“ಅನರ್ಕಲಿ” ತುಳು ಸಿನಿಮಾ ಆಗೋಸ್ಟ್ 23 ರಂದು ತೆರೆಗೆ

Tuesday, August 20th, 2024
Anarkali

ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾದ ಪತ್ರಿಕಾಗೋಷ್ಠಿ ಸೋಮವಾರ ಸಂಜೆ ನಗರದಲ್ಲಿ ನಡೆಯಿತು. ಮಾಧ್ಯಮವನ್ನುದ್ದೇಶಿಸಿ ಮಾತಾಡಿದ ಲಯನ್ ಕಿಶೋರ್ ಡಿ ಶೆಟ್ಟಿ ಅವರು, “ಅನರ್ಕಲಿ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ನಮ್ಮ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಕುರಿತು ತುಳುನಾಡಿನಲ್ಲಿ ಒಳ್ಳೆಯ ಮಾತು ಕೇಳಿಬರುತ್ತಿದೆ. ಇದು ನಮ್ಮ ಚಿತ್ರತಂಡಕ್ಕೆ ಖುಷಿ ತಂದಿದೆ. ನಾಡಿದ್ದು ಆಗಸ್ಟ್ […]

“ಕಾಂಗ್ರೆಸ್ ಗೂಂಡಾ ರಾಜಕಾರಣ ಹೊಸದೇನೂ ಅಲ್ಲ” -ಡಾ.ವೈ.ಭರತ್ ಶೆಟ್ಟಿ

Tuesday, August 20th, 2024
Bharath-shetty

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೂಂಡಾ ಸಂಸ್ಕೃತಿ ರಾಜಕಾರಣ ಹೊಸದೇನೂ ಅಲ್ಲ. ಅದರ ಮುಂದುವರಿದ ಭಾಗವಾಗಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಬಸ್ಸಿಗೆ ಕಲ್ಲು ತೂರಾಟ ಮಾಡುವುದು, ಟೈರ್ ಗೆ ಬೆಂಕಿ ಹಚ್ಚುವುದು ಮಾಡಿದ್ದಾರೆ. ಇದು ರಾಜ್ಯದಲ್ಲಿ ಪಶ್ಚಿಮ ಬಂಗಾಲ ಮಾದರಿಯಲ್ಲಿ ಹಿಂಸಾಕೃತ್ಯ ನಡೆಸುವುದರ ಪೂರ್ವಸೂಚನೆಯಾಗಿದೆ” ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ”ಸಾರ್ವಜನಿಕರು ಸಂಚರಿಸುವ ಬಸ್ಸಿಗೆ ಕಲ್ಲು ತೂರಾಟ ನಡೆಸಿ ಪ್ರಯಾಣಿಕರಿಗೆ […]

“ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ” -ಸುದೇಶ್ ಮರೋಳಿ

Tuesday, August 20th, 2024
sudesh-maroli

ಮಂಗಳೂರು: ”ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರೋಳಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. “ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. […]

“ಸಿದ್ದರಾಮಯ್ಯ ರಾಜೀನಾಮೆ ಕೊಡುವ ತನಕ ಹೋರಾಟ ನಿರಂತರ” -ವೇದವ್ಯಾಸ ಕಾಮತ್

Tuesday, August 20th, 2024
vedavyas-kamath

ಮಂಗಳೂರು: “ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು“ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದ್ದಾರೆ. ”ಸಂವಿಧಾನದ ರಕ್ಷಣೆ ತಮ್ಮಿಂದ ಮಾತ್ರ ಎಂದು ಹೇಳಿಕೊಂಡು ಓಡಾಡುತ್ತಿರುವ ಕಾಂಗ್ರೆಸಿಗರು ಪ್ರತಿಭಟನೆ ನೆಪದಲ್ಲಿ ರಾಜ್ಯದೆಲ್ಲೆಡೆ ಗಲಭೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಯಾರೇ ಮಾತಾಡಿದರೂ ಅವರು ಸರಿಯಿಲ್ಲ ಅವರು ಬಿಜೆಪಿ ಏಜೆಂಟ್ ಎಂದು ಸಿದ್ದರಾಮಯ್ಯ […]

ಸಮೃದ್ಧ ಮೀನುಗಾರಿಕೆಗೆ ಹಾರೈಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Tuesday, August 20th, 2024
samudra-pooje

ಮಂಗಳೂರು: ಮೀನುಗಾರರ ಶ್ರೇಯೋಭಿವೃದ್ದಿಗಾಗಿ ತಣ್ಣೀರುಬಾವಿ ಮೊಗವೀರ ಮಹಾಸಭಾ (ರಿ) ಇದರ ವತಿಯಿಂದ ಚಿತ್ರಾಪುರ ಕಡಲ ಕಿನಾರೆಯಲ್ಲಿ ಆ. 19ರಂದು ಸಮುದ್ರ ಪೂಜೆ ನಡೆಯಿತು. ಸಮುದ್ರರಾಜನಿಗೆ ಹಾಲು, ಫಲ ಅರ್ಪಿಸಿ, ಸಮುದ್ರ ಪೂಜೆಯಲ್ಲಿ ಭಾಗಿಯಾಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ದ.ಕ. ಸಂಸದ ಕ್ಯಾ| ಬ್ರಿಜೇಶ್ ಚೌಟ ” ಕರಾವಳಿಯಲ್ಲಿ ನೂಲ ಹುಣ್ಣಿಮೆಯಂದು ಸಮುದ್ರರಾಜನಿಗೆ ಪೂಜೆ ಸಲ್ಲಿಸುವುದು ಸಾಮಾನ್ಯ ಪ್ರತೀತಿ. ಹೊಸಋತುವಿನ ಮೀನುಗಾರಿಕೆಗೆ ತೆರಳುವ ಪ್ರತಿ ಮೀನುಗಾರರನ್ನು ಯಾವುದೇ ಪ್ರಾಣಾಪಾಯ ಇಲ್ಲದಂತೆ ಸಮುದ್ರರಾಜ ರಕ್ಷಿಸಲಿ, ಮತ್ಸ್ಯ ಸಮೃದ್ಧಿ ಉಂಟಾಗಲಿ” […]

ರೂಪೇಶ್ ಶೆಟ್ಟಿ ಹೊಸ ತುಳು ಚಿತ್ರ “ಜೈ” ಟೈಟಲ್ ಅನಾವರಣ ಕಾರ್ಯಕ್ರಮ

Monday, August 19th, 2024
jai

ಮಂಗಳೂರು: ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಆದಿತ್ಯವಾರ ಸಂಜೆ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಬಳಿಕ ಮಾತಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, “ಹಿಂದೆ ತುಳು ಭಾಷೆ ನಮ್ಮ ಜಿಲ್ಲೆಗೆ ಮಾತ್ರ ಸೀಮಿತ ಎಂಬ ಮಾತಿತ್ತು. ಆದರೆ […]

ಬಸ್ಸಿಗೆ ಕಲ್ಲು ಹೊಡೆದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ : ಶಾಸಕ ವೇದವ್ಯಾಸ ಕಾಮತ್ ಖಂಡನೆ

Monday, August 19th, 2024
Vedvyas-kamath-condemn

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ ಕಾರಣಕ್ಕೆ ರಾಜ್ಯಪಾಲರ ವಿರುದ್ದ ಮಂಗಳೂರಿನಲ್ಲಿ ಕಾಂಗ್ರೆಸ್ಸಿಗರು ಗೂಂಡಾ ರೀತಿಯಲ್ಲಿ ಪ್ರತಿಭಟನೆ ನಡೆಸಿ ಜನತೆಯಲ್ಲಿ ಭಯಭೀತ ವಾತಾವರಣ ಸೃಷ್ಟಿಸಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಬಸ್ಸಿಗೆ ಕಲ್ಲು ಹೊಡೆದ ಪರಿಣಾಮ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಸಾರ್ವಜನಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಆರೋಪಿಗಳಿಗೆ ಪೊಲೀಸರು ಠಾಣೆಯಲ್ಲೇ ಜಾಮೀನು ನೀಡಿ ಮನೆಗೆ ಕಳಿಸುವ ಸಂಪ್ರದಾಯ ಆರಂಭಿಸಿದ್ದಕ್ಕೆ ನಾಚಿಕೆಯಾಗಬೇಕು. ನಾಳೆ ಮತ್ಯಾರೋ […]

78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಭಗಿನಿ ಸಮಾಜ ಶಿಶು ನಿಲಯ ಜೆಪ್ಪು ,ಇದರ ಮಕ್ಕಳಿಗೆ ಹಣ್ಣುಗಳ ಹಂಚಿಕೆ

Monday, August 19th, 2024
bhagini samaja

ಮಂಗಳೂರು : 78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಭಗಿನಿ ಸಮಾಜ ಶಿಶು ನಿಲಯ ಜೆಪ್ಪು ,ಇದರ ಮಕ್ಕಳಿಗೆ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಹೊಸೈಟಿ, ವಲೆನ್ಸಿಯಾ ಶಾಖೆಯ ವತಿಯಿಂದ ಆಗಸ್ಟ್ 17 ರಂದು ಆಯೋಜಿಸಿದ ಸೋಲಾ ಪುರ ಚಾದರ್ ಮತ್ತು ಹಣ್ಣುಗಳ ಹಂಚಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ವೆಲೆನ್ಸಿಯಾ ವಾರ್ಡಿನ ಕಾರ್ಪೊರೇಟರ್ ಜೆಸಿಂತಾ ವಿಜಯ್ ಆಲೈಡ್ ರವರು ಸಮಾಜ ಸೇವೆ ಮಾಡುವಲ್ಲಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ ಯಶಸ್ವಿಯಾಗಿದೆ”, ಗಳಿಸಿದ್ದಲ್ಲಿ ಒಂದು ಪಾಲನ್ನು ಸಮಾಜಕ್ಕೆ […]

ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ರೂಪಿಸುವಲ್ಲಿ ಗ್ರಂಥಪಾಲಕರ ಜವಾಬ್ದಾರಿ ಮಹತ್ವದ್ದು: ಡಾ.ಎನ್.ನರಸಿಂಹ ಮೂರ್ತಿ

Sunday, August 18th, 2024
librarian day

ಮಂಗಳೂರು: ಯಾವುದೇ ವೃತ್ತಿ, ವಿಚಾರ ಕ್ಷುಲ್ಲಕವಲ್ಲ. ಬದುಕಿನಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಲು ಗ್ರಂಥಪಾಲಕ ವೃತ್ತಿ ಶ್ರೇಷ್ಠವಾದದ್ದು. ಒಂದು ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗ್ರಂಥಪಾಲಕರ ಪಾತ್ರ ಹಿರಿದು, ಎಂದು ನಗರದ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎನ್.ನರಸಿಂಹ ಮೂರ್ತಿ ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಗ್ರಂಥಾಲಯ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯೂಎಸಿ) […]

ಇಂದು ಸಿಸಿ ಕ್ಯಾಮರಾಗಳನ್ನು ಅಳವಡಿಸಲೇ ಬೇಕು ಅನ್ನುವ ಅನಿರ್ವಾಯತೆ ಬಂದಿದೆ : ನಾಗೇಶ್‌ ಕದ್ರಿ

Sunday, August 18th, 2024
Rudshed cc-cam

ಉಜಿರೆ : ಇಂದು ಪ್ರತಿಯೋಂದು ಕೆಲಸದಲ್ಲಿ ಮನೆಯಲ್ಲಿ ವಿವಿಧ ಸಂಸ್ಥೆಗಳಲ್ಲಿ ವಿಶೇಷವಾಗಿ ಅಪರಾಧ ವಿಭಾಗದಲ್ಲಿ ಸಿಸಿ ಕ್ಯಾಮರಗಳ ಪಾತ್ರ ಮಹತ್ವದಾಗಿದೆ. ಈ ನಿಟ್ಟಿನಲ್ಲಿ ರುಡ್‌ ಸೆಟ್‌ ಸಂಸ್ಥೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ದುರಸ್ತಿಯ ಸ್‌ ಉದ್ಯೋಗ ತರಬೇತಿ ಪಡೆದ ನಿಮಗೆ ಇವತ್ತು ತುಂಬಾ ಅವಕಾಶಗಲಿವೆ, ಏಕೆಂದರೆ ಪ್ರತಿಯೊಂದು ಆಟ, ಪಾಠ, ನೋಟಕ್ಕೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲೇ ಬೇಕು ಅನ್ನುವ ಅನಿರ್ವಾಯತೆ ಬಂದಿದೆ. ಈ ಹಿನ್ನಲೆಯಲ್ಲಿ ಇಂತಹ ತರಬೇತಿ ಪಡೆದ ನಿಮಗೆ ಮುಂದಿನಗಳನ್ನು ಬೇರೆ ಬೇರೆಯಲ್ಲಿ ಉದ್ಯಮ, […]