ಐಎನ್ ಎಕ್ಸ್ ಮೀಡಿಯಾ ಪ್ರಕರಣ : ಪಿ ಚಿದಂಬರಂಗೆ ಸುಪ್ರೀಂ ಕೋರ್ಟ್ ಜಾಮೀನು

Tuesday, October 22nd, 2019
P.-Chidambaram

ನವದೆಹಲಿ : ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಪಿ ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲಾಗಿದೆ. ಸಿಬಿಐ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂಗೆ ಜಾಮೀನು ಸಿಕ್ಕಿದ್ದರೂ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿರುವ ಕಾರಣ ಅವರು ತಿಹಾರ್ ಜೈಲಿನಲ್ಲೇ ಮುಂದುವರಿಯಬೇಕಾಗಿದೆ. ಸಿಬಿಐ ತಮ್ಮ ಮೇಲೆ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅವರು ಸುಪ್ರೀಂ ಮೆಟ್ಟಿಲೇರಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಇನ್ನೂ ಇಡಿ ವಶದಲ್ಲಿದ್ದು, ಅವರ ಬಂಧನದ ಅವಧಿ ಅಕ್ಟೋಬರ್ […]

ಕೇಂದ್ರದ ನೀತಿ ಖಂಡಿಸಿ ಇಂದು ಬ್ಯಾಂಕ್ ಮುಷ್ಕರಕ್ಕೆ ಕರೆ

Tuesday, October 22nd, 2019
Bank-Mushkara

ನವದೆಹಲಿ : 10 ರಾಷ್ಟ್ರೀಕೃತ ಬ್ಯಾಂಕ್‍ಗಳನ್ನು 4 ಬ್ಯಾಂಕುಗಳನ್ನಾಗಿ ವಿಲೀನಗೊಳಿಸುತ್ತಿರುವ ಕೇಂದ್ರ ಸರ್ಕಾರ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿ ಒಕ್ಕೂಟ (ಎಐಬಿಇಎ) ಮತ್ತು ಬ್ಯಾಂಕ್ ಉದ್ಯೋಗಿಗಳ ಫೆಡರೇಷನ್ ಆಫ್ ಇಂಡಿಯಾ (ಬಿಇಎಫ್‍ಐ) ಮಂಗಳವಾರ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದಿಂದ ಮಂಗಳವಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳ ಸೇವೆಯಲ್ಲಿ ಸಮಸ್ಯೆಯಾಗುವ ಸಾಧ್ಯತೆಯಿದ್ದು, ಖಾಸಗಿ ವಲಯದ ಬ್ಯಾಂಕ್‍ಗಳು ಈ ಮುಷ್ಕರದಲ್ಲಿ ಭಾಗವಹಿಸುತ್ತಿಲ್ಲ. ಮುಷ್ಕರ ನಡೆಯುವ ಪ್ರದೇಶದಲ್ಲಿ ಎಟಿಎಂಗಳನ್ನೂ ಮುಚ್ಚುವುದಾಗಿ ಸಂಘಟನೆಗಳು ತಿಳಿಸಿವೆ. ಬ್ಯಾಂಕ್ ಮುಷ್ಕರವನ್ನು ಹಿಂದಕ್ಕೆ ಪಡೆಯುವಂತೆ ಸರ್ಕಾರ […]

ತಿಹಾರ್ ಜೈಲ್​ಗೆ ಹೋಗಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದ ಮಾಜಿ ಸಿಎಂ ಎಚ್​ಡಿಕೆ

Monday, October 21st, 2019
HDK

ನವದೆಹಲಿ : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.ಕುಮಾರ ಸ್ವಾಮಿ ಸೋಮವಾರ ಬೆಳಗ್ಗೆ ತಿಹಾರ್ ಜೈಲಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ನೇತಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವಿಚಾರ ಭಾನುವಾರ ರಾತ್ರಿಯೇ ಬಹಿರಂಗವಾಗಿತ್ತು. ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರ ಜತೆಗೆ ಕುಮಾರಸ್ವಾಮಿ ತಿಹಾರ್ ಜೈಲಿಗೆ ಭೇಟಿ ನೀಡಿದ್ದರು. ಭೇಟಿ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕುಮಾರಸ್ವಾಮಿ, ರಾಜಕೀಯ ವಿಚಾರಗಳು ಭಿನ್ನವಾಗಿರುತ್ತವೆ. ಆದರೆ, ನಮ್ಮ ವೈಯಕ್ತಿಕ ಒಡನಾಟ ಚೆನ್ನಾಗಿದೆ. ಅದು ರಾಜಕೀಯಕ್ಕಿಂತ ಭಿನ್ನವಾದುದು. ಇದು […]

ಕಲ್ಕಿ ಭಗವಾನ್ ಅಧಿಕ ಮೌಲ್ಯದ ಅಘೋಷಿತ ಆಸ್ತಿ ಪತ್ತೆ : ಐಟಿ ಅಧಿಕಾರಿಗಳಿಂದ 43.90 ಕೋಟಿ ರೂ. ನಗದು ವಶ

Saturday, October 19th, 2019
kalki-bhagavan

ಹೈದರಾಬಾದ್ : ವಿವಾದಿತ ಸ್ವಯಂಘೋಷಿತ ದೇವಮಾನವ ಕಲ್ಕಿ ಭಗವಾನ್ಗೆ ಸೇರಿದ ವಿವಿಧ ಪ್ರದೇಶಗಳಲ್ಲಿ ಬುಧವಾರ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 500 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ. ಕಲ್ಕಿ ಭಗವಾನ್ಗೆ ಸೇರಿದ ಚಿತ್ತೂರಿನ ಆಶ್ರಮ, ಆಂಧ್ರ ಮತ್ತು ಕರ್ನಾಟಕದ ವಿವಿಧೆಡೆ ಹಾಗೂ ಕಲ್ಕಿ ಭಗವಾನ್ ಪುತ್ರ ತಮಿಳುನಾಡಿನಲ್ಲಿ ಹೊಂದಿದ್ದ ವಹಿವಾಟಿನ ಸ್ಥಳಗಳು ಸೇರಿ 40 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಈ ವೇಳೆ ಸುಮಾರು 409 ಕೋಟಿ […]

ಪಟಾಕಿ ತಯಾರಿಸುತ್ತಿದ್ದ ಮನೆಗೆ ಬೆಂಕಿ : ಇಬ್ಬರು ಮೃತ್ಯು

Saturday, October 19th, 2019
pataki

ಗುನಾ : ಪಟಾಕಿ ತಯಾರಿಸುತ್ತಿದ್ದ ಮನೆಗೆ ಬೆಂಕಿ ತಗುಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮೀರ್ (18) ಮತ್ತು ರುಷ್ಕರ್ (26) ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು.  

ಕಾಂಗ್ರೆಸ್-ಎನ್​ಸಿಪಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತಿರುಗೇಟು

Thursday, October 17th, 2019
modi

ಮಹಾರಾಷ್ಟ್ರ : ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದಕ್ಕೂ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಗೂ ಏನು ಸಂಬಂಧ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷಗಳನ್ನು (ಎನ್ಸಿಪಿ) ಪ್ರಧಾನಿ ನರೇಂದ್ರ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೀಗೆ ಕೇಳಲು ಅವುಗಳಿಗೆ ನಾಚಿಕೆಯಾಗುವು ದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ನಾಯಕರನ್ನು ಮತ್ತು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ರನ್ನು ಹಿಗ್ಗಾಮುಗ್ಗಾ ಟೀಕಿಸಿದರು. ಜಮ್ಮು ಮತ್ತು ಕಾಶ್ಮೀರಕ್ಕಾಗಿ ತ್ಯಾಗ ಮಾಡಿದ ಮಹಾರಾಷ್ಟ್ರದ ಮಕ್ಕಳ ಬಗ್ಗೆ ನಮಗೆ ಹೆಮ್ಮೆಯಿದೆ. […]

ಡಿ.ಕೆ.ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Monday, October 14th, 2019
DKShivkumar

ನವ ದೆಹಲಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದ್ದು ಅಲ್ಲಿಯವರೆಗೆ ಅವರು ತಿಹಾರ್ ಜೈಲಿನಲ್ಲಿಯೇ ಇರಬೇಕಾಗಿದೆ. ವಕೀಲ ಅಭಿಷೇಕ್ ಮನುಸಿಂಘ್ವಿ ಕೋರ್ಟ್ಗೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಧ್ಯಾಹ್ನ 3.30 ಕ್ಕೆ ಮುಂದೂಡಲಾಯಿತು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಇದ್ದಾರೆ. ಇಡಿ ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.  

ಇಂದು ದೆಹಲಿ ಹೈಕೋರ್ಟ್ ನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ

Monday, October 14th, 2019
DKShi

ನವ ದೆಹಲಿ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿ ಕೆ ಶಿವಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ. ಸೋಮವಾರ ಬೆಳಿಗ್ಗೆ ದೆಹಲಿ ಉಚ್ಛ ನ್ಯಾಯಾಲಯದ ಎದುರು ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಮಾಜಿ ಸಚಿವರ ಪರ ಮೂರು ಹಿರಿಯ ವಕೀಲರು ವಾದ ಮಂಡಿಸುವ ಸಾಧ್ಯತೆ ಇದೆ […]

ಮಲೇಶ್ಯಾದಿಂದ ಬಂದವರ ಬ್ಯಾಗ್ ನಲ್ಲಿ ವಿವಿಧ ಜಾತಿಯ ಹಲ್ಲಿಗಳು ಹೆಬ್ಬಾವುಗಳು : ಇಬ್ಬರ ಬಂಧನ

Friday, October 11th, 2019
maleshya

ಚೆನ್ನೈ : ಕೌಲಾಲಾಂಪುರ್ ದಿಂದ ಚೆನ್ನೈಗೆ ಗುರುವಾರ ವಿಮಾನದಲ್ಲಿಳಿದ ಇಬ್ಬರ ಬ್ಯಾಗ್ ಗಳನ್ನು ಪರಿಶೀಲಿಸಿದ ಅಧಿಕಾರಿಗಳಿಗೆ ಆಘಾತವೊಂದು ಕಾದಿತ್ತು. ಯಾಕೆಂದರೆ ಅವರ ಬ್ಯಾಗ್ ನಲ್ಲಿ ಇದ್ದಿದ್ದು ಬಟ್ಟೆ ಬರೆಗಳಲ್ಲ, ಬದಲಾಗಿ ಹೆಬ್ಬಾವುಗಳು ಮತ್ತು ಹಲ್ಲಿಗಳು. ಸರಿಸೃಪಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ರಾಮನಾಥಪುರಂ ಜಿಲ್ಲೆಯ ಮೊಹಮ್ಮದ್ ಪರ್ವೇಜ್ (36) ಮತ್ತು ಶಿವಗಂಗಾ ಜಿಲ್ಲೆಯ ಮೊಹಮ್ಮದ್ ಅಕ್ಬರ್ (28) ಬಂಧಿತರು. ಎರಡು ಹಸಿರು ಹೆಬ್ಬಾವುಗಳು ಮತ್ತು 14 ವಿವಿಧ ಜಾತಿಯ ಹಲ್ಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಸಾಗಾಣಿಕೆಯ ಖಚಿತ ಮಾಹಿತಿ […]

ಪ್ರಿಯತಮೆ ಬೇರೊಬ್ಬನನ್ನು ಮದ್ವೆಯಾಗಿದ್ದಕ್ಕೆ ಯುವಕ ನೇಣು ಬಿಗಿದು ಆತ್ಮಹತ್ಯೆ

Friday, October 11th, 2019
sucide

ಹೈದರಾಬಾದ್ : ತಾನು ಪ್ರೀತಿಸಿದಾಕೆ ಬೇರೊಬ್ಬನನ್ನು ಮದುವೆಯಾದಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಬಂದಸೋಮರಂ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು 22 ವರ್ಷದ ಸುಧೀರ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷದಿಂದ ಇದೇ ಗ್ರಾಮದಲ್ಲಿ ಕೋಳಿ ಫಾರ್ಮ್ ನಲ್ಲಿ ಕೆಲಸ ಮಾಡಿಕೊಂಡಿದ್ದನು. ಇಲ್ಲಿಯೇ ಇತ್ತೀಚೆಗೆ ಯುವತಿ ಹಾಗೂ ಆಕೆಯ ಸಹೋದರಿ, ಸಹೋದರ ಕೂಡ ಕೆಲಸಕ್ಕೆ ಸೇರಿಕೊಂಡಿದ್ದರು. ಸಹೋದ್ಯೋಗಿಗಳಾಗಿದ್ದ ಸುಧೀರ್ ಮತ್ತು ಯುವತಿಯ ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ 25 […]