ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಅಹ್ವಾನ

Thursday, June 1st, 2023
Advocate

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರ್ಕಾರ ನಿರ್ಧರಿಸಿದ್ದು, ಆಸಕ್ತ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯ ಕಾನೂನು ಶಾಖೆಯಲ್ಲಿ ಅರ್ಜಿ ಪಡೆದು, ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿ ಸಲ್ಲಿಸಬೇಕು. ವಿಶೇಷ […]

ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ ರಚಿತಾ ರಾಮ್

Thursday, June 1st, 2023
Rachitharam Kuthar

ಉಳ್ಳಾಲ : ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದು, ತನ್ನ ಮನಸ್ಸಿನ ಬೇಡಿಕೆಯನ್ನು ಈಡೇರಿಸಲು ಪ್ರಾರ್ಥಿಸಿದರು. ನಾನು ಮೊದಲನೇ ಬಾರಿಗೆ ಇಲ್ಲಿಗೆ ಬಂದಿದ್ದು, ತುಂಬಾ ಖುಷಿ ಆಗಿದೆ ಎಂದರು. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಕೊರಗಜ್ಜನ‌ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ಒಳಗಡೆ ಪ್ರವೇಶಿಸುವಾಗ ದೇವರ ಶಕ್ತಿಯ ಕಂಪನದ ಅನುಭವ ಆಗಿದೆ ಎಂದರು. ಮುಂದಿನ […]

ತಂಬಾಕು ಸೇವನೆ: ಪರಲೋಕಕ್ಕೆ ರವಾನೆ-ಎಚ್ಚರ ವಹಿಸಲು ಸೂಚನೆ

Thursday, June 1st, 2023
Tobaco-day

ಮಂಗಳೂರು : ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ತಂಬಾಕಿನ ಆಮಿಷಕ್ಕೆ ಯುವಜನತೆ ಬಲಿಯಾಗಬಾರದು, ಅದು ಕ್ಯಾನ್ಸರ್ ನಂತಹ ರೋಗಗಳಿಗೆ ಆಹ್ವಾನ ನೀಡುತ್ತದೆ ಎಂದು ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಅಭಿಪ್ರಾಯಪಟ್ಟರು. ಅವರು ಮೇ.31ರ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಡಾ. ಪಿ. ದಯಾನಂದ ಪೈ-ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ಜಿಲ್ಲಾ ಕಾನೂನು ಸೇವೆಗಳ […]

ಜೂನ್ 2 ರಂದು ‘ಕುಡ್ಲ ಸೀಮೆದೊಡತಿ ಮಂಗಳಾದೇವಿ’ ತುಳು ಭಕ್ತಿ ಗೀತೆ ಬಿಡುಗಡೆ

Thursday, June 1st, 2023
kudlaseeme

ಮಂಗಳೂರು : ದಯಾ ಕ್ರಿಯೇಷನ್ ಬಾಯಾರು ಆರ್ಪಿಸುವ ”ಕುಡ್ಲ ಸೀಮೆದೊಡತಿ ಮಂಗಳಾದೇವಿ” ತುಳು ಭಕ್ತಿ ಗೀತೆ ಯನ್ನು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಜೂನ್ 2 ಶುಕ್ರವಾರ ಸಂಜೆ 6. ಗಂಟೆಗೆ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂಎಲ್ ಅಶ್ವಿನಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ BJMM ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ದೇವಸ್ಥಾನದ ಆಡಳಿತ ಮೊಕ್ತೇಸರು ಉಪಸ್ಥಿತ ರಿರುವರು. ಕುಡ್ಲ ಸೀಮೆದೊಡತಿ ಮಂಗಳಾದೇವಿ. ಈ ಹಾಡಿಗೆ ಹರ್ಷಲ್ ಶೆಟ್ಟಿ […]

ಕೋಟಿಗೂ ಮಿಕ್ಕಿ ವಂಚನೆ ಮುಂಬೈ ಉದ್ಯಮಿ ಬಂಧನ

Wednesday, May 31st, 2023
ಕೋಟಿಗೂ ಮಿಕ್ಕಿ ವಂಚನೆ ಮುಂಬೈ ಉದ್ಯಮಿ ಬಂಧನ

ಮಂಗಳೂರು : ವ್ಯಕ್ತಿಗಳಿಬ್ಬರಿಗೆ ಕೋಟಿಗೂ ಮಿಕ್ಕಿ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಅವರನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಮುಂಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಗಳೂರಿನ ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕರಾದ ರೋಹನ್ ಮೊಂತೆರೋ ಮತ್ತು ತೊಕ್ಕೊಟ್ಟಿನ ಹರ್ಷ ಫೈನಾನ್ಸ್ ಮಾಲೀಕ ಹರೀಶ್ ಎಂಬವರಿಗೆ, 1.75 ಕೋಟಿ ರೂ.ಗಳನ್ನು ವಿಶ್ವನಾಥ್ ಶೆಟ್ಟಿ […]

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ನಿಧನ

Wednesday, May 31st, 2023
ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ನಿಧನ

ಮಂಗಳೂರು: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ದಿವಂಗತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ […]

ಜಾಗೃತಿ ಮೂಲಕ ಹೆಣ್ಣು ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬುವ ಕೆಲಸ : ಡಾ.ಕುಮಾರ್

Tuesday, May 30th, 2023
ಜಾಗೃತಿ ಮೂಲಕ ಹೆಣ್ಣು ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬುವ ಕೆಲಸ : ಡಾ.ಕುಮಾರ್

ಮಂಗಳೂರು : ಋತುಸ್ರಾವವೆಂಬುದು ಪ್ರಕೃತಿ ಮಹಿಳೆಗೆ ನೀಡಿರುವ ನೈಸರ್ಗಿಕ ಪ್ರಕ್ರಿಯೆಯೆ ಹೊರತು ಖಾಯಿಲೆಯಲ್ಲ. ಋತುಸ್ರಾವ ಜಾಗೃತಿ ಮೂಲಕ ಹೆಣ್ಣು ಮಕ್ಕಳಲ್ಲಿ ಆತ್ಮ ವಿಶ್ವಾಸ ಹಾಗೂ ಆತ್ಮ ಗೌರವ ಹೆಚ್ಚಿಸುವ ಕೆಲಸಕ್ಕೆ ಪ್ರೇರಣೆ ನೀಡುವುದು ಎಲ್ಲರ ಜವಾಬ್ದಾರಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ  ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಅವರು ಅಭಿಪ್ರಾಯಪಟ್ಟರು. ಅವರು ಮೇ.30ರ‌ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ‌ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸ್ವಚ್ಛ […]

ವಿದೇಶದಲ್ಲಿ ಕೊಯಿಲ ಗ್ರಾಮ ದ ಯುವಕ ಆತ್ಮಹತ್ಯೆ

Tuesday, May 30th, 2023
ವಿದೇಶದಲ್ಲಿ ಕೊಯಿಲ ಗ್ರಾಮ ದ ಯುವಕ ಆತ್ಮಹತ್ಯೆ

ಮಂಗಳೂರು : ಕಡಬ ತಾಲೂಕಿನ ಕೊಯಿಲ ಗ್ರಾಮ ದ ಯುವಕನೋರ್ವ ಭಾನುವಾರ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32) ಎಂದು ಗುರುತಿಸಲಾಗಿದೆ. ಇವರು ಕೊಲ್ಲಿ ರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡ ಮಸ್ಕತ್‌ನಲ್ಲೇ […]

ಹರೇಕಳದ ನವ ವಿವಾಹಿತ ನಿಗೂಢ ನಾಪತ್ತೆ

Tuesday, May 30th, 2023
ಹರೇಕಳದ ನವ ವಿವಾಹಿತ ನಿಗೂಢ ನಾಪತ್ತೆ

ಉಳ್ಳಾಲ : ನವ ವಿವಾಹಿತ ನೋರ್ವ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದವರು. ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ನಂತರ ಜೆಪ್ಪು ಕಂರ್ಭಿಸ್ಥಾನ ಸಮೀಪ ತಾಯಿ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳುವುದಾಗಿ ತಿಳಿಸಿ ಹೋದವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಇನ್ನು ಖಾಸಗಿ ಸಂಸ್ಥೆಯೊಂದರಲ್ಲಿ ತಾಂತ್ರಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಜಯರಾಜ್, ಟೂರಿಸ್ಟ್ ವಾಹನವನ್ನು ಹೊಂದಿದ್ದಾರೆ. ಕೆಲಸಕ್ಕೆ […]

ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಜೂನ್ 1 ರಿಂದ ರಸ್ತೆಯನ್ನು ಅಗೆಯುವಂತಿಲ್ಲ

Tuesday, May 30th, 2023
Road-cutting

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೂನ್ 1ರಿಂದ ಸೆಪ್ಟಂಬರ್ 30ರವರೆಗೆ ಯಾವುದೇ ಉದ್ದೇಶಕ್ಕೆ ಸಾರ್ವಜನಿಕ ರಸ್ತೆಯನ್ನು ಅಗೆಯುವಂತಿಲ್ಲ ಎಂದು ಪಾಲಿಕೆ ತಿಳಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಮಂಗಳೂರು ಮನಪಾ ಆಯುಕ್ತ, ಮಳೆಗಾಲ ಆರಂಭ ಕಾಲ ಸನ್ನಿಹಿತವಾಗುತ್ತಿರುವುದರಿಂದ ಜೂನ್ 1ರಿಂದ ಸೆಪ್ಟಂಬರ್ 30ರ ವರೆಗೆ ನಳ್ಳಿ ನೀರಿನ ಜೋಡಣೆ, ಒಳಚರಂಡಿ ಜೋಡಣೆ, ವಿದ್ಯುತ್ ಸಂಪರ್ಕ ಹಾಗೂ ಇನ್ನಿತರ ಯಾವುದೇ ಉದ್ದೇಶಕ್ಕೆ ಸಾರ್ವಜನಿಕ ರಸ್ತೆಯನ್ನು ಕಡಿತಗೊಳಿಸುವುದನ್ನು ನಿಷೇಧಿಸಲಾಗಿದೆ. ರಸ್ತೆ ಕಡಿತಗೊಳಿಸುವುದು ಕಂಡುಬಂದಲ್ಲಿ ಕೆ.ಎಂ.ಸಿ. ಕಾಯ್ದೆಯಂತೆ ಸೂಕ್ತ […]