ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ

Saturday, November 9th, 2019
modi

ಹೊಸದಿಲ್ಲಿ : ವಿಶ್ವದ ಗಮನ ಸೆಳೆದಿರುವ ಅಯೋಧ್ಯೆ ಭೂ ವಿವಾದ ಸಂಬಂಧ ಅಂತಿಮ ತೀರ್ಪು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಲಿ, ಅದು ಯಾರ ಗೆಲುವೂ ಅಲ್ಲ, ಯಾರ ಸೋಲೂ ಅಲ್ಲ. ಶಾಂತಿ, ಏಕತೆ, ಸದ್ಭಾವನೆಯನ್ನು ಗಟ್ಟಿಗೊಳಿಸಬೇಕು ಎಂದು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.  

ಇಂದು ಸುಪ್ರೀಂಕೋರ್ಟ್ ನಲ್ಲಿ ಅಯೋಧ್ಯೆ ತೀರ್ಪು ಪ್ರಕಟ

Saturday, November 9th, 2019
SC

ನವದೆಹಲಿ : ಅಯೋಧ್ಯೆ ಜಮೀನು ವಿವಾದದ ಮೂಲ ದಾವೆಯ ಮೇಲೆ 40 ದಿನಗಳ ಮ್ಯಾರಥಾನ್ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ ಪೀಠ, ಭಾರತದ ಸಾಮಾಜಿಕ-ರಾಜಕೀಯ ಇತಿಹಾಸವನ್ನೇ ಬದಲಿಸಿದ 130 ವರ್ಷಗಳ ಹಿಂದಿನ ಈ ಪ್ರಕರಣದ ಅಂತಿಮ ತೀರ್ಪನ್ನು ಶನಿವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ. ಮುಂದಿನ ಬುಧವಾರ ಅಥವಾ ಗುರುವಾರ ತೀರ್ಪು ಬರಬಹುದೆಂದು ಭಾವಿಸಲಾಗಿತ್ತಾದರೂ ಅನಿರೀಕ್ಷಿತ ಎಂಬಂತೆ ಶುಕ್ರವಾರ ರಾತ್ರಿ 9 ಗಂಟೆ ವೇಳೆಗೆ ಸುಪ್ರೀಂಕೋರ್ಟ್ ವೆಬ್ಸೈಟ್ನಲ್ಲಿ ಶನಿವಾರ ತೀರ್ಪು […]

ಕುಲಾಲ ಸಂಘ ನವಿಮುಂಬಯಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ “ಗಿರ್ ಗಿಟ್ ಗಿರಿಧರೆ” ನಾಟಕ ಪ್ರದರ್ಶನ

Friday, November 8th, 2019
Kulal

ಮುಂಬಯಿ : ಕುಲಾಲ ಸಂಘ ಮುಂಬಯಿ ಇದರ ನವಿಮುಂಬಯಿ ಸ್ಥಳೀಯ ಸಮಿತಿಯ ಪರವಾಗಿ ಥಾಣೆ -ಗೋಡ್ ಬಂದರ್ ನ ಸಂಘದ ಜಾಗದ ಅಭಿವೃದ್ಧಿ ಕಾರ್ಯಗಳ ಪ್ರಯುಕ್ತ ನವಂಬರ್ 3ರಂದು ರವಿವಾರ ಬೆಳಿಗ್ಗೆ 10ಕ್ಕೆ ಸಾಹಿತ್ಯ ಮಂದಿರ ಸಭಾಗೃಹ (ಮರಾಠಿ ಸಾಹಿತ್ಯ ಸಂಸ್ಕೃತಿ ಮತ್ತು ಕಲಾಮಂದಿರ), ಪ್ಲಾಟ್ ನಂಬ್ರ 26, ಸೆಕ್ಟರ್ 6, ವಾಶಿ ರೈಲ್ವೆ ಸ್ಟೇಷನ್ ನ ಹತ್ತಿರ, ವಾಶಿ, ನವಿಮುಂಬಯಿ ಇಲ್ಲಿ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಇದರ ಕಲಾವಿದರು ಅಭಿನಯಿಸುವ, ಗಡಿನಾಡು […]

ಅಯೋಧ್ಯೆ ತೀರ್ಪಿಗೂ ಮುನ್ನವೇ 500 ಮಂದಿ ಅರೆಸ್ಟ್ : 12 ಸಾವಿರ ಮಂದಿ ಮೇಲೆ ಹದ್ದಿನ ಕಣ್ಣು

Friday, November 8th, 2019
ayodhye

ಲಕ್ನೋ : ಇಡೀ ದೇಶವೇ ಎದುರು ನೋಡುತ್ತಿರುವ ಮಹತ್ವದ ಅಯೋಧ್ಯೆ ತೀರ್ಪು ಶೀಘ್ರವೇ ಹೊರಬೀಳಲಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಪಿಗೂ ಮುನ್ನವೇ 500 ಮಂದಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ 12 ಸಾವಿರ ಮಂದಿ ಮೇಲೆ ಕಣ್ಣಿಟ್ಟಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನವೆಂಬರ್ 17ರಂದು ನಿವೃತ್ತಿಹೊಂದಲಿದ್ದಾರೆ. ಅವರ ಅಧಿಕಾರಾವಧಿ ಮುಗಿಯುವ ಮುನ್ನ ಅಯೋಧ್ಯೆ ತೀರ್ಪು ಹೊರಬರಲಿದೆ. ಈ ಹಿನ್ನೆಲೆ ಯಾವುದೇ ಹಿಂಸಾಚಾರ ನಡೆಬಾರದೆಂದು ಉತ್ತರ ಪ್ರದೇಶ ಪೊಲೀಸರು […]

ಏಕದಿನದಲ್ಲಿ ವಿರಾಟ್​ ಕೊಹ್ಲಿಯನ್ನೇ ಹಿಂದಿಕ್ಕಿದ ಮಹಿಳಾ ಆಟಗಾರ್ತಿ ಸ್ಮೃತಿ ಮಂಧಾನ

Thursday, November 7th, 2019
virat

ನವದೆಹಲಿ : ಟೀಮ್ ಇಂಡಿಯಾದ ಮಹಿಳಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದು, ಅತಿ ವೇಗವಾಗಿ 2000 ರನ್ ದಾಖಲಿಸಿದ ಎರಡನೇ ಭಾರತೀಯಳು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ವಿಶೇಷವೆಂದರೆ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನೇ ಸ್ಮೃತಿ ಹಿಂದಿಕ್ಕಿದ್ದಾರೆ. ಎಡಗೈ ಬ್ಯಾಟ್ಸ್ವುಮೆನ್ ಆಗಿರುವ ಸ್ಮೃತಿ, ಬುಧವಾರ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ವೆಸ್ಟ್ಇಂಡೀಸ್ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದರು. ಇದೇ ಪಂದ್ಯವನ್ನು ಭಾರತ […]

ನಿಶ್ಚಿತಾರ್ಥ ಜೋಡಿಯಿಂದ ಬಾವಿಯ ಮೆಟ್ಟಿಲಿನಲ್ಲಿ ನಿಂತು ಸೆಲ್ಫಿ : ಆಯತಪ್ಪಿ ಬಿದ್ದು ಯುವತಿ ಮೃತ್ಯು

Tuesday, November 5th, 2019
chennai

ಚೆನ್ನೈ : ಇತ್ತೀಚೆಗಷ್ಟೇ ನಿಶ್ಚಿತಾರ್ಥವಾದ ಜೋಡಿಯೊಂದು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಬಾವಿಗೆ ಬಿದ್ದ ಘಟನೆ ಚೆನ್ನೈನಲ್ಲಿ ನಡೆದಿದೆ. ಈ ಘಟನೆ ಪಟ್ಟಾಭಿರಾಮ್ ಎಂಬಲ್ಲಿ ಸೋಮವಾರ ನಡೆದಿದ್ದು, ಅವಘಡದಲ್ಲಿ ಯುವತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಆದರೆ ಯುವಕ ಮಾತ್ರ ರೈತನ ಸಹಾಯದಿಂದಾಗಿ ಪ್ರಾಣಾಪಾಯದಿಂದಾಗಿ ಪಾರಾಗಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ದುರ್ದೈವಿ ಯುವತಿಯನ್ನು ಟಿ ಮರ್ಸಿ ಸ್ಟೆಪ್ಪಿ(24) ಎಂದು ಗುರುತಿಸಲಾಗಿದೆ. ಪಟ್ಟಾಭಿರಾಮ್ ಬಳಿಯ ಗಾಂಧಿನಗರ ನಿವಾಸಿಯಾಗಿರುವ ಈಕೆಗೆ ಕೆಲ ದಿನಗಳ ಹಿಂದೆಯಷ್ಟೇ ಡಿ ಅಪ್ಪು(24) ಎಂಬಾತನ […]

ಮಹಿಳಾ ತಹಶೀಲ್ದಾರ್ ರನ್ನು ಪೆಟ್ರೋಲ್ ಹಾಕಿ ಸುಟ್ಟ ಅಪರಿಚಿತ ವ್ಯಕ್ತಿ

Monday, November 4th, 2019
tashildar

ಹೈದರಾಬದ್‌ : ಸೋಮವಾರ ಮಧ್ಯಾಹ್ನ ಹತ್ತಿರದ ಅಬ್ದುಲ್ಲಾಪುರ್ಮೆಟ್‌ನಲ್ಲಿರುವ ತನ್ನ ಕಚೇರಿಯಲ್ಲಿ ಯೇ ಮಹಿಳಾ ತಹಶೀಲ್ದಾರ್ ಒಬ್ಬರನ್ನು ಅಪರಿಚಿತ ವ್ಯಕ್ತಿಯೊಬ್ಬರು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಲ್ಲೆಕೋರನು ಅದರೊಳಗೆ ಪ್ರವೇಶಿಸಿದಾಗ, ಪೆಟ್ರೋಲ್ನಲ್ಲಿ ಸುರಿದು ಬೆಂಕಿ ಹಚ್ಚಿದಾಗ ತಹಸೀಲ್ದಾರ್‌ ವಿಜಯಾ ತನ್ನ ಕೊಠಡಿಯಲ್ಲಿ ಏಕಾಂಗಿಯಾಗಿದ್ದರು ಎಂದು ಇಬ್ರಾಹಿಂಪಟ್ಟಣಂ ಕಂದಾಯ ವಿಭಾಗೀಯ ಅಧಿಕಾರಿ ಅಮರೇಂದರ್ ಹೇಳಿದ್ದಾರೆ. ಮಹಿಳಾ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಕಚೇರಿಯಲ್ಲಿದ್ದ ಮತ್ತೊಬ್ಬ ಸಿಬ್ಬಂದಿ ಅವಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಸುಟ್ಟಗಾಯಗಳಿಗೆ ಒಳಗಾಗಿದ್ದರು. ಹಲ್ಲೆಕೋರ ಎಂದು ಶಂಕಿಸಲಾಗಿರುವ ವ್ಯಕ್ತಿಯೂ ಗಾಯಗೊಂಡಿದ್ದು, […]

ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆಸಿದ ಉಗ್ರರು : 15 ಮಂದಿಗೆ ಗಾಯ

Monday, November 4th, 2019
Grained-daali

ಶ್ರೀನಗರ : ಇಲ್ಲಿನ ಹರಿಸಿಂಗ್ ಮುಖ್ಯರಸ್ತೆಯಲ್ಲಿ ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿಯಾಗಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಕಳೆದ 15 ದಿನಗಳಲ್ಲಿ ಇದು ಎರಡನೇ ದಾಳಿಯಾಗಿದೆ. ಅಕ್ಟೋಬರ್ 26ರಂದು ಶ್ರೀನಗರದ ಕರಣ್ನಗರದಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಆರು ಮಂದಿ ಗಾಯಗೊಂಡಿದ್ದರು. ನಾಕಾ ಡ್ಯೂಟಿಯಲ್ಲಿದ್ದ ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗ್ರೆನೇಡ್ ದಾಳಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಪೊಲೀಸರೂ ಗುಂಡಿನ ದಾಳಿ ನಡೆಸಿದ್ದರು. ಇದೀಗ ಮತ್ತೊಮ್ಮೆ ಉಗ್ರರು ದುಷ್ಕೃತ್ಯ ಮೆರೆದಿದ್ದಾರೆ. […]

ನಾಳೆ ಸಿಎಂ ಯಡಿಯೂರಪ್ಪ ಆಡಿಯೋ ಸಾಕ್ಷ್ಯವನ್ನು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

Monday, November 4th, 2019
Supreem-Court

ನವದೆಹಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷ್ಯವನ್ನು ಸುಪ್ರೀಂಕೋರ್ಟ್ ಪರಿಗಣಿಸಿದೆ. ಈ ಕುರಿತು ನಾಳೆ(ಮಂಗಳವಾರ) ಆಡಿಯೋ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದೆ ಇಂದು ನ್ಯಾಯಾಧೀಶ ಎನ್.ವಿ.ರಮಣ ಅವರ ಮುಂದೆ ಆಡಿಯೋ ಬಗ್ಗೆ ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್ ಪ್ರಸ್ತಾಪ ಮಾಡಿದರು. ಈಗಾಗಲೇ ವಿಚಾರಣೆ ಮುಗಿದಿದ್ದು, ಈಗ ಏನು ಹೇಳಬೇಕು ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು. ವಿಚಾರಣೆ ಮುಗಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಆಡಿಯೋ ಕ್ಲಿಪ್ ಲೀಕ್ ಆಗಿದೆ. ಹಾಗಾಗಿ ನ್ಯಾಯಾಲಯದ ಗಮನಕ್ಕೆ ತರಬೇಕಿದೆ. […]

ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ

Friday, November 1st, 2019
Dehali-karnataka-sanga

ನವದೆಹಲಿ : 64 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ಬೆಳಿಗ್ಗೆ ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ಭುವನೇಶ್ವರಿಗೆ ಪೂಜೆ ಮತ್ತು ರಾಷ್ಟ್ರೀಯ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಡಾ.ವೆಂಕಟಾಚಲ ಹೆಗಡೆ, ಉಪಾಧ್ಯಕ್ಷೆ ಜಮುನಾ ಸಿ.ಮಠದ, ಕಾರ್ಯದರ್ಶಿ ಸಿ.ಎಂ.ನಾಗರಾಜ, ಜಂಟೀ ಕಾರ್ಯದರ್ಶಿ ರಾಧಾಕೃಷ್ಣ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಡಾ.ಎಂ.ಎಸ್.ಶಶಿಕುಮಾರ್, ಸವಿತಾ ನೆಲ್ಲಿ, ಸುಮಿತಾ ಮುರಗೋಡ ಹಾಗೂ ಇನ್ನೂ ಅನೇಕ ಕನ್ನಡಿಗರು ಪಾಲ್ಗೊಂಡಿದ್ದರು. ರಾಜ್ಯೋತ್ಸವ ಸಂಭ್ರಮವನ್ನು ನವೆಂಬರ್ ತಿಂಗಳ ಪ್ರತೀ ಭಾನುವಾರದಂದು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು.