ದಲಿತ ಬಾಲಕಿಯ ಅತ್ಯಾಚಾರ, ಆರೋಪ ಸಾಬೀತು

Sunday, October 24th, 2021
judgement

ಮಂಗಳೂರು : ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆ ಮಗುವಿಗೆ  ಜನ್ಮ  ನೀಡಲು  ಕಾರಣನಾದ ವ್ಯಕ್ತಿಯ ಮೇಲಿನ ಅಪರಾಧ ಕೃತ್ಯ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಪಿ.ಜೆ. ಜೇಕಬ್ ಯಾನೆ ಚಾಕೋಚ‌ ಅತ್ಯಾಚಾರ ಎಸಗಿದ ಅಪರಾಧಿ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದಲಿತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ, ಆರೋಪಿ ಆಕೆಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದನು. […]

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.ಗಳ ಅನುದಾನ- ಸಿ.ಎಂ

Saturday, October 23rd, 2021
Kitturu Chennamma

ಹುಬ್ಬಳ್ಳಿ : ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು. ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ ಸ್ಥಾಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ […]

ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

Saturday, October 23rd, 2021
Dharmasthala

ಉಜಿರೆ: ವಿಶ್ವಹಿಂದೂ ಪರಿಷದ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಹುಮುಖಿ ಸಮಾಜ ಸೇವೆಗಾಗಿ ಅಭಿನಂದಿಸಿ, ಗೌರವಿಸಿದರು. ಬಳಿಕ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನುಸೂಚಿತ ಜಾತಿಗಳ ಮೇಲೆ ಮತಾಂತರ ಪಿಡುಗು ವ್ಯಾಪಿಸಿದೆ. ಜೊತೆಗೆ ಲವ್ ಜಿಹಾದ್, ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿ ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟಲು ವಿಶ್ವ ಹಿಂದೂ ಪರಿಷದ್ ಗಂಭೀರ ಚಿಂತನೆ ನಡೆಸಿದೆ. ದೀಪಾವಳಿ ನಂತರ ಈ […]

ಇಬ್ಬರು ನಕ್ಸಲ್‍ ವಾದಿಗಳ ಪತ್ತೆಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದ ತನಿಖಾ ಸಂಸ್ಥೆ

Saturday, October 23rd, 2021
naxal

ಕಾರ್ಕಳ : ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್‍ ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ. ಅವರ ಸುಳಿವು ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ […]

ವಿಠಲ ಮಲೆಕುಡಿಯ ಹಾಗೂ ನಿಂಗಣ್ಣ ಮಲೆಕುಡಿಯ ನಿರ್ದೋಷಿ

Saturday, October 23rd, 2021
Vittala Malekudiya

ಮಂಗಳೂರು  : ವಿಠಲ ಮಲೆಕುಡಿಯ ಹಾಗೂ ನಿಂಗಣ್ಣ ಮಲೆಕುಡಿಯ ನಿರ್ದೋಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಒಂಬತ್ತು ವರ್ಷಗಳ ಹಿಂದೆ ಅವರನ್ನು ನಕ್ಸಲೈಟ್ ಎಂದು ಆರೋಪಿಸಿ ಯುಎಪಿಎ ಕಾಯ್ದೆ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿತ್ತು. ಡಿವೈಎಫ್ಐ ಸಂಘಟನೆ ವಿಠಲ ಮಲೆಕುಡಿಯ ಮತ್ತವನ ತಂದೆಯ ಪರವಾಗಿ ಆಗ ದೊಡ್ಡ ಹೋರಾಟ ಸಂಘಟಿಸಿತ್ತು‌ ಈಗಿನ ಕೇರಳ ಸ್ಪೀಕರ್ ಆಗ ಸಿಪಿಎಂ ಲೋಕಸಭಾ ಸದಸ್ಯರಾಗಿದ್ದ ಎಂಬಿ ರಾಜೇಶ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಜೈಲಿಗೆ ಭೇಟಿ […]

ಇಸ್ಲಾಂ ಗೆ ಮತಾಂತರಗೊಂಡ ಹಿಂದೂ ಮಹಿಳೆಗೆ ಕೊನೆಗೂ ನ್ಯಾಯ ಸಿಗಲಿಲ್ಲ !

Saturday, October 23rd, 2021
ayesha

ಮಂಗಳೂರು : ಕಳೆದ ಎರಡು ವರ್ಷಗಳಿಂದ ಗಂಡನೊಂದಿಗೆ ಜೀವನ ನಡೆಸಬೇಕು ಎಂದು ಹೋರಾಟ ಮಾಡುತ್ತಿದ್ದ ಮಹಿಳೆ ಗಂಡನಿಂದ ಯಾವುದೇ ಸ್ಪಂದನೆ ಸಿಗದ ಕಾರಣ ಹೋರಾಟದಿಂದ ಹಿಂದೆ ಸರಿದು ತನ್ನಿಷ್ಟದಂತೆ ಜೀವಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ. ಹಿಂದೂ ಧರ್ಮಕ್ಕೆ ಸೇರಿದ ಶಾಂತಿ ಜೂಬಿ ಮುಸ್ಲಿಂ ಯುವಕನನ್ನು ಮದುವೆಯಾಗಿ ಮತಾಂತರ ಗೊಂಡ ಬಳಿಕ  ಆತ ಆಕೆಯನ್ನು ಬಿಟ್ಟುಬಿಟ್ಟಿದ್ದಾನೆ. ಸುಳ್ಯದ ಕಟ್ಟೆಕ್ಕಾರ್ಸ್ ಕುಟುಂಬದ ಇಬ್ರಾಹಿಂ ಖಲೀಲ್ ಎಂಬವ ಕೇರಳದ ಕಣ್ಣೂರಿನ ಹಿಂದೂ ಧರ್ಮಕ್ಕೆ ಸೇರಿದ ಶಾಂತಿ ಜೂಬಿ ಎಂಬ ಯುವತಿಯನ್ನು ಮದುವೆಯಾಗಿದ್ದನು. ಯುವತಿ ಮತಾಂತರವಾದ […]

ಕೂಳೂರು ಬಳಿ ನಾಗನ ಕಟ್ಟೆಯನ್ನು ಒಡೆದ ಕಿಡಿಗೇಡಿಗಳು

Saturday, October 23rd, 2021
Kulooru Nangana Katte

ಮಂಗಳೂರು: ಬಂಟ್ವಾಳ ಮುಂಡಾಡಿಯಲ್ಲಿ ವಿಶ್ವ ಹಿಂದೂ ಪರಿಷತ್ ಕಟ್ಟೆ ಒಡೆದ ಮಾದರಿಯಲ್ಲೇ  ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಒಡೆದು ಹಾನಿ ಮಾಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪಣಂಬೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೇಕ ಸಮಯದಿಂದ ಇಂತಹ ದುಷ್ಕೃತ್ಯ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದು ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಕಾರ್ಪೊರೇಟರ್ ಕೊಲೆ ಮಾಡಲು ಸಂಚು, , ರೌಡಿಶೀಟರ್ ಪಿಂಕಿ ನವಾಜ್ ಸೇರಿದಂತೆ ಐವರ ಬಂಧನ

Friday, October 22nd, 2021
pinki Nawaz

ಮಂಗಳೂರು: ಸುರತ್ಕಲ್ ಬಸ್ ನಿಲ್ದಾಣಕ್ಕೆ ದಿ.ದೀಪಕ್ ರಾವ್ ಹೆಸರಿಟ್ಟ ಬಳಿಕ  ದೀಪಕ್ ರಾವ್ ಕೊಲೆ ಪ್ರಕರಣದ ಸಾಕ್ಷಿ ಆಗಿರುವ ಸ್ಥಳೀಯ ಕಾರ್ಪೊರೇಟರ್ ಒಬ್ಬರನ್ನು ಕೊಲೆ ಮಾಡಲು ಸಂಚು ರೂಪಿಸಿದ ಆಡಿಯೋವೊಂದು ವೈರಲ್ ಆದ ಬಳಿಕ, ರೌಡಿಶೀಟರ್ ಪಿಂಕಿ ನವಾಜ್ ಸೇರಿದಂತೆ ಐವರನ್ನ ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ರೌಡಿ ಶೀಟರ್ ಪಿಂಕಿ ನವಾಜ್ ಬಂಧಿತನಾಗಿದ್ದ. ಜಾಮಿನಿನ ಮೇಲೆ ಬಿಡುಗಡೆಗೊಂಡಿರುವ ಪಿಂಕಿ ನವಾಜ್ ಇದೀಗ ಕೊಲೆ ಪ್ರಕರಣಕ್ಕೆ […]

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಬಾರ್ ಕೌನ್ಸಿಲ್ ನಿಂದ ವಕೀಲ ಅಮಾನತು

Friday, October 22nd, 2021
Rajesh

ಮಂಗಳೂರು :  ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ಅವರನ್ನು ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ (ಕೆಎಸ್‌ಬಿಸಿ) ಸದಸ್ಯತ್ವದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಇಂಟರ್ನ್‌ಶಿಪ್‌ಗೆಂದು ಬಂದಿದ್ದ ವಿದ್ಯಾರ್ಥಿನಿಗೆ  ಲೈಂಗಿಕ ಕಿರುಕುಳ ನೀಡಿರುವುದಾಗಿ  ಮಂಗಳೂರಿನ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ರಾಜೇಶ್ ವಿರುದ್ಧ ಎರಡು ಪ್ರಕರಣಗಳು (78/2021 ಮತ್ತು 79/2021) ದಾಖಲಾಗಿದ್ದು, ತನಿಖೆ ನಡೆದಿದೆ. ಗಂಭೀರ ಆರೋಪ ಹೊತ್ತಿರುವ ನ್ಯಾಯವಾದಿಯನ್ನು ಬಾರ್ ಕೌನ್ಸಿಲ್ ಅಧ್ಯಕ್ಷ ಶ್ರೀನಿವಾಸ ಬಾಬು ನೇತೃತ್ವದ ಸಮಿತಿ ಅಮಾನತುಗೊಳಿಸಿದೆ. ರಾಜೇಶ್ ವಿರುದ್ಧ ಆರೋಪದ ಎಫ್‌ಐಆರ್ […]

ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ ನಿಧನ

Friday, October 22nd, 2021
Sudhir Ghate

ಮಂಗಳೂರು, : ಮಂಗಳೂರಿನ ಜಾಹೀರಾತು ಸಂಸ್ಥೆ ಮ್ಯಾಗ್ನಂ ಇಂಟರ್‌ಗ್ರಾಫಿಕ್ಸ್‌ನ ಚೇಯರ್‍ಮೆನ್, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದರು. 1992 ರಲ್ಲಿ ಮ್ಯಾಗ್ನಂ ಇಂಟರ್‌ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿದ ಇವರು ದೇಶದಾದ್ಯಂತ ೧೮ ಶಾಖೆಗಳನ್ನು ತೆರೆದು ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ರಾ?ಮಟ್ಟದಲ್ಲಿ ಹೆಸರು ವಾಸಿಯಾಗಿದ್ದರು. ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು […]