ಕನ್ನಡದಲ್ಲೇ ರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

Friday, November 1st, 2019
Narendra-Modi

ನವದೆಹಲಿ : ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಕೋರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹಿಮ್ಮಡಿಗೊಳಿಸಿದ್ದಾರೆ. ಇಂದು ರಾಜ್ಯದಲ್ಲೆಡೆ 64ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ. ಕನ್ನಡದಲ್ಲೇ […]

ಕರಾಚಿ-ರಾವಲ್ಪಿಂಡಿ ಎಕ್ಸ್ ಪ್ರೆಸ್ ರೈಲು ಬೆಂಕಿಗಾಹುತಿ : 65 ಮಂದಿ ಪ್ರಯಾಣಿಕರು ಮೃತ್ಯು; ಹಲವರಿಗೆ ಗಾಯ

Thursday, October 31st, 2019
Railu

ಲಿಯಾಖತ್ಪುರ : ಪಾಕಿಸ್ತಾನದ ಕರಾಚಿಯಿಂದ ಲಾಹೋರ್ಗೆ ಸಂಚರಿಸುತ್ತಿದ್ದ ಕರಾಚಿ-ರಾವಲ್ಪಿಂಡಿ ತೇಜ್ಗಾಮ್ ಎಕ್ಸ್ಪ್ರೆಸ್ ರೈಲು ಬೆಂಕಿ ಅನಾಹುತಕ್ಕೀಡಾಗಿದ್ದು, ಕನಿಷ್ಠ 65 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಲಿಯಾಖತ್ಪುರಕ್ಕೆ ತಲುಪುತ್ತಿರುವ ವೇಳೆ ಮೂರು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದು ಉಳಿದ ಬೋಗಿಗಳಿಗೂ ಆವರಿಸತೊಡಿಗಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಪಾಕಿಸ್ತಾನ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಯಾಣಿಕರು ಸಾಗಿಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಒಟ್ಟು ಮೂರು ಬೋಗಿಗಳು ಸಂಪೂರ್ಣ […]

ಸರ್ದಾರ್ ವಲ್ಲಭಭಾಯಿ ಪಟೇಲ್ 144ನೇ ಜನ್ಮದಿನದಂದು ಏಕತಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ

Thursday, October 31st, 2019
Sardar-vallabha-pateel

ನವದೆಹಲಿ : ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 144ನೇ ಜನ್ಮದಿನದ ಹಿನ್ನೆಲೆ ಗುಜರಾತ್‌ ನ ಕೇವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸಿದ್ದಾರೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಪಟೆಲ್ ಚೌಕ್ ನಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪುತ್ತಳಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಇದೆ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯ ನ್ಯಾಷನಲ್ ಸ್ಟೇಡಿಯಂನಲ್ಲಿ “ಏಕತೆಯ ಓಟಕ್ಕೆ” ಚಾಲನೆ ನೀಡಿದರು. ಸಂವಿಧಾನದಲ್ಲಿ ಆರ್ಟಿಕಲ್ […]

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಬಾಲಕ

Saturday, October 26th, 2019
kolave-baavi

ಚೆನ್ನೈ : 2 ವರ್ಷದ ಬಾಲಕನೊಬ್ಬ ಕೊಳವೆಬಾವಿಗೆ ಬಿದ್ದಿರುವ ಘಟನೆ ತಮಿಳುನಾಡಿನ ತಿರಚ್ಚಿ ಜಿಲ್ಲೆಯ ನಡುಕಟ್ಟುಪಟ್ಟಿಯಲ್ಲಿ ನಡೆದಿದೆ. ಬಾಲಕನನ್ನು ಸುಜಿತ್ ವಿಲ್ಸನ್ ಎಂದು ಗುರುತಿಸಲಾಗಿದೆ. ಈತ 25 ಅಡಿ ಆಳಕ್ಕೆ ಬಿದ್ದಿದ್ದಾನೆ. ಶುಕ್ರವಾರ ಸಂಜೆ 5.30ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಾಗ 7 ವರ್ಷದ ಹಿಂದೆ ತೆರೆದಿದ್ದ ಬೋರ್‍ವೆಲ್‍ಗೆ ಸುಜಿತ್ ವಿಲ್ಸನ್ ಬಿದ್ದಿದ್ದಾನೆ. ಬಾಲಕ ಕೊಳವೆ ಬಾವಿಗೆ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದೆ. ವೈದ್ಯರ ತಂಡ […]

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಗೆ ಬಹುಮತ, ಸಿಎಂ ಹುದ್ದೆಗೆ ಸೇನೆ ಪಟ್ಟು

Friday, October 25th, 2019
shivasene

ಮುಂಬೈ : ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಬಹುಮತ ಪಡೆದುಕೊಂಡು ರಾಜ್ಯದಲ್ಲಿ ಅಧಿಕಾರ ಉಳಿಸಿಕೊಂಡಿದ್ದರೂ ನಿರೀಕ್ಷಿಸಿದಷ್ಟು ಪ್ರಚಂಡ ಬಹುಮತ ಸಿಕ್ಕಿಲ್ಲ. ಸರಳ ಬಹುಮತಕ್ಕಿಂತ ತುಸು ಹೆಚ್ಚಿನ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿ ಸೋಲು ಕಂಡಿದ್ದರೂ, ಎರಡೂ ಪಕ್ಷಗಳು ಕಳೆದ ಚುನಾವಣೆಗಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಇದು ಆಡಳಿತಾರೂಢ ಬಿಜೆಪಿ, ಶಿವಸೇನೆಗೆ ಎಚ್ಚರಿಕೆ ಗಂಟೆಯಾಗಿದೆ. ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆ, ಬಿಜೆಪಿ 100 ಕ್ಷೇತ್ರಗಳಲ್ಲಿ ಜಯಶಾಲಿಯಾಗಿದ್ದು, 5ರಲ್ಲಿ ಮುನ್ನಡೆಯಲ್ಲಿದೆ. ಶಿವಸೇನೆ 56 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. […]

ಹರ್ಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ

Friday, October 25th, 2019
maharashtra

ನವದೆಹಲಿ : ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಮಧ್ಯರಾತ್ರಿ ಹೊರಬಿದ್ದಿದೆ. ಯಾವ ರಾಜ್ಯದಲ್ಲಿ ಯಾವ ಪಕ್ಷ ಎಷ್ಟು ಕ್ಷೇತ್ರಗಳನ್ನು ಗೆದ್ದುಕೊಂಡಿದೆ ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಗುರುವಾರ ರಾತ್ರಿ 11.15ರ ಸುಮಾರಿಗೆ ಹರ್ಯಾಣ ವಿಧಾನಸಭೆಯ ಫಲಿತಾಂಶವನ್ನು ಚುನಾವಣಾ ಆಯೋಗ ಅಂತಿಮಗೊಳಿಸಿದೆ. ಒಟ್ಟು ವಿಧಾನಸಭಾ ಚುನಾವಣೆಯ ಒಟ್ಟು 90 ಕ್ಷೇತ್ರಗಳ ಪೈಕಿ ಆಡಳಿತಾರೂಢ ಬಿಜೆಪಿ 40 ಸ್ಥಾನವನ್ನಷ್ಟೇ ಗೆದ್ದುಕೊಳ್ಳಲು ಶಕ್ತವಾಗಿದೆ. ಉಳಿದಂತೆ ಕಾಂಗ್ರೆಸ್ 31, ಜೆಜೆಪಿ 10, ಹರ್ಯಾಣ ಲೋಕಹಿತ ಪಕ್ಷ ಒಂದು, […]

ಗುಜರಾತ್​ ಉಪಚುನಾವಣೆಯ ಮತ ಎಣಿಕೆ : ತಲಾ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್, ಬಿಜೆಪಿ

Thursday, October 24th, 2019
gujarat

ಅಹಮದಾಬಾದ್ : ಗುಜರಾತ್ನ ಆರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಗುರುವಾರ ಪ್ರಕಟವಾಗುತ್ತಿದ್ದು, ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ತಲಾ ಮೂರರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುನ್ನಡೆ ಕಾಯ್ದುಕೊಂಡಿವೆ. ಪಟನ್ ಜಿಲ್ಲೆಯ ರಾಧಾನ್ಪುರ ಕ್ಷೇತ್ರದಲ್ಲಿ ಒಬಿಸಿ ನಾಯಕ ಬಿಜೆಪಿ ಅಭ್ಯರ್ಥಿ ರಘು ದೇಸಾಯಿ ಕಾಂಗ್ರೆಸ್ನ ಅಲ್ಪೇಶ್ ಠಾಕೂರ್ ವಿರುದ್ಧ 3,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಅರಾವಳಿಯ ಬಯಾಡ್ನಲ್ಲಿ ಬಿಜೆಪಿ ಅಭ್ಯರ್ಥಿ ಧವಲಸಿಂಗ್ ಝಲಾ ಅವರು ಕಾಂಗ್ರೆಸ್ ಅಭ್ಯರ್ಥಿ […]

ಬಿಜೆಪಿಗೆ ಗೆಲುವಿನ ಭರವಸೆ : ಮಹಾರಾಷ್ಟ್ರದಲ್ಲಿ ಸಂಭ್ರಮಾಚರಣೆಗೆ ಸಿದ್ಧವಾಗಿದೆ 5000 ಲಾಡುಗಳು

Thursday, October 24th, 2019
BJP

ಮುಂಬೈ : ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿಗಂತೂ ಗೆಲುವು ತಮ್ಮದೇ ಎಂಬ ಭರವಸೆ ಬಲವಾಗಿಯೇ ಇದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಗೆಲುವು ಸಂಭ್ರಮಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಬೈನ ಬಿಜೆಪಿ ಮುಖ್ಯಕಚೇರಿಯಲ್ಲಿ ವಿಜಯೋತ್ಸವದ ತಯಾರಿ ಭರ್ಜರಿಯಾಗಿಯೇ ನಡೆಯುತ್ತಿದೆ. ಮತ ಎಣಿಕೆಯ ಪ್ರಕ್ರಿಯೆಯನ್ನು ನೇರ ಪ್ರಸಾರದಲ್ಲಿ ನೋಡಲು ದೊಡ್ಡ ಟಿವಿ ಪರದೆಗಳನ್ನು ಹಾಕಿರುವ ಬಿಜೆಪಿ ಮುಖಂಡರು, ಕಾರ್ಯಕರ್ತರು, ಗೆದ್ದ ಬಳಿಕ ಸಂಭ್ರಮಾಚರಣೆ […]

ದೆಹಲಿ ಹೈಕೋರ್ಟಿನಿಂದ ಡಿಕೆ ಶಿವಕುಮಾರ್ ಗೆ ಜಾಮೀನು ಮಂಜೂರು

Wednesday, October 23rd, 2019
DKShi

ನವದೆಹಲಿ : ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಮಂಜೂರಾಗಿದೆ. ದೆಹಲಿ ಹೈಕೋರ್ಟಿನ ನ್ಯಾ.ಸುರೇಶ್ ಕುಮಾರ್ ಕೈಟ್ ಜಾಮೀನು ಆದೇಶವನ್ನು ಪ್ರಕಟಿಸಿದರು. ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಸುಮಾರು ಗುರುವಾರ (ಅಕ್ಟೋಬರ್ 17) 3 ಗಂಟೆಗೂ ಅಧಿಕ ಕಾಲ ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ನ್ಯಾ. ಸುರೇಶ್ ಕುಮಾರ್ ಕೈಟ್ ಇಂದಿಗೆ ಆದೇಶವನ್ನು ಕಾಯ್ದಿರಿಸಿದ್ದರು. ವಿದೇಶಕ್ಕೆ ತೆರಳುವ ಮೊದಲು ಅನುಮತಿ ಪಡೆಯಬೇಕು, 25 ಲಕ್ಷ ರೂ. ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂಬುದಾಗಿ ಷರತ್ತು […]

ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಸೋನಿಯಾ ಗಾಂಧಿ

Wednesday, October 23rd, 2019
sonia-gandhi

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಬುಧವಾರ ಬೆಳಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಅಂಬಿಕಾ ಸೋನಿ ಭೇಟಿಯಾಗಿ ಕುಶಲೋಪರಿ ನಡೆಸಿದರು. ತಿಹಾರ್ ಜೈಲಿಗೆ ಭೇಟಿ ನೀಡಿದ ವೇಳೆ ಸಂಸದ, ಡಿಕೆ ಸಹೋದರ ಡಿಕೆ ಸುರೇಶ್ ಕೂಡಾ ಜತೆಗಿದ್ದರು ಎಂದು ವರದಿ ತಿಳಿಸಿದೆ. ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತ […]