ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಿಣಿಯಾಗಿಸಿದ ಸಂಬಂಧಿಕನ ಬಂಧನ

Thursday, November 11th, 2021
Ramesha

ಕಡಬ:  ಕೋಡಿಂಬಾಳ ಗ್ರಾಮದಲ್ಲಿ  ಅಪ್ರಾಪ್ತೆ  ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಕಳೆದ ಒಂದೂವರೆ ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ. 2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಗರ್ಭವತಿಯಾದ ಬಗ್ಗೆ ಬಾಲಕಿ ಯಾರಿಗೂ ಮಾಹಿತಿ ನೀಡಿರಲಿಲ್ಲ. ಆಕೆ ಅಸ್ವಸ್ಥಗೊಂಡಿದ್ದು, ಈ ಸಂಬಂಧ […]

ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ಬಂದ ಪೇಜಾವರ ಮಠಾಧೀಶರಿಗೆ ಭವ್ಯ ಸ್ವಾಗತ

Thursday, November 11th, 2021
pejavara seer

ಮಂಗಳೂರು : ಹರಿಪಾದಗೈದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ನಿರ್ಯಾಣೋತ್ತರದಲ್ಲಿ ಭಾರತ ಘನ ಸರಕಾರವು ಘೋಷಿಸಿದ ‘ಪದ್ಮವಿಭೂಷಣ’ ಪ್ರಶಸ್ತಿಯನ್ನು ತನ್ನ ಗುರುಗಳ ಪರವಾಗಿ ಸನ್ಮಾನ್ಯ ರಾಷ್ಟ್ರಪತಿಗಳಿಂದ ಸ್ವೀಕರಿಸಿ ಮಂಗಳೂರಿಗೆ ಆಗಮಿಸಿದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರನ್ನು ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವದಲ್ಲಿ ಮಂಗಳೂರಿನ ನಾಗರೀಕರಿಂದ ಸ್ವಾಗತಿಸಲಾಯಿತು. ಬೆಂಗಳೂರಿನಿಂದ ವಿಮಾನದ ಮೂಲಕ ಬಜ್ಪೆಗೆ ಆಗಮಿಸಿದ ಪೂಜ್ಯಶ್ರೀಗಳನ್ನು ಶಿವಳ್ಳಿ ಸ್ಪಂದನಾ ಹಾಗೂ ಕಾಸರಗೋಡು ಗಡಿನಾಡ ಸಾಂಸ್ಕೃತಿಕ ವೇದಿಕೆ ಬಂಧುಗಳು ಮೆರವಣಿಗೆಯೊಂದಿಗೆ ಮಂಗಳೂರಿಗೆ ಕರೆತಂದರು. ಕದ್ರಿ ಕಂಬ್ಳದಿಂದ ನವನೀತ ಶೆಟ್ಟಿ ಕದ್ರಿ […]

50 ಕಿ.ಮೀ.ಗೆ ಇಸಿಜಿ ಸೌಲಭ್ಯ ಅಗತ್ಯ: ಡಾ.ಪದ್ಮನಾಭ ಕಾಮತ್

Thursday, November 11th, 2021
ecg-mechine

ಮಂಗಳೂರು: ಕುಗ್ರಾಮಗಳು ಸೇರಿದಂತೆ ಗ್ರಾಮ ಪಂಚಾಯಿತಿಗಳ ಪ್ರತಿ 50 ಕಿ.ಮೀ. ವ್ಯಾಪ್ತಿಯಲ್ಲಿ ಇಸಿಜಿ ಸೌಲಭ್ಯ ಲಭ್ಯವಾದರೆ ಹೃದಯಾಘಾತದಿಂದ ಉಂಟಾಗುವ ಪ್ರಾಣಾಪಾಯ ತಡೆಯಲು ಸಾಧ್ಯವಾಗಲಿದೆ ಎಂದು ಮಂಗಳೂರು ಕೆಎಂಸಿಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಮಂಗಳೂರು ಪ್ರೆಸ್‌ಕ್ಲಬ್, ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆಯೋಜಿಸಿದ್ದ ಹೃದ್ರೋಗ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೃದಯ […]

ಚಿಕ್ಕಮ್ಮನ ಮೊಬೈಲ್ ಗೆ ಅಶ್ಲೀಲ ಸಂದೇಶ : ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

Wednesday, November 10th, 2021
Santhosh

ಮಂಗಳೂರು: ಯುವಕನೋರ್ವ ಪ್ರಿಯತಮೆಯ ಚಿಕ್ಕಮ್ಮನ ಮೊಬೈಲಿಗೆ ಅಶ್ಲೀಲ ವೀಡಿಯೋ ಮಾಡಿ  ಕಳುಹಿಸಿದ್ದಲ್ಲದೆ, ಬೇರೆ ಬೇರೆ ಸಿಮ್ ಗಳಿಂದ ಕರೆಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಇದಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮನ ಮನೆಯಲ್ಲಿ ಇರಿಸಿದ್ದರು. ಆದರೆ, ಸಂತೋಷ್ ಯುವತಿಯ ಮೊಬೈಲಿಗೆ […]

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಡಾ.ಎಚ್.ಎಲ್.ನಾಗರಾಜ್

Wednesday, November 10th, 2021
HLNagaraj

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ‌ ಮಾಡಿ‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಅಪರ‌ ಜಿಲ್ಲಾಧಿಕಾರಿಯಾಗಿರುವ ಡಾ. ಪ್ರಜ್ಞಾ ಅಮ್ಮೆಂಬಳ ಅವರ‌ ಸ್ಥಾನವನ್ನು ನಾಗರಾಜ್ ವಹಿಸಲಿದ್ದಾರೆ. ಪ್ರಜ್ಞಾ ಅವರಿಗೆ ಇನ್ನಷ್ಟೇ ಹುದ್ದೆ ನಿಯೋಜನೆಯಾಗಬೇಕಿದೆ.

ಗಡಿಯಲ್ಲಿ ಕನ್ನಡಕ್ಕೆ ಆತಂಕವಿದೆ ವಿವಿಯಲ್ಲಿ ಕನ್ನಡ ಡಿಂಡಿಮ ಉದ್ಘಾಟಿಸಿ ಡಾ. ಸಿ ಸೋಮಶೇಖರ್

Wednesday, November 10th, 2021
Kannada Dindima

ಮಂಗಳೂರು  : ಸಮೃದ್ಧ ಇತಿಹಾಸವಿರುವ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಗಡಿಪ್ರದೇಶಗಳಲ್ಲಿ ಆತಂಕ ತಲೆದೋರಿದೆ. ಕರ್ನಾಟಕ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಗಡಿ ಭಾಗದ ಕನ್ನಡಕ್ಕೆ ರಕ್ಷಣೆ ಮತ್ತು ಪೋಷಣೆ ನೀಡಲಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಸಿ ಸೋಮಶೇಖರ್ ಹೇಳಿದರು. ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ನಡೆದ ಕನ್ನಡ ಡಿಂಡಿಮ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡದ ಕವಿಗಳು ನಾಡು ನುಡಿಯ […]

ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳೋಣ – ಡಾ. ಸಿ. ಸೋಮಶೇಖರ್

Wednesday, November 10th, 2021
Kannada Rajyotsava Kalkura

ಮಂಗಳೂರು : ಕನ್ನಡಿಗರಾದ ನಾವೆಲ್ಲರೂ ಮಾತೃಭಾಷೆ ಕನ್ನಡವನ್ನು ಬೆಳೆಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ನಡೆಸುವ ಅನಿವಾರ್ಯತೆ ಬಂದೊದಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗನು ಕನ್ನಡ ಭಾಷೆಯನ್ನು ಪ್ರೀತಿಸಿ ಭಾಷಾ ಬೆಳವಣಿಗೆಯಲ್ಲಿ ಸಹಕರಿಸಬೇಕೆಂದು  ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೃತ್ತ ಐ.ಎ.ಎಸ್. ಅಧಿಕಾರಿ ಡಾ. ಸಿ ಸೋಮಶೇಖರ್ ನುಡಿದರು. ಕಲ್ಕೂರ ಪ್ರತಿಷ್ಠಾನದಿಂದ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ರಾಜ್ಯೋತ್ಸವ ಸಂದೇಶ ನೀಡಿದರು. ಗಡಿನಾಡಿನ ಕಾಸರಗೋಡಿನಲ್ಲಿರುವ ಕನ್ನಡಿಗರು ಕೂಡ ಈ ನೆಲೆಯಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕಾಗಿದೆ ಎಂದರು. ಮಂಗಳೂರು […]

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ನಿಧನ

Tuesday, November 9th, 2021
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ನಿಧನ

ಬೆಳ್ತಂಗಡಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ (98) ಇಂದು (ಮಂಗಳವಾರ) ಸ್ವಗೃಹ ಪಡಂಗಡಿಯಲ್ಲಿ ನಿಧನರಾಗಿದ್ದಾರೆ. ಅಪ್ಪಟ ಗಾಂಧಿವಾದಿಯಾಗಿದ್ದ  ಭೋಜರಾಜ ಹೆಗ್ಡೆಯವರು ಹಲವು ಸ್ವಾತಂತ್ರ್ಯ ಹೋರಾಟಗಳಲ್ಲಿ ಭಾಗವಹಿಸಿದ್ದರು. ಸರಳ ಸಜ್ಜನಿಕೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಮೃತ ಭೋಜರಾಜ್ ಪುತ್ರ ವಿನಯ್ ಪ್ರಸಾದ್, ಪುತ್ರಿ ವೀಣಾರನ್ನು ಅಗಲಿದ್ದಾರೆ. 1923ರ ಫೆಬ್ರವರಿ 13 ರಂದು ಪಡಂಗಡಿಯಲ್ಲಿ ಶಾಂತಿರಾಜ ಶೆಟ್ಟಿ ಮತ್ತು ಲಕ್ಷ್ಮೀಮತಿ ದಂಪತಿಯ ಪುತ್ರನಾಗಿ ಭೋಜರಾಜ ಹೆಗ್ಡೆ ಜನಿಸಿದ್ದರು. ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ 1942ರಲ್ಲಿ ಆಯೋಜಿಸಿದ್ದ ‘ಭಾರತ […]

ಕೆಲಸಕ್ಕೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆ

Tuesday, November 9th, 2021
Tara

ಭಟ್ಕಳ: ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿ ನಾಲ್ಕು ದಿನ ಕಳೆದರೂ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ತಾರಾ ನಾರಾಯಣ ಮರಾಠಿ ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12-00 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ ವಾಪಸ್ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ . ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ […]

ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಆರೋಪಿ ಕೆ.ಎಸ್.ಎನ್. ರಾಜೇಶ್ ಭಟ್ ಗೆ ಲುಕ್ಔಟ್ ನೋಟಿಸ್ ಜಾರಿ

Tuesday, November 9th, 2021
Rajesh Bhat

ಮಂಗಳೂರು :  ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿರುವ  ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಅವರಿಗೆ   ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ರಾಜೇಶ್ ಭಟ್ ಕಚೇರಿಯಲ್ಲಿ ಇಂಟರ್ನ್ ಶಿಪ್ ಮಾಡಲು ಬಂದಿದ್ದ ವಿದ್ಯಾರ್ಥಿನಿಗೆ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ್ದರು. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದರು ಎಂದು ಎಂದು ರಾಜೇಶ್ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದರು. ಈ ಪ್ರಕರಣ ಹೊರ ಬರುತ್ತಿದ್ದಂತೆ ರಾಜೇಶ್ ತಲೆಮರೆಸಿಕೊಂಡಿದ್ದಾರೆ. ಲೋಕಾಯುಕ್ತ ಮತ್ತು […]