ಫ್ರಾನ್ಸ್ ನಲ್ಲಿ ನಡೆದ ಕುಕ್ಕಿಂಗ್ ವಿಭಾಗದ ಕೌಶಲ್ಯ ಸ್ಪರ್ಧೆಯಲ್ಲಿ ಮಂಗಳೂರಿನ ಹರ್ಷವರ್ಧನ್ ಗೆ ಶ್ರೇಷ್ಠತಾ ಪದಕ

Tuesday, September 24th, 2024
Harshavardhan

ಮಂಗಳೂರು : ಫ್ರಾನ್ಸ್ ನ ಲಿಯೋನ್ ನಲ್ಲಿ ಸಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ಒಂಬತ್ತು ಸ್ಪರ್ದಿಗಳು ಭಾಗವಹಿಸಿದ್ದು , ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹರ್ಷವರ್ಧನ್ ರವರು ಕುಕ್ಕಿಂಗ್ ವಿಭಾಗದ ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿರುತ್ತಾರೆ. ಇದಕ್ಕೂ ಮುನ್ನ ಕಳೆದ ಮೇ ತಿಂಗಳಲ್ಲಿ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಶ್ರೀಯುತರು ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ […]

ಪಿಂಚಣಿ ಅನುಷ್ಠಾನ ವಿಳಂಬ : ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

Tuesday, September 24th, 2024
shobha-karandlaje

ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ ಅವರು, ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ […]

ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಕ್ಯಾ. ಚೌಟ

Tuesday, September 24th, 2024
Brijesh-Chowta

ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಹೈಕೋರ್ಟ್‌ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ […]

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕೆ.ಎಸ್.ಆರ್.ಟಿ.ಸಿ ಬಸ್

Tuesday, September 24th, 2024
KSRTC-BUS

ಬಂಟ್ವಾಳ : ಮಂಗಳೂರು-ಧರ್ಮಸ್ಥಳ ಮಧ್ಯೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ವಗ್ಗ ಸಮೀಪದ ಕೊಪ್ಪಳದಲ್ಲಿ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸ್ಥಳೀಯ ಯುವಕರು ಸಹಕರಿಸಿದ್ದಾರೆ. ಮಂಗಳೂರು ವಿಭಾಗಕ್ಕೆ ಸೇರಿದ ಬಸ್ಸು ತಾಂತ್ರಿಕ ದೋಷದಿಂದ ಪಲ್ಟಿಯಾಗಿದೆ ಎನ್ನಲಾಗಿದ್ದು, ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ಕಮ್ಮಟದ 2 ನೇ ದಿನ

Tuesday, September 24th, 2024
Bajana-Kammata

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26 ನೇ ವರ್ಷದ ಭಜನಾ ಕಮ್ಮಟದ 2 ನೇ ದಿನದ ಕಾರ್ಯಕ್ರಮದಲ್ಲಿ ಸಮುದ್ರ ಯಾರನ್ನು ಮುಳುಗಿಸುವುದಿಲ್ಲ. ದೋಣಿಯಲ್ಲಿರುವ ದೋಷ ಮುಳುಗಿಸುತ್ತದೆ. ವ್ಯಕ್ತಿಯ ದುರಭ್ಯಾಸ ವ್ಯಕ್ತಿಯನ್ನು ಮುಗಿಸುತ್ತದೆ ಎಂದು ವಿವೇಕ್ ವಿ. ಪಾಯ್ಸ್ ನುಡಿದರು. ಭಜಕನಿಗೆ ಕಾಳಜಿ ಇರಬೇಕು, ಜ್ಞಾನ ಇರಬೇಕು, ಭಕ್ತಿ-ಶ್ರದ್ಧೆ ಇರಬೇಕು. ಭಕ್ತಿ ಇಲ್ಲದ ಭಜನೆ ವ್ಯರ್ಥ. ವ್ಯಸನದಲ್ಲಿ ಬಿದ್ದವ ವ್ಯಸನದಲ್ಲಿ ಸಾಯುತ್ತಾನೆ. ವ್ಯಸನಿಯಾದ ವ್ಯಕ್ತಿಯನ್ನು ಕುಟುಂಬ, ಸಮಾಜ ದೂರ ಮಾಡುತ್ತದೆ. ವ್ಯಕ್ತಿಯ ಸೋಲಿಗೆ ದೌರ್ಬಲ್ಯಗಳೆ ಮೂಲ […]

ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

Monday, September 23rd, 2024
Nikhil-Kumara-swamy

ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೆ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು ಬಳಿಕ ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ […]

ಕಾರ್ಮಿಕರ ಮುಷ್ಕರದ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲಾಗುತ್ತಿದೆ : ಸೀತಾರಾಮ ಬೇರಿಂಜ

Monday, September 23rd, 2024
Seetaram-Berinja

ಮಂಗಳೂರು : ಬಿಜೆಪಿ ನೇತ್ರತ್ವದ NDA ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಕೂಡಲೇ ಹಿಂಪಡೆಯುವಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು( 23-09-2024) ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ JCTU ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು_ ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶಭರಿತವಾಗಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ AITUC ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜರವರು ಮಾತನಾಡಿ, ಕೈಗಾರಿಕಾ ಸಂಬಂಧ […]

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

Saturday, September 21st, 2024
Brijesh-Chowta

ಮಂಗಳೂರು : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ […]

ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಬಳಸಲು ಸುತ್ತೋಲೆ

Friday, September 20th, 2024
ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಬಳಸಲು ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಶುದ್ದ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು […]

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ : ನ್ಯಾಯಾಧೀಶೆ

Friday, September 20th, 2024
Nourishment-month

ಮಂಗಳೂರು : ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಹೇಳಿದರು. ಅವರು ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ.ದ.ಕ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಶಿಶು ಅಭಿವೃದ್ಧಿ […]