ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪಡೆದ ಪೊಲೀಸರು

Friday, July 23rd, 2021
vishal Ganiga

ಉಡುಪಿ : ಬ್ರಹ್ಮಾವರ ಕುಮ್ರಗೋಡಿನ ಫ್ಲ್ಯಾಟ್ ನಲ್ಲಿ  ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಆತನ ಬಂಧನಕ್ಕೆ ಪೊಲೀಸರು ತೆರಳಿರುವುದಾಗಿ ತಿಳಿದುಬಂದಿದೆ. ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ಉಪ್ಪಿನಕೋಟೆ/ಕುಮ್ರಗೋಡುನ ತನ್ನ ಫ್ಲ್ಯಾಟ್ ನಲ್ಲಿ ಪತ್ನಿ ವಿಶಾಲ ಗಾಣಿಗ (35)ರ ಹತ್ಯೆಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿದ್ದ ಪೊಲೀಸ್ ತಂಡ, ಬಳಿಕ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಒಬ್ಬ ಹಂತಕನನ್ನು ಜು. 19ರಂದು ಬಂಧಿಸಿ ಇಲ್ಲಿಗೆ ಕರೆತಂದಿದೆ. ಇದೀಗ ಉತ್ತರ […]

ಆಸ್ಕರ್ ಫೆರ್ನಾಂಡಿಸ್ ಶೀಘ್ರ ಗುಣಮುಖರಾಗಲೆಂದು ನಾವು ಪ್ರಾರ್ಥಿಸುತ್ತೇವೆ : ಡಿ.ಕೆ. ಶಿವಕುಮಾರ್

Friday, July 23rd, 2021
Dk Shivakumar

ಮಂಗಳೂರು : ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಿ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ನಗರದ ಕೋಡಿಯಲ್ ಬೈಲ್ ನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರನ್ನು ಭೇಟಿ ಮಾಡಿದರು. ಅಲ್ಲದೆ, ಆಸ್ಕರ್ ಅವರ ಕುಟುಂಬಸ್ಥರು, ವೈದ್ಯರೊಂದಿಗೆ ಚರ್ಚೆ ನಡೆಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿವಕುಮಾರ್ ಆಸ್ಕರ್ […]

ಸಂಸ್ಕೃತಿ ನಾಶವಾದರೆ ವ್ಯವಸ್ಥೆಯ ನಾಶವಾದಂತೆ: ಡಾ. ಜಯರಾಮ ಶೆಟ್ಟಿಗಾರ್‌

Friday, July 23rd, 2021
Jayaram Shettigar

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಇತಿಹಾಸ ವಿಭಾಗ, ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ), ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ಪ್ರಾಧ್ಯಾಪಕರ ಸಂಘದ (ಮಾನುಷಾ) ಸಹಯೋಗದೊಂದಿಗೆ ʼಭಾರತದಲ್ಲಿ ಪ್ರವಾಸೋದ್ಯಮʼ ಎಂಬ ಕುರಿತಾಗಿ ಇತ್ತೀಚೆಗೆ ಎರಡು ದಿನಗಳ ಆನ್‌ಲೈನ್‌ ಎಫ್‌ಡಿಪಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಕಲ್ಯಾಣಪುರದ ಮಿಲಾಗ್ರಿಸ್‌ ಕಾಲೇಜಿನ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ಜಯರಾಮ ಶೆಟ್ಟಿಗಾರ್‌, ʼಆಧುನಿಕತೆಯ ಪಥದಲ್ಲಿ ಪ್ರವಾಸೋದ್ಯಮʼ ಮತ್ತು ʼಪ್ರವಾಸೋದ್ಯಮದ ಸುಸ್ಥಿರ ಅಭಿವೃದ್ಧಿಯಲ್ಲಿ ವಸ್ತುಸಂಗ್ರಹಾಲಯಗಳ ಬದಲಾಗುತ್ತಿರುವ ಪಾತ್ರʼ ಎಂಬ ಕುರಿತು ಉಪನ್ಯಾಸ ನೀಡಿದರು. ಈ […]

ಪತ್ರಕರ್ತರು ಜನರ ಧ್ವನಿಯಾಗಿ ಕೆಲಸ ಮಾಡಬೇಕು:ಎಸ್ ಪಿ ಋಷಿಕೇಶ್ ಸೋನಾವಣೆ

Thursday, July 22nd, 2021
Brand Mangalore

ಮಂಗಳೂರು : ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಸಮಾಜದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದಾಗ ಅದಕ್ಕೆ ಪೂರಕವಾಗಿ ಇಲಾಖೆಯಿಂದಲೂ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅಭಿಪ್ರಾಯಪಟ್ಟಿದ್ದಾರೆ. ಅವರು ಇಂದು ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ನ ಸಹಕಾರದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧನಾತ್ಮಕ ಪ್ರತಿಕ್ರಿಯೆಯ […]

ಕಂಬಳ ಸ್ಪರ್ಧೆಯ ನಿಯಮಗಳಲ್ಲಿ ಹಲವಾರು ಮಾರ್ಪಾಟು, ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ

Thursday, July 22nd, 2021
Kambala

ಮಂಗಳೂರು  :  ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕಂಬಳ ಶಿಸ್ತು ಪಾಲನಾ ಸಮಿತಿ ಕಂಬಳ ಸ್ಪರ್ಧೆಯಲ್ಲಿ  ಹಲವು ಮಾರ್ಪಾಟುಗಳನ್ನು ಮಾಡಿದೆ.  ಒಬ್ಬ ಓಟಗಾರ ನಿಗೆ ಮೂರು ಜೊತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಒಂದೇ ತಂಡದ ಎರಡು ಜೊತೆಯ ಕೋಣಗಳಿದ್ದರೆ ಮಾತ್ರ 4 ಜೊತೆ ಕೋಣಗಳನ್ನು ಓಡಿಸಬಹುದಾಗಿದೆ. ಇದರಿಂದ ಹೊಸ ಓಟಗಾರರಿಗೆ ಅವಕಾಶ ನೀಡಿದಂತಾಗುತ್ತದೆ ಎಂದು ಸಮಿತಿ ತೀರ್ಮಾನಿಸಿದೆ. ಕಂಬಳವನ್ನು 24 ಗಂಟೆಯೊಳಗೆ ಮುಗಿಸಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ ಮಾಡಿದೆ. […]

ಆಸ್ಕರ್ ಫೆರ್ನಾಂಡೀಸ್ ಅವರರಿಗೆ ತೀವ್ರ ನಿಗಾ ಘಟಕದಲ್ಲಿಯೇ ಡಯಾಲಿಸಿಸ್ ಚಿಕಿತ್ಸೆ ಆರಂಭಿಸಿದ ವೈದ್ಯರು

Thursday, July 22nd, 2021
Oscar Fernandes

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರರಿಗೆ ತೀವ್ರ ನಿಗಾ ಘಟಕದಲ್ಲಿಯೇ ಡಯಾಲಿಸಿಸ್ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಿದ್ದು, ಬುಧವಾರ ರಾತ್ರಿಯಿಂದಲೇ ಆರಂಭಿಸಲಾಗಿದೆ. ಸೋಮವಾರ ಯೋಗ ಮಾಡುವ ವೇಳೆ ಜಾರಿ ಬಿದ್ದಿದ್ದರು. ಈ ವೇಳೆ, ಯಾವುದೇ ಗಾಯಗಳಾಗದೇ ಇರುವುದರಿಂದ ಅದನ್ನು ನಿರ್ಲಕ್ಷ್ಯ ಮಾಡಿದ್ದರು. ಅದೇ ದಿನ ಅವರು ಡಯಾಲಿಸಿಸ್ ಚಿಕಿತ್ಸೆಗೆಂದು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಪರೀಕ್ಷಿಸಿದಾಗ ಅವರ ತಲೆಯ ಒಳಭಾಗದಲ್ಲಿ ನರಕ್ಕೆ ಗಾಯವಾಗಿ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು ಕಂಡುಬಂದಿತ್ತು. ಮರುದಿನ ಅವರು […]

ಪತಿಯೇ ಪತ್ನಿಯ ಕೊಲೆಗೆ ಎರಡು ಲಕ್ಷ ರೂಪಾಯಿ ಅಡ್ವಾನ್ಸ್ ಕೊಟ್ಟಿದ್ದ

Thursday, July 22nd, 2021
Vishala Ganiga

ಉಡುಪಿ:  ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಪೊಲೀಸರು 10 ದಿನದೊಳಗೆ ಬೇಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪತಿಯೇ ಪತ್ನಿಯ ಕೊಲೆಗೆ ಎರಡು ಲಕ್ಷ ರೂಪಾಯಿ ಅಡ್ವಾನ್ಸ್ ಕೊಟ್ಟಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ನೇಪಾಳ ದೇಶದ ಗಡಿ ಪ್ರದೇಶದಲ್ಲಿ ಸುಪಾರಿ ಹಂತಕ ಶ್ರೀ ಸ್ವಾಮಿನಾಥ ನಿಶಾದ (38) ನನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲೆ ಬ್ರಹ್ಮಾವರದ ಮಿಲನ್ ಅಪಾರ್ಟ್ ಮೆಂಟ್ ನಲ್ಲಿ ಜುಲೈ 12 ರಂದು ಸಂಜೆ ವಿಶಾಲ ಗಾಣಿಗ  ಕೊಲೆಯಾಗಿತ್ತು. ಮೈಮೇಲಿದ್ದ ಚಿನ್ನಾಭರಣವನ್ನು ಕದ್ದು ಆರೋಪಿ ಪ್ರಕರಣದ ದಿಕ್ಕು ತಪ್ಪಿಸಿ ಪರಾರಿಯಾಗಿದ್ದ. ಒಂದು […]

ದೃಷ್ಟಿಮಾಂದ್ಯ ಮಕ್ಕಳ ಶಿಕ್ಷಣಕ್ಕೆ ಪ್ರವೇಶಾವಕಾಶ

Thursday, July 22nd, 2021
visually- impaired

ಮಂಗಳೂರು  : ದೃಷ್ಟಿಮಾಂದ್ಯ ಮಕ್ಕಳ ಜೀವನಕ್ಕೊಂದು ದಾರಿದೀಪವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ಶಿಕ್ಷಣ ಸಂಸ್ಥೆಯಾದ ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯು (ಮಂಗಳೂರಿನ ಸೇವಾ ಭಾರತಿಯ ಅಂಗ ಸಂಸ್ಥೆ) ಕಳೆದ 11 ವರ್ಷಗಳಿಂದ ತೊಡಗಿಸಿಕೊಂಡಿದೆ. ಈವರೆಗೆ 30ಕ್ಕೂ ಹೆಚ್ಚು ದೃಷ್ಟಿಮಾಂದ್ಯ ಮಕ್ಕಳು ಈ ವಿಶೇಷ ವಿದ್ಯಾ ಸಂಸ್ಥೆಯಲ್ಲಿ 10ನೇ ತರಗತಿಯನ್ನು ಪೂರೈಸಿ, ಹೆಚ್ಚಿನ ಶಿಕ್ಷಣವನ್ನು ಮುಂದುವರಿಸಿದ್ದಾರೆ. 2021-22 ರ ಶೈಕ್ಷಣಿಕ ವರ್ಷಕ್ಕೆ, 5 ರಿಂದ 16 ವರ್ಷದೊಳಗಿನ ದೃಷ್ಟಿಮಾಂದ್ಯ ಮಕ್ಕಳಿಗೆ, […]

ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಗೆ ಅರ್ಜಿ ಆಹ್ವಾನ

Thursday, July 22nd, 2021
Tele Film

ಮಂಗಳೂರು : ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲಶಕ್ತಿ ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ “ರಾಷ್ಟ್ರೀಯ ಸ್ವಚ್ಛತಾ ಫಿಲ್ಮೋಂ ಕಾ ಅಮೃತ ಮಹೋತ್ಸ”ವ (ಅಜಾದ್ ಕಾ ಅಮೃತ್ ಮಹೋತ್ಸವ) ಎಂಬ ಹೆಸರಿನಡಿ ರಾಷ್ಟ್ರೀಯ ಕಿರುಚಿತ್ರ ಸ್ಪರ್ಧೆ ಆಯೋಜಿಸಿದೆ. ಗ್ರಾಮಗಳಲ್ಲಿ ಶೌಚಾಲಯ ಬಳಕೆ ಹಾಗೂ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಕುರಿತಾಗಿ ಗ್ರಾಮೀಣ ಜನರಿಗೆ ಬೃಹತ್ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಜಾಗೃತಿ ಮೂಡಿಸಲು ಈ ಕಿರುಚಿತ್ರ ಸ್ಪರ್ಧೆ ಆಯೋಜಿಸಿದೆ. ಈ ಕಿರುಚಿತ್ರ […]

ಅಲೆತ್ತೂರು: ಹಡಿಲು ಗದ್ದೆಗೆ ಕಾಯಕಲ್ಪ ನೇಜಿ ನೆಡುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ರೈ ಚಾಲನೆ

Wednesday, July 21st, 2021
Ramanatha-Rai

ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜ್ಯೋತಿ ಸಂಘದ ವತಿಯಿಂದ ಅಲೆತ್ತೂರು ಲೋಕೇಶ್ ಸುವರ್ಣ ಇವರ ಹಡಿಲು ಗದ್ದೆಯಲ್ಲಿ ನೇಜಿ ನೆಡುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಬುಧವಾರ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಶಾಂತ ಕುಲಾಲ್, ಕಾಮರ್ಿಕ ಘಟಕ ಅಧ್ಯಕ್ಷ […]