ದೈವಸ್ಥಾನದ ಮೈದಾನದಲ್ಲಿ ಹಿಂದೂ ಯುವಕರ ಜೊತೆ ಆಡುತ್ತಿದ್ದ ಅನ್ಯ ಧರ್ಮೀಯ ಯುವಕನನ್ನು ಹೊರದಬ್ಬಿದ ಆಡಳಿತ ಮಂಡಳಿ ಸದಸ್ಯ

Wednesday, July 14th, 2021
cricket

ಸುಳ್ಯ :  ಜಯನಗರದ ಶ್ರೀನಾಗ ಬ್ರಹ್ಮ ಆದಿ ಮೊಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದ ಮೈದಾನದಲ್ಲಿ ಹಿಂದೂ ಯುವಕರ ಜೊತೆ ಆಡುತ್ತಿದ್ದ ಅನ್ಯ ಧರ್ಮೀಯ ಯುವಕನನ್ನ ಆಡಳಿತ ಮಂಡಳಿ ಸದಸ್ಯ ಪ್ರವೀಣ್ ಹೊರದಬ್ಬಿದ್ದಾರೆ. ಪ್ರವೀಣ್ ಹಿಂದೂ ಯುವಕರೊಂದಿಗೆ ಕ್ರಿಕೆಟ್‌ ಆಟವಾಡುತ್ತಿದ್ದ ಕ್ರೈಸ್ತ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ‌ಇಲ್ಲಿ ಅನ್ಯಧರ್ಮಿಯರಿಗೆ ಆಡಲು ಅವಕಾಶವಿಲ್ಲ ಎಂದು ಯುವಕನನ್ನು ಸ್ಥಳದಿಂದ ಹೊರಹೋಗುವಂತೆ ಒತ್ತಾಯಿಸಿದ್ದು, “ಹಿಂದೂಗಳು ಅನ್ಯಧರ್ಮಿಯರೊಡನೆ ಏಕೆ ಆಡುತ್ತಾರೆ?” ಎಂದು ಪ್ರವೀಣ್‌ ಕೇಳಿದ್ದಾರೆ. ಈ ಮೈದಾನದಲ್ಲಿ ಯಾವುದೇ ಅನ್ಯಜಾತಿಯವರು ಆಡಬಾರದು ಎಂದು […]

ಮಂಗಳೂರು ವಿವಿ: ನಾಲ್ಕು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕುಲಪತಿಗಳು

Wednesday, July 14th, 2021
VV Books

ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶೀಘ್ರ ಅನುಷ್ಠಾನಕ್ಕೆ ತರಲಾಗುವುದು. ಅದರಲ್ಲಿ ಸಂಶೋಧನೆಗೆ ವಿಶೇಷ ಒತ್ತು ನೀಡುವ ಉದ್ದೇಶದಿಂದ ಈಗಾಗಲೇ ಕ್ರಿಯಾಸಮಿತಿಯನ್ನು ರಚಿಸಲಾಗಿದ್ದು ಪ್ರಸಾರಾಂಗದ ಮೂಲಕ ಸಂಶೋಧನಾ ಕೃತಿಗಳ ಪ್ರಕಟಣೆಯನ್ನು ಉತ್ತೇಜಿಸಲಾಗುವುದು, ಎಂದು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಸ್ ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಪ್ರಸಾರಾಂಗ ಪ್ರಕಟಿಸಿದ ನಾಲ್ಕು ಕೃತಿಗಳನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವೃತ್ತಿಯ ಜೊತೆಗೆ ಪ್ರವೃತ್ತಿ, ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಂಡಾಗ ಮನುಷ್ಯನ ವ್ಯಕ್ತಿತ್ವಕ್ಕೆ ಘನತೆ ಬರುತ್ತದೆ. ಬ್ಯಾರಿ […]

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Tuesday, July 13th, 2021
Bantwal Farming

ಬಂಟ್ವಾಳ: ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ […]

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 1.40 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಆಕ್ಸಿಜನ್ ಘಟಕ ಲೋಕಾರ್ಪಣೆ

Tuesday, July 13th, 2021
Bantwal-Oxygen-plant

ಬಂಟ್ವಾಳ: ಸುಮಾರು 1.40 ಕೋ.ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಆಕ್ಸಿಜನ್ ಘಟಕದಿಂದ ಬಂಟ್ವಾಳದ ಆಕ್ಸಿಜನ್ ಬೇಡಿಕೆಗಳ ಪೂರೈಕೆಯ ಜತೆಗೆ ಇತರ ಭಾಗಗಳಿಗೂ ಆಕ್ಸಿಜನ್ ಪೂರೈಕೆಗೆ ನೆರವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸ್ವಾಮ್ಯದ ಕಂಪೆನಿಗಳ ಸಾರ್ವಜನಿಕ ಹೊಣೆಗಾರಿಕಾ ನಿಧಿಯಿಂದ 1.40  ಕೋ.ರೂ.ವೆಚ್ಚದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ನಿಮಿಷಕ್ಕೆ 500 ಲೀ. ಉತ್ಪಾದನಾ ಸಾಮರ್ಥ್ಯದ ನೂತನ ಆಕ್ಸಿಜನ್ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. […]

 ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ನಿಧನ

Tuesday, July 13th, 2021
Sunil Heggaravalli

ಚಿಕ್ಕಮಗಳೂರು  :  ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ ಸುನೀಲ್ ಹೆಗ್ಗರವಳ್ಳಿ, ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಸುನೀಲ್ ಯವರನ್ನು ಮಧ್ಯಾಹ್ನ ಎದೆನೋವು ಕಾಣಿಸಿಕೊಂಡಬಳಿಕ ಗೋಣಿಬೀಡು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು,  ಆದರೆ ಆಸ್ಪತ್ರೆಯಲ್ಲಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ರವಿ‌‌ ಬೆಳಗೆರೆ ಅವರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು. […]

ಪತ್ರಿಕಾಭವನದ ಮುಂಭಾಗದಲ್ಲಿ ಉದ್ಯಾನವನ: ವೇದವ್ಯಾಸ ಕಾಮತ್

Tuesday, July 13th, 2021
Press Club VanaMahotsava1

  ಮಂಗಳೂರು: ಮಂಗಳೂರು ಪತ್ರಿಕಾ ಭವನದ ಮುಂಭಾಗದಲ್ಲಿ ಮಂಗಳೂರು ಮಹಾ ನಗರಪಾಲಿಕೆ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಉದ್ಯಾನವನ ನಿರ್ಮಾಣ ಮಾಡುವುದಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ,ಅರಣ್ಯ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಗರದ ಪತ್ರಿಕಾ ಭವನದ ಬಳಿ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರವನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ .ಈ ನಿಟ್ಟಿನಲ್ಲಿ […]

ನಗ್ರಿ ಶ್ರೀ ಶಾರದ ಭಜನಾ ಮಂದಿರದ ಸಮುದಾಯದ ಭವನಕ್ಕೆ ಶಿಲಾನ್ಯಾಸ

Tuesday, July 13th, 2021
Nagri Sharadha Bajana Mandali

ಬಂಟ್ವಾಳ: ಬಂಟ್ವಾಳ ಶಾಸಕರ ರೂ .50 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನಗ್ರಿ ಶ್ರೀ ಶಾರದ ಭಜನಾ ಮಂದಿರದ ಸಮುದಾಯದ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಧಾರ್ಮಿಕ ವಿಧಿವಿಧಾನಗಳ ಮೂಲಕ ನೆರವೇರಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿ ಬಳಿಕ ಮಾತನಾಡಿ, ಸರಕಾರದ ಅನುದಾನಗಳ ಮೂಲಕ ಗ್ರಾಮದ ಎಲ್ಲಾ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಗೆ ಮೊದಲ ಆಧ್ಯತೆ ನೀಡಲಾಗುತ್ತದೆ ‌ಎಂದರು. ಧಾರ್ಮಿಕ ಕೇಂದ್ರ ಗಳ ಅಭಿವೃದ್ಧಿಗೆ ಗ್ರಾಮಸ್ಥರ ಒಗ್ಗಟ್ಟಿನ ಸಹಕಾರ ಸದಾ ಇರಲಿ ಎಂದು ಹೇಳಿದರು. […]

ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ರಸಾಯನಿಕೇತರ ಸ್ಯಾನಿಟೈಸರ್ ಪ್ರಾತ್ಯಕ್ಷಿಕೆ

Tuesday, July 13th, 2021
S Angara

ಸುಳ್ಯ : ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ರಸಾಯನಿಕೇತರ ಸ್ಯಾನಿಟೈಸರ್ ಡೈಮಂಡ್ ಡ್ರಾಪ್ ‌ಬಳಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಕೆವಿಜಿ ಆಯುರ್ವೇದ ಕಾಲೇಜಿನ ಆಡಿಟೋರಿಯಂ ನಲ್ಲಿ ಜು.11 ರಂದು ನಡೆಯಿತು. ಸಚಿವ ಎಸ್ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಾಯಕ ಕಮೀಷನರ್ ಯತೀಶ್ ಉಳ್ಳಾಲ್, ‌ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ, ಕೆವಿಜಿ ಆಯುರ್ವೇದ ಕಾಲೇಜು ಪ್ರಾಂಶುಪಾಲರಾದ ಡಾ.ಲೀಲಾದರ್ ಡಿ.ವಿ,ಸುಳ್ಯ ಕ್ಷೇತ್ರ‌ ಶಿಕ್ಷಣಾಧಿಕಾರಿ ಎಸ್ ಪಿ ಮಹದೇವ್,ತಾಲೂಕು ಅರೋಗ್ಯಾಧಿಕಾರಿ ಡಾ.ನಂದಕುಮಾರ್, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಡ,ಪುತ್ತೂರು ತಾಲೂಕು ಅರೋಗ್ಯಧಿಕಾರಿ […]

ಫ್ಲ್ಯಾಟ್ ನಲ್ಲಿದ್ದ ಒಂಟಿ ಮಹಿಳೆಯನ್ನು ಕೊಂದು ಚಿನ್ನಾಭರಣ ದೋಚಿದ ಕಳ್ಳರು

Tuesday, July 13th, 2021
vishala ganiga

ಬ್ರಹ್ಮಾವರ: ಫ್ಲ್ಯಾಟ್ ನಲ್ಲಿ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ  ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ವಿಶಾಲ ಗಾಣಿಗ(35) ಎಂದು ಗುರುತಿಸಲಾಗಿದೆ. ವಿಶಾಲ ಗಾಣಿಗ ಅವರ ಪತಿ ವಿದೇಶದಲ್ಲಿದ್ದು, ಗಂಗೊಳ್ಳಿ ಮೂಲದ ವಿಶಾಲ ಅವರು ಇತ್ತೀಚಿಗಷ್ಟೇ ಊರಿಗೆ ಮರಳಿದ್ದರು. ಬ್ರಹ್ಮಾವರದಲ್ಲಿ ಸ್ವಲ್ಪ ಕೆಲಸವಿದೆ ಮುಗಿಸಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿಬಂದಿದ್ದ ವಿಶಾಲ ಅವರು ಮನೆಗೆ ವಾಪಾಸಾಗಿರಲಿಲ್ಲ ಎಂದು ಹೇಳಲಾಗಿದೆ. ವಿಶಾಲ  ಭಾನುವಾರ ರಾತ್ರಿಯಿಂದ ಮನೆಯಲ್ಲಿ ಒಬ್ಬರೆ ಇದ್ದರೆನ್ನಲಾಗಿದೆ. ಈ ಅವಧಿಯಲ್ಲಿ ದುಷ್ಕಮಿಗಳು ಫ್ಲ್ಯಾಟ್ […]

ಸಾವಿನ ದಾರಿಯಲ್ಲಿದ್ದ ಹಿಂದೂ ಕುಟುಂಬಕ್ಕೆ, ಬದುಕುವ ದಾರಿ ತೋರಿಸಿದ ಉಳ್ಳಾಲ ಮುಸ್ಲಿಂ ಕುಟುಂಬ !

Monday, July 12th, 2021
Ullal Marriage

ಮಂಗಳೂರು : ಶಕ್ತಿನಗರದಲ್ಲಿ ಸ್ವಂತ ಮನೆಯಲ್ಲಿ ವಾಸವಿದ್ದ ಕುಟುಂಬವದು. ಗೀತಾ ಅವರ ಪತಿ ಕೆಲವು ವರ್ಷಗಳ ಹಿಂದೆಯೇ ದುರಂತ ಸಾವು ಕಂಡಿದ್ದಾರೆ. ದಂಪತಿಗೆ ಇಬ್ಬರು ಹೆಣ್ಮಕ್ಕಳು. ವರ್ಷದ ಹಿಂದೆ ಹಿರಿಯ ಮಗಳಿಗೆ ಮದುವೆಯಾಗಿ ಸಾಲದಿಂದ ಹೊರಬರಲು ಎಲ್ಲವನ್ನೂ ಮಾರಿ, ಖಾಲಿ ಕೈಯೊಂದಿದೆ ನಾಲ್ಕು ತಿಂಗಳ ಹಿಂದೆ ಗೀತಾ ತಾಯಿ, ಮಗಳು ಕವನಾ, ಅತ್ತೆ ರೇಣುಕಾ ಮಂಚಿಲಕ್ಕೆ ಬಂದಿದ್ದಾರೆ. ರೇಣುಕಾ ಅವರೇ ಅಲ್ಲಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರೂ, ಕರೊನಾ ಎರಡನೇ ಅಲೆಯಿಂದ ಅದೂ ಇಲ್ಲದಂತಾಗಿ ಜೀವನವೇ ಕಷ್ಟವಾಗಿದೆ. […]