ಬ್ರಹತ್ ಗಾತ್ರದ ಮರ ಬಿದ್ದು ಮೂವರು ಯುವಕರ ದಾರುಣ ಸಾವು

Wednesday, March 10th, 2021
patrame

ಧರ್ಮಸ್ಥಳ :  ಖಾಸಗಿ ಸ್ಥಳವೊಂದರಲ್ಲಿ ಮರ ಕಡಿಯುತ್ತಿದ್ದ ವೇಳೆ  ಆಕಸ್ಮಿಕವಾಗಿ ಬ್ರಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ  ಮೂವರು ಯುವಕರು ಧಾರುಣವಾಗಿ ಮೃತಪಟ್ಟ ಘಟನೆ  ಮಂಗಳವಾರ  ಮಧ್ಯಾಹ್ನ ಪಟ್ರಮೆ ಗ್ರಾಮದ ಅನಾರು ಸಮೀಪ ಕಾಯಿಲ ಎಂಬಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ರಾಮಣ್ಣ ಕುಂಬಾರ ಎಂಬವರ ಪುತ್ರ ಪ್ರಶಾಂತ್ ಕುಂಬಾರ (21), ಸೇಸಪ್ಪ ಪೂಜಾರಿಯವರ ಮಗ ಸ್ವಸ್ತಿಕ್ ಪೂಜಾರಿ ಮತ್ತು ಗಣೇಶ್ ಉಪ್ಪಿನಂಗಡಿ ಮೃತಪಟ್ಟವರು. ಪಟ್ರಮೆ ಗ್ರಾಮದ ಅನಾರು ಸಮೀಪ ಕಾಯಿಲ ಎಂಬಲ್ಲಿ ಲೋಕಯ್ಯ ಗೌಡರಿಗೆ ಸೇರಿದ  ಧೂಪದ ಮರವೊಂದನ್ನು ಕಡಿದುರುಳಿಸುವ ಸಂದರ್ಭ ಮರ […]

ರಂಗ-ಭಾಸ್ಕರ 2021 ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಐ.ಕೆ.ಬೊಳುವಾರು ಆಯ್ಕೆ

Tuesday, March 9th, 2021
IK Boluvaru

ಮಂಗಳೂರು :  ಕಳೆದ 42 ವರ್ಷಗಳಿಂದ ರಂಗಭೂಮಿಗೆ ಸಂಬಂಧಿಸಿದಂತೆ ನಟನೆ, ನಿರ್ದೇಶನ, ನಾಟಕ ರಚನೆ, ನೇಪಥ್ಯ, ಪ್ರಕಟಣೆ, ತರಬೇತಿ, ಸಂಘಟನೆ ಮುಂತಾದ ವಿವಿಧ ವಿಭಾಗಗಳಲ್ಲಿ ನಿರಂತರವಾಗಿ ಕಾರ್ಯ ನಿರ್ವಹಣೆ ಮಾಡಿ, ಮಕ್ಕಳ ರಂಗಭೂಮಿಯಲ್ಲೂ ಗಮನಾರ್ಹ ಕೆಲಸ ಮಾಡಿದ ಹಿರಿಯ ರಂಗಕರ್ಮಿ ಶ್ರೀ ಐ.ಕೆ.ಬೊಳುವಾರು ರವರಿಗೆ, ಪ್ರತಿಭಾವಂತ ರಂಗ ನಿರ್ದೇಶಕ ದಿವಂಗತ ಭಾಸ್ಕರ ನೆಲ್ಲಿತೀರ್ಥರವರ ನೆನಪಿನಲ್ಲಿ ಕೊಡಮಾಡುವ, 2021 ನೆ ಸಾಲಿನ, ರಂಗಭಾಸ್ಕರ-2021 ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಗೋಪಾಲಕೃಷ್ಣ ಶೆಟ್ಟಿ […]

“ಮಂಜೂಷಾ” ವಾಹನ ಸಂಗ್ರಹಾಲಯಕ್ಕೆ ಎರಡು ಡಬಲ್ ಡೆಕ್ಕರ್ ಬಸ್ ಸೇರ್ಪಡೆ

Tuesday, March 9th, 2021
Manjusha

ಧರ್ಮಸ್ಥಳ:   ಧರ್ಮಸ್ಥಳದಲ್ಲಿರುವ “ಮಂಜೂಷಾ” ವಾಹನ ಸಂಗ್ರಹಾಲಯಕ್ಕೆ ಮುಂಬೈನಲ್ಲಿರುವ ಧರ್ಮಸ್ಥಳದ ಭಕ್ತರು ಸಂಗ್ರಹಿಸಿ ಕಳುಹಿಸಿದ ಎರಡು ಡಬಲ್ ಡೆಕ್ಕರ್ ಬಸ್‍ಗಳು ಧರ್ಮಸ್ಥಳಕ್ಕೆ ತಲುಪಿವೆ. ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್‍ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ಮಾಡಿಕೊಟ್ಟಿದ್ದು ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಅವರಿಬ್ಬರಿಗೂ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರ ಉಡುಪಿ, ಕಾರವಾರ ಮನೆಗೆ ದಾಳಿ

Tuesday, March 9th, 2021
ACB raid

ಉಡುಪಿ : ಸರಕಾರಿ ಅಧಿಕಾರಿಯೋರ್ವರ ಮನೆಯೊಂದಕ್ಕೆ ಎಸಿಬಿ ಅಧಿಕಾರಿಗಳು ಮಾ.9, ಮಂಗಳವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಕೆ. ವಡ್ಡಾರು ಅವರ ಮನೆಗೆ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಇವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರು ಆಗಿದ್ದರು. ಉಡುಪಿಯ ಹೊರವಲಯದ ಪುತ್ತೂರು ಎಂಬಲ್ಲಿರುವ ಮನೆ ಮೇಲೆ ಮಂಗಳೂರು ವಿಭಾಗದ ಎಸಿಬಿ ಅಧಿಕಾರಿಗಳ ತಂಡದಿಂದ ತಪಾಸಣೆ ನಡೆಯುತ್ತಿದೆ. ಮ್ಯೆಸೂರಿನಲ್ಲಿ ಮನೆ, ಕಚೇರಿ, ಕಾರವಾರದಲ್ಲಿರುವ ಮನೆ, ಸಹಿತ ಅವರ ನಿವೇಶನ […]

ಪಿಲಿಕುಳದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Monday, March 8th, 2021
Pilikula-Womens-Day

ಮಂಗಳೂರು : ಪ್ರತಿದಿನವೂ ಮಹಿಳೆಯರ ದಿನ, ಮಹಿಳೆಯರು ತಮ್ಮ ಮಹತ್ವವನ್ನು ಅರಿತುಕೊಂಡು ಮಾನಸಿಕವಾಗಿ ಸಬಲರಾಗಬೇಕು, ಮಹಿಳೆಯರು ಮತ್ತು ಪುರುಷರು ಜೊತೆ ಜೊತೆಯಲ್ಲಿ ನಡೆದು ಸಮಾಜದಲ್ಲಿ ಅಭಿವೃದ್ಧಿಯನ್ನು ತರಬೇಕು ಎಂದು ಮಾನಸಿಕ ಆರೋಗ್ಯ ತಜ್ಞೆ ಡಾ. ರಮೀಲಾ ಶೇಖರ್ ಹೇಳಿದರು. ಅವರು ಇಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಬೆಂಗಳೂರು, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು, ಧರ್ಮಜ್ಯೋತಿ ಸಮಾಜ ಸೇವಾ ಕೇಂದ್ರ ಮತ್ತು ಸೌಹಾರ್ದ ಮಹಿಳಾ ಒಕ್ಕೂಟ, ವಾಮಂಜೂರು ಇವರ ಸಹಕಾರದೊಂದಿಗೆ ಪಿಲಿಕುಳ ಪ್ರಾದೇಶಿಕ […]

ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವು ವಿಶ್ವ ಹಿಂದೂ ಪರಿಷತ್​ನ ಪ್ರಖಂಡ ಸಂಚಾಲಕ ಬಂಧನ

Monday, March 8th, 2021
Mohan

ಮಂಗಳೂರು : ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ನ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕ ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಮಾಡಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಈ ಹಿನ್ನೆಲೆ ಸಾರ್ವಜನಿಕರು ಆತನನ್ನು ಹಿಡಿದು ಹತ್ತಿರದ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿದ್ಯುತಾಘಾತ : ವೆನ್ಲಾಕ್ ಆಸ್ಪತ್ರೆಯಲ್ಲಿ ಯುವಕ ಸಾವು

Monday, March 8th, 2021
Wenlock Canteen

ಮಂಗಳೂರು : ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೋಟೆಕಾರ್ ಬೀರಿ ನಿವಾಸಿ ಅನೀಶ್ (20) ಮೃತ ಯುವಕ. ಕ್ಯಾಂಟೀನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಶಾರ್ಕ್ ಸರ್ಕ್ಯೂಟ್ ಸಂಭವಿಸಿ ದುರ್ಘಟನೆ ನಡೆದಿದೆ. ಮೃತ ಯುವಕನು ಕೆಪಿಟಿ ಕಾಲೇಜಿನಲ್ಲಿ ಓದುತ್ತಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಟ ತೆಗೆಸುವುದಾಗಿ ನಂಬಿಸಿ ಚಿನ್ನಾಭರಣ- ನಗದು ದೋಚಿಕೊಂಡು ಹೋದ ಮಹಿಳಾ ಜ್ಯೋತಿಷಿ

Friday, March 5th, 2021
Jyotishya

ಉಡುಪಿ : ಮಾಟ ಮಂತ್ರ ಮಾಡಿದ್ದಾರೆ ಎಂದು ನಂಬಿಸಿ ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಹೋಗಿರುವ ಘಟನೆ ಶುಕ್ರವಾರ ಬೆಳಗ್ಗೆ ನಿಟ್ಟೂರು ರಾಜೀವನಗರ ಎಂಬಲ್ಲಿ ನಡೆದಿದೆ. ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆಯೊಬ್ಬರು ಬಂದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೊ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, […]

ಮಂಗಳೂರು : ಸ್ಕೂಟರ್ ಅಡ್ಡಗಟ್ಟಿ ಸರಕಾರಿ ಬಸ್ ಚಾಲಕನಿಗೆ ತಲವಾರಿನಿಂದ ತಿವಿದು ಕೊಲೆ ಯತ್ನ

Friday, March 5th, 2021
Shohif

ಮಂಗಳೂರು : ಸ್ಕೂಟರ್ ಅಡ್ಡವಿಟ್ಟು ಸರಕಾರಿ ಬಸ್ ಚಾಲಕನಿಗೆ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ಶುಕ್ರವಾರ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಡ್ಯಾರ್ ಕಣ್ಣೂರಿನ ಕುಂಡಾಲದ  ಆರೋಪಿ ಸೊಹೀಫ್ (19) ತಂದೆ ಅಬ್ದುಲ್ ಶರೀಪ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರು ಡಿಪೋ ಕೆಎಸ್ಸಾರ್ಟಿಸಿ ಬಸ್ ಚಾಲಕನಾಗಿದ್ದ ರಾಜು ಗಜಕೋಶ ಅವರನ್ನು ತಡೆದ ಆರೋಪಿಯು ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಮಂಗಳೂರು ಕಡೆಗೆ ಬಸ್ […]

ಹಣಕ್ಕಾಗಿ ಕಂದಮ್ಮಗಳನ್ನು ಮಾರುವ ವ್ಯಕ್ತಿಯ ಬಂಧನ

Friday, March 5th, 2021
Rayan

ಮಂಗಳೂರು : ಕಾನೂನು ಬಾಹಿರವಾಗಿ 3-4 ತಿಂಗಳ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಹಾಗೂ ಇಬ್ಬರು ಮಹಿಳೆಯರನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಲ್ಕಿ ನಿವಾಸಿ ರಾಯನ್‌ (30) ಎಂದು ಗುರುತಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್‌ ಕಮಿಷನರ್‌‌‌ ಎನ್‌.ಶಶಿಕುಮಾರ್‌ ಅವರು ಗಂಡು ಮಗುವಿಗೆ 6 ಲಕ್ಷ, ಹೆಣ್ಣು ಮಗುವಿಗೆ 4 ಲಕ್ಷ. ರೂ.ಗಳಾಗಿದ್ದು, 1.5 ಲಕ್ಷ. ರೂ.ಗಳನ್ನು ಮುಂಗಡ ಪಾವತಿಯನ್ನು ಒಂದು ತಿಂಗಳೊಳಗೆ ತಲುಪಿಸಲಾಗುತ್ತದೆ. ವಿಚಾರಣೆಯ ಸಂದರ್ಭ ಕಾರ್ಕಳದ ಕವಿತಾ ಎಂಬಾಕೆ […]