ಕುಂಜಾಡಿ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವ

Friday, April 9th, 2021
Dharmanema

ಸುಳ್ಯ: ಕುಂಜಾಡಿ ತರವಾಡು ಮನೆಯಲ್ಲಿ ‍60 ವರ್ಷಗಳ ಬಳಿಕ ಮೊದಲ ಬಾರಿ ನಡೆಯುತ್ತಿರುವ ಧರ್ಮ ನೇಮೋತ್ಸವ ಗುರುವಾರ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕೊರೋನಾ ನಿಯಮ ಗಳಿಗನುಗುಣವಾಗಿ  ಆರಂಭಗೊಂಡಿತು. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕುಂಜಾಡಿ ತರವಾಡು ಕುಟುಂಬದ ಹಿರಿಯರು, ಯಜಮಾನರು, ಬಂಬಿಲ ಗುತ್ತು, ಮೇಗಿನ ಕುಂಜಾಡಿ, ಕೆಳಗಿನ ಕುಂಜಾಡಿ ಮಧ್ಯಸ್ಥರ ನೇತೃತ್ವದಲ್ಲಿ  ಸಚಿವರು, ಸ್ವಾಮೀಜಿಗಳು, ಜನಪ್ರತಿನಿಧಿಗಳು, ರಾಜ್ಯ ರಾಜಕೀಯ- ಸಾಮಾಜಿಕ ಮುಖಂಡರು ಭೇಟಿ ನೀಡಿದ್ದಾರೆ. ಗ್ರಾಮ ದೈವ ಅಬ್ಬೆಜಲಾಯ, ಉಲ್ಲಾಕುಳು ಮತ್ತು ರಕ್ತೇಶ್ವರಿ […]

ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ, ಕಾಸರಗೋಡು ವ್ಯಕ್ತಿಯ ಬಂಧನ

Friday, April 9th, 2021
Gold

ಮಂಗಳೂರು : ಕಾಸರಗೋಡು ಜಿಲ್ಲೆಯ ವ್ಯಕ್ತಿಯೊಬ್ಬ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಅಲಂಪಾಡಿನ ನೀವಾಸಿ ಇಬ್ರಾಹಿಂ ಪನಲಂ ಅಬ್ದುಲ್‌ ಎಂಬಾತ ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಗುರುವಾರ  ಸಂಜೆ ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿದ್ದ. ಈತನನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ 647 ಗ್ರಾಂ. ಚಿನ್ನವನ್ನು […]

1 ಟನ್‌ಗೆ 100 ರೂ. ನಂತೆ ಮರಳು ವಿತರಿಸಲು ಯೋಜನೆ : ಸಚಿವ ಮುರುಗೇಶ ನಿರಾಣಿ

Friday, April 9th, 2021
nirani

ಮಂಗಳೂರು : ರಾಜ್ಯದಲ್ಲಿ ಹೊಸ ಗಣಿ ನೀತಿಯ ಕರಡು ಸಿದ್ಧವಾಗಿದ್ದು ಅತ್ಯಂತ ಕಡಿಮೆ ದರದಲ್ಲಿ ಮರಳು ದೊರಕಿಸುವ ಉದ್ದೇಶದಿಂದ  1 ಟನ್‌ಗೆ 100 ರೂ. ನಂತೆ ಮರಳು ವಿತರಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಗುರುವಾರ ಇಲಾಖೆಯ ಪ್ರಗತಿ ಪರಿಶೀಲನೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಬಗ್ಗೆ ವಿವಿಧ ಕ್ಷೇತ್ರದ ತಜ್ಞರ ಅಭಿಪ್ರಾಯ ಪಡೆದು ಈ ತಿಂಗಳಾಂತ್ಯದೊಳಗೆ ಬಿಡುಗಡೆಗೊಳಿಸಲು ಉದ್ದೇಶಿಸಲಾಗಿದೆ. ಈ […]

ಪ್ರಾಯೋಗಿಕ ಕರ್ಫ್ಯೂ ಹೆಸರಲ್ಲಿ ಜನಸಾಮಾನ್ಯರಿಗೆ ತೊಂದರೆ

Thursday, April 8th, 2021
night Curfew

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನೇಮೋತ್ಸವ, ಬ್ರಹ್ಮಕಲಶಗಳು ನಡೆಯುವುದರಿಂದ ಸರಕಾರ ಪ್ರಾಯೋಗಿಕ ಕರ್ಫ್ಯೂ ಜಾರಿ ರಾತ್ರಿ ದುಡಿಯುವ ಜನಸಾಮಾನ್ಯರಿಗೆ ದೊಡ್ಡ ಹೊಡೆತ ನೀಡಲಿದೆ. ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿಡುವ ಚಿಂತನೆ ಮಾಡಲಾಗಿದೆ. ಏಪ್ರಿಲ್ 8ರ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಮಾತನಾಡಿ, ಉಡುಪಿ ಸೇರಿದಂತೆ 7 ಜಿಲ್ಲೆಗಳ ಎಂಟು ನಗರಗಳಲ್ಲಿ 10 ದಿನಗಳ ಕಾಲ ರಾತ್ರಿ ಕರ್ಫ್ಯೂ  ರಾತ್ರಿ 10 ರಿಂದ ಬೆಳಿಗ್ಗೆ […]

ಖಾಸಗಿ ವಾಹನಗಳಲ್ಲಿ ಪ್ರಯಾಣಿಕರಿಂದ ದುಬಾರಿ ದರವನ್ನು ಪಡೆಯುವಂತಿಲ್ಲ : ಜಿಲ್ಲಾಧಿಕಾರಿ

Wednesday, April 7th, 2021
RTO-meeting

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಅನಿರ್ಧಿಷ್ಟ ಅವಧಿಯ ಮುಷ್ಕರದ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅನಿರ್ದಿಷ್ಠಾವಧಿ ಮುಷ್ಕರ ಹಿನ್ನೆಲೆ ಪರ್ಯಾಯ ವ್ಯವಸ್ಥೆ ಕೈಗೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ […]

ಚಿಕನ್ ಅಂಗಡಿಯಲ್ಲಿ ದನದ ಮಾಂಸ ಮಾರಾಟ, ಇಬ್ಬರ ಬಂಧನ

Wednesday, April 7th, 2021
beef meat

ಮಂಗಳೂರು : ಚಿಕನ್ ಅಂಗಡಿಯಲ್ಲಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮದ್ ಸಮೀರ್ ಹಾಗೂ ಮೊಹಮದ್ ಸಫಿಕ್ ಎಂಬವರೇ ಬಂಧಿತ ಆರೋಪಿಗಳು. ಮೂಡು ಪೆರರಾ ಗ್ರಾಮದ ಸೂರಲ್ಪಾಡಿ ಸಲ್ವಾ ಚಿಕನ್ ಸೆಂಟರ್ ನಲ್ಲಿ ದನದ‌‌ ಮಾಂಸ ಮಾರಾಟ ಮಾಡುತ್ತಿದ್ದರು. ಸಾರ್ವಜನಿಕರ ದೂರಿನ ಹಿನ್ನೆಲೆ ಖಚಿತ ಮಾಹಿತಿಯ ಮೇರೆಗೆ ಬಜಪೆ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ 23 ಕೆ.ಜಿ. ದನದ ಮಾಂಸ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ […]

ಸರ್ಕಾರಿ ಬಸ್ ಓಡಾಟ ನಡೆಸುತ್ತಿದ್ದ ರೂಟ್ ನಲ್ಲಿ ಖಾಸಗಿ ಬಸ್ ಓಡಾಟ

Wednesday, April 7th, 2021
private Bus

ಮಂಗಳೂರು: ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮತ್ತು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲು ತಯಾರಿ ನಡೆಸುತ್ತಿರುವ ಸಮಯದಲ್ಲಿ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಹೇಳಿದೆ. ಮಂಗಳೂರಿನಲ್ಲಿ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಮಾಲೀಕರು ಮುಷ್ಕರದ  ದಿನ ಸೇವೆಗಳನ್ನು ಒದಗಿಸಿದ್ದಾರೆ. ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರವು ಮಂಗಳೂರಿನಲ್ಲಿ ಪ್ರಯಾಣಿಕರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.  ನಗರದಲ್ಲಿ ಖಾಸಗಿ ಬಸ್ ಗಳೇ  ಓಡಾಟ ನಡೆಸುತ್ತಿದೆ. ಗ್ರಾಮೀಣ ಭಾಗದಲ್ಲಿ ಮತ್ತು ಜಿಲ್ಲೆಯ ದೂರದೂರಿಗೆ ಮತ್ತು […]

ಬಿ.ಸಿ.ರೋಡು ಯುವಕನ ಕೊಲೆಯತ್ನ ಪ್ರಕರಣ, ನೈಜ ಆರೋಪಿಗಳ ಪತ್ತೆಗೆ ಪೋಷಕರ ಆಗ್ರಹ

Wednesday, April 7th, 2021
Ajjibettu

ಬಂಟ್ವಾಳ:  ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಅಜ್ಜಿಬೆಟ್ಟು ತಿರುವು ಬಳಿ ಇದೇ 4ರಂದು ರಾತ್ರಿ ಸುಮಾರು 7.30 ಗಂಟೆಗೆ ಅಪರಿಚಿತ ದುಷ್ಕರ್ಮಿಗಳಿಂದ ತಲೆಗೆ ಸೇರಿದಂತೆ ಕೆನ್ನೆ ಮತ್ತು ಕೈಗಳಿಗೆ ಹರಿತವಾದ ಕತ್ತಿಯಿಂದ ಹಲ್ಲೆಗೀಡಾದ ಮನೋಜ್ ಗಾಣಿಗ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದು, ಈ ಕೃತ್ಯದ ಹಿಂದಿರುವ ನೈಜ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು ಗಾಯಾಳುವಿನ ತಂದೆ ಭೋಜ ಸಪಲ್ಯ ಬ್ರಹ್ಮರಕೂಟ್ಲು ಇವರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ ಕಳೆದ 10 ವರ್ಷಗಳಿಂದ ವಿದೇಶದಲ್ಲಿ ಎಂಜಿನಿಯರ್ […]

ಕೆಎಸ್ಸಾರ್ಟಿಸಿ ನೌಕರರ ಮುಷ್ಕರ : ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್

Wednesday, April 7th, 2021
Ksrtc Bus

ಮಂಗಳೂರು :  ಕೆಎಸ್ಸಾರ್ಟಿಸಿ ನೌಕರರು ಇಂದಿನಿಂದ ಆರಂಭಿಸಿರುವ ಮುಷ್ಕರಕ್ಕೆ ದ.ಕ. ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನೌಕರರು ಕರ್ತವ್ಯಕ್ಕೆ ಹಾಜರಾಗದ ಕಾರಣ ಬಸ್ ಗಳು ಡಿಪೋದಲ್ಲೇ ಉಳಿದುಕೊಂಡಿವೆ. ವೇತನ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ ನೌಕರರು ರಾಜ್ಯ ವ್ಯಾಪಿ ಮುಷ್ಕರ ಆರಂಭಿಸಿದ್ದಾರೆ. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ 470ಕ್ಕೂ ಅಧಿಕ ಬಸ್ ಗಳು ಬುಧವಾರ ನಿಲ್ದಾಣದಲ್ಲಿಯೇ ತಂಗಿವೆ. ಈ ನಡುವೆ ಸರಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಪ್ರಯಾಣ ಬೆಳೆಸುತ್ತಿರುವುದು ಕಂಡುಬರುತ್ತಿದೆ. ಬಸ್ […]

ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ : ಕುಂಪಲದ ನೂರಾನಿ ಯತೀಂಖಾನ ದ ಮೆನೇಜರ್ ಬಂಧನ

Wednesday, April 7th, 2021
Ayub

ಮಂಗಳೂರು : ಕುಂಪಲದ ನೂರಾನಿ ಯತೀಂಖಾನ ದ ಮೆನೇಜರ್  ಅಪ್ರಾಪ್ತ ಮಕ್ಕಳಿಗೆ  ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಕೇಂದ್ರದ ಮೇಲ್ವಿಚಾರಕನನ್ನು ಬಂಧಿಸಲಾಗಿದೆ. ಮೂಲತಃ ಕೊಣಾಜೆಯ ಹಾಗೂ ಕುಂಪಲ ನೂರಾನಿ ಯತೀಂಖಾನ್ ಮಕ್ಕಳ ಕೇಂದ್ರದ ಮೇಲ್ವಿಚಾರಕ ಆಯ್ಯೂಬ್ (52) ಬಂಧಿತ ಆರೋಪಿಯಾಗಿದ್ದಾನೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರಕರಣದ ಬಗ್ಗೆ ಮಾಹಿತಿ ನೀಡಿ,  ಬಾಲಕನ ತಂದೆ ಮೃತಪಟ್ಟಿದ್ದು, ತಾಯಿ ಮಾತ್ರ ಇದ್ದಾರೆ. ಕಳೆದ 4 ವರ್ಷಗಳಿಂದ ಕುಂಪಲದ ನೂರಾನಿ ಯತೀಂಖಾನ್ ಮಕ್ಕಳ ಕೇಂದ್ರದಲ್ಲಿದ್ದು, ವಿದ್ಯಾಭ್ಯಾಸ ಪಡೆಯುತ್ತಿದ್ದಾನೆ. ಸುಮಾರು 2 ತಿಂಗಳಿನಿಂದ […]