ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

Monday, December 13th, 2021
Ganja students

ಮಂಗಳೂರು : ತೊಕ್ಕೊಟ್ಟು ಸಮೀಪದ ಬಗಂಬಿಲ ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ತ್ರಿಶ್ಶೂರ್‌ನ ಆದರ್ಶ್ ಜ್ಯೋತಿ (22) ಮತ್ತು ಕೊಟ್ಟಾಯಂನ ಯೋಯಲ್ ಜೋಯ್ಸ್ (22) ಎಂದು ಗುರುತಿಸಲಾಗಿದೆ. ಆದರ್ಶ್ ಬಿಡಿಎಸ್ ಮತ್ತು ಯೋಯಲ್ ನರ್ಸಿಂಗ್ ವಿದ್ಯಾರ್ಥಿಗಳು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ತಿಳಿಸಿದ್ದಾರೆ. ಸೋಮವಾರ ಬಗಂಬಿಲ ಪರಿಸರದಲ್ಲಿ ಇವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಸುಮಾರು 220 ಗ್ರಾಂ ತೂಕದ ಗಾಂಜಾ ಇವರ […]

ಶ್ರೀ ವೀರ ವೆಂಕಟೇಶ ದೇವರ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನೆ

Monday, December 13th, 2021
Annapoorne

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು . ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ್ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು . ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ […]

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಅಭಿನಂದನೆ

Monday, December 13th, 2021
MP Ravindranath

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ್ ಅವರನ್ನು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮತ್ತು ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪರವಾಗಿ ಅವರ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಿ ಸನ್ಮಾನಿಸಿತು. ಈ ಸಂದರ್ಭ ದಕ್ಷಿಣ ಕನ್ನಡ ಚುಸಾಪ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಮಂಗಳೂರು ಚುಸಾಪ ಹಾಗೂ ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕಾ.ವೀ  ಕೃಷ್ಣದಾಸ್, ಉಪಾಧ್ಯಕ್ಷೆ ಅರುಣಾ ನಾಗರಾಜ್,ಮಾಲತಿ ಶೆಟ್ಟಿ ಮಾಣೂರು,ಗೋಪಾಲಕೃಷ್ಣ ಶಾಸ್ತ್ರಿ, […]

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಕಿಚ್ಚ ಸುದೀಪ್ ಕುಟುಂಬ

Sunday, December 12th, 2021
kicha-sudeep

ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠಾ ಕಾರ್ಯವನ್ನು ನೆರವೇರಿಸಿದರು. ನಂತರ ಸುದೀಪ್ ಪತ್ನಿ ಪ್ರಿಯಾ, ಮಗಳು ಸಾನ್ವಿಯೊಂದಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದರು.  

ಮಹಿಳಾ ಗ್ರಾಹಕಿಗೆ ಚಪ್ಪಲಿ ತೋರಿಸುವುದಾಗಿ ಹೇಳಿ ಭುಜ ಮತ್ತು ಎದೆ ಮುಟ್ಟಿ ಲೈಂಗಿಕ ಕಿರುಕುಳ, ಆರೋಪಿ ಬಂಧನ

Sunday, December 12th, 2021
shamshudin

ಮುಲ್ಕಿ : ಚಪ್ಪಲಿ ಖರೀದಿಗೆ ಹೋಗಿದ್ದ ಮಹಿಳಾ ಗ್ರಾಹಕಿ ಯೊಬ್ಬರನ್ನು ಚಪ್ಪಲಿ ತೋರಿಸುವುದಾಗಿ ಹೇಳಿ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಭಾನುವಾರ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಂಗಡಿ ಮಾಲಕ ಸಂಶುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ  ಮಧ್ಯಾಹ್ನ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಚಪ್ಪಲಿ ಅಂಗಡಿಯಲ್ಲಿ ಅದರ ಮಾಲಿಕರು ಮಹಿಳಾ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿ ಗೆ ಅವರು ತೋರಿಸಿದ […]

ನಮ್ಮನ್ನು ನಿರ್ವಹಿಸಿಕೊಂಡರೆ ಒತ್ತಡ ನಿರ್ವಹಣೆಯ ಪ್ರಶ್ನೆಯಿಲ್ಲ: ಮಮತಾ ಆಚಾರ್

Saturday, December 11th, 2021
mamatha-achar

ಮಂಗಳೂರು: ನಾವು ಒತ್ತಡವನ್ನು ನಿರ್ವಹಿಸುವ ಬದಲು  ನಮ್ಮನ್ನು ನಾವು ಚೆನ್ನಾಗಿ ನಿರ್ವಹಿಸಿಕೊಂಡರೆ ಒತ್ತಡದ ಸಮಸ್ಯೆಯೇ ಉದ್ಭವವಾಗುವುದಿಲ್ಲ, ಎಂದು ಖ್ಯಾತ ಆಪ್ತ ಸಮಾಲೋಚಕಿ ಶ್ರೀಮತಿ ಮಮತಾ ಆಚಾರ್ ಅಭಿಪ್ರಾಯಪಟ್ಟರು. ನಗರದ  ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಇತ್ತೀಚೆಗೆ ಪ್ರಥಮ ಪದವಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಶುದ್ಧ ಗಾಳಿ, ಉತ್ತಮ ಆಹಾರ, ಸಾಕಷ್ಟು ನೀರು, ಧ್ಯಾನ, ವ್ಯಾಯಾಮ, ಸಮಯ ನಿರ್ವಹಣೆ ನಮ್ಮನ್ನು ಒತ್ತಡದಿಂದ ದೂರವಿಡಬಲ್ಲವು. ಮುಕ್ತವಾಗಿ ಮಾತನಾಡಬಹುದಾದ ಹಳೆಯ ಸ್ನೇಹಿತರು, ಹವ್ಯಾಸಗಳೂ ನಮಗೆ ನೆರವಾಗಬಲ್ಲವು. “ಮನಸ್ಸು ಹರಿಯುವ ನೀರಿನಂತೆ […]

ಶಿಕ್ಷಕನ ತಲೆಯ ಮೇಲೆ ಕಸದಬುಟ್ಟಿ ಹಾಕಿ ವಿಕೃತಿ, ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Saturday, December 11th, 2021
Student Attack

ದಾವಣಗೆರೆ: ತರಗತಿಯಲ್ಲಿ ಹರಡಿದ್ದ ಕಸವನ್ನು ನೋಡಿ ಬುದ್ಧಿ ಹೇಳಿದ ಶಿಕ್ಷಕನ ತಲೆಯ ಮೇಲಕ್ಕೇ ಕಸದಬುಟ್ಟಿ ಹಾಕಿ ವಿಕೃತಿ ಮೆರೆದ ವಿದ್ಯಾರ್ಥಿಗಳ ಮೇಲೆ ಇದೀಗ ಪೊಲೀಸ್ ಪ್ರಕರಣ ದಾಖಲಾಗಿದೆ. ಈ ಕುಚೇಷ್ಟೆಯ ವಿಡಿಯೋ ವೈರಲ್ ಆಗಿತ್ತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್‌, ಡಿಸೆಂಬರ್ 3 ರಂದು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ ತರಗತಿಯ ಕೆಲವು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದರು. ಈ […]

ದ.ಕ-ಉಡುಪಿ ಸ್ಥಳೀಯಾಡಳಿತ ವಿಧಾನ ಪರಿಷತ್‌ ಚುನಾವಣೆ, ಶೇ. 99.55 ಮತದಾನ

Friday, December 10th, 2021
kota-srinivasa-poojary

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ವಿಧಾನ ಪರಿಷತ್‌ನ  ಚುನಾವಣೆ ಇಂದು ಶಾಂತಿಯುತವಾಗಿ ನಡೆದಿದ್ದು, ಶೇ. 99.55 ಮತದಾನವಾಗಿದೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಉಭಯ ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟು 6040 ಮತದಾರರಲ್ಲಿ ಸಂಜೆ 4 ಗಂಟೆಯ ವೇಳೆಗೆ 6013 ಮಂದಿ ಮತದಾನ ಮಾಡಿದ್ದಾರೆ. ದ.ಕ. ಜಿಲ್ಲೆಯ 3290 ಗ್ರಾ.ಪಂ. ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ 60 ಸದಸ್ಯರು, ನಗರ ಸಭೆಯ 62, ಪುರಸಭೆಯ 50, ಪಟ್ಟಣ […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ, ಬ್ರಹ್ಮ ರಥೋತ್ಸವ

Friday, December 10th, 2021
Kukke-Subrahmanya

ಸುಬ್ರಹ್ಮಣ್ಯ:  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವದ ಪ್ರಯುಕ್ತ ಬ್ರಹ್ಮ ರಥೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಗುರುವಾರ ಬೆಳ್ಳಗೆ 6.58ರ ವೃಶ್ಚಿಕ ಲಗ್ನ ಸುಮೂಹರ್ತದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಾರೂಢರಾಗಿ  ಬ್ರಹ್ಮ ರಥೋತ್ಸವ ಮುನ್ನ ವಿವಿಧ ವೈದಿಕ ಕಾರ್ಯ ಹಾಗೂ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಮಹಾಪೂಜೆ ನೇರವೇರಿದ ಬಳಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ನಡೆಯಿತು.  ಬೆಳ್ಳಗೆ 6.58 ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮ ರಥದಲ್ಲಿ, ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾಗಿ ಬಳಿಕ […]

ಸೋಲುವ ಭೀತಿಯಿಂದ ಕಾಂಗ್ರೆಸ್ ಒಳಒಪ್ಪಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕೆ

Friday, December 10th, 2021
Nalinkumar-Kateel

ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕಿಂತಲೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಯಾವುದೇ ಪಕ್ಷದ ಜತೆ ಒಳ ಒಪ್ಪಂದ ಅಗತ್ಯ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿದೆ. ಹಾಗಾಗಿ ಒಳ ಒಪ್ಪಂದದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು `ಬಿಜೆಪಿ ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಘಟನಾತ್ಮಕವಾಗಿ ಎದುರಿಸಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ […]