ಜುಲೈ 13 ರಂದು ಬಾನಂಗಳದಲ್ಲಿ ಮಂಗಳ – ಶುಕ್ರಗ್ರಹಗಳ ಸಂಯೋಗ

Monday, July 12th, 2021
Venus Mars

ಮಂಗಳೂರು : ಮಂಗಳ-ಶುಕ್ರಗ್ರಹಗಳು ಜು.13ರ ಮಂಗಳವಾರ ಸನಿಹ ಬರಲಿದ್ದು, (Conjunction). ಈ ಗ್ರಹಗಳು ಉಳಿದ ದಿನಗಳಲ್ಲಿ ದೂರದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ. ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, […]

ಅಪಘಾತಕ್ಕೊಳಗಾದ ವ್ಯಕ್ತಿಗೆ ಉಪಚರಿಸಿದ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು

Sunday, July 11th, 2021
Tejas

ಮಂಗಳೂರು: ಬೈಕನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲು ಮುಂದಾಗಿದ್ದ ಯುವಕನಿಗೆ ಲಾರಿ ಡಿಕ್ಕಿ ಹೊಡೆದ  ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ. ಮೃತ ಯುವಕ ತೇಜಸ್‌ (28) ಸುಳ್ಯ ತಾಲೂಕಿನ ಮರ್ಕಜೆಯ ದೊಡ್ಡತೋಟ ನಿವಾಸಿಯಾಗಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಶನಿವಾರ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದ್ವಿಚಕ್ರ ವಾಹವೊಂದು ಅಪಘಾತಕ್ಕೀಡಾಗಿತ್ತು. ಇದನ್ನು ಗಮನಿಸಿದ ತೇಜಸ್, ಗಾಯಾಳುವನ್ನು ಉಪಚರಿಸಿ ಆತನ ಬೈಕ್ನನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲು ದೂಡಿಕೊಂಡು ಹೋಗುತ್ತಿದ್ದನು. ಅದೇ […]

ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ವಾಹನ ಸವಾರರನ್ನು ಓಡಿಸಿದ ಕಾಡಾನೆ

Sunday, July 11th, 2021
Elephant

ಕಡಬ :   ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಭಾನುವಾರ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ ಎಂದು ತಿಳಿದು ಬಂದಿದೆ.

ವಿಶಾಲ ಗಾಜಿನ ಕಿಟಿಕಿ ಮತ್ತು ಛಾವಣಿ ಇರುವ ಮಂಗಳೂರು-ಯಶವಂತಪುರ ರೈಲಿನ ‘ವಿಸ್ಟಾಡೋಮ್’ ಬೋಗಿಗಗಳಿಗೆ ಚಾಲನೆ

Sunday, July 11th, 2021
Visdom Coach

ಮಂಗಳೂರು :  ಗಾಜಿನ ಛಾವಣಿ ಮತ್ತು ವಿಶಾಲ ಗಾಜಿನ ಕಿಟಿಕಿ ಇರುವ  ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ರೈಲಿನ  ‘ವಿಸ್ಟಾಡೋಮ್’ ಬೋಗಿಗಳನ್ನು  ಸೇವೆಗೆ ಭಾನುವಾರ ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್‌ರ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ ಆಮೆಗತಿಯಲ್ಲಿ ಸಾಗುತ್ತಿದ್ದ ಅಭಿವೃದ್ಧಿ ಕಾಮಗಾರಿಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬಂದ […]

ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿ ಗುರುಪುರ ಪಂಚಾಯತ್ ವ್ಯಾಪ್ತಿಯ ಯಲ್ಲಿ ಹಲವರು ಪಕ್ಷಕ್ಕೆ ಸೇರ್ಪಡೆ

Saturday, July 10th, 2021
Gurupura BJP

ಮಂಗಳೂರು  : ಭಾರತೀಯ ಜನತಾ ಪಾರ್ಟಿಯ ತತ್ವ, ಸಿದ್ಧಾಂತಗಳನ್ನು ಒಪ್ಪಿ, ಪ್ರಧಾನಿ ನರೇಂದ್ರ ಮೋದಿಜಿಯವರ ಬಲಿಷ್ಟ ನೇತೃತ್ವ, ಸಿಎಂ ಯಡಿಯೂರಪ್ಪನವರ ಮಾದರಿ ಆಡಳಿತ, ಪಕ್ಷದ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರ ದಕ್ಷ ಮಾರ್ಗದರ್ಶನ ಹಾಗೂ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತಗೊಂಡು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅನೇಕ ನಾಯಕರು ಭಾಜಪಾ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ […]

ಹೆಂಡತಿಯನ್ನು ತವರುಮನೆಗೆ ಬಿಟ್ಟು, ನಾದಿನಿಯನ್ನು ಕರೆದುಕೊಂಡು ಹೋದ ಪತಿ

Saturday, July 10th, 2021
Muslim Couple

ಬೆಳ್ತಂಗಡಿ:  ವ್ಯಕ್ತಿಯೊಬ್ಬ, ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು, ಆಕೆಯ ಸಹೋದರಿಯನ್ನು ಕರೆದುಕೊಂಡು ಹೋಗಿದ್ದಾನೆ. ಈ ಸಂಬಂಧ ಮಹಿಳೆಯ ತಂದೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾಲ್ಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರಿಯನ್ನು ಮುಸ್ತಫಾ ಎಂಬ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಪತಿ–ಪತ್ನಿಯ ನಡುವೆ ಮನಸ್ತಾಪ ಉಂಟಾಗಿ, ಪತ್ನಿ ತವರು ಮನೆಗೆ ಬಂದು ಉಳಿದಿದ್ದಳು. ಗುರುವಾರ ತಾಯಿಯೊಂದಿಗೆ ಮಾವನ ಮನೆಗೆ ಬಂದ ಮುಸ್ತಫಾ, ನಾದಿನಿಯನ್ನು ಕರೆದುಕೊಂಡು ಹೋಗಿದ್ದು, ಕಿರಿಯ ಪುತ್ರಿ ಮನೆಗೆ ಬಂದಿಲ್ಲವೆಂದು ತಂದೆ […]

ಶಿಷ್ಯನ ಜೀವನದಲ್ಲಿ ಗುರುಗಳ ಮಹತ್ವ

Saturday, July 10th, 2021
Guru Poornima

ಮಂಗಳೂರು  : ಮನುಷ್ಯ ತನ್ನ ದಿನನಿತ್ಯದ ಜೀವನದಲ್ಲಿ ಅತ್ಯಂತ ಚಿಕ್ಕ-ಚಿಕ್ಕ ವಿಷಯಗಳಿಗೂ ಸಂಬಂಧಪಟ್ಟ ಪರಿಣಿತರ ಅಂದರೆ ಶಿಕ್ಷಕರು, ವೈದ್ಯರು, ವಕೀಲರು ಇತ್ಯಾದಿ ಇತರ ಯಾರಿಂದಲಾದರೂ ಮಾರ್ಗದರ್ಶನವನ್ನು ಪಡೆಯುತ್ತಾನೆ, ಹಾಗಾದರೆ ಮನುಷ್ಯ ಜನ್ಮದ ಮೂಲ ಉದ್ದೇಶ ಅಂದರೆ ಮೋಕ್ಷ ಪ್ರಾಪ್ತಿಗಾಗಿ ಯಾರ ಮಾರ್ಗದರ್ಶನ ಪಡೆಯಬೇಕು? ಮನುಷ್ಯ ಜೀವನದ ಉದ್ದೇಶ ಸಫಲವಾಗಲು ನಾವು ಭಗವಂತನ ಸಗುಣ ರೂಪವಾದ ಗುರುಗಳ ಮರ‍್ಗರ‍್ಶನ ಪಡೆಯಬೇಕು. ಹಾಗಾದರೆ ‘ಜನ್ಮ-ಮರಣದ ಚಕ್ರದಿಂದ ಮುಕ್ತಿ ಕೊಡುವ ಗುರುಗಳ ಮಹತ್ವ ಎಷ್ಟಿರಬಹುದು’ ಎಂಬುದರ ಕಲ್ಪನೆಯನ್ನೂ ಸಹ ಮಾಡಲು ಆಗುವುದಿಲ್ಲ. […]

ಸರಕಾರಿ ಜಾಗದಲ್ಲಿ ಮೀನು ಮಾರುತ್ತಿದ್ದ ಗೂಡಂಗಡಿಗಳ ತೆರವು

Saturday, July 10th, 2021
Petty Shop

ಉಡುಪಿ : ಸರಕಾರಿ ಜಾಗದಲ್ಲಿ ಮೀನು ಮಾರುತ್ತಿದ್ದ ಗೂಡಂಗಡಿಗಳನ್ನು ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ಮೂಲಕ ತೆರವುಗೊಳಿಸಿದ್ದಾರೆ. ನಗರಸಭೆಯ ಅಧಿಕಾರಿಗಳು ನಗರದ ಪೋಲಿಸರ ನೇತೃತ್ವದಲ್ಲಿ ಬ್ರಹ್ಮಗಿರಿ ಸರ್ಕಲ್ ಸುತ್ತಮುತ್ತಲಿನ ಒಟ್ಟು ಐದು ಅಂಗಡಿಗಳನ್ನು ತೆರವು ಮಾಡಿದ್ದಾರೆ. ಯಾವುದೇ ನೋಟೀಸ್ ನೀಡದೆ ಏಕಾಏಕಿ ತೆರವುಗೊಳಿಸಿರುವುದಕ್ಕೆಅಂಗಡಿ ಮಾಲಕರಾದ ಅಶೋಕ್ ರಾಜ್ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಗೂಡಂಗಡಿ ಸಾಗಿಸುವ ವಾಹನದಡಿ ಮಲಗಿ ಪ್ರತಿಭಟಿಸಿದರು.   ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್‌ರಾಜ್, […]

ಮಂಗಳೂರು ಮಿನಿ ವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಮೂವರು ಹಿರಿಯ ನಾಗರಿಕರು

Saturday, July 10th, 2021
mangaloreMiniVidhanaSoudha

ಮಂಗಳೂರು: ನಗರದ ಮಿನಿ ವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಮೂವರು ಹಿರಿಯ ನಾಗರಿಕರನ್ನು ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಕಚೇರಿ ಕೆಲಸದಲ್ಲಿ ಮಿನಿ ವಿಧಾನಸೌಧಕ್ಕೆ ಬಂದಿದ್ದ ಮೂವರು ಹಿರಿಯ ನಾಗರಿಕರು ಲಿಫ್ಟ್ ಹತ್ತಿದ್ದರು. ಇವರಲ್ಲಿ ಒಬ್ಬರು ಮಹಿಳೆ, ಇಬ್ಬರು ಪುರುಷರಿದ್ದರು. ಇವರು ಲಿಫ್ಟ್ ಏರಿದ ಕೆಲವೇ ಕ್ಷಣಗಳಲ್ಲಿ ಅರ್ಧದಲ್ಲೇ ಸ್ಥಗಿತಗೊಂಡಿತ್ತು. ವಿಷಯ ತಿಳಿದ ಅಧಿಕಾರಿಗಳು ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಲಿಫ್ಟ್‌ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿದರು. ತಾಂತ್ರಿಕ ದೋಷದಿಂದ ಲಿಫ್ಟ್ ಕೆಟ್ಟಿರಬಹುದು […]

ಪಿಲಿಕುಳದ ಸುಧಾರಣೆಗೆ ಅಗತ್ಯ ಕ್ರಮ: ಅರವಿಂದ ಲಿಂಬಾವಳಿ

Friday, July 9th, 2021
Aravinda Limbavali Pilikula

ಮಂಗಳೂರು : ಪಿಲಿಕುಳ ನಿಸರ್ಗ ಧಾಮದ ಸುಧಾರಣೆಗೆ ಕೇಂದ್ರ ಸಚಿವರು ಹಾಗೂ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲಾ ರೀತಿಯ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಅರಣ್ಯ ಮತ್ತು ಕನ್ನಡ ಹಾಗೂ ಸಂಸ್ಕøತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು. ಅವರು ಜು.9ರ ಶುಕ್ರವಾರ ನಗರಕ್ಕೆ ಅನತಿ ದೂರದಲ್ಲಿರುವ ಪಿಲಿಕುಳ ನಿಸರ್ಗ ಧಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪಿಲಿಕುಳದ ಮೃಗಾಯಲವನ್ನು ವೀಕ್ಷಿಸಿದ ನಂತರ ವರದಿಗಾರರೊಂದಿಗೆ ಮಾತನಾಡಿದರು. ಪಿಲಿಕುಳದಲ್ಲಿರುವ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳ ತಂಡದೊಂದಿಗೆ […]