ಚಿಕ್ಕಪ್ಪನಿಂದಲೇ 17 ವರ್ಷದ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: 7 ತಿಂಗಳಲ್ಲೇ ಮಗುವಿಗೆ ಜನ್ಮ

Friday, December 28th, 2018
pune

ಪುಣೆ: 17 ವರ್ಷದ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ಚಿಕ್ಕಪ್ಪ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಆಕೆ ಏಳು ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಪುಣೆಯ ಪಿಂಪ್ರಿ- ಚಿಂಚ್ವಾಡ್ ಎಂಬಲ್ಲಿ ನಡೆದಿದೆ. ಹೊಟ್ಟೆ ನೋವಿನಿಂದ ನರಳುತ್ತಿದ್ದ ಬಾಲಕಿಯನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರದ ಕೃತ್ಯ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿಯೂ 9ನೇ ತರಗತಿಯಲ್ಲಿ ಓದುತ್ತಿದ್ದು, ಅತ್ಯಾಚಾರ ಎಸಗಿದ್ದ ಆರೋಪಿ ಈ ವಿಷಯ ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಾಲಕಿಯಿಂದ ಪ್ರಮಾಣ ಮಾಡಿಸಿಕೊಂಡಿದ್ದ ಎಂದು […]

ವಾಜಪೇಯಿ 94ನೇ ಜಯಂತಿ: ಅಜಾತ ಶತ್ರುಗೆ ಪ್ರಧಾನಿ ಮೋದಿ ನಮನ

Tuesday, December 25th, 2018
vajpayee

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿನ ವಾಜಪೇಯಿ ಸಮಾಧಿಗೆ ರಾಜಕೀಯ ಗಣ್ಯರು ಪುಷ್ಪ ಸಮರ್ಪಣೆ ಮಾಡಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಸೇರಿದಂತೆ ಅನೇಕ ಗಣ್ಯರು ಅಜಾತುಶತ್ರು ಅಟಲ್ ಬಿಹಾರಿ ವಾಜಪೇಯಿ ಸಮಾಧಿ ಬಳಿ ಆಗಮಿಸಿ ಪುಷ್ಪ ಸಮರ್ಪಣೆ ಮಾಡಿದರು. ಈ ಮೂಲಕ ವಾಜಪೇಯಿ ಅವರ ಸ್ಮಾರಕ ಸ್ಥಳ ಲೋಕಾರ್ಪಣೆಗೊಂಡಿತು. ವಾಜಪೇಯಿ ಅವರ […]

ದೇಶದ ನವೋದಯ ಶಾಲೆಗಳಲ್ಲಿ 5 ವರ್ಷಕ್ಕೆ 49 ವಿದ್ಯಾರ್ಥಿಗಳ ಆತ್ಮಹತ್ಯೆ… ದಲಿತ, ಬುಡಕಟ್ಟು ಮಕ್ಕಳೇ ಹೆಚ್ಚು

Monday, December 24th, 2018
navodaya

ದೆಹಲಿ: ಗ್ರಾಮಿಣ ಭಾಗದ ಪ್ರತಿಭಾನ್ವಿತ ಮಕ್ಕಳಿಗೆಂದು ಕೇಂದ್ರ ಸರ್ಕಾರದಿಂದ ನಿರ್ಮಿಸಲಾದ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್ವಿ) ಕೇವಲ ಐದು ವರ್ಷಗಳಲ್ಲಿ ಕಾಲೇಜು ಕ್ಯಾಂಪಸ್ನಲ್ಲಿ ಸುಮಾರು 49 ಆತ್ಮಹತ್ಯೆ ಪ್ರಕರಣಗಳು ನಡೆದಿದೆ ಎಂದು ಆರ್ಟಿಐ ಮಾಹಿತಿಯೊಂದು ಹೇಳಿದೆ. 2013 ರಿಂದ 2017 ರವರೆಗೆ ನಡೆದ 49 ಆತ್ಮಹತ್ಯೆ ಪ್ರಕರಣಗಳಲ್ಲಿ ಅರ್ಧದಷ್ಟು ದಲಿತ ಮತ್ತು ಬುಡಕಟ್ಟು ಜನಾಂಗಕ್ಕೆ ಸೇರಿರುವ ವಿದ್ಯಾರ್ಥಿಗಳೇ ಇದ್ದಾರೆ. ಇದರಲ್ಲಿ ಹೆಚ್ಚಿನವರು ಹುಡುಗರು ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಇಂಗ್ಲಿಷ್ ದೈನಿಕವೊಂದು ಪಡೆದ ದಾಖಲೆಗಳಿಂದ ತಿಳಿದುಬಂದಿದೆ. ಸರ್ಕಾರದ […]

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ: ನಟ ಕಮಲ್​ ಹಾಸನ್​

Saturday, December 22nd, 2018
kamal-hassan

ಚೆನ್ನೈ: ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ರಾಜಕೀಯ ರಂಗ ಪ್ರವೇಶಿಸಿದ ಕಮಲ್, ಮಕ್ಕಳ್ ನಿಧಿ ಮೈಯಂ ಪಕ್ಷ ಸ್ಥಾಪನೆ ಮಾಡಿದ್ದರು. ಮುಂಬರುವ ಲೋಕಸಭೆ ಚುನಾವಣೆಗೆ ತಮ್ಮ ಪಕ್ಷ ಸನ್ನದ್ಧವಾಗಿದೆ ಎಂದೂ ತಮ್ಮ ಹುಟ್ಟುಹಬ್ಬದಂದು ಹೇಳಿದ್ದರು. ಆದರೆ ಅವರು ಸ್ಪರ್ಧಿಸುವ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ಅವರೇ ಹೇಳಿಕೊಂಡಿರುವಂತೆ ಮುಂದಿನ ಲೋಕಸಭೆ ಚುನಾವಣೆಗೆ ಅವರು ಸ್ಪರ್ಧಿಸುತ್ತಿರುವುದು ಖಚಿತ. ಆದರೆ ಯಾವ ಕ್ಷೇತ್ರದಿಂದ […]

ಬಿಜೆಪಿ ರಥಯಾತ್ರೆಗೆ ವಿರೋಧ: ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ

Friday, December 21st, 2018
amit-shah

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆ ಆಯೋಜಿಸುವ ಕುರಿತಾಗಿ ಬಿಜೆಪಿ ಹಾಗೂ ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಬಿಜೆಪಿ ರಥಯಾತ್ರೆ ಆಯೋಜನೆಗೆ ಅವಕಾಶ ನೀಡಿರುವ ತೀರ್ಪಿನ್ನು ಪ್ರಶ್ನಿಸಿ ಬಂಗಾಳ ಸರ್ಕಾರ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. ನಿನ್ನೆ ಕೋಲ್ಕತ್ತಾ ಹೈಕೋರ್ಟಿನ ಏಕಸದಸ್ಯ ಪೀಠವು ಬಿಜೆಪಿ ರಥಯಾತ್ರೆಗೆ ಅವಕಾಶ ನೀಡಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಮುಖ್ಯನಾಯಮೂರ್ತಿ ದೆಬಸಿಶ್ ಕರ್ಗುಪ್ತ ಹಾಗೂ ನ್ಯಾ. ಶಂಪ ಸರ್ಕಾರ ಅವರ ಪೀಠದ ಎದುರು ಮೇಲ್ಮನವಿ […]

ರೈತರ ಸಾಲಮನ್ನಾ ಮಾಡಲು ಛತ್ತೀಸ್​ಗಢ ಸಿಎಂ ನಿರ್ಧಾರ: ರೈತರಿಗೆ ಈ ಮೂಲಕ ಭರವಸೆ

Tuesday, December 18th, 2018
chatisgarh

ಛತ್ತೀಸ್ಗಢ: ನಿನ್ನೆಯಷ್ಟೆ ಛತ್ತೀಸ್ಗಢದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಶ್ ಬಘೇಲ್ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಧಿಕಾರಿ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಧ್ಯಪ್ರದೇಶದ ರೈತರ ಸಾಲಮನ್ನಾ ಕಡತಗಳಿಗೆ ಸಹಿ ಹಾಕಿದ ಕಮಲ್ನಾಥ್ರ ಹಾದಿಯನ್ನೇ ಹಿಡಿದ ಬಘೇಲಾ ರೈತರಿಗೆ ಈ ಮೂಲಕ ಭರವಸೆ ತುಂಬಿದ್ದಾರೆ. ಸಿಎಂ ಆದ ಕೆಲ ಗಂಟೆಗಳಲ್ಲಿಯೇ ಮೂರು ಪ್ರಮುಖ ಘೋಷಣೆಗಳನ್ನು ಮಾಡಿದ ಬಘೇಲ್, ರೈತರ ಸಾಲಮನ್ನಾ, ಮೆಕ್ಕೆ ಜೋಳಕ್ಕೆ ಬೆಂಬಲ ಬೆಲೆ ಹಾಗೂ 2013 ರ ಝಿರಂ ಘಾಟಿ ಮಾವೋ […]

ಇಂದು ಐಪಿಎಲ್​ ಹರಾಜು…ಈ ಆಟಗಾರರ ಮೇಲಿದೆ ಫ್ರಾಂಚೈಸಿಗಳ ಕಣ್ಣು..!

Tuesday, December 18th, 2018
premier-legue

ಜೈಪುರ: ಐಪಿಎಲ್ ಆರಂಭಕ್ಕೆ ಇನ್ನು ಕೆಲ ತಿಂಗಳು ಬಾಕಿ ಇರುವಂತೆ ಚಟುವಟಿಕೆಗಳು ಜೋರಾಗಿ ನಡೆಯುತ್ತಿದ್ದು, ಇಂದು ಜೈಪುರದಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ತಂಡದಲ್ಲಿ ಹಲವು ಆಟಗಾರರನ್ನು ಉಳಿಸಿಕೊಂಡಿರುವ ಫ್ರಾಂಚೈಸಿಗಳು ಇಂದಿನ ಹರಾಜಿನಲ್ಲಿ ಬಲಿಷ್ಠ ಆಟಗಾರರನ್ನು ಖರೀದಿ ಮಾಡಲು ಪ್ಲಾನ್ ಮಾಡಿವೆ. ವೆಸ್ಟ್ ಇಂಡೀಸ್ ತಂಡದ ಯುವ ಆಟಗಾರ ಶಿಮ್ರೋನ್ ಹೇಟ್ಮಯರ್ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಬಿಕರಿಯಾಗುವ ಸಾಧ್ಯತೆ ಇದೆ. ಕೆಲ ತಿಂಗಳ ಹಿಂದೆ ಭಾರತ ಪ್ರವಾಸ ಕೈಗೊಂಡಿದ್ದ ವಿಂಡೀಸ್ ತಂಡದಲ್ಲಿ […]

ಮಧ್ಯಪ್ರದೇಶದ 18ನೇ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ

Monday, December 17th, 2018
kamalnath

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಧ್ವಜ ನೆಟ್ಟು, ಗೆಲುವಿನ ನಗೆ ಬೀರಿದ ಕಮಲನಾಥ್ ಅವರು ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜು ಖರ್ಗೆ, ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ , ಜೆಡಿಯು ನಿರ್ಮಿತ ನಾಯಕ ಶರದ್ ಯಾದವ್, ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಡಿಸಿಎಂ ಸಚಿನ್ ಪೈಲಟ್, ನವಜೋತ್ ಸಿಂಗ್ ಸಿಧು, […]

ವಿಶ್ವದ 7ನೇ ಅತಿ ದೊಡ್ಡ ವಜ್ರ ಪತ್ತೆ… ಮೊಟ್ಟೆ ಗಾತ್ರದ ಡೈಮಂಡ್​ ಸಿಕ್ಕಿದ್ದು ಎಲ್ಲಿ, ಮೌಲ್ಯವೆಷ್ಟು!?

Saturday, December 15th, 2018
stone-kenada

ಕೆನಡಾ: 552 ಕ್ಯಾರಟ್ ಹಳದಿ ವಜ್ರ ಕೆನಡಾದ ವಾಯವ್ಯ ಪ್ರಾಂತ್ಯದ ದೈವಿಕ್ ಗಣಿ ಪ್ರದೇಶದಲ್ಲಿ ಲಭ್ಯವಾಗಿದ್ದು, ಇದು ಹಿಂದೆಂದೂ ಲಭ್ಯವಾಗದ ಅತಿ ದೊಡ್ಡ ವಜ್ರದ ಹರಳು ಎಂದೇ ಹೇಳಲಾಗುತ್ತಿದೆ. ದೈವಿಕ್ ಗಣಿ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ವಜ್ರ ಉತ್ಪಾದನೆ ಮಾಡುತ್ತಿದ್ದು, ಅದರಲ್ಲಿ ಇದು ಇಲ್ಲಿಯವರೆಗೆ ಲಭ್ಯವಾಗಿರುವ ಅತಿ ದೊಡ್ಡ ವಜ್ರವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಡೊಮಿನಿನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇನ್ ದುರ್ಗಿನ್ ಮಾತನಾಡಿದ್ದು, ಲಭ್ಯವಾಗಿರುವ ವಜ್ರ ಅತಿ ದೊಡ್ಡ ಗುಣಮಟ್ಟದಿಂದ ಕೂಡಿರುವುದಾಗಿ ತಿಳಿಸಿದ್ದಾರೆ. ಆದರೆ ಇದರ ಬೆಲೆ […]

ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ: ರಾಹುಲ್​ ಗಾಂಧಿ

Saturday, December 15th, 2018
rahul-gandhi

ನವದೆಹಲಿ: ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೃಢಪಡಿಸಿದ್ದಾರೆ. ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಇದಕ್ಕೆ ಬದ್ಧರಿರುವುದಾಗಿ ಹೇಳಿದ ಅವರು, ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಮತಯಾಚನೆ ಮಾಡಿತ್ತು. ಚುನಾವಣೆ […]