ಕೊರೊನಾ ಪಾಸಿಟಿವ್ ಇದ್ದ ಯುವಕ ಕಟ್ಟಡದಿಂದ ಹಾರಿ ಆತ್ಮಹತ್ಯೆ

Saturday, May 29th, 2021
Jumping

ಮಂಗಳೂರು : ಕೊರೊನಾ ಪಾಸಿಟಿವ್ ಇದ್ದ ಯುವಕನೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪಡೀಲ್ ಬಳಿ ಮೇ 27 ರ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಸಮೀರ್ (30)ಎಂದು ಗುರುತಿಸಲಾಗಿದೆ. ಪಡೀಲ್ ನ 7 ನೇ ಮಹಡಿಯ ಫ್ಲ್ಯಾಟ್ ನಿಂದ ಸಮೀರ್ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸಮೀರ್ ಅವಿವಾಹಿತರಾಗಿದ್ದು, ಮೃತದೇಹ ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದುಬಂದಿದೆ. ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಿರಂತರವಾಗಿ ಸುರಿದ ಮಳೆಗೆ ಪಂಪ್ ವೆಲ್ ಜಲಾವೃತ್ತ

Saturday, May 29th, 2021
pumpwell

ಮಂಗಳೂರು : ನಿರಂತರವಾಗಿ ಸುರಿದ ಮಳೆಗೆ ಪಂಪ್ ವೆಲ್ ಜಲಾವೃತ್ತ ವಾಗಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.  ಪಂಪ್‌ವೆಲ್ ಮೇಲ್ಸೇತುವೆ ಕೆಳಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾದ ಕಾರಣ ಬೆಳಗ್ಗೆ ಹೊತ್ತು ಮಂಗಳೂರಿಗೆ ವಾಹನದಲ್ಲಿ ಬಂದವರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಶನಿವಾರ ತಡರಾತ್ರಿಯಿಂದ ಬೆಳಗ್ಗೆ ಸುಮಾರು 8 ಗಂಟೆಯವರೆಯೂ ಸುರಿದ ಮಳೆಯಿಂದಾಗಿ ನಗರದ ಹಲವು ರಾಜಕಾಲುವೆಗಳು, ಚರಂಡಿ ತೋಡುಗಳು ತುಂಬಿ ಹರಿದವು. 9 ಗಂಟೆಯ ಬಳಿಕ ಮಳೆ ಪ್ರಮಾಣ  ಕಡಿಮೆಯಾಗಿದೆ. ನಗರದ ಪಂಪ್‌ವೆಲ್ ಸೇತುವೆ ಕೆಳಭಾಗ ಸೇರಿದಂತೆ ಬೆಳಗ್ಗಿನ ಹೊತ್ತು […]

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮೂಲಕ ಉಡುಪಿ ಜಿಲ್ಲಾಡಳಿತಕ್ಕೆ ರೂ. 1,84,800 ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಹಸ್ತಾಂತರ

Saturday, May 29th, 2021
save Life

ಉಡುಪಿ  : ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ರೂ. 1,84,800 ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ರವರ ಮೂಲಕ ಜಿಲ್ಲಾಡಳಿತಕ್ಕೆ ಶನಿವಾರ ಹಸ್ತಾಂತರಿಸಲಾಯಿತು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಮಾಜಮುಖಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಛಾಯಾಗ್ರಾಹಕ ಮಂಜು ನಿರೇಶ್ವಾಲ್ಯ, ರಮೇಶ್ ಶೆಣೈ ಉಪಸ್ಥಿತರಿದ್ದರು. ಬಂಟವಾಳ ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ ಲಾಕಡೌನ್ […]

ಭಟ್ಕಳದ ವ್ಯಕ್ತಿಯಿಂದ ರೂ. 13,17,860 ಮೌಲ್ಯದ ಅಕ್ರಮ ಚಿನ್ನ ವಶಪಡಿಸಿಕೊಂಡ ಕಸ್ಟಮ್ ಅಧಿಕಾರಿಗಳು

Friday, May 28th, 2021
gold

ಮಂಗಳೂರು : ಕಸ್ಟಮ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಭಟ್ಕಳದ ವ್ಯಕ್ತಿಯನ್ನು ಶುಕ್ರವಾರ ಮೇ 26 ರಂದು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಿದ್ದಿಕ್ ಮಿಕ್ದಿಮ್ ಹುಸೈನ್ ಎಂಬಾತ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕ. ಆತ ದುಬೈನಿಂದ ಏರ್ ಇಂಡಿಯಾ ವಿಮಾನ IX 384 ಮೂಲಕ ಆಗಮಿಸಿದ್ದ. ಈತನ ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನಿಂದ 24 ಕ್ಯಾರೆಟ್ ಪರಿಶುದ್ಧತೆಯ 262 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ […]

ವ್ಯಕ್ತಿಯನ್ನು ಅಪಹರಿಸಿ ಚಿನ್ನ ದರೋಡೆ, 11 ಮಂದಿ ಅಂತಾರಾಜ್ಯ ದರೋಡೆಕೋರರ ಬಂಧನ

Friday, May 28th, 2021
Moodabidre Dacoity

ಮಂಗಳೂರು :  ಮಂಗಳೂರು ಸಿಸಿಬಿ ಮತ್ತು ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ಅಪಹರಿಸಿ ಚಿನ್ನ  ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ 11 ಮಂದಿ ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ. ಜೋಕಟ್ಟೆ ತೋಕೂರು ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಪಟೌಡಿ ಸಲಾಂ (34), ಮುಹಮ್ಮದ್ ಶಾರೂಕ್ (26), ಬೆಂಗಳೂರು ಜೆಎಚ್‌ಬಿಸಿಎಸ್ ಲೇಔಟ್‌ನ ಸಯ್ಯದ್ ಹೈದರಲಿ (29), ಬೆಂಗಳೂರು ಜೆಪಿ ನಗರದ ಆಸಿಫ್ ಅಲಿ (28), ಮುಂಬೈನವರಾದ ಶೇಖ್ ಸಾಜಿದ್ ಹುಸೇನ್ (49), ಅಬ್ದುಲ್ಲಾ ಶೇಖ್ (22), ಶಾಬಾಸ್ […]

ಓಮ್ನಿ ಕಾರು ಡಿಕ್ಕಿ ಹೊಡೆದು ಇಬ್ಬರು ಒಣ ಮೀನು ವ್ಯಾಪಾರಿಗಳು ಮೃತ್ಯು

Friday, May 28th, 2021
omni car accident

ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ಓಮ್ನಿ ಕಾರು ನಿಂತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ  ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು. ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ […]

ಕೊರೊನಾ ಬಂದಿದ್ದ ವ್ಯಕ್ತಿಗೆ ಬ್ಲಾಕ್ ಫಂಗಸ್, ಬೆಳ್ತಂಗಡಿಯಲ್ಲಿ ಮೊದಲ ಬಲಿ

Friday, May 28th, 2021
black fungus

ಬೆಳ್ತಂಗಡಿ: ಕೊರೊನಾದ ಬಳಿಕ ಕಣ್ಣು ಮತ್ತು ಕಿಡ್ನಿ ಸಮಸ್ಯೆ ಉಂಟಾಗಿ ಬ್ಲಾಕ್ ಫಂಗಸ್ ಗೆ ಬೆಳ್ತಂಗಡಿಯ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಬ್ಲ್ಯಾಕ್ ಫಂಗಸ್ ವೈರಸ್‌ಗೆ ಬಲಿಯಾದ ವ್ಯಕ್ತಿ. ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿತ್ತು ಕೊರೋನಾ ಚಿಕಿತ್ಸತೆಯ ಬಳಿಕ  ಬ್ಲ್ಯಾಕ್ ಫಂಗಸ್ ಗೋಚರಿಸಿದ್ದು ಕಣ್ಣಿನ ಆಪರೇಷನ್ ನಡೆಸಿದ್ದರು, ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ […]

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪಡಿತರದಾರರಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ ಸರಬರಾಜು : ಉಮೇಶ್ ಕತ್ತಿ

Friday, May 28th, 2021
UmeshKatti

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನ ಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು […]

ಹಣಕಾಸು ಸಂಸ್ಥೆಗಳವರು ಸಾಲ ಮರುಪಾವತಿಸಲು ಪೀಡಿಸಿದರೆ ದೂರು ಕೊಡಿ

Friday, May 28th, 2021
KV Rajendra

ಮಂಗಳೂರು :  ಮೈಕ್ರೋ ಫೈನಾನ್ಸ್‌ಗಳು, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗಾಗಿ ಸಾಲಗಾರರನ್ನು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಅದರ ಮೇಲ್ವಿಚಾರಣೆಗಾಗಿ ಇಬ್ಬರು ನೋಡಲ್ ಅಧಿಕಾರಿಗಳನ್ನೂ ಕೂಡ ಜಿಲ್ಲಾಧಿಕಾರಿ ನೇಮಿಸಿದ್ದಾರೆ. ಯಾವುದೇ ಮೈಕ್ರೋ ಫೈನಾನ್ಸ್, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳವರು ಸಾಲ ಮರುಪಾವತಿಸಲು ಒತ್ತಡ ಹಾಕಿದರೆ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ (9449860916), ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್ (9448633338)ಅವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ. ಅವರು ಸಾಲಗಾರರ ಅಹವಾಲು ಸ್ವೀಕರಿಸಿ ಸೂಕ್ತ ಕ್ರಮ […]

ಕಾಪು: ಬೈಕ್ – ರಿಕ್ಷಾ ಅಪಘಾತ; ಗಾಯಾಳು ಸಾರಿಗೆ ಉದ್ಯಮಿ ಹರಿದಾಸ್ ಭಟ್ ಸಾವು

Thursday, May 27th, 2021
GN Bhat

ಕಾಪು: ಕುರ್ಕಾಲು-ಸುಭಾಶ್ ನಗರ ಬಳಿ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಾಂಗಾಳ ಜೆ. ಎನ್. ಮೋಟಾರ್ಸ್ ನ ಮಾಲೀಕ ಹರಿದಾಸ್ ಭಟ್ (65) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮೃತ ಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಕುರ್ಕಾಲು ಸುಭಾಶ್ ನಗರ ಸಮೀಪದ ದ್ವಾರದ ಬಳಿ ಬೈಕ್‌ಗೆ ರಿಕ್ಷಾ ಡಿಕ್ಕಿ ಹೊಡೆದು ಹರಿದಾಸ್ ಭಟ್ ಅವರಿಗೆ ಗಂಭೀರ ಏಟಾಗಿತ್ತು. ತತ್‌ಕ್ಷಣ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಸುಮಾರು 45 ವರ್ಷಗಳಿಂದಲೂ ಸಾರಿಗೆ ಉದ್ಯಮ ನಡೆಸುತ್ತಿರುವ […]