ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ

Tuesday, August 24th, 2021
krishi App

ಸುರತ್ಕಲ್ : ರೈತರಿಗೆ ಮಾಹಿತಿ ನೀಡುವ ಸಲುವಾಗಿ,ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆ್ಯಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ ಬಗ್ಗೆ ಈ ಆಪ್‍ನಲ್ಲಿ ಹಾಕಿ ಮಾಹಿತಿ […]

10ಕ್ಕೂ ಹೆಚ್ಚು ಕಡೆ ಇಂಟರ್ನೆಟ್ ಕೇಬಲ್ ತುಂಡರಿಸಿದ ಕಿಡಿಗೇಡಿಗಳು

Monday, August 23rd, 2021
cable cuting

ಬಂಟ್ವಾಳ: ಇಲ್ಲಿನ ವಾಮದಪದವು-ಕುದ್ಕೋಳಿ ನಡುವೆ ಹಾದು ಹೋಗಿರುವ ಸೊರ್ನಾಡು ರ್ಯಾಪಿಡ್ ಇನಫೋಟೆಕ್ ಸಂಸ್ಥೆಗೆ ಸೇರಿದ ಇಂಟರ್ನೆಟ್ ಕೇಬಲ್ ಗಳನ್ನು ಕಿಡಿಗೇಡಿಗಳು ತುಂಡರಿಸಿ ಹಾನಿ ಉಂಟು ಮಾಡಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಜನತೆಗೆ ಗುಣಮಟ್ಟದ ಇಂಟರ್ನೆಟ್ ಸೌಲಭ್ಯ ಒದಗಿಸಲು ಕಾನೂನು ಬದ್ಧ ಪರವಾನಿಗೆ ಪಡೆದು ಅಳವಡಿಸಿದ್ದ ಲಕ್ಷಾಂತರ ಮೌಲ್ಯದ ಕೇಬಲ್ ಗಳನ್ನು ಎಲ್ಪೇಲು ಸಹಿತ 10ಕ್ಕೂ ಮಿಕ್ಕಿ ಕಡೆಗಳಲ್ಲಿ ಭಾನುವಾರ ರಾತ್ರಿ ಕಿಡಿಗೇಡಿಗಳು ತುಂಡರಿಸಿದ್ದಾರೆ. ಇಲ್ಲಿನ ಹಲವು ಮಂದಿ ವಿದ್ಯಾರ್ಥಿಗಳು ಸಹಿತ […]

ನಾರಾಯಣಗುರುಗಳನ್ನು ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ : ರಾಜೇಶ್ ನಾಯ್ಕ್

Monday, August 23rd, 2021
Narayana Guru

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸುವ ಕಾರ್ಯ ಇಂದು ನಡೆಯಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಸೋಮವಾರ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ನಾರಾಯಣಗುರುಗಳನ್ನು ಪೂಜಿಸುವುದರೊಂದಿಗೆ ಅವರ ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಈ ಸಂದರ್ಭ ಮಾತನಾಡಿ, ಹಿಂಸೆಯ ಭಾವ ನಮ್ಮಲ್ಲಿ ತೊಲಗಬೇಕಿದ್ದರೆ, ನಾರಾಯಣಗುರುಗಳ […]

ಕುದ್ರೋಳಿಯಲ್ಲಿ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿ

Monday, August 23rd, 2021
Narayanaguru

ಮಂಗಳೂರು  : ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ‌ ಸದಸ್ಯರಾದ ಜಯಶ್ರೀ ಕುಡ್ವ,ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ನಾಮನಿರ್ದೇಶಿತ […]

ರಾಷ್ಟ್ರೀಯ ಹೆದ್ದಾರಿ ಬಳಿ ಮೀನು ಮಾರಾಟದ ಗೂಡಂಗಡಿಗೆ ಬೆಂಕಿ

Monday, August 23rd, 2021
fish-Shop

ಉಪ್ಪಿನಂಗಡಿ : ಮೀನು ಮಾರಾಟದ ಗೂಡಂಗಡಿಯೊಂದು ರಾಷ್ಟ್ರೀಯ ಹೆದ್ದಾರಿ ಬಳಿ ರವಿವಾರ ತಡರಾತ್ರಿ ಬೆಂಕಿಗಾಹುತಿಯಾಗಿದ್ದು, ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಹಳೆಗೇಟು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಅಶೋಕ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟಿದ್ದ ಮೀನು ಸುಟ್ಟು ಹೋಗಿವೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರ […]

ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಟೈಪಿಸ್ಟ್ ಗೆ ಲೈಂಗಿಕ ಕಿರುಕುಳ ನೀಡಿದ ವಕೀಲ, ಪ್ರಕರಣ ದಾಖಲು

Sunday, August 22nd, 2021
office Staff

ಮಂಗಳೂರು: ಕಚೇರಿಯಲ್ಲಿ  ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ವಕೀಲನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ವಿಟ್ಲದ ವಿ.ಹೆಚ್. ಕಾಂಪ್ಲೆಕ್ಸ್ನಲ್ಲಿರುವ ವಕೀಲ ಉಮ್ಮರ್ ಕೆ. ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ಕಳೆದ 9 ತಿಂಗಳಿಂದ ಸಂತ್ರಸ್ತ ಯುವತಿ ಉಮ್ಮರ್ ಕೆ. ಕಚೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಆ.16 ರಂದು ಸಂಜೆ ಕಚೇರಿಯಲ್ಲಿ ಯಾರು ಇಲ್ಲದ ವೇಳೆ ಸಂತ್ರಸ್ತೆಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಜೊತೆಗೆ ಈ ವಿಚಾರವನ್ನು […]

ಸ್ನೇಹ ಪವಿತ್ರತೆಯ ಸೂಚಕ ರಾಖಿ

Sunday, August 22nd, 2021
Rakhi

ಹಬ್ಬಗಳ ತವರೂರಾದ ಭಾರತ ದೇಶದಲ್ಲಿ ಹಬ್ಬ ಹರಿದಿನಗಳಿಂದ ಕೂಡಿದ ಶ್ರಾವಣ ಮಾಸಕ್ಕೆ ವಿಶೇಷ ಮಹತ್ವವಿದೆ. ಶ್ರವಣ, ಪೂಜಾ-ಪಾಠಗಳು, ಧ್ಯಾನ-ಧಾರಣೆಗಳು, ಚಿಂತನೆಗಳ ಮಾಸವೇ ಶ್ರಾವಣ. ನಾಗಚೌತಿ, ನಾಗಪಂಚಮಿ, ಶ್ರಾವಣ ಸೋಮವಾರ, ಶ್ರಾವಣ ಶುಕ್ರವಾರ, ಗೋಕುಲಾಷ್ಟಮಿ, ನೂಲಹುಣ್ಣಿಮೆ ಹೀಗೆ ಪ್ರತಿದಿನವು ಹಬ್ಬ. ಈ ಎಲ್ಲ ಹಬ್ಬಗಳಲ್ಲಿ “ನೂಲಹುಣ್ಣಿಮೆ” ಅಥವಾ `ರಕ್ಷಾಬಂಧನ’ಕ್ಕೆ ತನ್ನದೇ ಆದ ಮಹತ್ವವಿದೆ. ನಾವೆಲ್ಲಾ ಭಾರತೀಯರು ವಿದೇಶಿಯರ ಅನುಕರಣೆಯಿಂದ ನಮ್ಮ ನಿಜವಾದ ಸಂಸ್ಕೃತಿಯನ್ನು ಮರೆತು ಸ್ನೇಹ ಅತ್ಮೀಯತೆಯಿಂದ ದೂರ ಹೋಗುತ್ತಿದ್ದೇವೆ. ಇಂದಿನ ಯುವ ಪೀಳಿಗೆ `ಪ್ರೇಮಿಗಳ ದಿನ’ಕ್ಕೆ ಮಹತ್ವವನ್ನು […]

ಮತ್ಥ್ಯ ಸಂಪತ್ತನ್ನು ಕರುಣಿಸಲು ಸಮುದ್ರಪೂಜೆ, ಸಮುದ್ರಕ್ಕೆ ಹಾಲೆರೆದು ಪ್ರಾರ್ಥನೆ

Sunday, August 22nd, 2021
Samudra Pooje

ಮಂಗಳೂರು  : ಮೀನುಗಾರಿಕಾ ಋತುವಿನ ಆರಂಭದಲ್ಲಿ ಸಮುದ್ರಪೂಜೆಯನ್ನು ಮಾಡುವ ಮೂಲಕ ಮತ್ಥ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಪ್ರಾರ್ಥಿಸಿ ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಭಾನುವಾರ ನಡೆದ ಸಮುದ್ರ ಪೂಜೆಯ ಕಾರ್ಯಕ್ರಮದಲ್ಲಿ  ಶಾಸಕರಾದ ಡಾ. ಭರತ್ ಶೆಟ್ಟಿಯವರು ಸಮುದ್ರಕ್ಕೆ ಹಾಲು ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಈ ಸಂದರ್ಭದಲ್ಲಿ ಮಿತ್ರಪಟ್ಟಣ ಮೊಗವೀರ ಸಮಾಜದ ಅಧ್ಯಕ್ಷರಾದ ರವೀಂದ್ರ ಕರ್ಕೇರ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುರೇಶ್ ಕರ್ಕೇರ, ಸ್ಥಳೀಯ ಕಾರ್ಪೋರೇಟರ್ ಶೋಭಾ ರಾಜೇಶ್, […]

ಬಂಟ್ವಾಳದಲ್ಲಿ ಶೋಭಾ ಕರಂದ್ಲಾಜೆಯವರೊಂದಿಗೆ ರಕ್ಷಾಬಂಧನ

Sunday, August 22nd, 2021
Raksha Bandhana

ಬೆಂಗಳೂರು  : ಕೇಂದ್ರ ಕೃಷಿ ಮತ್ತ ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೇಂದ್ರದ ನೂತನ ಸಚಿವೆಯನ್ನು ಭಗವದ್ಗೀತೆ ನೀಡಿ ಅಭಿನಂದಿಸಿ ಸಚಿವೆ ಶೋಭಾ ಕರಂದ್ಲಾಜೆಯವರೊಂದಿಗೆ ಸಹೋದರತ್ವದ ಪ್ರತೀಕವಾದ ರಕ್ಷಾಬಂಧನ ಆಚರಿಸಿದರು. ಪ್ರತಿ ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ FPO(ರೈತರ ಉತ್ಪಾದಕರ ಸಂಸ್ಥೆ) ಪ್ರಾರಂಭಿಸುವುದಾಗಿ ಕೃಷಿ ಸಚಿವೆ ಈ ಸಂದರ್ಭದಲ್ಲಿ ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರವರು ಕೋಟಿ-ಚೆನ್ನಯರ ಚರಿತ್ರೆ […]

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Thursday, August 19th, 2021
Shobha Udupi

ಉಡುಪಿ: ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಗುರುವಾರ ಭೇಟಿ ನೀಡಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥಶ್ರೀ ಹಾಗೂ ಪರ್ಯಾಯ ಅದಮಾರು ಮಠದ ಹಿರಿಯ ಸ್ವಾಮಿಗಳಾದ ವಿಶ್ವಪ್ರಿಯ ತೀರ್ಥಶ್ರೀ ಅವರಿಮದ ಮಂತ್ರಾಕ್ಷತೆ ಪಡೆದು ಸ್ವಾಮಿಯೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ಶಾಸಕ ಕೆ. ರಘುಪತಿ ಭಟ್ ಹಾಗು ಇತರರು ಉಪಸ್ಥಿತರಿದ್ದರು.