ನಿಷೇದಿತ ಮಾದಕ ವಸ್ತು ಎಂಡಿಎಂಎ ವಶ, ಇಬ್ಬರ ಬಂಧನ

Sunday, June 13th, 2021
mdma

ಮಂಗಳೂರು : ನಿಷೇದಿತ ಮಾದಕ ವಸ್ತು ಎಂಡಿಎಂಎ ಅನ್ನುಬೆಂಗಳೂರಿನಿಂದ ಕಾಸರಗೋಡಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಭಾನುವಾರ ಕೊಣಾಜೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಫೀಕ್‌‌ ಹಾಗೂ ಅಲ್ತಾಫ್‌‌ ಎಂದು ಗುರುತಿಸಲಾಗಿದೆ. ಮಂಜನಾಡಿ ಗ್ರಾಮದ ನಾಟೆಕಲ್‌‌‌ ವಿಜಯನಗರ ಎಂಬಲ್ಲಿ ಪಿಎಸ್‌‌ಐ ಮಲ್ಲಿಕಾರ್ಜುನ ಬಿರದಾರ ಹಾಗೂ ಸಿಬ್ಬಂದಿಗಳೂ ವೇಳೆ ನಾಟೆಕಲ್‌ ಕಡೆಯಿಂದ ಬಂದ ಬಿಳಿ ಬಣ್ಣ ಸ್ವಿಫ್ಟ್‌‌‌‌ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದ್ದು, ಈ ವೇಳೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ವಿಚಾರಿಸಿದ ವೇಳೆ ಬೆಂಗಳೂರಿನ ಕಮ್ಮನಹಳ್ಳಿ ಎಂಬಲ್ಲಿಂದ […]

ಉಡುಪಿ ಜಿಲ್ಲೆ ಸೋಮವಾರ ಅನ್‌ಲಾಕ್, ಮಾರ್ಗಸೂಚಿಗಳ ವಿವರ ಇಲ್ಲಿದೆ ನೋಡಿ

Saturday, June 12th, 2021
Udupi DC

ಉಡುಪಿ  :  ರಾಜ್ಯದ ಆನ್ ಲಾಕ್ ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆಯೂ ಒಂದಾಗಿದೆ.  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹತೋಟಿಗೆ ಬಂದಿದ್ದು ಜೂನ್ 14ರಿಂದ ಅನ್‌ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳು ವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಶನಿವಾರ ಜಿಲ್ಲೆಯ ತಹಶೀಲ್ದಾರ್ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ […]

ಕೊರೋನ ಸೋಂಕು ಜೂನ್ 12 : ದ.ಕ. ಜಿಲ್ಲೆ 618 – 4 ಸಾವು, ಉಡುಪಿ ಜಿಲ್ಲೆ 258 – 2 ಸಾವು, ಕಾಸರಗೋಡು ಜಿಲ್ಲೆ – 475

Saturday, June 12th, 2021
corona-virus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ  618 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.92 ಇದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 83,311ಕ್ಕೇರಿದೆ. ಶನಿವಾರ 4 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 976ಕ್ಕೇರಿದೆ.   ಶನಿವಾರ 524 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 75,273ಕ್ಕೇರಿದೆ. ಜಿಲ್ಲೆಯಲ್ಲಿ 7,062 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರಗೆ 8,92,095 ಮಂದಿಯ ದ್ರವ […]

ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 45 ಕ್ಕೆ ಏರಿಕೆ, ಇಬ್ಬರು ಬಲಿ

Saturday, June 12th, 2021
Black Fungus

ಮಂಗಳೂರು : ದ.ಕ. ಜಿಲ್ಲೆಯಲ್ಲಿ  ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳ ಸಂಖ್ಯೆ  45 ಕ್ಕೆ ಏರಿದೆ.  ಶನಿವಾರ ಹೊಸತಾಗಿ 2 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಬಲಿಯಾಗಿದ್ದಾರೆ. ಪತ್ತೆಯಾದ ಎರಡು ಹೊಸ ಪ್ರಕರಣವು ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ್ದಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬ್ಲ್ಯಾಕ್ ಫಂಗಸ್ ಗೆ ಇಬ್ಬರು ಬಲಿಯಾಗಿದ್ದು  ಒಬ್ಬರು ಚಿಕ್ಕಮಗಳೂರಿನವರು ಮತ್ತು ಇನ್ನೊಬ್ಬರು ಹಾಸನ ಜಿಲ್ಲೆಗೆ ಸೇರಿದವರಾಗಿದ್ದಾರೆ.  ದ.ಕ.ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ 12 ಮಂದಿಯ ಸಹಿತ ಬ್ಲ್ಯಾಕ್ […]

ನವಭಾರತ್ ಸರ್ಕಲ್ ಅಡಿಯಲ್ಲಿ ಪುರಾತನ ಬಾವಿ ಪತ್ತೆ

Saturday, June 12th, 2021
Navabharath Circle

ಮಂಗಳೂರು  : ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ನವಭಾರತ್ ಸರ್ಕಲ್ – ರಾಷ್ಟ್ರಕವಿ ಗೋವಿಂದ್ ಪೈ ವೃತ್ತವನ್ನು ನೆಲಸಮ ಮಾಡಲಾಗಿದ್ದು ಇದೀಗ ಕಾಮಗಾರಿ ವೇಳೆ ವೃತ್ತದಲ್ಲಿ ಪುರಾತನ ಬಾವಿಯೊಂದು ಪತ್ತೆಯಾಗಿದೆ. ಸುಮಾರು 1980 ರಲ್ಲಿ ನಿರ್ಮಾಣವಾದ 40 ವರ್ಷದ ಹಿಂದಿನ ಬಾವಿ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ ಮೂಡಿಸಿದೆ. ಹಿಂದೆ ನವಭಾರತ ಮುದ್ರಣಾಲಯ ಮತ್ತು ಕಚೇರಿ ಇದ್ದ ಕಾರಣಕ್ಕೆ ಈ […]

ಕೊಲೆಯಾದ ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೋಟ್ಯಂತರ ಅಸ್ತಿ ಯಾರಿಗೆ ಸಿಗಲಿದೆ ? ವಿವರ ಇಲ್ಲಿದೆ ನೋಡಿ !

Friday, June 11th, 2021
Bhashkar-Shetty

ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಆಗುವ 2 ವಾರಗಳ ಹಿಂದೆ ಅಂದರೆ 2016ರ ಜು. 15ರಂದು ಭಾಸ್ಕರ ಶೆಟ್ಟಿ ತನ್ನ ಆಸ್ತಿಗೆ ಸಂಬಂಧಿಸಿದಂತೆ ವೀಲುನಾಮೆ ಯನ್ನು ಬರೆಸಿದ್ದರು. ಈ ವೀಲೆನಾಮೆಯು ಕೊಲೆ ಪ್ರಕರಣದ ಆರೋಪಪಟ್ಟಿಯಲ್ಲಿ ಸಲ್ಲಿಸಿರುವ ಒಟ್ಟು 270 ದಾಖಲೆಗಳ ಪೈಕಿ 95ನೇ ದಾಖಲೆಯಾಗಿದ್ದು, ಇದನ್ನು ಉಡುಪಿ ಜಿಲ್ಲಾ ಮತ್ತು ನ್ಯಾಯಾಲಯ ವಿಚಾರಣೆ ವೇಳೆ ಪರಿಗಣಿದೆ . ಪ್ರಕರಣದ ಆರೋಪಿಗಳಾದ ಪತ್ನಿ, ಮಗ ಸೇರಿದಂತೆ ಮೂವರು ಜೀವಿತಾವಧಿ ಜೈಲುಶಿಕ್ಷೆಗೆ ಗುರಿಯಾಗಿರುವ ಹಿನ್ನಲೆಯಲ್ಲಿ ಈಗ ಭಾಸ್ಕರ ಅವರ ಆಸ್ತಿಯ ವಾರಸುದಾರಿಕೆಯ […]

ಮಾದಕ ವಸ್ತು ಎಲ್‌ಎಸ್‌ಡಿ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿ ಸೆರೆ

Friday, June 11th, 2021
Mohammed Ajinas

ಮಂಗಳೂರು : ಅಕ್ರಮವಾಗಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಲ್‌ಎಸ್‌ಡಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕೇರಳ ಮೂಲದ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಕುರಿತು ಮಾಹಿತಿ ನೋಡಿದ ಕಮಿಶನರ್, ಮೂಲತಃ ಕೇರಳ ಕ್ಯಾಲಿಕಟ್ ಮುಟ್ಟಂಗಲ್ ನಿವಾಸಿ, ಪ್ರಸ್ತುತ ಕದ್ರಿಯ ಪಿಜಿಯಲ್ಲಿ ವಾಸಿಸುತ್ತಿರುವ ಮುಹಮ್ಮದ್ ಅಜಿನಾಸ್ (25) ಬಂಧಿತ ಆರೋಪಿ. ಈತನಿಂದ 16.80 ಲಕ್ಷ ರೂ. ಮೌಲ್ಯದ ಒಟ್ಟು 15 ಗ್ರಾಂ 15 ಮಿಲಿ ಗ್ರಾಂ ತೂಕವಿರುವ […]

ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

Friday, June 11th, 2021
bharath Shetty

ಮಂಗಳೂರು  : ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು ಅಡ್ಯಾರ್ ಗ್ರಾಮ ಪಂಚಾಯತ್ ನ ಪಿಡಿಒ ರವರನ್ನು ಸ್ಥಳಕ್ಕೆ […]

ಕೇರಳ ರಾಜ್ಯದಲ್ಲಿ ಜೂ.12 ಮತ್ತು 13ರಂದು ಸಂಪೂರ್ಣ ಲಾಕ್ ಡೌನ್

Friday, June 11th, 2021
Kerala Lockdown

ಕಾಸರಗೋಡು : ಕೇರಳ ಸರಕಾರ, ರಾಜ್ಯದಲ್ಲಿ ಜೂ.16ರ ವರೆಗೆ ಲಾಕೌ ಡೌನ್ ವಿಸ್ತರಿಸಿದೆ. ಈ ನಡುವೆ ಜೂ.12 ಮತ್ತು 13ರಂದು ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುವಾಗ ಹೋಟೆಲ್ ಗಳಲ್ಲಿ ಪಾರ್ಸೆಲ್ ಆಗಿ ತಿಂಡಿತಿನಿಸುಗಳನ್ನು ಮಾರಾಟ ಮಾಡುಲು ಅವಕಾಶವಿಲ್ಲ . ಆದರೆ ಹೋಂ ಡೆಲಿವರಿಗೆ ಅವಕಾಶವಿರಲಿದೆ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ  ಅನುಮತಿ ಇದೆ ಎಂದು ಪ್ರಕಟನೆಯಲ್ಲಿ ಹೇಳಲಾಗಿದೆ.  

ಭಟ್ಕಳದಲ್ಲಿ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯ ಬಂಧನ

Thursday, June 10th, 2021
Kathija-Meharin

ಭಟ್ಕಳ : ಕಳೆದ 8 ವರ್ಷಗಳಿಂದ ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿರುವ ಪಾಕ್ ಮೂಲದ ಮಹಿಳೆ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪಾಕಿಸ್ತಾನ ಪೌರತ್ವ ಹೊಂದಿದ್ದ ಖತೀಜಾ ಮೆಹರಿನ್ ಬಂಧಿತ ಮಹಿಳೆಯಾಗಿದ್ದಾಳೆ. ಭಟ್ಕಳ ತಾಲೂಕಿನ ನವಾಯತ್ ಕಾಲನಿಯಲ್ಲಿ ಮಹಿಳೆ ಅಕ್ರಮವಾಗಿ ನೆಲೆಸಿದ್ದು ಈ ಬಗ್ಗೆ ಜೂನ್ 8 ರಂದು ಮಾಹಿತಿ ಲಭಿಸಿತ್ತು. ಆಕೆಯನ್ನು ಬಂಧಿಸುವ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಆಕೆಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಪಾಕಿಸ್ತಾನ ಪೌರತ್ವ ಹೊಂದಿದ್ದ ಖತೀಜಾ ಮೆಹರಿನ್ ಭಾರತಕ್ಕೆ […]