವರಿಷ್ಠ ಶರದ್ ಪವಾರ್ ಸೋಮವಾರ ಮಾತುಕತೆ ನಡೆಸುವ ಮುನ್ನವೇ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಉಲ್ಟಾ ಹೊಡೆದಿದ್ದು, ಸರ್ಕಾರ ರಚನೆ ಬಗ್ಗೆ ಬಿಜೆಪಿ ಮತ್ತು ಶಿವಸೇನಾ ತಮ್ಮ ದಾರಿಯನ್ನು ಆಯ್ಕೆ ಮಾಡಿಕೊಳ್ಳಲಿವೆ ಎಂದು ತಿಳಿಸಿದ್ದಾರೆ. ಲೋಕಸಭೆಯ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಜತೆಯಾಗಿ ಸ್ಪರ್ಧಿಸಿದ್ದವು. ನಾವು ಕೂಡಾ ಎನ್ ಸಿಪಿ, ಕಾಂಗ್ರೆಸ್ ಜತೆಯಾಗಿಯೇ ಸ್ಪರ್ಧಿಸಿದ್ದೇವೆ. ಹೀಗಾಗಿ ಅವರು […]

ಖಾಸಗಿ ಬಸ್-ಲಾರಿ ಮುಖಾಮುಖಿ ಡಿಕ್ಕಿ : ಭೀಕರ ಅಪಘಾತಕ್ಕೆ 14 ಮಂದಿ ಬಲಿ

Monday, November 18th, 2019
Jaipura

ಜೈಪುರ : ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ 14 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಇಂದು ಬೆಳಗ್ಗೆ 7:30ರ ವೇಳೆಗೆ ರಾಜಸ್ಥಾನದ ದಂಗರ್ ಗಢ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ಸು ಬಿಕಾನೆರ್ ನಿಂದ ಜೈಪುರದತ್ತ ಸಾಗುತ್ತಿತ್ತು. ಈ ವೇಳೆ ದಂಗರ್ ಗಢ ಬಳಿ ಏಕಾಏಕಿ ಎದುರಿನಿಂದ ಬರುತ್ತಿದ್ದ ಲಾರಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಲಾರಿ ಮುಂಭಾಗ ಬಸ್ ಒಳಗೆ ನುಗ್ಗಿದೆ. ಲಾರಿ […]

ಎಲ್‍ಓಸಿ ಬಳಿ ಅನುಮಾನಾಸ್ಪದ ವಸ್ತು ಸ್ಫೋಟ : ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ

Monday, November 18th, 2019
srinagar

ಶ್ರೀನಗರ : ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಓರ್ವ ಯೋಧ ಹುತಾತ್ಮರಾಗಿ ಇಬ್ಬರು ಯೋಧರಿಗೆ ಗಾಯಗೊಂಡಿದ್ದಾರೆ. ಈ ಘಟನೆ ಭಾನುವಾರ ಸಂಜೆ ಅಖ್ನೂರ್ ಸೆಕ್ಟರ್ ಬಳಿ ನಡೆದಿದ್ದು, ಎಲ್‍ಓಸಿ ಬಳಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದೆ. ಈ ವೇಳೆ ಅಲ್ಲಿ ಟ್ರಕ್‍ನಲ್ಲಿ ತೆರೆಳುತ್ತಿದ್ದ ಮೂವರು ಯೋಧರಿಗೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಧಂಪುರ್ ಪ್ರದೇಶದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಪಲ್ಲನ್ವಾಲಾ ಸೆಕ್ಟರ್ ನ ಲೈನ್ ಆಫ್ ಕಂಟ್ರೋಲ್ (ಎಲ್‍ಒಸಿ) ಬಳಿ ಸುಧಾರಿತ […]

ಕೇರಳ ಸರ್ಕಾರದಿಂದ ರಕ್ಷಣೆ ನೀಡದಿದ್ದರೂ ಶಬರಿಮಲೆಗೆ ಭೇಟಿ ನೀಡುತ್ತೇವೆ : ಬಲಪಂಥೀಯ ಕಾರ್ಯಕರ್ತೆ ತೃಪ್ತಿ ದೇಸಾಯಿ

Saturday, November 16th, 2019
Trupti-Desai

ಮುಂಬೈ : ಕೇರಳ ಸರ್ಕಾರದಿಂದ ರಕ್ಷಣೆ ನೀಡುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನವೆಂಬರ್ 20ರ ನಂತರ ಶಬರಿಮಲೆ ದೇವಸ್ಥಾನಕ್ಕೆ ತೆರಳುವುದಾಗಿ ಬಲಪಂಥೀಯ ಕಾರ್ಯಕರ್ತೆ ತೃಪ್ತಿ ದೇಸಾಯಿ ಹೇಳಿದ್ದಾರೆ. ನವೆಂಬರ್ 20ರ ನಂತರ ನಾನು ಶಬರಿಮಲೆಗೆ ಹೋಗುತ್ತೇನೆ. ನಾವು ಕೇರಳ ಸರ್ಕಾರದಿಂದ ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದೇವೆ. ನಮಗೆ ರಕ್ಷಣೆ ನೀಡುವುದು ಬಿಡುವುದು ಅವರಿಗೆ ಬಿಟ್ಟದ್ದು. ರಕ್ಷಣೆ ಒದಗಿಸದಿದ್ದರೂ ನಾನು ದರ್ಶನಕ್ಕಾಗಿ ಶಬರಿಮಲೆಗೆ ಭೇಟಿಯೇ ನೀಡುತ್ತೇನೆ ಎಂದು ತೃಪ್ತಿ ಹೇಳಿದ್ದಾರೆ. ಶಬರಿಮಲೆ ದೇವಸ್ಥಾನವನ್ನು ತೆರೆಯುವ ಮುನ್ನ ಕೇರಳ ದೇವಸ್ವಂ ಮಂಡಳಿ […]

ಜನರ ಪ್ರೀತಿ, ಪೂಜೆ, ಹರಕೆಯಿಂದ ಫಲ ಸಿಕ್ಕಿದೆ : ಡಿ.ಕೆ ಶಿವಕುಮಾರ್

Friday, November 15th, 2019
DKShiv-Kumar

ನವದೆಹಲಿ : ಕಾನೂನು ಮತ್ತು ಸಮಯ ಉತ್ತರ ಕೊಡುತ್ತೆ ಅಂತಾ ಮೊದಲೇ ಹೇಳಿದ್ದೆ. ನ್ಯಾಯಬದ್ಧ ವ್ಯವಹಾರಗಳನ್ನು ಮಾಡಿದ್ದೇವೆ, ಹೀಗಾಗಿ ನ್ಯಾಯವಾಗಿ ಹೋರಾಡಿದ್ದೇವೆ. ರಾಜ್ಯದ ಜನರ ಪ್ರೀತಿ, ಪೂಜೆ, ಹರಕೆಗೆ ಈಗ ಫಲ ಸಿಕ್ಕಿದೆ ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಇಡಿ ಅವರು ಪ್ರಯತ್ನ ಮಾಡ್ತಿದ್ದಾರೆ. ಅವರು ತಪ್ಪು ಎಂದು […]