ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ – ಪತ್ನಿ, ಮಗ, ಜ್ಯೋತಿಷಿಗೆ ಜೀವಾವಧಿ ಶಿಕ್ಷೆ

Tuesday, June 8th, 2021
bhashkar Shetty murder

ಉಡುಪಿ :  ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ(52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಪತ್ನಿ, ಮಗ,  ಜ್ಯೋತಿಷಿ ನಿರಂಜನ್ ಭಟ್ ಇವರಿಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಮಾಡಿದೆ. ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. ಸಾಕ್ಷ್ಯನಾಶ ಆರೋಪಿ ರಾಘವೇಂದ್ರ ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ […]

ಲಂಡನ್ ನಿಂದ ಔಷಧ ತರಿಸಿ ಬ್ಲ್ಯಾಕ್ ಫಂಗಸ್ ರೋಗಿಗಳ ಪ್ರಾಣ ಉಳಿಸಿದ ಶಾಸಕ ಡಾ.ಭರತ್ ಶೆಟ್ಟಿ ವೈ

Tuesday, June 8th, 2021
bharath shetty

ಸುರತ್ಕಲ್ : ಉಳ್ಳವರು ಲಸಿಕೆಯನ್ನು ಮಿತವ್ಯಯ ದರ ನೀಡಿ ಹಾಕಿಕೊಂಡರೆ ಬಡವರಿಗೆ ಲಸಿಕೆ ಸಿಗಲು ಸಾಧ್ಯವಿದ್ದು,ಈ ನಿಟ್ಟಿನಲ್ಲಿ ಲಾರ್ಡ್ ಕೃಷ್ಣ ಎಸ್ಟೇಟ್ ನಿವಾಸಿಗಳು ಮಾಡಿರುವ ಲಸಿಕೆ ಅಭಿಯಾನ ಮಾದರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಇಲ್ಲಿನ ವೆಲ್ಫೇರ್ ಎಸೋಸಿಯೇಷನ್ ಆಯೋಜಿಸಿದ ಲಸಿಕೆ ಅಭಿಯಾನದಲ್ಲಿ ಮಾತನಾಡಿದ ಅವರು ಲಸಿಕೆ ಪಡೆದುಕೊಂಡರೂ ಕೋವಿಡ್ ಬರುವ ಸಾಧ್ಯತೆಯಿದ್ದರೂ ಜೀವಕ್ಕೆ ಹಾನಿಯಾದ ಪ್ರಕರಣಗಳು ವರದಿ ಆಗಿಲ್ಲ. ಹೀಗಾಗಿ ಲಸಿಕೆ ಪಡೆದುಕೊಳ್ಳುವುದು ಅಗತ್ಯ ಎಂದು ನುಡಿದರು. . ಆರ್ ಎಸ್ ಎಸ್ ಮುಖಂಡರಾದ ಪ್ರಕಾಶ್ […]

ದಕ್ಷಿಣ ಕನ್ನಡದಲ್ಲಿ ಇಳಿಯದ ಕೋವಿಡ್ ಸೋಂಕಿನ ಪ್ರಮಾಣ, ಲಾಕ್‌ ಡೌನ್ ನಿಯಮ ಮತ್ತಷ್ಟು ಕಠಿಣ

Monday, June 7th, 2021
KV Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನ ಸೋಂಕಿನ ದರ ಶೇ. 20ರಿಂದ 21ರಷ್ಟಿದ್ದು ಸರಕಾರದ ಆದೇಶದಂತೆ ಜೂ. 14ರವರೆಗೂ ಪ್ರಸ್ತುತ ಜಾರಿಯಲ್ಲಿರುವ ಲಾಕ್‌ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಕೊರೋನ ಸೋಂಕಿನ ದರ ಶೇ. 5ಕ್ಕೆ ಇಳಿಸಿ ಅನ್‌ ಲಾಕ್‌ ಗೊಳಿಸುವಲ್ಲಿ ಜನರ ಸಹಕಾರ ಅಗತ್ಯವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಪಂಗಳಲ್ಲಿ ಪೂರ್ವ ನಿಗದಿತ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ರದ್ದು […]

ಗ್ರಾಂಥಿಕ ರೂಪ ಪಡೆದಾಗ ಸಾಹಿತ್ಯದಲ್ಲಿ ಭಾಷಾ ಶುದ್ಧತೆ ಮುಖ್ಯ’ : ಗುಣಾಜೆ ರಾಮಚಂದ್ರ ಭಟ್

Monday, June 7th, 2021
gunaje

ಮಂಗಳೂರು : ‘ಭಾಷೆ ನಿಂತ ನೀರಾಗಬಾರದು ಚಲನಶೀಲ ಹೊಳೆಯಾಗಿರಬೇಕು.ವ್ಯಾಕರಣವು ಉಚ್ಚಾರ ದೋಷಗಳಿಗೆ ಚಿಕಿತ್ಸೆ ಇದ್ದ ಹಾಗೆ, ಗ್ರಾಂಥಿಕ ರೂಪ ಪಡೆದಾಗ ಸಾಹಿತ್ಯದಲ್ಲಿ ಭಾಷಾ ಶುದ್ಧತೆ ಅತೀ ಮುಖ್ಯ’ ಎಂದು ಹಿರಿಯ ಸಾಹಿತಿ ಗುಣಾಜೆ ರಾಮಚಂದ್ರ ಭಟ್ ಅವರು ಹೇಳಿದರು. ಅವರು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಮಂಗಳೂರಿನಲ್ಲಿ ನಡೆದ ‘ಸಾಹಿತ್ಯದಲ್ಲಿ ಭಾಷಾ ಶುದ್ಧತೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿದರು. ‘ಯುವ ಸಾಹಿತಿಗಳು ತಮ್ಮ ಬರಹಗಳಲ್ಲಿ ‘ಇರುವ ತಪ್ಪುಗಳನ್ನು ತಿದ್ದಿಕೊಳ್ಳುವ ಸಕಾರಾತ್ಮಕ ಗುಣಗಳನ್ನು […]

ಕೋವಿಡ್ 19 ಸೊಂಕಿತರ ಪಾಲಿಗೆ ಧನ್ವಂತರಿ “ಆಯುಷ್ 64” ಈಗ ಕರ್ನಾಟಕದಲ್ಲಿ

Monday, June 7th, 2021
ayush 64

ಮಂಗಳೂರು  :  ಭಾರತ ಸರಕಾರದ ಆಯುಷ್ ಇಲಾಖೆ ಹಾಗೂ ಸೆಂಟ್ರಲ್ ಕೌನ್ಸಿಲ್ ಆಫ್ ರಿಸರ್ಚ್ ಇನ್ ಆಯುರ್ವೇದ ಹಾಗೂ ಸಿದ್ಧ ( ಸಿಸಿಆರ್ ಎಎಸ್) ಈ ಎರಡು ಸಂಸ್ಥೆಗಳು ನಡೆಸಿದ ಸಂಶೋಧನೆಯ ಫಲದಿಂದ ಸಿಕ್ಕಿರುವ ಹೊಸ ಔಷಧ ಕೋವಿಡ್ 19 ಸೊಂಕಿತ ವ್ಯಕ್ತಿಗಳಲ್ಲಿ ಹಾಗೂ ಆಯುರ್ವೇದ ವೈದ್ಯರಲ್ಲಿ ಹೊಸ ಆಶಾಕಿರಣವನ್ನು ಉಂಟುಮಾಡಿದೆ. ಆಯುಷ್ ಇಲಾಖೆ ಹಾಗೂ ಸಿಸಿಆರ್ ಎಎಸ್ ಸಂಸ್ಥೆ ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆಗೆ ಒಳಗಾಗಿರುವ ವಿವಿಧ ಕೋವಿಡ್ ಸೊಂಕಿತರಿಗೆ […]

ಪಂಪನ ಸಾಹಿತ್ಯದಲ್ಲಿ ಕಂಡುಬರುವ ಪರಿಸರ ಪ್ರಜ್ಞೆ ಅಭೂತಪೂರ್ವ: ಡಾ. ತಾಳ್ತಜೆ ವಸಂತ ಕುಮಾರ್‌

Monday, June 7th, 2021
Vasanth-Talthaje

ಮಂಗಳೂರು: ಪರಿಸರ ಎಂದರೆ ಕೇವಲ ನೈಸರ್ಗಿಕ ಅಥವಾ ಬೌತಿಕವಲ್ಲ. ಹಲವಾರು ರೀತಿಯ ಪರಿಸರಗಳು, ಅದರಲ್ಲೂ ಸಾಮಾಜಿಕ, ಸಾಂಸ್ಕೃತಿಕ ಪರಿಸರಗಳು ಮನುಷ್ಯನ ವ್ಯಕ್ತಿತ್ವದ ಮೇಲೆ ಗಾಢ ಪರಿಣಾಮ ಬೀರುತ್ತವೆ. ಪಂಪನ ಸಾಹಿತ್ಯದಲ್ಲಿ ಕಂಡುಬರುವ ಪರಿಸರ ಪ್ರಜ್ಞೆ ಬೆರಗು ಮೂಡಿಸುತ್ತದೆ, ಎಂದು ಮುಂಬೈ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ವಿಶ್ರಾಂತ ಅಧ್ಯಕ್ಷ ಡಾ. ತಾಳ್ತಜೆ ವಸಂತ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಸೋಮವಾರ ಆನ್‌ಲೈನ್‌ನಲ್ಲಿ ನಡೆದ “ಪಂಪ ಮತ್ತು ಪರಿಸರ” ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು […]

ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಕೋವಿಡ್‌ನಿಂದ ಸಾವು

Monday, June 7th, 2021
Somashekara

ಉಡುಪಿ : ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬನವಾಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಸೋಮವಾರ ನಿಧನರಾಗಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಸೋಮಶೇಖರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಉಡುಪಿ ಸಹಾಯಕ ನಿರ್ದೇಶಕರಾಗಿ 2020ರ ನ. 24 ರಂದು ಅಧಿಕಾರ ಸ್ವೀಕರಿಸಿದ್ದ ಇವರು, ಪಡುಬಿದ್ರೆ ಬೀಚ್ ಗೆ ಬ್ಲೂ ಫ್ಲ್ಯಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ […]

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Monday, June 7th, 2021
Youth Congress

ಮಂಗಳೂರು : ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ  ಸೋಮವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್, ಪ್ರಧಾನಿ ಮೋದಿ ನೇತೃತ್ವದ ಸರಕಾರ ಪದೇ ಪದೇ ಡೀಸೆಲ್, ಪೆಟ್ರೋಲ್ ಜತೆಗೆ ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಈ ಕೊರೋನ ಸಂಕಷ್ಟದಲ್ಲಿ ಮತ್ತಷ್ಟು ತೊಂದರೆ ಕೊಡುತ್ತಿದೆ ಎಂದರು. ಒಂದು ತಿಂಗಳ ಅವಧಿಯಲ್ಕಿ 18 ಬಾರಿ ತೈಲಗಳ ಬೆಲೆ ಏರಿಕೆ ಮಾಡಲಾಗಿದೆ. […]

ಕೊರೋನ ಸೋಂಕು ಜೂನ್ 5 : ದಕ್ಷಿಣ ಕನ್ನಡ 609 – 5 ಸಾವು, ಉಡುಪಿ 494 – 2 ಸಾವು

Sunday, June 6th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 609 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 80,080ಕ್ಕೇರಿದೆ. 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 950ಕ್ಕೇರಿದೆ. ಭಾನುವಾರ 862 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖ ರಾದವರ ಸಂಖ್ಯೆ 71,580ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,550 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರಗೆ 8,71,018 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ […]

ಇಂಡಸ್ಟ್ರಿಯಲ್ ಸೈಟ್‌‌ನಲ್ಲಿ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು

Sunday, June 6th, 2021
Harish-Kumar

ಉಡುಪಿ :  ಟಿಪ್ಪರ್‌ನಿಂದ ಮಣ್ಣು ಅನ್‌‌ಲೋಡ್ ಮಾಡುವ ವೇಳೆ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಉಡುಪಿಯ ನಂದಿಕೂರಿನಲ್ಲಿ ನಡೆದಿದೆ. ಮೃತ ಟಿಪ್ಪರ್ ಚಾಲಕನನ್ನು ಹರೀಶ್ ಕುಮಾರ್ ಎಂದು ಗುರುತಿಸಲಗಿದೆ. ಟಿಪ್ಪರ್‌‌ನಿಂದ ಮಣ್ಣು ಅನ್‌‌ಲೋಡ್ ಆಗದೇ ಇರುವುದನ್ನು ಗಮನಿಸಿ ಪರೀಕ್ಷಿಸಿಲು ಡ್ರೈವರ್ ಸೀಟ್ ನಿಂದ ಕೆಳಗಿಳಿದ ವೇಳೆ ನಿಯಂತ್ರಣ ತಪ್ಪಿದ ಟಿಪ್ಪರ್ ಚಾಲಕನ ಮೇಲೆ ಬಿದ್ದಿದೆ. ಮಂಗಳೂರು ಉದ್ಯಮಿಗೆ ಸೇರಿದ್ದ ಇಂಡಸ್ಟ್ರಿಯಲ್ ಸೈಟ್‌‌ನಲ್ಲಿ ನಡೆಯುತಿದ್ದ ಕೆಲಸದ ವೇಳೆ ಈ ದುರ್ಘಟನೆ ನಡೆದಿದ. ಮೃತ‌‌‌ ಹರೀಶ್ ಕುಮಾರ್ ಈ […]