ಮಂಗಳೂರಿನಲ್ಲಿ ಖಾಸಗಿ ಶಾಲೆಗಳ ಫೀಸ್ ವಸೂಲಿ ಹಾವಳಿ : ಡಿಸಿ ಕಠಿಣ ಕ್ರಮದ ಎಚ್ಚರಿಕೆ

Thursday, June 10th, 2021
KV Rajendra

ಮಂಗಳೂರು : ನಗರದ ಶಾಲಾ, ಕಾಲೇಜು ಗಳು ವಿದ್ಯಾರ್ಥಿಗಳಿಂದ  ಬಲವಂತದ  ಫೀಸ್ ಕಲೆಕ್ಷನ್ ಆರಂಭಿಸಿದ್ದು, ಕೇವಲ ಆನ್ ಲೈನ್ ತರಗತಿ ನಡೆಸಿಯೇ ದುಬಾರಿ ಫೀಸ್ ಸಂಗ್ರಹಿಸಿರುವುದು, ಕಳೆದ ಶೈಕ್ಷಣಿಕ ವರ್ಷದ ಕೊರೋನಾ ಆರ್ಥಿಕ ಸಂಕಷ್ಟದ ನಡುವೆ ವರದಿಯಾಗಿದೆ. ಆರ್ಥಿಕ ಸಂಕಷ್ಟ ಮತ್ತು ಕೊರೋನಾ ಸಾಂಕ್ರಾಮಿಕದ ನಡುವೆ ವಿದ್ಯಾರ್ಥಿಗಳಿಂದ ಅಪಾರ ಫೀಸ್ ಹಣ ಪಡೆದಿರುವುದನ್ನು ಮತ್ತು ಕಳೆದ ವರ್ಷದ ಹಣ ವಸೂಲಾತಿ ಮಾಡಿರುವುದನ್ನು ತನಿಖೆ ಮಾಡಬೇಕು ಎಂದು ಪೋಷಕರು ಸರಕಾರವನ್ನು ಒತ್ತಾಯಿಸಿದ್ದಾರೆ. ಈ ರೀತಿ ಸಂಗ್ರಹ ಮಾಡಿದ  ಶಾಲಾ ಕಾಲೇಜುಗಳ ಆಡಳಿತ ಮಂಡಳಿಗೆ ದ.ಕ.ಜಿಲ್ಲಾಧಿಕಾರಿ […]

ದಕ್ಷಿಣ ಕನ್ನಡ ಮತ್ತು ಇತರ ಎಂಟು ಜಿಲ್ಲೆಗಳಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರಿಕೆ

Thursday, June 10th, 2021
Koata Srinivas

ಮಂಗಳೂರು : ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ  ಮಾಧ್ಯಮದೊಂದಿಗೆ ಹೇಳಿದರು, ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ […]

ಮಂಗಳೂರು : 14ನೇ ಮಹಡಿಯ ಮನೆಯಿಂದ ಜಿಗಿದು ಮಹಿಳೆ ಆತ್ಮಹತ್ಯೆ

Thursday, June 10th, 2021
Pushpalatha

ಮಂಗಳೂರು : ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಮನೆಯಿಂದ ಮಹಿಳೆಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ(64) ಎಂದು ಗುರುತಿಸಲಾಗಿದೆ. ಪುಷ್ಪಲತಾ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿಯಲ್ಲಿರುವ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ ನ   14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಒತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾದ ಇವರು ಈ […]

ನಾಗರಿಕರಿಗೆ ತೊಂದರೆ ಕೊಡುತ್ತಿದ್ದ ವೈದ್ಯಾಧಿಕಾರಿಗೆ ತುರ್ತು ವರ್ಗಾವಣೆ

Wednesday, June 9th, 2021
Health Center

ಬಂಟ್ವಾಳ: ಇಲ್ಲಿನ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರು ಸಹಿತ ರೋಗಿಗಳಿಗೆ ಸೂಕ್ತ ಸ್ಪಂದನೆ ಮತ್ತು ಚಿಕಿತ್ಸೆ ನೀಡುತ್ತಿಲ್ಲ ಎಂಬ ನಾಗರಿಕರ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ವೈದ್ಯಾಧಿಕಾರಿ ಡಾ.ಮಧುಸೂದನ್ ಇವರನ್ನು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಇವರ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿ ಬಂದಿತ್ತು. ಈ ಬಗ್ಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಕೂಡಾ ನಿರ್ಣಯ ಕೈಗೊಂಡು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾ […]

ಅನಾವಶ್ಯಕವಾಗಿ ತಿರುಗಾಟ ನಡೆಸುತ್ತಿದ್ದ 35ಕ್ಕೂ ಮಿಕ್ಕಿ ವಾಹನ ವಶಕ್ಕೆ

Wednesday, June 9th, 2021
Bantwal Vehicle

ಬಂಟ್ವಾಳ: ಜಿಲ್ಲೆಯಲ್ಲಿ ಒಂದು ವಾರ ಕಠಿಣ ಲಾಕ್ ಡೌನ್ ಘೋಷಣೆಯಾಗಿದ್ದರೂ ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಟ ನಡೆಸುತ್ತಿದ್ದ ವಾಹನಗಳ ವಿರುದ್ಧ ನಗರ ಠಾಣೆ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದ ಪೊಲೀಸರು ಬುಧವಾರ ಬೆಳಿಗ್ಗೆ ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ. ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಕ್ ಡೌನ್ ಮಾರ್ಗ ಸೂಚಿ ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಟ ನಡೆಸುತ್ತಿದ್ದ 20ಕ್ಕೂ ಮಿಕ್ಕಿ ದ್ವಿಚಕ್ರ ವಾಹನ ಸೇರಿದಂತೆ ಸುಮಾರು 35ಕ್ಕೂ ಮಿಕ್ಕಿ ವಾಹನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು […]

ಬೀದಿ ಬದಿ ವ್ಯಾಪಾರಿಗಳಿಗೆ ಕೊರೊನಾ ಲಸಿಕೆ ನೀಡಿದ ಮಂಗಳೂರು ಮಹಾನಗರಪಾಲಿಕೆ

Wednesday, June 9th, 2021
street-vendors

ಮಂಗಳೂರು :  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಕೋರೊನಾ ನಿಯಂತ್ರಣ ಲಸಿಕೆ ನೀಡುವ ಕಾಯ೯ಕ್ರಮವು ಬುಧವಾರದಂದು ಜರಗಿದ್ದು ಸದ್ರಿ ಕಾಯ೯ಕ್ರಮಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಚಾಲನೆ ನೀಡಿದರು. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾಯ೯ ನಿವ೯ಹಿಸುವ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರಿಗೆ ಸರಕಾರದ ಮಾಗ೯ಸೂಚಿಯಂತೆ ಲಸಿಕೆ ಕಾಯ೯ಕ್ರಮವು ಪಾಲಿಕೆಯ ಕುದ್ಮುಲ್ ರಂಗ ರಾವ್ ಮಿನಿ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸುಮಾರು 200 ಮಂದಿ ಬೀದಿ ಬದಿ ವ್ಯಾಪಾರಸ್ಥರಿಗೆ ಲಸಿಕೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿತ್ತು. ಕಾಯ೯ಕ್ರಮದಲ್ಲಿ ಲಸಿಕೆಯ ಜೊತೆಗೆ […]

ಹಿಂದೂ ದೇವಾಲಯಗಳ ಹಣ ಮದ್ರಸ ಇಮಾಮಗಳಿಗೆ ತಸ್ತೀಕ್ ರೂಪದಲ್ಲಿ ನೀಡಿದ ಸರಕಾರ

Wednesday, June 9th, 2021
VHP appeal

ಮಂಗಳೂರು :  ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು, ರಾಜ್ಯದಲ್ಲಿ ನಮ್ಮ ಸರಕಾರ ಬರುವ ಮುಂಚೆ ಇಲಾಖೆಯ ಮೂಲಕ […]

ಲಾಕ್ ಡೌನ್ : ವ್ಯವಹಾರ ನಷ್ಟದಿಂದ ದಂಪತಿ ಆತ್ಮಹತ್ಯೆ

Wednesday, June 9th, 2021
Kadri Suicide

ಮಂಗಳೂರು : ವ್ಯವಹಾರ ನಷ್ಟದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡ  ಘಟನೆ ನಗರದ ಕದ್ರಿ ಪಿಂಟೊ ಲೇನ್ ನಲ್ಲಿ  ಬುಧವಾರ ಬೆಳಕಿಗೆ ಬಂದಿದೆ. ಕದ್ರಿ ಪಿಂಟೋ ಲೇನ್ ನಿವಾಸಿಗಳಾದ ಸುರೇಶ್ ಮತ್ತು ವಾಣಿ ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸುರೇಶ್ ಬಾವಿಗೆ ಹಾರಿದರೆ, ವಾಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ವ್ಯವಹಾರ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.  

ಉಡುಪಿ ಜಿಲ್ಲೆಯಲ್ಲಿ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ

Tuesday, June 8th, 2021
udupi Lock Down

ಉಡುಪಿ : ಜಿಲ್ಲೆಯಲ್ಲಿ ಮತ್ತೆ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ಬೆಳ್ಮಣ್, ಮಿಯಾರ್, ಪಳ್ಳಿ, ಕುಕ್ಕುಂದೂರ್, ನಲ್ಲೂರು, ಮರ್ಣೆ ಬೈಂದೂರು ತಾಲ್ಲೂಕಿನ ಶಿರೂರ್, ಜಡ್ಕಲ್, ನಾಡಾ, ಕುಂದಾಪುರ ತಾಲೂಕಿನ ಗಂಗೊಳ್ಳಿ, ಆಲೂರು ಕಾಪು ತಾಲೂಕಿನ ಬೆಳ್ವೆ, ಶಿರ್ವ ಗ್ರಾಮ ಪಂಚಾಯತಿ ಬ್ರಹ್ಮಾವರ ತಾಲ್ಲೂಕಿನ ಕೊಕ್ಕರ್ಣೆ‌, ಅವರ್ಸೆ ಮತ್ತು ಹೆಬ್ರಿ ತಾಲೂಕಿನ ವರಂಗ ಗ್ರಾಮ ಪಂಚಾಯತಿ ಜೂನ್ 10ರ ಗುರುವಾರದಿಂದ ಜೂನ್ […]

ಮೊಬೈಲ್ ಅತಿಯಾಗಿ ಬಳಸಬಾರದು ಎಂದಿದ್ದಕ್ಕೆ ಮಗಳು ನಾಪತ್ತೆ

Tuesday, June 8th, 2021
Deekshitha

ಮಂಗಳೂರು  : ಮೊಬೈಲ್ ಬಳಸಬಾರದು ಎಂದು ಪೋಷಕರು ಬುದ್ದಿ ಮಾತು ಹೇಳಿದ್ದಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು ಮನೆ ಬಿಟ್ಟು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಕುಕ್ಕದಕಟ್ಟೆ ಸೈಟ್ ಮನೆಯ ನಿವಾಸಿಯಾದ ದೀಕ್ಷಿತಾ ಜೂನ್ 6 ರಂದು ಕಾಣೆಯಾಗಿದ ಯುವತಿ. ಕಾಣೆಯಾದ ಯುವತಿಗೆ 18 ವರ್ಷ ವಯಸ್ಸಾಗಿದೆ. ಆಕೆಯ ತಾಯಿ ಅತಿಯಾಗಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ ಆಕ್ರೋಶಗೊಂಡು ಮನೆಯಲ್ಲಿ ಯಾವುದೇ ವಿಚಾರ ಹೇಳದೆ ನಾಪತ್ತೆಯಾಗಿದ್ದಾಳೆ. ಬಾಲಕಿಯ ತಾಯಿ ಜೂನ್ […]