ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, August 12th, 2021
Bommai-Progress-Meeting2

ಮಂಗಳೂರು : ಕೋವಿಡ್ ಪಾಸಿಟಿವಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆ ಕಂಡುಬರುತ್ತಿರುವ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗುತ್ತಿದೆ ರಾಜ್ಯದ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ತಿಳಿಸಿದರು. ಅವರು ಆಗಸ್ಟ್ 12ರ ಗುರುವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಬಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರ ನಿರ್ವಹಣೆ, ಕೋವಿಡ್ ಕೇರ್ ಸೆಂಟರ್‍ಗೆ ದಾಖಲಾಗುವ, […]

ಸ್ಕೂಟರ್ ಗೆ ಲಾರಿ ಡಿಕ್ಕಿ : ಕನ್ಯಾನ ಪರಕಜೆ ನಿವಾಸಿ ಸಾವು

Thursday, August 12th, 2021
Manju Belchada

ಬಂಟ್ವಾಳ : ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್ ಬಂಗೇರ (54) ಮೃತಪಟ್ಟ ವ್ಯಕ್ತಿ. ಉಪ್ಪಿನಂಗಡಿ ಕಡೆಗೆ ವೈಯಕ್ತಿಕ ಕೆಲಸದ ನಿಮಿತ್ತ ದ್ವಿಚಕ್ರ ವಾಹನ ದ ಮೂಲಕ ಸಂಚರಿಸುವ ವೇಳೆ ಬುಡೋಳಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅವರು ಬೊಳ್ನಾಡು […]

ದ.ಕ. ಜಿಲ್ಲಾ ಪಂಚಾಯತ್‍ನಲ್ಲಿ ಮುಖ್ಯಮಂತ್ರಿಗಳಿಂದ ಕೋವಿಡ್ ಪರಿಶೀಲನಾ ಸಭೆ

Thursday, August 12th, 2021
Bommai-Progress-Meeting

ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಗಸ್ಟ್ 12ರ ಗುರುವಾರ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ […]

ಉರ್ವಸ್ಟೋರ್‌ನ ದೇರೆಬೈಲ್ ನಲ್ಲಿ ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ

Thursday, August 12th, 2021
Ambedkar-Bhavana

ಮಂಗಳೂರು : ದ.ಕ. ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ  ಉರ್ವಸ್ಟೋರ್‌ನ ದೇರೆಬೈಲ್ ಅಂಗಡಿಗುಡ್ಡೆಯಲ್ಲಿ ನಿರ್ಮಾಣಗೊಂಡ  ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಟ್ಟಡ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.12 ರ ಗುರುವಾರ ಲೋಕಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮೀನುಗಾರಿಕೆ ಹಾಗೂ ಬಂದರು ಸಚಿವ ಅಂಗಾರ ಎಸ್.   ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. […]

ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

Thursday, August 12th, 2021
Wenlock ICU

ಮಂಗಳೂರು : ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ  32 ಬೆಡ್ ಸೌಲಭ್ಯವುಳ್ಳ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.12 ರ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ […]

ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ

Thursday, August 12th, 2021
Bommai Mangaluru

ಮಂಗಳೂರು :- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13 ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12 ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.  ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ […]

ನಾಪತ್ತೆಯಾಗಿದ್ದ ಹೆಣ್ಣು ಮಗು ಹೊಳೆಯಲ್ಲಿ ಶವವಾಗಿ ಪತ್ತೆ

Wednesday, August 11th, 2021
Drithvi

ವೇಣೂರು : ಸುಲ್ಕೇರಿ ಗ್ರಾಮದ ಪರಾರಿ ಎಂಬಲ್ಲಿ  ಆ.10 ರ ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಬುಧವಾರ ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗು  ದೃತ್ವಿ ಯೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ ಹಿಂತಿರುಗಿ ಬರುವಷ್ಟರಲ್ಲಿ ಮಗು […]

ಉಳ್ಳಾಲದ ಟೆರರಿಸ್ಟ್ ನಂಟು ಆರೋಪಿ ಮನೆಗೆ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮುತ್ತಿಗೆ

Wednesday, August 11th, 2021
VHp

ಮಂಗಳೂರು : ಉಳ್ಳಾಲದಲ್ಲಿ  ಭಯೋತ್ಪಾದನೆ ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಮತ್ತು  ಬಜರಂಗದಳ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಉದ್ಯಮಿ ಬಿ.ಎಂ ಬಾಷಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. “ಜನಜಾಗೃತಿ”  ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿ ಮುತ್ತಿಗೆ ಯತ್ನಿಸಿದ ವಿಎಚ್‌ಪಿ ಮುಖಂಡ ಶರಣ್‌ ಪಂಪ್‌ವೆಲ್‌ ಸಹಿತ ಹಲವರನ್ನು ಉಳ್ಳಾಲ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಎಚ್‌ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಮೊದಲು ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ನಂತರ ಬಿ.ಎಂ. ಬಾಷಾ ಅವರ ಮನೆಯ ಗೇಟ್‌ ಬಳಿ […]

‘ಸರಯೂ ಸಪ್ತಾಹೊ – ತುಳುವೆರೆ ಏಳಾಟೊ ಉದ್ಘಾಟನೆ

Tuesday, August 10th, 2021
Tulu Yelata

ಮಂಗಳೂರು : ‘ಸರಯೂ ಸಪ್ತಾಹ – ತುಳುವೆರೆ ಏಳಾಟೊ’ ಎಂಬ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪ್ರಪ್ರಥಮ ಮಕ್ಕಳ ಮೇಳದ ಸಪ್ತಾಹ ಇಲ್ಲಿ ದ್ವಿತೀಯ ವರ್ಷದಲ್ಲಿ ನಡೆಯುತ್ತಿದೆ. ಅನೇಕ ಹಿರಿ-ಕಿರಿಯ ಕಲಾವಿದರೊಂದಿಗೆ ಸಂಪನ್ನವಾಗುತ್ತಿರುವ ಈ ಸರಣಿ ಯಶಸ್ಸಾಗಲಿ. ತುಳುವಿಗೆ ಕಾಯಕವನ್ನು ಮಾಡುವ ಸಂಸ್ಥೆ ಇದಾಗಿದ್ದು, ಇದರ ಸರ್ವಾಂಗೀಣ ಬೆಳವಣೆಗೆಯಾಗಿ ಎಲ್ಲರಿಗೂ ಶ್ರೇಯಸ್ಸಾಗಲಿ. ತುಳುಭವನವನ್ನು ಇಂತಹಾ ಕಾರ್ಯಕ್ರಮಗಳಿಗಾಗಿ ಸದಾ ತೆರೆದಿರುತ್ತದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್‌ರವರು ‘ಸಿರಿಚಾವಡಿ’ ಯಲ್ಲಿ ಸಪ್ತಾಹವನ್ನು ಉದ್ಘಾಟಿಸುತ್ತಾ, […]

ಚಿಕ್ಕಪ್ಪನಿಂದಲೇ ಹೈಸ್ಕೂಲ್ ವಿದ್ಯಾರ್ಥಿನಿಯ ಅತ್ಯಾಚಾರ

Tuesday, August 10th, 2021
Rape

ಮೂಡುಬಿದಿರೆ: ತೆಂಕಮಿಜಾರು ಗ್ರಾಪಂ ಪರಿಸರದಲ್ಲಿ  ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿದ ಘಟನೆ ಸೋಮವಾರ ನಡೆದಿದೆ. ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಆಕೆ ಸ್ನೇಹಿತೆ ಜತೆಗೆ ಮನೆಗೆ ತೆರಳುತ್ತಿದ್ದ ಸಂದರ್ಭ ಗುಡ್ಡ ಪ್ರದೇಶದಲ್ಲಿ ಆಕೆಯ ಚಿಕ್ಕಪ್ಪ ಮೂವತ್ತರ ಹರೆಯದ ಕುಮಾರ್ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ. ಆಗ ಜತೆಗಿದ್ದ ವಿದ್ಯಾರ್ಥಿನಿ ಹೆದರಿ ಓಡಿ ಹೋದಳು. ಈ ಸಂದರ್ಭ ಅತ್ಯಾಚಾರ ನಡೆದಿದೆ. ಮೂಡುಬಿದಿರೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.